ಲೋಕಸಭೆ ಚುನಾವಣೆ | 27 ಸದಸ್ಯರ ಪ್ರಣಾಳಿಕೆ ಸಮಿತಿ ಪ್ರಕಟಿಸಿದ ಬಿಜೆಪಿ ;ರಾಜನಾಥ ಸಿಂಗ್ ಚೇರ್ಮನ್‌ : ಪಟ್ಟಿ ಇಲ್ಲಿದೆ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಲೋಕಸಭೆ ಚುನಾವಣೆಗೆ ಬಿಜೆಪಿಯ ಪ್ರಣಾಳಿಕೆ ಸಮಿತಿಯ ಮುಖ್ಯಸ್ಥರಾಗಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಮಿತಿಯ ಸಂಚಾಲಕರಾಗಿದ್ದಾರೆ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಸಹ ಸಂಚಾಲಕರಾಗಿರುತ್ತಾರೆ. ಅಲ್ಲದೆ, ಪ್ರಣಾಳಿಕೆ ಸಮಿತಿಗೆ 24 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ. ಅರ್ಜುನ ಮುಂಡಾ, ಭೂಪೇಂದ್ರ ಯಾದವ, ಅರ್ಜುನರಾಮ ಮೇಘವಾಲ್, … Continued

ಲೋಕಸಭಾ ಚುನಾವಣೆ : ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಪ್ರಕಟ

ಬೆಂಗಳೂರು : ಲೋಕಸಭಾ ಚುನಾವಣೆಗಾಗಿ ಭಾರೀ ಸಿದ್ಧತೆ ನಡೆಸಿರುವ ಬಿಜೆಪಿ ಕರ್ನಾಟಕದಲ್ಲಿ ಜೆಡಿಎಸ್‌ ಜೊತೆ ಒಪ್ಪಂದ ಮಾಡಿಕೊಂಡಿದ್ದು, ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದೆ. ಅದು ತನ್ನ ಸ್ಟಾರ್‌ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ. 40 ಜನ ಸ್ಟಾರ್‌ ಪ್ರಚಾರಕರ ಪಟ್ಟಿಯು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಬಿಜೆಪಿ ರಾಷ್ಟ್ರೀಯ … Continued

ಕರ್ನಾಟಕದಲ್ಲಿ ಬಿಜೆಪಿಗೆ ಆಘಾತ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ಸಿಗೆ ಸೇರ್ಪಡೆಯಾದ ತೇಜಸ್ವಿನಿ ಗೌಡ

ಬೆಂಗಳೂರು: ರಾಜ್ಯ ಬಿಜೆಪಿಗೆ ಹಿನ್ನಡೆಯಲ್ಲಿ ಮೊನ್ನೆಯಷ್ಟೇ ಬಿಜೆಪಿಯ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಾಗೂ ಪಕ್ಷದ ವಕ್ತಾರೆಯಾಗಿದ್ದ ತೇಜಸ್ವಿನಿ ಗೌಡ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ ಅವರ ಸಮ್ಮುಖದಲ್ಲಿ ಅವರು ಕಾಂಗ್ರೆಸ್‌ ಸೇರ್ಪಡೆಯಾದರು. ತೇಜಸ್ವಿನಿ ಗೌಡ ಬಿಜೆಪಿಯಿಂದ ಬೆಂಗಳೂರು ಗ್ರಾಮಾಂತರ … Continued

ಕಾಂಗ್ರೆಸ್ಸಿಗೆ ಮತ್ತೊಂದು ಆಘಾತ : ಲೋಕಸಭೆಯ ಮಾಜಿ ಸ್ಪೀಕರ್ ಶಿವರಾಜ ಪಾಟೀಲ ಸೊಸೆ ಡಾ.ಅರ್ಚನಾ ಪಾಟೀಲ ಬಿಜೆಪಿಗೆ ಸೇರ್ಪಡೆ

ಮುಂಬೈ: ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಕಾಂಗ್ರೆಸ್ ವರಿಷ್ಠ ಶಿವರಾಜ ಪಾಟೀಲ ಅವರ ಸೊಸೆ, ಡಾ. ಅರ್ಚನಾ ಪಾಟೀಲ ಚಾಕುರ್ಕರ್ ಅವರು ಶನಿವಾರ (ಮಾರ್ಚ್ 30) ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರಿದರು. ದೇಶದಲ್ಲಿ ಏಪ್ರಿಲ್ 19 ರಂದು ಪ್ರಾರಂಭವಾಗುವ ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು … Continued

ವಯನಾಡಿನಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಮೇಲಿವೆ 242 ಪ್ರಕರಣಗಳು…

ಕೊಚ್ಚಿ : ಕೇರಳದ ವಯನಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ಎನ್‌ಡಿಎ ಅಭ್ಯರ್ಥಿಯೂ ಆಗಿರುವ ಕೇರಳದ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ 242 ಕ್ರಿಮಿನಲ್ ಪ್ರಕರಣಗಳಿವೆ. ಶಾಸನಬದ್ಧ ಅವಶ್ಯಕತೆಗಳ ಭಾಗವಾಗಿ, ಸುರೇಂದ್ರನ್ ಅವರು ಇತ್ತೀಚೆಗೆ ತಮ್ಮ ಪ್ರಕರಣಗಳ ವಿವರಗಳನ್ನು ಪಕ್ಷದ ಮುಖವಾಣಿಯಲ್ಲಿ ಮೂರು ಪೂರ್ಣ ಪುಟಗಳಲ್ಲಿ ಪ್ರಕಟಿಸಿದ್ದರು. ಅದೇ ರೀತಿ ಬಿಜೆಪಿ … Continued

