ಪ್ರಧಾನಿ ಮೋದಿ 11 ದಿನ ಉಪವಾಸ ಮಾಡಿದ ಬಗ್ಗೆ ಅನುಮಾನವಿದೆ, ಅವ್ರನ್ನ ರಾಮಮಂದಿರ ಗರ್ಭಗುಡಿ ಒಳಗೆ ಬಿಡ್ಬಾರ್ದಿತ್ತು..: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ : ಪ್ರಧಾನಿ ಮೋದಿ ಉಪವಾಸ ಮಾಡಿದ್ದರ ಬಗ್ಗೆ ಅನುಮಾನವಿದೆ. ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಉಪವಾಸ ಮಾಡಿದ್ದ ಬಗ್ಗೆಯೇ ಅನುಮಾನವಿದೆ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ದರೆ ಒಂದೆರೆಡು ದಿನದಲ್ಲಿ … Continued

ಅನಂತಕುಮಾರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ : ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಬೆಂಗಳೂರು : ಸಂಸದ ಅನಂತಕುಮಾರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಹೇಳಿರುವುದು ಅವರ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ಅನಂತಕುಮಾರ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲೇ ಜನರು ರಾಜಕಾರಣಿಗಳನ್ನು ನಂಬದಂತಹ ಪರಿಸ್ಥಿತಿ ಇದೆ. ಹೀಗಾಗಿ ಯಾರೇ ಇದ್ದರೂ ನಮ್ಮ ಹೇಳಿಕೆ ಗಂಭೀರವಾಗಿರಬೇಕು. ನಮ್ಮ ಮಾತು … Continued

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿಯಾಗಿ ಸ್ಪರ್ಧೆ : ಮಾಯಾವತಿ ಘೋಷಣೆ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷವು ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ, ಸಾರ್ವತ್ರಿಕ ಚುನಾವಣೆಯಲ್ಲಿ ಆಡಳಿತ ಅಥವಾ ವಿರೋಧ ಪಕ್ಷದ ಮೈತ್ರಿಕೂಟದ ವಾಗುವುದಿಲ್ಲ ಮತ್ತು ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಬಹುಜನ ಸಮಾಜವಾದಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಪ್ರಕಟಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಬಿಎಸ್‌ಪಿ ಯಾವುದೇ ಮೈತ್ರಿಕೂಟದ ಭಾಗವಾಗುವುದಿಲ್ಲ ಮತ್ತು ಲೋಕಸಭೆ ಚುನಾವಣೆಯಲ್ಲಿ … Continued

ರಾಜ್ಯದ 39 ಸಂಘಟನಾ ಜಿಲ್ಲೆಗಳಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕ ಮಾಡಿದ ಬಿಜೆಪಿ : ಯಾವ ಜಿಲ್ಲೆಗೆ ಯಾರು..? ಪಟ್ಟಿ ಇಲ್ಲಿದೆ..

ಬೆಂಗಳೂರು : ರಾಜ್ಯ ಬಿಜೆಪಿ ಜಿಲ್ಲಾ ಘಟಕಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ರಾಜ್ಯದ ಒಟ್ಟು 39 ಸಂಘಟನಾ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇಮಕ ಮಾಡಿ  ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕರಾಗಿ ಎಸ್. ದತ್ತಾತ್ರಿ ಅವರನ್ನು ನೇಮಕ … Continued

ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಪ್ರಕರಣ ದಾಖಲು

ಕಾರವಾರ: ಉತ್ತರ ಕನ್ನಡ ‌ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಪೊಲೀಸರು ಸ್ವಯಂ ಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿದ್ದಾರೆ. ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸಂಸದ ಅನಂತಕುಮಾರ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153 (ಶಾಂತಿ ಕದಡಲು ಪ್ರಚೋದನೆ) ಅಡಿಯಲ್ಲಿ ಪೊಲೀಸರು ಪ್ರಕರಣ … Continued

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂಬ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿಕೆಗೆ ಆಕ್ರೋಶ

ಬೆಳಗಾವಿ/ಬೆಂಗಳೂರು  : ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿವಾದಾತ್ಮಕ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕಾರದಗಾ ಗ್ರಾಮದಲ್ಲಿ ಜನವರಿ 7ರಂದು ನಡೆದ 6ನೇ ಕನ್ನಡ ಸಮ್ಮೇಳನದಲ್ಲಿ ಪಾಲ್ಗೊಂಡಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಮಾತಿನ ಭರದಲ್ಲಿ ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿತ್ತು … Continued

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರಿ ವೈದ್ಯ ಹುದ್ದೆ ತೊರೆದ ಸಂಸದ ಶ್ರೀನಿವಾಸ್ ಪ್ರಸಾದ ಅಳಿಯ…!

