ಆಹಾರ ತಯಾರಿಕಾ ಫ್ಯಾಕ್ಟರಿ ಬಾಯ್ಲರ್ ಸ್ಫೋಟ ಘಟನೆ: ಮೃತರ ಸಂಖ್ಯೆ 4ಕ್ಕೆ ಏರಿಕೆ

ಬೆಂಗಳೂರು: ನಗರದ ಆಹಾರ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಬಾಯ್ಲರ್ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಎಂಎಂ ಫುಡ್ ಕಾರ್ಖಾನೆಯಲ್ಲಿ ಸೋಮವಾರ ಮಧ್ಯಾಹ್ನ ಬಾಯ್ಲರ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ಗಂಭೀರ ಗಾಯಗೊಂಡಿದ್ದ ಮತ್ತಿಬ್ಬರು ಇಂದು (ಮಂಗಳವಾರ) ಮುಂಜಾನೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. … Continued