ರಾಜಸ್ಥಾನ ವಿಧಾನಸಭೆ ಚುನಾವಣೆ : ಇಟಿಜಿ ಚುನಾವಣಾ ಪೂರ್ವ ಸಮೀಕ್ಷೆಯಲ್ಲಿ ತೀವ್ರ ಹಣಾಹಣಿಯಲ್ಲಿ ಕಾಂಗ್ರೆಸ್‌ಗಿಂತ ಬಿಜೆಪಿ ಸ್ವಲ್ಪ ಮುಂದೆ

ರಾಜಸ್ಥಾನದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ನಡುವಿನ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಪ್ರಸ್ತುತ ಮುಖ್ಯಮಂತ್ರಿ ಅಶೋಕ ಗೆಹ್ಲೋಟ್ ನೇತೃತ್ವದ ಸರ್ಕಾರವು ಹಿನ್ನಡೆ ಎದುರಿಸಬಹುದು, ಇದೇ ವೇಳೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆಯಿದೆ ಎಂದು ಇಟಿಜಿ ಚುನಾವಣಾ ಪೂರ್ವ ಸಮೀಕ್ಷೆ ಭವಿಷ್ಯ ನುಡಿದಿದೆ. ರಾಜ್ಯದಲ್ಲಿ ಸರ್ಕಾರ ರಚನೆಗೆ ಸರಳ … Continued

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ತಂದಿಟ್ಟ ಪುತ್ರನ ಹೇಳಿಕೆ : ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಬೆಂಗಳೂರು: ಕರ್ನಾಟಕದ ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಮುಖ್ಯಮಂತ್ರಿ ಆಗಿದ್ದಾರೆ ಎಂದು  ಆರೋಪಿಸಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಒಬ್ಬ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಿರುವ ಕ್ಷೇತ್ರದಲ್ಲೇ ಈ ರೀತಿ ಚುನಾವಣಾ ಅಕ್ರಮ ನಡೆದಿರುವುದು ಆಘಾತಕಾರಿ. ಕುಕ್ಕರ್‌, ಐರನ್‌ … Continued

ಕುತೂಹಲ ಮೂಡಿಸಿದ ಡಿಸಿಎಂ ಶಿವಕುಮಾರ-ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ ಭೇಟಿ

ಬೆಂಗಳೂರು: ಬಿಜೆಪಿ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಾರ್ಯಕ್ರಮವೊಂದರ ನಿಮಿತ್ತ ಡಿಕೆಶಿ ಅವರನ್ನು ಆಹ್ವಾನಿಸುವ ಉದ್ದೇಶದಿಂದ ತೇಜಸ್ವಿನಿ … Continued

ಈಗ ಬಿಜೆಪಿಯಿಂದ ‘ಪೇ ಸಿಎಸ್’ ಅಭಿಯಾನ : ಕಾಂಗ್ರೆಸ್ಸಿಗೆ ತಿರುಗೇಟು

ಬೆಂಗಳೂರು : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 40% ಕಮಿಷನ್ ವಿಚಾರವನ್ನು ಮುಂದಿಟ್ಟುಕೊಂಡು ಪೇಸಿಎಂ ಅಭಿಯಾನವನ್ನು ಕಾಂಗ್ರೆಸ್ ನಡೆಸಿತ್ತು. ಇದೀಗ ಇದೇ ಪೇಸಿಎಂ ಅಭಿಯಾನ ಕಾಂಗ್ರೆಸ್ ಸರ್ಕಾರಕ್ಕೆ ತಿರುಗು ಬಾಣವಾಗಿದೆ. ಸಚಿವ ಚೆಲುವರಾಯಸ್ವಾಮಿ ವಿರುದ್ಧ ಕಮಿಷನ್ ಆರೋಪ ಮಾಡಿರುವ ಬಿಜೆಪಿ ಪೇ ಸಿಸ್ (ಪೇ ಚೆಲುವರಾಯಸ್ವಾಮಿ) ಅಭಿಯಾನ ಆರಂಭಿಸಿದೆ. ಬಿಜೆಪಿ ಕರ್ನಾಟಕ ಸಪೋರ್ಟರ್ಸ್ ಎಂಬ … Continued

ಲೋಕಸಭೆ ಚುನಾವಣೆ : ಜೆಡಿಎಸ್-ಬಿಜೆಪಿ ಮೈತ್ರಿ ಊಹಾಪೋಹಕ್ಕೆ ತೆರೆ ಎಳೆದ ದೇವೇಗೌಡರು-ಅವರು ಹೇಳಿದ್ದೇನು..?

ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿಯಾಗುವ ಸಾಧ್ಯತೆ ಕುರಿತು ಇದ್ದ ಊಹಾಪೋಹಗಳಿಗೆ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಅವರು ತೆರೆ ಎಳೆದಿದ್ದಾರೆ. ಇಂದು, ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸೀಟು ಗೆಲ್ಲುತ್ತೇವೆ ಎಂಬುದು ಗೊತ್ತಿಲ್ಲ. ಆದರೆ ಜೆಡಿಎಸ್‌ ಸ್ವತಂತ್ರವಾಗಿ … Continued

ಬೆಂಗಳೂರಲ್ಲಿ ನಡೆದ 26 ವಿಪಕ್ಷಗಳ ಸಭೆಗೆ ಐಎಎಸ್ ಅಧಿಕಾರಿಗಳ ಬಳಕೆ : ವರದಿ ಕೇಳಿದ ರಾಜ್ಯಪಾಲರು

ಬೆಂಗಳೂರು : ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಿಕೊಂಡಿದೆ ಎಂಬ ಆರೋಪದ ಕುರಿತು ರಾಜ್ಯಪಾಲ ಥಾವರಚಂದ್ ಗೆಹ್ಲೋತ್‌ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ಈ ಬಗ್ಗೆ ವರದಿ ಕೇಳಿದ್ದಾರೆ. ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‍ನ ಜಂಟಿ ನಿಯೋಗದ ಮನವಿಯ ನಂತರ … Continued

ಬಿಜೆಪಿ ಬಿಡುವ ವದಂತಿ: ತೇಜಸ್ವಿನಿ ಅನಂತಕುಮಾರ ಹೇಳಿದ್ದೇನು ?

