ವೊಡಾಫೋನ್‌ ಐಡಿಯಾಗೆ ₹ 1,128 ಕೋಟಿ ಮರುಪಾವತಿಸಲು ಬಾಂಬೆ ಹೈಕೋರ್ಟ್‌ ಆದೇಶ

ಮುಂಬೈ: 2016-17ರ ಮೌಲ್ಯಮಾಪನ ವರ್ಷಕ್ಕೆ ಮೂಲ ಮತ್ತು ಮುಂಗಡ ತೆರಿಗೆಯಲ್ಲಿ ಕಡಿತಗೊಳಿಸಿದ ₹1,100 ಕೋಟಿಗಿಂತ ಹೆಚ್ಚಿನ ಮೊತ್ತವನ್ನು ವೊಡಾಫೋನ್ ಐಡಿಯಾ ಲಿಮಿಟೆಡ್‌ಗೆ (ವಿಐ ಲಿಮಿಟೆಡ್) ಮರುಪಾವತಿಸುವಂತೆ ಬಾಂಬೆ ಹೈಕೋರ್ಟ್ ಆದಾಯ ತೆರಿಗೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ಕೆ.ಆರ್.ಶ್ರೀರಾಮ ಮತ್ತು ಡಾ.ನೀಲಾ ಗೋಖಲೆ ಅವರಿದ್ದ ಪೀಠವು ಆದಾಯ ತೆರಿಗೆ ಕಾಯಿದೆಯ ನಿಬಂಧನೆಗಳಿಗೆ ಅನುಗುಣವಾಗಿ ಕಾರ್ಯನಿರ್ವಹಿಸಲು ಸಂಬಂಧಿಸಿದ … Continued

ಮಾನನಷ್ಟ ಮೊಕದ್ದಮೆ; ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ಮುಂಬೈ: ಆರ್‌ಎಸ್‌ಎಸ್ ಕಾರ್ಯಕರ್ತ ತಮ್ಮ ವಿರುದ್ಧ ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕೆಲ ಹೆಚ್ಚುವರಿ ದಾಖಲೆಗಳನ್ನು ಅಂಗೀಕೃತ ಸಾಕ್ಷ್ಯವಾಗಿ ಸ್ವೀಕರಿಸಿದ ಥಾಣೆ ನ್ಯಾಯಾಲಯದ ಆದೇಶ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಭಿವಂಡಿ ಮ್ಯಾಜಿಸ್ಟ್ರೇಟ್‌ಗೆ ನೀಡಿದ ದೂರಿನಲ್ಲಿ ರಾಜೇಶ ಕುಂಟೆ, ರಾಹುಲ್ ಗಾಂಧಿ ಅವರು ಆರ್‌ಎಸ್‌ಎಸ್ ವಿರುದ್ಧ ಅವಹೇಳನಕಾರಿ … Continued

ಜನ್ಮ ನೀಡಲು ಮಹಿಳೆಗೆ ಒತ್ತಾಯ ಮಾಡಲಾಗದು; ಸಂತಾನೋತ್ಪತ್ತಿ ಆಯ್ಕೆ ಸಂವಿಧಾನದ 21ನೇ ವಿಧಿ ಭಾಗ: ಬಾಂಬೆ ಹೈಕೋರ್ಟ್‌

ಮುಂಬೈ: ಸಂವಿಧಾನದ 21ನೇ ವಿಧಿಯಡಿ ಮಹಿಳೆಯ ಸಂತಾನೋತ್ಪತ್ತಿ ಆಯ್ಕೆಯು ವೈಯಕ್ತಿಕ ಸ್ವಾತಂತ್ರ್ಯದ ಅವಿಭಾಜ್ಯ ಅಂಗವಾಗಿರುವುದರಿಂದ ಆಕೆಗೆ ಮಗು ಪಡೆಯಲು ಬಲವಂತ ಮಾಡಲಾಗದು ಎಂದು ಇತ್ತೀಚಿಗೆ ಬಾಂಬೆ ಹೈಕೋರ್ಟ್‌ ಹೇಳಿದೆ. ತನ್ನ ಒಪ್ಪಿಗೆ ಪಡೆಯದೇ ಪತ್ನಿಯು ಗರ್ಭಪಾತ ಮಾಡಿಸಿರುವುದು ಕ್ರೌರ್ಯ ಎಂಬ ಆಧಾರದಲ್ಲಿ ವಿಚ್ಛೇದನ ಕೋರಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅತುಲ್‌ ಚಂದೂರ್ಕರ್‌ ಮತ್ತು ಊರ್ಮಿಳಾ ಜೋಶಿ … Continued

