ಹುಲಿ ಉಗುರು ವಿಚಾರದ ಹೇಳಿಕೆ : ವೈಯಕ್ತಿಕ ತೇಜೋವಧೆ ಮಾಡಿದವರ ವಿರುದ್ಧ ಎಫ್‌‌ಐಆರ್‌ ದಾಖಲಿಸಿದ ನಟ ಜಗ್ಗೇಶ

ಬೆಂಗಳೂರು: ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ ಅವರು ಇತ್ತೀಚೆಗೆ ಹುಲಿ ಉಗುರು ಹಾಕಿಕೊಂಡ ಬಗ್ಗೆ ನೀಡಿದ್ದ ಹೇಳಿಕೆಯೊಂದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆಗೆ ಗುರಿಯಾಗಿತ್ತು. ಈಗ ಜಗ್ಗೇಶ ಈ ಬಗ್ಗೆ ಎಫ್‌‌ಐಆರ್‌ ದಾಖಲಿಸಿದ್ದಾರೆ. ಗುರುಪ್ರಸಾದ ಹಾಗೂ ಜಗ್ಗೇಶ ಅವರ ಕಾಂಬಿನೇಷನ್‌ ನಲ್ಲಿ ಬರುತ್ತಿರುವ ʼರಂಗನಾಯಕʼ ಸಿನಿಮಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಹುಲಿ ತರ … Continued

ಲೋಕಸಭೆ ಚುನಾವಣೆ : ಮಹಾರಾಷ್ಟ್ರದಲ್ಲಿ ಬಿಜೆಪಿ-ರಾಜ್‌ ಠಾಕ್ರೆ ಎಂಎನ್‌ಎಸ್‌ ಮೈತ್ರಿ..?

ಮುಂಬೈ : ಮುಂಬೈ ಬಿಜೆಪಿ ಮುಖ್ಯಸ್ಥ ಆಶಿಶ್ ಶೆಲಾರ್‌ ಸೋಮವಾರ ಮಹಾರಾಷ್ಟ್ರ ನಿರ್ಮಾಣ ಸೇನೆ (MNS) ಅಧ್ಯಕ್ಷ ರಾಜ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದು, ಇದು ಬಿಜೆಪಿ-ಎಂಎನ್‌ಎಸ್‌ ಪಕ್ಷಗಳ ನಡುವಿನ ಸಂಭವನೀಯ ಚುನಾವಣಾ ಮೈತ್ರಿ ಕುರಿತ ಊಹಾಪೋಹಗಳಿಗೆ ಕಾರಣವಾಗಿದೆ. ಹಳೆಯ ಸ್ನೇಹಿತರ ನಡುವೆ ಸಭೆಗಳು ನಡೆಯುತ್ತವೆ ಎಂದು ಶೆಲಾರ್ ಹೇಳಿದ್ದಾರೆ. ಆದಾಗ್ಯೂ, “ವಿವರಗಳನ್ನು ಸೂಕ್ತ ಸಮಯದಲ್ಲಿ … Continued

ಚಂಡೀಗಢ ಮೇಯರ್ ಆಯ್ಕೆ ಪ್ರಕರಣ : ಸುಪ್ರೀಂ ಕೋರ್ಟ್ ವಿಚಾರಣೆಗೆ ಮುಂಚಿತವಾಗಿ 3 ಎಎಪಿ ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ

ಚಂಡೀಗಢ: ಮೇಯರ್ ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪದ ಕುರಿತು ಸುಪ್ರೀಂ ಕೋರ್ಟ್ ವಿಚಾರಣೆಗೆ ಒಂದು ದಿನ ಮುಂಚಿತವಾಗಿ ಬಿಜೆಪಿ ನಾಯಕ ಮನೋಜ ಸೋಂಕರ್ ಅವರು ಭಾನುವಾರ ಸಂಜೆ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನಂತರದ ಬೆಳವಣಿಗೆಯಲ್ಲಿ ಆಮ್‌ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಬಿಜೆಪಿ ಸೇರುವ ಮೂಲಕ ಎಎಪಿಗೆ ಆಘಾತ ನೀಡಿದ್ದಾರೆ. ಜನವರಿ 30 … Continued

ಸುಪ್ರೀಂ ಕೋರ್ಟ್ ವಿಚಾರಣೆಗೂ ಮುನ್ನ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿಯ ಮನೋಜ ಸೋಂಕರ್