ಚಾಮರಾಜನಗರ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಸದ ಶ್ರೀನಿವಾಸ ಪ್ರಸಾದ ಅವರ ಅಳಿಯ ತಮ್ಮ ಸರ್ಕಾರಿ ವೈದ್ಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಂಸದ ವಿ.ಶ್ರೀನಿವಾಸಪ್ರಸಾದ ಅವರ ಅಳಿಯ ಡಾ.ಎನ್‌ಎಸ್ ಮೋಹನ ಬೆಂಗಳೂರು ಸಂಜಯ ಗಾಂಧಿ ಆಸ್ಪತ್ರೆಯ ಖ್ಯಾತ ಬೆನ್ನುಹುರಿ ತಜ್ಞ ಹಾಗು ಪ್ರಾಧ್ಯಾಪಕರಾಗಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್‌ … Continued

ಕರ್ನಾಟಕ ಬಿಜೆಪಿ ವಕ್ತಾರರು, ಪ್ರಕೋಷ್ಠಗಳಿಗೆ ಸಂಚಾಲಕರ ನೇಮಕ, ರಾಜ್ಯ ಬಿಜೆಪಿ ವಕ್ತಾರರಾಗಿ ಹಿರಿಯ ಪತ್ರಕರ್ತ ಹರಿಪ್ರಕಾಶ ಕೋಣೆಮನೆ ನೇಮಕ

ಬೆಂಗಳೂರು: ರಾಜ್ಯಾಧ್ಯಕ್ಷರಾದ ಬಿವೈ ವಿಜಯೇಂದ್ರ ಅವರು ರಾಜ್ಯ ಬಿಜೆಪಿಯ ಬಿಜೆಪಿ ಮುಖ್ಯ ವಕ್ತಾರರು ಮತ್ತು ವಕ್ತಾರರು ಮತ್ತು ವಿವಿಧ ಪ್ರಕೋಷ್ಠಗಳಿಗೆ ಸಂಚಾಲಕ ಹಾಗೂ ಸಹಸಂಚಾಲಕರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಒಬ್ಬ ಮುಖ್ಯ ವಕ್ತಾರ ಹಾಗೂ 10 ಮಂದಿಯನ್ನು ವಕ್ತಾರರಾಗಿ ನೇಮಕ ಮಾಡಲಾಗಿದೆ. ಮುಖ್ಯ ವಕ್ತಾರರಾಗಿ ಅಶ್ವತ್ಥ ನಾರಾಯಣ (ಮಾಜಿ ವಿಧಾನಪರಿಷತ್ ಸದಸ್ಯ) ನೇಮಕ ಮಾಡಲಾಗಿದೆ. ವಕ್ತಾರರಾಗಿ … Continued

ಲೋಕಸಭೆ ಚುನಾವಣೆಗೆ ಮುನ್ನ ಬಂಡಿ ಸಂಜಯ, ಸುನಿಲ ಬನ್ಸಾಲ್, ಇತರರಿಗೆ ಪಕ್ಷದಲ್ಲಿ ಮಹತ್ವದ ಹೊಣೆಗಾರಿಕೆ ನೀಡಿದ ಬಿಜೆಪಿ

ನವದೆಹಲಿ: 2024 ರ ಲೋಕಸಭಾ ಚುನಾವಣೆಗೆ ಕೇವಲ ತಿಂಗಳುಗಳು ಬಾಕಿ ಇರುವಾಗ, ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ ಪಕ್ಷದ ವಿವಿಧ ವಿಭಾಗಗಳಿಗೆ ಪ್ರಮುಖ ನೇಮಕಾತಿಗಳನ್ನು ಮಾಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹಲವು ಮುಖಂಡರನ್ನು ವಿವಿಧ ಇಲಾಖೆಗಳ ಉಸ್ತುವಾರಿಗಳನ್ನಾಗಿ ನೇಮಿಸಿದ್ದಾರೆ. ಜೆಪಿ ನಡ್ಡಾ ಅವರು ಅನುಮೋದಿಸಿದ ನೇಮಕಾತಿಗಳ ಪಟ್ಟಿ ಇಲ್ಲಿದೆ: ಸುನಿಲ … Continued

ಹುಬ್ಬಳ್ಳಿ: ಬಿಜೆಪಿ ಪ್ರತಿಭಟನೆ, ಠಾಣೆಗೆ ನುಗ್ಗಲು ಯತ್ನ: ಆರ್.ಅಶೋಕ ಸೇರಿ ಹಲವರು ವಶಕ್ಕೆ

ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯು ಹುಬ್ಬಳ್ಳಿಯಲ್ಲಿ ತೀವ್ರಗೊಂಡಿದೆ. ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಪೋಲಿಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ತಡೆದ ಪೊಲೀಸರು, ನಾಯಕ ಆರ್. ಅಶೋಕ್ ಸೇರಿದಂತೆ 90 ಜನರನ್ನು ವಶಕ್ಕೆ ಪಡೆದರು. ಹಿಂದೂ ಕಾರ್ಯಕರ್ತ … Continued