ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿರುದ್ಧ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಆರೋಪ ಪ್ರಕರಣದ ತನಿಖೆ ಸಿಐಡಿ ಹೆಗಲಿಗೆ

ಹುಬ್ಬಳ್ಳಿ: ವಿಧಾನ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪಿತ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ತಿಳಿಸಿದ್ದಾರೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಟಿ. ರವಿ ಅವರು ಅಶ್ಲೀಲ ಪದ … Continued

ಸಿ.ಟಿ. ರವಿ ಪ್ರಕರಣ ಮುಗಿದ ಅಧ್ಯಾಯ, ಸದನದೊಳಗಿನ ವಿಚಾರಕ್ಕೆ ಪೊಲೀಸರು ಕ್ರಮ ಕೈಗೊಳ್ಳುವಂತಿಲ್ಲ : ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾದ ಆರೋಪಿತ ಪ್ರಕರಣವು ಮುಗಿದ ಅಧ್ಯಾಯವಾಗಿದ್ದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ … Continued

ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ : ತಕ್ಷಣವೇ ಶಾಸಕ ಸಿ ಟಿ ರವಿ ಬಿಡುಗಡೆ ಮಾಡಲು ಹೈಕೋರ್ಟ್‌ ಆದೇಶ

ಬೆಂಗಳೂರು : ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ವಿರುದ್ಧ ವಿಧಾನ ಪರಿಷತ್‌ನಲ್ಲಿ ಅಶ್ಲೀಲ ಪದ ಬಳಕೆಯ ಆರೋಪದ ಮೇಲೆ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ಆದೇಶ … Continued

ಸಚಿವೆಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣ: ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ವಿರುದ್ಧ ಅಶ್ಲೀಲ ಪದಬಳಕೆ ಆರೋಪಿತ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಜಾಮೀನು ಅರ್ಜಿ ವಿಚಾರರಣೆ ನಡೆಸಿದ ಬೆಳಗಾವಿ ಕೋರ್ಟ್‌ ಪ್ರಕರಣವನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾಯಿಸಿದೆ. ಸಿಟಿ ರವಿ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀಶರು … Continued

ನನ್ನ ಜೀವಕ್ಕೆ ಅಪಾಯವಿದೆ.. ನನಗೆ ಏನೇ ತೊಂದರೆಯಾದ್ರೂ ಅದಕ್ಕೆ ಡಿ.ಕೆ. ಶಿವಕುಮಾರ, ಹೆಬ್ಬಾಳ್ಕರ್ ಕಾರಣ ; ಸಿ.ಟಿ.ರವಿ ವೀಡಿಯೊ ಹೇಳಿಕೆ

ಬೆಂಗಳೂರು: ನನ್ನ ಜೀವಕ್ಕೆ ಅಪಾಯವಿದ್ದು ನನಗೆ ಏನೇ ಆದರೂ ಅದಕ್ಕೆ ಪೊಲೀಸರು, ಕಾಂಗ್ರೆಸ್ ಸರ್ಕಾರವೇ ಕಾರಣ. ವಿಶೇಷವಾಗಿ ಡಿಸಿಎಂ ಡಿಕೆ ಶಿವಕುಮಾರ್, ಸಚಿವೆ ಹೆಬ್ಬಾಳ್ಕರ್ ಕಾರಣ ಎಂದು ವಿಡಿಯೋ ಸಂದೇಶ ಪ್ರಕಟಿಸಿದ್ದಾರೆ. ವೀಡಿಯೊ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾತ್ರಿ ಸುಮಾರು 8 ಗಂಟೆ ಸುಮಾರಿಗೆ ನನ್ನನ್ನು ಖಾನಾಪುರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ. ಯಾವ … Continued

ನನ್ನ ಕೊಲೆಗೆ ಯತ್ನಿಸಿದ ಸಚಿವೆ ಹೆಬ್ಬಾಳ್ಕರ್‌ : ಪ್ರತಿದೂರು ದಾಖಲಿಸಿದ ಸಿ.ಟಿ.ರವಿ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರು ಸದನದಲ್ಲಿ ನನಗೆ ಕೊಲೆಗಡುಕ ಎಂದು ನಿಂದನೆ ಮಾಡಿ ತಮ್ಮ ಬೆಂಬಲಿಗರನ್ನು ಸುವರ್ಣ ಸೌಧಕ್ಕೆ ನುಗ್ಗಿಸಿ ನನ್ನನ್ನು ಕೊಲೆ ಮಾಡಲು ಯತ್ನಿಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ನಾಯಕ ಸಿ.ಟಿ. ರವಿ ಪ್ರತಿ ದೂರು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಖಾನಾಪುರ ಪೊಲೀಸ್ ಠಾಣೆಯಲ್ಲಿ ಗುರುವಾರ … Continued

