75 ಬಾರಿ ಸಂವಿಧಾನ ಬದಲಾಯಿಸಿರುವ ಕಾಂಗ್ರೆಸ್…ಅದಕ್ಕೆ ತುರ್ತು ಪರಿಸ್ಥಿತಿ ಕಳಂಕ ಅಳಿಸಿಹಾಕಲು ಸಾಧ್ಯವಿಲ್ಲ ; ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂವಿಧಾನ ರಚನೆಕಾರರು ಭಾರತದ ವಿವಿಧತೆಯಲ್ಲಿ ಏಕತೆಯ ಬಲವನ್ನು ಆಚರಿಸಿದರೆ, ಕೆಲವರು ವಿಭಿನ್ನ ಮಾರ್ಗವನ್ನು ಆರಿಸಿಕೊಂಡರು ಎಂದು ಹೇಳಿದ್ದಾರೆ. “ಸಂವಿಧಾನವನ್ನು ಅಳವಡಿಸಿಕೊಳ್ಳುವ ಬದಲು, ಅವರು (ಕಾಂಗ್ರೆಸ್) ಅಪಶ್ರುತಿ ಮತ್ತು ನಕಾರಾತ್ಮಕತೆಯ ಬೀಜಗಳನ್ನು ಬಿತ್ತಿದ್ದಾರೆ” ಎಂದು ಸಂವಿಧಾನದ ಚರ್ಚೆಗೆ ಉತ್ತರಿಸಿದ ಪ್ರಧಾನಿ ಲೋಕಸಭೆಯಲ್ಲಿ … Continued

ಬಿಜೆಪಿಯ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಪ್ರಸ್ತುತ ಅವರ ಸ್ಥಿತಿ ಸ್ಥಿರವಾಗಿದೆ, ಆದರೆ ಅವರು ನಿಗಾದಲ್ಲಿದ್ದಾರೆ. ವರದಿ ಪ್ರಕಾರ, 96 ವರ್ಷ ವಯಸ್ಸಿನ ಅಡ್ವಾಣಿ ಅವರನ್ನು ಆಸ್ಪತ್ರೆಯ ನರವಿಜ್ಞಾನ ವಿಭಾಗದಲ್ಲಿ ಹಿರಿಯ ಮಟ್ಟದ ಸಲಹೆಗಾರರಾಗಿರುವ ಡಾ ವಿನೀತ ಸೂರಿ ಅವರ ಆರೈಕೆ ಮತ್ತು … Continued

ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ; ವರದಿ

ನವದೆಹಲಿ: ಚುನಾವಣೆ (Election) ಪ್ರಕ್ರಿಯೆಯಲ್ಲಿ ಸುಧಾರಣೆ ತರುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿ ದೇಶಾದ್ಯಂತ ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಲು ನಿರ್ಣಯಿಸಿರುವ “ಒಂದು ರಾಷ್ಟ್ರ ಒಂದು ಚುನಾವಣೆ” (One Nation One Election) ಮಸೂದೆಗೆ ಇಂದು ಗುರುವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಸೂದೆಗಳನ್ನು … Continued

2024ರಲ್ಲಿ ಗೂಗಲ್‌ ನಲ್ಲಿ ಭಾರತೀಯರು ಅತಿಹೆಚ್ಚು ಸರ್ಚ್‌ ಮಾಡಿದ ವಿಷಯಗಳೇನು ಗೊತ್ತೆ..? ಇಲ್ಲಿದೆ ಪಟ್ಟಿ

ನವದೆಹಲಿ: 2024 ರ ವರ್ಷ ಮುಗಿದು ೨೦೨೫ಕ್ಕೆ ಕಾಲಿಡುವ ಹಂತದಲ್ಲಿದ್ದೇವೆ. ಈ ವರ್ಷ ಜನರು ಯಾವ ಯಾವ ವಿಷಯಗಳನ್ನು ಹೆಚ್ಚಾಗಿ ತಿಳಿದುಕೊಳ್ಳಲು ಇಷ್ಟಪಟ್ಟಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ಗೂಗಲ್ (Google) ಸರ್ಚ್ ಇಂಜಿನ್ ವಾರ್ಷಿಕವಾಗಿ ತನ್ನ ವಿಶೇಷ “ಇಯರ್ ಇನ್ ಸರ್ಚ್” ವರದಿಯಲ್ಲಿ ವಿವಿಧ ಥೀಮ್‌ಗಳಲ್ಲಿ ಹೆಚ್ಚು ಹುಡುಕಲಾದ ವಿಷಯಗಳ ಪಟ್ಟಿಯನ್ನು ಮಾಡುತ್ತದೆ. ಬಿಡುಗಡೆಯಾದ 2024 ರ … Continued

