ಪಶ್ಚಿಮ ಬಂಗಾಳದ ಮದ್ರಸಾಗಳಲ್ಲೂ ‘ವಂದೇ ಮಾತರಂ’ ಹಾಡುವುದು ಕಡ್ಡಾಯ ; ರಾಜ್ಯ ಸರ್ಕಾರದ ಆದೇಶ

ಕೋಲ್ಕತ್ತಾ : ಪಶ್ಚಿಮ ಬಂಗಾಳ ಸರ್ಕಾರವು ತನ್ನ ‘ವಂದೇ ಮಾತರಂ’ ಕಡ್ಡಾಯವಾಗಿ ಹಾಡುವ ನಿಯಮವನ್ನು ಈಗ ರಾಜ್ಯಾದ್ಯಂತ ಇರುವ ಮದ್ರಸಾಗಳಿಗೂ ಅನ್ವಯಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಮದ್ರಸಾ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಬೆಳಗಿನ ಪ್ರಾರ್ಥನಾ ಸಭೆಯ (ಅಸೆಂಬ್ಲಿ) ವೇಳೆ ರಾಷ್ಟ್ರಗೀತೆಯೊಂದಿಗೆ ರಾಷ್ಟ್ರೀಯ ಗೀತೆಯಾದ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿ … Continued

ಇಮಾಮರು, ಅರ್ಚಕರ ಸರ್ಕಾರಿ ಸಹಾಯಧನ ಸಂಪೂರ್ಣ ಸ್ಥಗಿತ ; ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ, ಇಂದು, ಸೋಮವಾರ ನಡೆದ ಮೊದಲ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಪೈಕಿ, ಮುಂಬರುವ ಜೂನ್ ತಿಂಗಳಿನಿಂದ ಧಾರ್ಮಿಕ ಆಧಾರಿತ ಸರ್ಕಾರಿ ನೆರವುಗಳನ್ನು ಸ್ಥಗಿತಗೊಳಿಸುವುದು ಮತ್ತು ಕಲ್ಕತ್ತಾ ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ … Continued

2022ರ ಆದೇಶ ಹಿಂಪಡೆದ ಸರ್ಕಾರ ; ರಾಜ್ಯದ ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ ಧರಿಸಲು ಅವಕಾಶ

ಬೆಂಗಳೂರು: ಕರ್ನಾಟಕ ಸರ್ಕಾರವು ಫೆಬ್ರವರಿ 2022 ರಲ್ಲಿ ಶಾಲಾ ಸಮವಸ್ತ್ರಗಳ ಕುರಿತು ತನ್ನ ಆದೇಶವನ್ನು ಹಿಂತೆಗೆದುಕೊಂಡಿದೆ ಮತ್ತು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಗದಿತ ಸಮವಸ್ತ್ರಗಳ ಜೊತೆಗೆ ಸಾಂಪ್ರದಾಯಿಕ ಮತ್ತು ಧರ್ಮ ಆಧಾರಿತ ಚಿಹ್ನೆಗಳನ್ನು ಸೀಮಿತ ಶ್ರೇಣಿಯಲ್ಲಿ ಧರಿಸಲು ವಿದ್ಯಾರ್ಥಿಗಳಿಗೆ ಅನುಮತಿ ನೀಡುವ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ಸರ್ಕಾರದ … Continued

ಮರು ಎಣಿಕೆ’ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್ ತಡೆ ; ಶೃಂಗೇರಿ ಶಾಸಕರಾಗಿ ರಾಜೇಗೌಡ ಮುಂದುವರಿಕೆ

ನವದೆಹಲಿ: ಕರ್ನಾಟಕದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮರು ಎಣಿಕೆಯ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಿದೆ. ಹಾಗೂ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡ ಅವರ ಶಾಸಕ ಸ್ಥಾನವನ್ನು ಮರುಸ್ಥಾಪಿಸಲು ಸೂಚಿಸಿದೆ. 2023ರ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ಪ್ರಶ್ನಿಸಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜಅವರು ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಸುಮಾರು … Continued

ವಿಡಿಯೋ | ಬಂಗಾಳ ಸಿಎಂ ಪದಗ್ರಹಣ ಸಮಾರಂಭಲ್ಲಿ 98 ವರ್ಷದ ಮಖನ್‌ಲಾಲ ಸರ್ಕಾರ ಪಾದಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ : ಇವರು ಯಾರು ?

ಕೋಲ್ಕತ್ತಾ: ಕೋಲ್ಕತ್ತಾದ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ಶನಿವಾರ ಬೆಳಿಗ್ಗೆ ನಡೆದ ಸುವೇಂದು ಅಧಿಕಾರಿ ಅವರ ನೇತೃತ್ವದ ರಾಜ್ಯದ ಮೊತ್ತಮೊದಲ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವು ಒಂದು ಭಾವುಕ ಕ್ಷಣಕ್ಕೆ ಸಾಕ್ಷಿಯಾಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, ಜನಸಂಘದ ಕಾಲದ ಹಿರಿಯ ನಾಯಕ, 98 ವರ್ಷದ ಮಾಖನ್‌ಲಾಲ್ ಸರ್ಕಾರ ಅವರ ಪಾದ … Continued

ಪಶ್ಚಿಮ ಬಂಗಾಳದ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ ಸ್ವೀಕಾರ: ಸಚಿವರಾಗಿ ಐವರಿಂದ ಪ್ರಮಾಣ ವಚನ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು, ಶನಿವಾರ ಬಿಜೆಪಿಯ ಯುಗ ಆರಂಭವಾಗಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖಂಡ ಸುವೇಂದು ಅಧಿಕಾರಿ ಅವರು ಶನಿವಾರ ಬೆಳಗ್ಗೆ 11 ಗಂಟೆಗೆ ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ಜೊತೆ ಐವರು ಶಾಕಸರು ಸಚಿವರಾಗಿ … Continued

ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿಯನ್ನೇ ಬಿಜೆಪಿ ಆಯ್ಕೆ ಮಾಡಿದ್ದೇಕೆ ? ಇದರ ಹಿಂದಿನ ಲೆಕ್ಕಾಚಾರವೇನು ?