ಚಂಡೀಗಢ : ಮತ ಎಣಿಕೆ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ಸುಪ್ರೀಂ ಕೋರ್ಟ್ ನಿಗದಿತ ವಿಚಾರಣೆ ನಡೆಸಲಿರುವ ಒಂದು ದಿನ ಮೊದಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಮನೋಜ ಸೋಂಕರ್ ಅವರು ಭಾನುವಾರ ಚಂಡೀಗಢ ಮೇಯರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಜನವರಿ 30 ರಂದು ನಡೆದ ಚಂಡೀಗಢ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಂಚೆ … Continued

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಸಾದ ನಡ್ಡಾ ಅವರ ಅಧಿಕಾರಾವಧಿಯನ್ನು ಈ ವರ್ಷದ ಜೂನ್‌ ವರೆಗೆ ವಿಸ್ತರಿಸಲಾಗಿದೆ. ಈ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಮಂಡಳಿಯು ಭಾನುವಾರ ಅಂಗೀಕರಿಸಿತು. ಇದಲ್ಲದೆ, ಪಕ್ಷದ ಸಂಸದೀಯ ಮಂಡಳಿಯ ನಂತರದ ಅನುಮೋದನೆಗೆ ಒಳಪಟ್ಟು ಸ್ವತಂತ್ರವಾಗಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳುವ ಅಧಿಕಾರವನ್ನು ಜೆ.ಪಿ. ನಡ್ಡಾ ಅವರಿಗೆ ನೀಡಲಾಗಿದೆ. ದೆಹಲಿಯಲ್ಲಿ ನಡೆದ ಬಿಜೆಪಿಯ … Continued

ಕಾಂಗ್ರೆಸ್‌ ನಾಯಕ ಕಮಲನಾಥ ಬಿಜೆಪಿ ಸೇರ್ತಾರಾ..? ಸಾಮಾಜಿಕ ಮಾಧ್ಯಮ ಬಯೋದಿಂದ ಕಾಂಗ್ರೆಸ್‌ ಅನ್ನು ಕೈಬಿಟ್ಟ ಮಗ ನಕುಲ್‌..!

ನವದೆಹಲಿ : ಪಕ್ಷದ ನಾಯಕತ್ವದ ಬಗ್ಗೆ ಕೆಲವು ಕಾಂಗ್ರೆಸ್ ನಾಯಕರು ಅಸಮಾಧಾನಗೊಂಡಿದ್ದಾರೆ ಎಂದು ಮಧ್ಯಪ್ರದೇಶ ಬಿಜೆಪಿ ಮುಖ್ಯಸ್ಥ ವಿ.ಡಿ. ಶರ್ಮಾ ಅವರು ಹೇಳಿಕೊಂಡ ಒಂದು ದಿನದ ನಂತರ, ಕಾಂಗ್ರೆಸ್ ನಾಯಕ ನಕುಲ ಕಮಲನಾಥ ಅವರು ತಮ್ಮ ಸಾಮಾಜಿಕ ಮಾಧ್ಯಮ ಬಯೋದಿಂದ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ತೆಗೆದುಹಾಕಿದ್ದು, ಸಂಭವನೀಯ ರಾಜಕೀಯ ಬದಲಾವಣೆಯ ಪ್ರಮುಖ ಸುಳಿವನ್ನು ನೀಡಿದ್ದಾರೆ … Continued

ಮಹಾರಾಷ್ಟ್ರ: ಮಾಜಿ ಸಿಎಂ ಅಶೋಕ ಚವಾಣ ಪಕ್ಷ ತೊರೆದ ಬೆನ್ನಲ್ಲೇ ಕಾಂಗ್ರೆಸ್ ಸಭೆಗೆ ಐವರು ಶಾಸಕರು ಗೈರು…!

ಮುಂಬೈ: ಮಾಜಿ ಮುಖ್ಯಮಂತ್ರಿ ಅಶೋಕ ಚವಾಣ್ ಅವರು ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ನಂತರ ಮಹಾರಾಷ್ಟ್ರದಲ್ಲಿ ಗುರುವಾರ ನಡೆದ ಕಾಂಗ್ರೆಸ್‌ ಶಾಸಕರ ಸಭೆಗೆ ಕನಿಷ್ಠ ಐವರು ಶಾಸಕರು ಹಾಜರಾಗಲಿಲ್ಲ ಎಂದು ವರದಿಯಾಗಿದೆ. ಇದು ಇನ್ನೂ ಅನೇಕ ಶಾಸಕರು ಬಿಜೆಪಿಗೆ ಪಕ್ಷಾಂತರವಾಗಬಹುದು ಎಂಬ ಬಗ್ಗೆ ಊಹಾಪೋಹಗಳಿಗೆ ಕಾರಣವಾಗಿದೆ. ಕಾಂಗ್ರೆಸ್‌ ಶಾಸಕರಾದ ಜೀಶನ್ ಸಿದ್ದಿಕ್ (ಬಾಂದ್ರಾ ಪೂರ್ವ), … Continued