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಎಫ್‌ಐಆರ್‌ ದಾಖಲು

ನವದೆಹಲಿ : ಮಹತ್ವದ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್‌ ಮುಖಂಡ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ವಿರುದ್ಧ ದೆಹಲಿ ಪೊಲೀಸರು ಗುರುವಾರ (ಡಿ. 19) ಎಫ್‌ಐಆರ್‌ ದಾಖಲಿಸಿದ್ದಾರೆ. ಸಂಸತ್ತಿನಲ್ಲಿ ನಡೆದ ಘರ್ಷಣೆಯಲ್ಲಿ ಇಬ್ಬರು ಬಿಜೆಪಿ ನಾಯಕರು ಗಾಯಗೊಂಡ ಹಿನ್ನೆಲೆಯಲ್ಲಿ ಅವರ ವಿರುದ್ಧ ಬಿಜೆಪಿ ದೂರು ದಾಖಲಿಸಿತ್ತು. ಸೆಕ್ಷನ್ 117 (ಸ್ವಯಂ ಪ್ರೇರಿತವಾಗಿ ತೀವ್ರ ಗಾಯ … Continued

ದೂರು-ಪ್ರತಿದೂರು: ಸಂಸತ್ತಿ ಹೊರಗೆ ‘ಹಲ್ಲೆ’ ವಿವಾದ ತೀವ್ರ ; ಪೊಲೀಸ್‌ ಠಾಣೆ ಕದ ತಟ್ಟಿದ ಬಿಜೆಪಿ, ಕಾಂಗ್ರೆಸ್…

ನವದೆಹಲಿ: ಸಂಸತ್ತಿನ ಹೊರಗೆ ಆಪಾದಿತ ಘರ್ಷಣೆಯ ನಂತರಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಪರಸ್ಪರರ ಮೇಲೆ ಹಲ್ಲೆ ಮತ್ತು ದುರ್ನಡತೆಯ ಆರೋಪದ ಮೇಲೆ ಪೊಲೀಸ್ ದೂರುಗಳನ್ನು ದಾಖಲಿಸಿವೆ. ಮಂಗಳವಾರ ಸಂಸತ್ತಿನಲ್ಲಿ ಅಮಿತ್ ಶಾ ತಮ್ಮ ಭಾಷಣದಲ್ಲಿ ಡಾ.ಅಂಬೇಡ್ಕರ ಕುರಿತಾದ ಹೇಳಿಕೆಯು ಅವರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿ ವಿಪಕ್ಷಗಳ ಪ್ರತಿಭಟನೆ ಭುಗಿಲೆದ್ದಿತು. ಅವರ ಹೇಳಿಕೆಗಳು ಕಾಂಗ್ರೆಸ್ ಸೇರಿದಂತೆ … Continued

ಆಕ್ಷೇಪಾರ್ಹ ಪದ ಬಳಕೆ ಆರೋಪ: ಸಿ.ಟಿ. ರವಿ ಬಂಧನ

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರು, ಸುವರ್ಣಸೌಧದಲ್ಲೇ ಸಿಟಿ ರವಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಿ.ಟಿ.ರವಿ ಅವರು … Continued

ಅಮಿತ್ ಶಾ ಹೇಳಿಕೆಯಿಂದ ಕೋಲಾಹಲ | ಸಂಸತ್‌ ಬಳಿ ಬಿಜೆಪಿ-ಇಂಡಿಯಾ ಪ್ರತಿಭಟನೆ ; ಬಿಜೆಪಿ ಸಂಸದರಿಗೆ ಗಾಯ; ರಾಹುಲ್‌ ಗಾಂಧಿ ತಳ್ಳಿರುವ ಆರೋಪ

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ರಾಜ್ಯಸಭೆಯಲ್ಲಿ ಮಾತನಾಡುವಾಗ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ (BR Ambedkar) ಅವರನ್ನು ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳು ಅವರ ರಾಜೀನಾಮೆಗೆ ಒತ್ತಾಯಿಸಿ ಎರಡು ದಿನಗಳಿಂದ ಪ್ರತಿಭಟನೆಗಳು ನಡೆಸುತ್ತಿವೆ. ಇಂದು, ಗುರುವಾರ (ಡಿ.19) ಕೂಡ ಸಂಸತ್ ಭವನದ ಎದುರು ಅಮಿತ್ ಶಾ … Continued