ಕೋಲ್ಕತ್ತಾ: ದಶಕಗಳ ಕಾಲ ಮಮತಾ ಬ್ಯಾನರ್ಜಿಯವರ ಅತ್ಯಂತ ಆಪ್ತ ಹೋರಾಟಗಾರನಾಗಿ, ಎಡಪಂಥೀಯರ ವಿರುದ್ಧ ಬೀದಿಗಿಳಿದು ಹೋರಾಡಿದ್ದ ಸುವೇಂದು ಅಧಿಕಾರಿ, ಈಗ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಉದಯದ ಮಹಾ ನಾಯಕನಾಗಿ ಹೊರಹೊಮ್ಮಿದ್ದಾರೆ. ಮೇ ೯ರಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅಧಿಕಾರ ವಹಿಸಿಕೊಳ್ಳಲಿದ್ದು, ಇದು ರಾಜ್ಯದ ಅವರ ರಾಜಕೀಯ ಪಯಣದಲ್ಲಿ ಅತಿದೊಡ್ಡ ಮೈಲಿಗಲ್ಲಾಗಿದೆ. ಶುಕ್ರವಾರ … Continued

ಮಮತಾ ಬ್ಯಾನರ್ಜಿ ಸೋಲಿಸಿದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಆಯ್ಕೆ

ಕೋಲ್ಕತ್ತಾ : ಮಮತಾ ಬ್ಯಾನರ್ಜಿಗೆ ಅವರ ಕ್ಷೇತ್ರದಲ್ಲೇ ಸೋಲುಣಿಸಿದ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಪಶ್ಚಿಮ ಬಂಗಾಳದ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹಿರಿಯ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರನ್ನು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಚುನಾಯಿತ ನಾಯಕರಾಗಿ ಆಯ್ಕೆಯಾಗಿದ್ದಾರೆ ಎಂದು ಔಪಚಾರಿಕವಾಗಿ ಘೋಷಿಸಿದರು. ಇತ್ತೀಚೆಗೆ … Continued

ರಾಜೀನಾಮೆ ಕೊಡಲ್ಲ ಎಂದು ಹಠ ಹಿಡಿದ ಮಮತಾಗೆ ಶಾಕ್‌ ; ಪಶ್ಚಿಮ ಬಂಗಾಳ ವಿಧಾನಸಭೆ ವಿಸರ್ಜಿಸಿದ ರಾಜ್ಯಪಾಲ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಸಂಘರ್ಷಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಬೆನ್ನಲ್ಲೇ, ರಾಜ್ಯಪಾಲ ಆರ್.ಎನ್. ರವಿ ಅವರು ರಾಜ್ಯ ವಿಧಾನಸಭೆಯನ್ನು ವಿಸರ್ಜಿಸಿ ಗುರುವಾರ ಆದೇಶ ಹೊರಡಿಸಿದ್ದಾರೆ. ವಿಧಾನಸಭೆಯ ಐದು ವರ್ಷಗಳ ಅವಧಿಯು ಗುರುವಾರ ಮಧ್ಯರಾತ್ರಿ ಅಂತ್ಯಗೊಳ್ಳಲಿದ್ದು, ಅದಕ್ಕೂ ಮುನ್ನವೇ ರಾಜ್ಯಪಾಲರು … Continued

ಮಮತಾ ಬ್ಯಾನರ್ಜಿಗೆ ಸೋಲುಣಿಸಿದ್ದ ಬಿಜೆಪಿ ನಾಯಕ ಸುವೇಂದು ಅಧಿಕಾರಿಯ ಆಪ್ತ ಸಹಾಯಕನ ಗುಂಡಿಕ್ಕಿ ಹತ್ಯೆ

ನವದೆಹಲಿ: ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಮತ್ತೆ ರಕ್ತಪಾತ ಮುಂದುವರಿದಿದೆ. ಪಶ್ಚಿಮ ಬಂಗಾಳ ವಿಧಾನಸಭೆಯ ವಿಪಕ್ಷದ ನಾಯಕ ಹಾಗೂ ಮಮತಾ ಬ್ಯಾನರ್ಜಿ ಅವರನ್ನು ಅವರ ಸ್ವಕ್ಷೇತ್ರದಲ್ಲೇ ಹೀನಾಯವಾಗಿ ಸೋಲಿಸಿರುವ ಬಿಜೆಪಿಯ ಹಿರಿಯ ಮುಖಂಡ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ (PA) ಚಂದ್ರನಾಥ ರಥ್ ಅವರನ್ನು ಬುಧವಾರ ರಾತ್ರಿ ಉತ್ತರ 24 ಪರಗಣ ಜಿಲ್ಲೆಯಲ್ಲಿ ದುಷ್ಕರ್ಮಿಗಳು … Continued