ಮಾನನಷ್ಟ ಮೊಕದ್ದಮೆ: ಏಕ ಸದಸ್ಯ ಪೀಠದ ಆದೇಶ ರದ್ದುಗೊಳಿಸುವ ಮಲಿಕ್ ಪ್ರಸ್ತಾವನೆಗೆ ಧ್ಯಾನದೇವ ವಾಂಖೆಡೆ ತಂದೆ ಒಪ್ಪಿಗೆ

ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌ ವಿರುದ್ಧದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಎನ್‌ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಅವರ ತಂದೆ ಧ್ಯಾನದೇವ್ ವಾಂಖೆಡೆ ಅವರಿಗೆ ಮಧ್ಯಂತರ ಪರಿಹಾರ ನೀಡಲು ನಿರಾಕರಿಸಿರುವ ಏಕಸದಸ್ಯ ಪೀಠದ ಆದೇಶ ರದ್ದುಗೊಳಿಸಲು ಮಲಿಕ್‌ ಮನವಿ ಮಾಡಿದ್ದು ಇದಕ್ಕೆ ತಮ್ಮ ಅಭ್ಯಂತರ ಇಲ್ಲ ಎಂದು ಧ್ಯಾನದೇವ್‌ ಬಾಂಬೆ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ತಿಳಿಸಿದ್ದಾರೆ. … Continued

ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಫಲಾನುಭವಿ ಗುರುತಿಸಲು ಆಧಾರ್ ಒಂದೇ ಮಾನದಂಡವಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಫಲಾನುಭವಿಗಳನ್ನು ಗುರುತಿಸಲು ಆಧಾರ್ ಒಂದು ಮಾನದಂಡವಾಗಿದ್ದು ಆದರೆ ಅದುವೇ ಏಕೈಕ ಮಾನದಂಡವಲ್ಲ ಎಂದು ಬಾಂಬೆ ಹೈಕೋರ್ಟ್‌ ಕಳೆದ ವಾರ ತಿಳಿಸಿದೆ (ಗಣಪತ್ ಧರ್ಮ ಮೆಂಗಲ್ ಮತ್ತಿತರರು ಹಾಗೂ ತಹಸೀಲ್ದಾರ್ ಕಚೇರಿ, ಮುರ್ಬಾದ್ ಮತ್ತಿತರರ ನಡುವಣ ಪ್ರಕರಣ). ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯ ಪ್ರಯೋಜನಗಳನ್ನು … Continued

ಹವಲಾ ಪ್ರಕರಣ: ಇಡಿ ಸಮನ್ಸ್‌ ವಜಾ ಮಾಡುವಂತೆ ಕೋರಿದ್ದ ಅನಿಲ್‌ ದೇಶಮುಖ್‌ ಅರ್ಜಿ ವಜಾ ಮಾಡಿದ ಬಾಂಬೆ ಹೈಕೋರ್ಟ್‌

ಮುಂಬೈ: ಹವಾಲಾ ಹಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿರುವ ಸಮನ್ಸ್‌ಗಳನ್ನು ವಜಾ ಮಾಡುವಂತೆ ಕೋರಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಸಲ್ಲಿಸಿದ್ದ ಮನವಿಯನ್ನು ಬಾಂಬೆ ಹೈಕೋರ್ಟ್‌ ವಜಾ ಮಾಡಿದೆ. ಸಿಆರ್‌ಪಿಸಿ ಸೆಕ್ಷನ್‌ 438ರ ಅಡಿ ಅರ್ಜಿದಾರರು ಶಾಸನಬದ್ಧವಾಗಿ ಸಕ್ಷಮ ನ್ಯಾಯಾಲಯದ ಕದತಟ್ಟಲು ಮತ್ತು ನ್ಯಾಯಾಲಯವು ಅರ್ಹತೆಯ ಆಧಾರದಲ್ಲಿ ಪರಿಗಣಿಸುವ ಸಂಬಂಧ ಅದನ್ನು … Continued

ಅನಿಲ ದೇಶ್ಮುಖ್‌ ವಿರುದ್ಧ ಪ್ರಕರಣ ನೋಂದಾಯಿಸಿದ ಸಿಬಿಐ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪದ ಬಗ್ಗೆ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಪ್ರಾಥಮಿಕ ತನಿಖೆ ನೋಂದಾಯಿಸಿದೆ. ಸಿಬಿಐ ವಕ್ತಾರ ಆರ್.ಸಿ.ಜೋಶಿ, “ಸಿಬಿಐ 2021 ರ ಏಪ್ರಿಲ್ 5 ರ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದಂತೆ ಪಿಇ ನೋಂದಾಯಿಸಿದೆ” ಎಂದು ಹೇಳಿದ್ದಾರೆ. ದೆಹಲಿಯ … Continued