2022ರ ವರೆಗೆ ₹ 16,000 ಕೋಟಿ ಮೌಲ್ಯದ ಚುನಾವಣಾ ಬಾಂಡ್‌ಗಳು ಮಾರಾಟ : ಬಿಜೆಪಿಗೆ ಸಿಂಹ ಪಾಲು ; ಯಾವ ಪಕ್ಷಗಳು ಪಡೆದದ್ದೆಷ್ಟು ಎಂಬುದು ಇಲ್ಲಿದೆ…

ನವದೆಹಲಿ: ಚುನಾವಣಾ ಬಾಂಡ್‌ಗಳು ಇದುವರೆಗೆ ವಿವಿಧ ರಾಜಕೀಯ ಪಕ್ಷಗಳಿಗೆ ₹ 16,437.63 ಕೋಟಿ ಮೌಲ್ಯದ 28,030 ಎಲೆಕ್ಟೋರಲ್ ಬಾಂಡ್‌ಗಳನ್ನು ಮಾರಾಟ ಮಾಡಲಾಗಿದೆ. ಇದರಲ್ಲಿ ಸಿಂಹ ಪಾಲು ಬಿಜೆಪಿ ಪಾಲಾಗಿದೆ ಎಂದು ಅಂದಾಜಿಸಲಾಗಿದೆ. ಈಗ ರದ್ದಾದ ಚುನಾವಣಾ ಬಾಂಡ್ ಯೋಜನೆಯನ್ನು 2018ರಲ್ಲಿ ಪರಿಚಯಿಸಿದ ನಂತರ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ₹ 12,000 ಕೋಟಿಗೂ ಹೆಚ್ಚು ಹಣವನ್ನು … Continued

ಬೆಳಗಾವಿ ಪಾಲಿಕೆ ಮೇಯರ್‌, ಉಪಪೇಯರ್‌ ಸ್ಥಾನಕ್ಕೆ ಚುನಾವಣೆ : ಎರಡರಲ್ಲೂ ಬಿಜೆಪಿ ಗೆಲುವು

ಬೆಳಗಾವಿ: ಕುತೂಹಲ ಕೆರಳಿಸಿದ್ದ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್‌ ಹಾಗೂ ಉಪ ಮೇಯರ್‌ ಚುನಾವಣೆಯಲ್ಲಿ ಬಿಜೆಪಿಯ ಸವಿತಾ ಕಾಂಬಳೆ ಮೇಯರ್ ಆಗಿ ಮತ್ತು ಆನಂದ ಚವ್ಹಾಣ ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಆ ಮೂಲಕ ಎರಡೂ ಸ್ಥಾನಗಳಲ್ಲಿಯೂ ಬಿಜೆಪಿ ಜಯಗಳಿಸಿದೆ. ಐದು ವರ್ಷದ ಬಳಿಕ ಪಾಲಿಕೆಯಲ್ಲಿ ಕನ್ನಡ ಭಾಷಿಕ ಸದಸ್ಯೆ ಮೇಯರ್ ಆಗಿ ಆಯ್ಕೆಯಾಗಿರುವುದು ಆಗಿರುವುದು ವಿಶೇಷವಾಗಿದೆ. … Continued

ಮಂಗಳೂರು ಶಾಲಾ ವಿವಾದ : ಇಬ್ಬರು ಬಿಜೆಪಿ ಶಾಸಕರ ಮೇಲೆ ಪ್ರಕರಣ ದಾಖಲು

ಮಂಗಳೂರು: ನಗರದ ವೆಲೆನ್ಸಿಯಾ ಸಂತ ಜೆರೋಸಾ ಶಾಲಾ ಶಿಕ್ಷಕಿ ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದ್ದಾರೆಂಬ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆ ವೇಳೆ ಶಾಲಾ ಮಂಡಳಿಗೆ ಬೆದರಿಕೆ ಹಾಕಿದ್ದಾರೆಂಬ ಆರೋಪದ ಮೇಲೆ ಇಬ್ಬರು ಶಾಸಕರು ಹಾಗೂ ಇತರರ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಶಿಕ್ಷಕಿ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ … Continued