ಸಿಡಿ ಪ್ರಕರಣ ತನಿಖೆ :ಎಸ್‌ಐಟಿಗೆ ಪೂರ್ಣ ಸ್ವಾತಂತ್ರ್ಯ, ಸಮಯ ಮಿತಿ ಇಲ್ಲ

ಬೆಂಗಳೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಹಿಂದೆ ಷಡ್ಯಂತ್ರವಿದೆ ಎಂದು ಪತ್ರ ಬರೆದಿದ್ದರು. ಹೀಗಾಗಿ ಎಸ್ಐಟಿ ತನಿಖೆಗೆ ಕೊಟ್ಟಿದ್ದೇವೆ. ಆದರೆ ತನಿಖೆಗೆ ಸಮಯ ನಿಗದಿ ಮಾಡಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ರಾಜ್ಯದ ಜನತೆಗೆ ಸತ್ಯ ಗೊತ್ತಾಗಲಿ ಎಂದು ಶೀಘ್ರವಾಗಿ ವರದಿ ಕೊಡಿ ಎಂದು ಹೇಳಿದ್ದೇವೆ. … Continued

ಸಂವಿಧಾನಾತ್ಮಕವಾಗಿ ಕಾನೂನಿನ ಚೌಕಟ್ಟಿನಲ್ಲಿ ಮೀಸಲಾತಿಗೆ ಕ್ರಮ: ಸಚಿವ ಬಸವರಾಜ ಬೊಮ್ಮಾಯಿ

posted in: ರಾಜ್ಯ | 0

ಬೆಂಗಳೂರು: ಎಸ್ ಸಿ, ಎಸ್ ಟಿ, ಲಿಂಗಾಯತ ಪಂಚಮಸಾಲಿ, ಕುರುಬ, ಒಕ್ಕಲಿಗ ಸೇರಿದಂತೆ ಮೀಸಲಾತಿಗೆ ಒತ್ತಾಯಿಸಿ ಹೋರಾಟ ನಡೆಸುತ್ತಿರುವ ಹಲವು ಸಮುದಾಯಗಳ ಆಶೋತ್ತರಗಳಿಗೆ ಪೂರಕವಾಗಿ ಕಾನೂನಿನ ಚೌಕಟ್ಟಿನಲ್ಲಿ ಸಂವಿಧಾನಾತ್ಮಕವಾಗಿ ಮೀಸಲಾತಿಯನ್ನು ಕಲ್ಪಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಬುಧವಾರ ವಿಧಾನಸಭೆಯಲ್ಲಿ ಮೀಸಲಾತಿಗೆ ಸಂಬಂಧಿಸಿದಂತೆ ನಡೆದ ಪ್ರಸ್ತಾವನೆಗೆ … Continued

ರಮೇಶ ಜಾರಕಿಹೊಳಿ ಪ್ರಕರಣ: ಬುಕ್ ಆಫ್ ಲಾ ಪ್ರಕಾರ ತನಿಖೆ

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕುರಿತು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬಗ್ಗೆ ಬುಕ್ ಆಫ್ ಲಾ ಪ್ರಕಾರ ತನಿಖೆ ನಡೆಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರು … Continued

ಕಾನೂನು ಬಾಹಿರವಾಗಿ ಸದನ ಹಿಡಿದಿಟ್ಟುಕೊಂಡ ಕಾಂಗ್ರೆಸ್‌: ಬೊಮ್ಮಾಯಿ ತೀವ್ರ ಖಂಡನೆ

ಬೆಂಗಳೂರು; ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಚರ್ಚೆ ನಡೆಸದೆ ಸದನವನ್ನೇ ಕಾನೂನು ಬಾಹಿರವಾಗಿ ಕಾಂಗ್ರೆಸ್ ಪಕ್ಷ ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದು ಖಂಡನೀಯ ಎಂದು  ಗೃಹ,  ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಸದನದಲ್ಲಿ ಕಾಂಗ್ರೆಸ್‌ ವರತ್ನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಗುರುವಾರ ಸಂಜೆ ವಿಧಾನಸಭೆ ಅಧಿವೇಶನ ಮುಂದೂಡಲ್ಪಟ್ಟ ನಂತರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ … Continued

ಕಾನೂನುಗಳ ನಡುವೆ ಇರುವ ಅಸ್ಪಷ್ಟತೆ ನಿವಾರಣೆಯಾಗಬೇಕು: ಬೊಮ್ಮಾಯಿ

ಬೆಂಗಳೂರು: ನ್ಯಾಯಾಲಯಗಳಲ್ಲಿ ವಿವಿಧ ಇಲಾಖೆಗಳ ನಡುವೆ ಸಾವಿರಾರು ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಕಾರಣವಾಗಿರುವ ಪರಸ್ಪರ ದ್ವಂದ್ವಕಾರಿ  ಕಾನೂನುಗಳನ್ನು ಸರಿಪಡಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶನಿವಾರ ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ರಾಜ್ಯ ವಿವಾದ ಪರಿಹಾರ ನೀತಿ ಬಿಡುಗಡೆ ಸಮಾರಂಭದಲ್ಲಿ ಕಾಫಿ ಟೇಬಲ್ … Continued

ಹಿರೇನಾಗವಲ್ಲಿ ಸ್ಫೋಟ ಪ್ರಕರಣ ಸಿಐಡಿ ತನಿಖೆಗೆ: ಬೊಮ್ಮಾಯಿ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯಲ್ಲಿ ಮಂಗಳವಾರ ಸಂಭವಿಸಿದ ಜೆಲಿಟನ್‌ ಸ್ಫೋಟದ ಘಟನೆಯಲ್ಲಿ ಆರು ಜನ ಮೃತಪಟ್ಟ ಬಗ್ಗೆ ಮಾಹಿತಿ ಇದ್ದು,  ಸಿಐಡಿಯಿಂದ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮೃತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ತಲಾ … Continued

ಹೊಸ ವ್ಯಾಜ್ಯ ನಿರ್ವಹಣಾ ನೀತಿ ಜಾರಿ: ಬೊಮ್ಮಾಯಿ

ಕಾರ್ಕಳ : ಶೀಘ್ರದಲ್ಲಿ ಹೊಸ ವ್ಯಾಜ್ಯ ನಿರ್ವಹಣಾ ನೀತಿ ಜಾರಿಗೆ ತರಲಾಗುತ್ತದೆ ಎಂದು ರಾಜ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕಾರ್ಕಳದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಕೋರ್ಟ್ ಕಾಂಪ್ಲೆಕ್ಸ್ ಕಟ್ಟಡ ಉದ್ಘಾಟನೆಯ ಬಳಿಕ ಮಾತನಾಡಿದ ಅವರು, ಈಗಾಗಲೇ ವ್ಯಾಜ್ಯ ನಿರ್ವಹಣೆ ನೀತಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿವಿಧ ಇಲಾಖೆಗಳ ನಡುವೆ ಹೆಚ್ಚಿರುವ ವ್ಯಾಜ್ಯಗಳ ಸಂಖ್ಯೆ … Continued