ಯಾರೋ ಹೇಳಿದಾಕ್ಷಣ ವಿಜೇಯೆಂದ್ರ ಬದಲಾವಣೆ ಮಾಡಲು ಆಗದು : ರಾಧಾಮೋಹನ ಅಗರ್ವಾಲ್

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯ ಕಂಡುಬಂದಿಲ್ಲ. ಅಲ್ಲದೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಸದ್ಯಕ್ಕೆ ಬದಲಾವಣೆ ಮಾಡುವ ಯಾವುದೇ ವಿಚಾರ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನದಾಸ ಅಗರ್ವಾಲ್ ಹೇಳಿದ್ದಾರೆ. ಶನಿವಾರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದ ಬಳಿಕ ಮಾಧ್ಯಮಗಳ ಜತೆ … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued

ಯತ್ನಾಳಗೆ ಶಾಕ್ ನೀಡಿದ ಬಿಜೆಪಿ ; ಪಕ್ಷದ ಕೇಂದ್ರ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ನಾಯಕತ್ವಕ್ಕೆ ಮುಜುಗರ ಉಂಟು ಮಾಡುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal) ಅವರಿಗೆ ಕೇಂದ್ರ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಕೇಂದ್ರ ಬಿಜೆಪಿ ಶಿಸ್ತು ಸಮಿತಿಯ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಬಸವರಾಜ ಯತ್ನಾಳ ಅವರಿಗೆ ಶೋಕಾಸ್ ನೋಟಿಸ್ ಜಾರಿ … Continued

ಮಹಾರಾಷ್ಟ್ರ : ಮುಖ್ಯಮಂತ್ರಿ ಹುದ್ದೆ ಬಿಜೆಪಿಗೆ, ಮಿತ್ರಪಕ್ಷಗಳಿಂದ ಇಬ್ಬರು ಉಪಮುಖ್ಯಮಂತ್ರಿಗಳು ; ಅಜಿತ ಪವಾರ್‌

ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಬಿಜೆಪಿಯಿಂದ ಆಗುತ್ತಾರೆ ಎಂದು ಬಿಜೆಪಿ ಮಿತ್ರ ಪಕ್ಷ ಎನ್‌ಸಿಪಿ ಮುಖ್ಯಸ್ಥ ಅಜಿತ ಪವಾರ್ ಶನಿವಾರ ಹೇಳಿದ್ದಾರೆ. ಇಬ್ಬರು ಉಪಮುಖ್ಯಮಂತ್ರಿಗಳು ಮೈತ್ರಿಕೂಟದ ಉಳಿದ ಅಂಗಪಕ್ಷಗಳಿಂದ ಆಯ್ಕೆಯಾಗಲಿದ್ದಾರೆ ಎಂದು ಅವರು ಹೇಳಿದರು. ಅಜಿತ್ ಪವಾರ್ ಅವರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷ, ಏಕನಾಥ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಮಹಾಯುತಿ ಮೈತ್ರಿಕೂಟದಲ್ಲಿ ಮೂರು … Continued

ಹಣ ಸುಲಿಗೆ ಪ್ರಕರಣ ; ದೆಹಲಿ ಎಎಪಿ ಶಾಸಕ ನರೇಶ ಬಲ್ಯಾನ್ ಬಂಧನ

ನವದೆಹಲಿ : ಕಳೆದ ವರ್ಷ ದಾಖಲಾದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಶಾಸಕ ನರೇಶ ಬಲ್ಯಾನ್ ಅವರನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೆಹಲಿಯ ಉತ್ತಮ ನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ನರೇಶ ಬಲ್ಯಾನ್ ಅವರನ್ನು ವಿಚಾರಣೆಗಾಗಿ ಆರ್ ಕೆ ಪುರಂನಲ್ಲಿರುವ ದೆಹಲಿ ಪೊಲೀಸರ ಅಪರಾಧ ವಿಭಾಗದ ಕಚೇರಿಗೆ ಕರೆಸಲಾಯಿತು ಮತ್ತು ನಂತರ … Continued

ಮಹಾರಾಷ್ಟ್ರ | ಸರ್ಕಾರ ರಚನೆಗೆ ಮುಂದುವರಿದ ಬಿಕ್ಕಟ್ಟು : ಆದ್ರೆ ಸಚಿವ ಸಂಪುಟದ ಪ್ರಮಾಣ ವಚನದ ದಿನಾಂಕ ಪ್ರಕಟಿಸಿದ ಬಿಜೆಪಿ…!

ಮುಂಬೈ: ಮಹಾರಾಷ್ಟ್ರದ ನೂತನ ಸಚಿವ ಸಂಪುಟದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕವನ್ನು ಬಿಜೆಪಿ ಪ್ರಕಟಿಸಿದೆ. ಆದರೆ ಮುಖ್ಯಮಂತ್ರಿ ಹೆದ್ದೆಯನ್ನು ಯಾರು ಅಲಂಕರಿಸುತ್ತಾರೆ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ. ಪ್ರಮಾಣ ವಚನ ಸ್ವೀಕಾರ ಸಮಾರಂಭ ಡಿಸೆಂಬರ್ 5 ರಂದು ಸಂಜೆ 5 ಗಂಟೆಗೆ ಮುಂಬೈನ ಐಕಾನಿಕ್ ಆಜಾದ್ ಮೈದಾನದಲ್ಲಿ ಸಮಾರಂಭ ನಡೆಯಲಿದೆ. ಪ್ರಮಾಣ … Continued