ವಾರಾಂತ್ಯ ಕರ್ಫ್ಯೂ ವೇಳೆ ಬಿಎಂಟಿಸಿ ಬಸ್ ಸಂಚಾರ ಅಗತ್ಯ ಸೇವೆ ನೌಕರರಿಗೆ ಮಾತ್ರ ಸೀಮಿತ.. ಇಲ್ಲಿದೆ ಮಾಹಿತಿ

ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ಜಾರಿಗೊಳಿಸಿರುವ ವಾರಾಂತ್ಯ ಕರ್ಫ್ಯೂ ನಿಯಮಾವಳಿಗಳಿಗೆ ಅನುಗುಣವಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದೆ. ಕರ್ಫ್ಯೂ ವೇಳೆ ಬಸ್​ಗಳಲ್ಲಿ ಸಂಚರಿಸಲು ಬಿಎಂಟಿಸಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ವಾರಾಂತ್ಯ ಕರ್ಫ್ಯೂ ಇರುವ ದಿನಗಳಲ್ಲಿಯೂ ಬೆಳಿಗ್ಗೆ 6ರಿಂದ ರಾತ್ರಿ 10 ಗಂಟೆ ವರೆಗೆ ಬಸ್​ಗಳ ಸಂಚಾರ ಇರುತ್ತದೆ. … Continued