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ ಸಿದ್ದರಾಮಯ್ಯ, ಡಿಸಿಎಂಗೆ ಡಿಕೆಶಿಗೆ ಸಮನ್ಸ್‌ ಮರು ಜಾರಿ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯ ವೇಳೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿದ್ದ ಕಾಂಗ್ರೆಸ್‌, ಈ ಸಂಬಂಧ ರಾಜ್ಯದ ಪ್ರಮುಖ ಪತ್ರಿಕೆಗಳ ಮುಖಪುಟದಲ್ಲಿ ʼಭ್ರಷ್ಟಾಚಾರ ದರ ಪಟ್ಟಿʼ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿ ಮಾನಹಾನಿ ಮಾಡಿದೆ ಎಂದು ಬಿಜೆಪಿ ಹೂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ … Continued

ನಿಮ್ಮವನಾಗಿದ್ದೆ…ಯಾವಾಗಲೂ ನಿಮ್ಮವನಾಗಿಯೇ ಇರ್ತೇನೆ..: ಬಿಜೆಪಿ ಟಿಕೆಟ್ ನಿರಾಕರಣೆ ನಂತ್ರ ಪಿಲಿಭಿತ್‌ ಜನತೆಗೆ ʼಹೃದಯಸ್ಪರ್ಶಿʼ ಪತ್ರ ಬರೆದ ವರುಣ ಗಾಂಧಿ

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಗೆ ಪಿಲಿಭಿತ್‌ನಿಂದ ಸ್ಪರ್ಧಿಸಲು ಬಿಜೆಪಿ ತಮಗೆ ಟಿಕೆಟ್ ನಿರಾಕರಿಸಿದ ಕೆಲವೇ ದಿನಗಳಲ್ಲಿ ಪಿಲಿಭಿತ್‌ ಹಾಲಿ ಸಂಸದ ವರುಣ ಗಾಂಧಿ ಅವರು ತಮ್ಮ ಕ್ಷೇತ್ರದ ಜನರಿಗೆ ಭಾವನಾತ್ಮಕ ಬರೆದಿದ್ದಾರೆ. “ನನ್ನ ಅಧಿಕಾರಾವಧಿ ಕೊನೆಗೊಳ್ಳುತ್ತಿದ್ದರೂ … ನನ್ನ ಸಂಬಂಧ (ನಿಮ್ಮೊಂದಿಗೆ) ನನ್ನ ಕೊನೆಯ ಉಸಿರು ಇರುವವರೆಗೂ ಕೊನೆಗೊಳ್ಳುವುದಿಲ್ಲ. ನಾನು ನಿಮ್ಮವನಾಗಿದ್ದೆ…ಯಾವಾಗಲೂ ನಿಮ್ಮವನಾಗಿಯೇ ಇರುತ್ತೇನೆ … Continued

ಲೋಕಸಭಾ ಚುನಾವಣೆ 2024: ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಅಧಿಕೃತ ಪ್ರಕ್ರಿಯೆ ಗುರುವಾರದಿಂದ ಆರಂಭವಾಗುತ್ತಿದೆ. ರಾಜ್ಯದಲ್ಲಿ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಇಂದಿನಿಂದ (ಮಾರ್ಚ್‌ ೨೮) ಆರಂಭವಾಗಲಿದೆ. ಏಪ್ರಿಲ್‌ 4 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಏ.5ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, … Continued

ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) 2024ರ ಲೋಕಸಭೆ ಚುನಾವಣೆಗೆ ತನ್ನ ಏಳನೇ ಅಭ್ಯರ್ಥಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಏಳನೇ ಪಟ್ಟಿಯಲ್ಲಿ ಮಹಾರಾಷ್ಟ್ರದ ಅಮರಾವತಿ ಮತ್ತು ಕರ್ನಾಟಕದ ಚಿತ್ರದುರ್ಗ ಎರಡು ಮೀಸಲು ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿಯು ಪಕ್ಷವು ಕರ್ನಾಟಕದ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ (SC) ಮಾಜಿ ಸಚಿವ ಗೋವಿಂದ ಕಾರಜೋಳ … Continued

ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

ಹುಬ್ಬಳ್ಳಿ: ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ಮಠಾಧೀಶರು ಮಾರ್ಚ್‌ 31ರ ಒಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಿ ಎಲ್ಲ ಸಮುದಾಯದವರೂ ಒಪ್ಪುವ ಸೂಕ್ತ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿಯ ಹೈಕಮಾಂಡ್‍ಗೆ ಗಡುವು ನೀಡಿದ್ದಾರೆ. ಹುಬ್ಬಳ್ಳಿಯ ಮೂರುಸಾವಿರಮಠದಲ್ಲಿ … Continued