ಬೆಂಗಳೂರು : ಬಿಜೆಪಿ ಬಿಟ್ಟು ಬೇರೊಂದು ಪಕ್ಷಕ್ಕೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ತಮ್ಮ ಬಗ್ಗೆ ಎದ್ದಿರುವ ಊಹಾಪೋಹಾಗಳಿಗೆ ಈಗ ರಾಜ್ಯ ಬಿಜೆಪಿಯ ಉಪಾಧ್ಯಕ್ಷೆ ತೇಜಸ್ವಿನಿ ಅನಂತಕುಮಾರ ಸ್ವತಃ ತೆರೆ ಎಳೆದಿದ್ದಾರೆ. ಈ ಬಗ್ಗೆ ಖುದ್ದು ಟ್ವೀಟ್‌ ಮಾಡಿರುವ ತೇಜಸ್ವಿನಿ ದಯವಿಟ್ಟು ಊಹಾಪೋಹಗಳಿಗೆ ಕಿವಿಗೊಡಬೇಡಿ. ನಾನು ಭಾರತೀಯ ಜನತಾ ಪಕ್ಷದ ಜೊತೆಗೆ ಧೃಡವಾಗಿ ಇದ್ದೇನೆ. ಇಂಗ್ಲಿಷಿನಲ್ಲಿ … Continued

ಉಚಿತ ಪ್ರಯಾಣದ ಬಸ್‌ ಗಳಿಗೆ ಸ್ಟಿಕ್ಕರ್ ಅಂಟಿಸುವ ನಿರ್ಧಾರ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು : ಉಚಿತ ಪ್ರಯಾಣದ ಬಸ್ ಗಳಿಗೆ ಸ್ಟಿಕ್ಕರ್ ಅಂಟಿಸುವುದಾಗಿ ಹೇಳಿರುವ ರಾಜ್ಯ ಸರ್ಕಾರದ ಮತ್ತೊಂದು ಷರತ್ತಿನ ಬಗ್ಗೆ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಉಚಿತ ಪ್ರಯಾಣದ ಬಸ್‌ಗಳಿಗೆ ಸ್ಟಿಕ್ಕರ್ ಅಂಟಿಸುವ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. ಸಿದ‍್ಧರಾಮಯ್ಯನವರೇ, ಬಸ್ ಹತ್ತುವ ಮಹಿಳೆಯರು ಬಸ್ ನಂಬರ್ … Continued

ಬಿಜೆಪಿ 75 ಹೊಸ ಅಭ್ಯರ್ಥಿಗಳಲ್ಲಿ 61 ಮಂದಿಗೆ ಸೋಲು, 9 ಜಿಲ್ಲೆಗಳಲ್ಲಿ ಶೂನ್ಯ ಸಂಪಾದನೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಮಲ ಮುದುಡಿದೆ. ಕೈ ಗೆಲುವು ಸಾಧಿಸಿದೆ. ಬಿಜೆಪಿ 9 ಜಿಲ್ಲೆಗಳಲ್ಲಿ ಶೂನ್ಯ ಸಂಪಾದನೆ ಮಾಡಿದರೆ 8 ಜಿಲ್ಲೆಯಲ್ಲಿ ತಲಾ ಒಂದು ಸ್ಥಾನದಲ್ಲಿ ಮಾತ್ರ ಗೆಲುವು ಸಾಧಿಸಿದೆ. ಕೋಲಾರ, ರಾಮನಗರ, ಮಂಡ್ಯ, ಕೊಡಗು, ಬಳ್ಳಾರಿ, ಚಿಕ್ಕಮಗಳೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯಲ್ಲಿ ಶೂನ್ಯ ಸಂಪಾದನೆ ಮಾಡಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ತಲಾ … Continued

ಪಕ್ಷಕ್ಕೆ ದ್ರೋಹ ಮಾಡಿದ ಶೆಟ್ಟರ ಅವರನ್ನು ಯಾರೂ ಕ್ಷಮಿಸುವುದಿಲ್ಲ : ಯಡಿಯೂರಪ್ಪ ವಾಗ್ದಾಳಿ

ಬೆಂಗಳೂರು: ಬಿಜೆಪಿ (BJP) ಪಕ್ಷಕ್ಕೆ ದ್ರೋಹ ಮಾಡಿದ ಜಗದೀಶ್ ಶೆಟ್ಟರ ಅವರನ್ನು ಯಾರು ಕ್ಷಮಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದರು. ಶೆಟ್ಟರ್ ರಾಜೀನಾಮೆ ನಂತರ ಮಧ್ಯಾಹ್ನ ಬಿಜೆಪಿ ಮಾಧ್ಯಮ ಕಚೇರಿಯಲ್ಲಿ ತುರ್ತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶೆಟ್ಟರ ಜನಸಂಘದಿಂದಲೂ ಬಿಜೆಪಿ ಜೊತೆಗಿದ್ದರು. ಶೆಟ್ಟರ್ ಅವರನ್ನು ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ, ಮಂತ್ರಿ, … Continued