ಸೋನಿಯಾ ಗಾಂಧಿಗೆ ಸಿದ್ದರಾಮಯ್ಯರನ್ನು ಪರಿಚಯಿಸಿದ್ದೇ ನಾನು, ಲಾಟರಿ ಹೊಡೆದ್ರು ಸಿಎಂ ಆದ್ರು ; ಬಿ.ಆರ್. ಪಾಟೀಲ ಫೋನ್ ಕರೆ ಲೀಕ್‌

ಬೆಂಗಳೂರು : ಕರ್ನಾಟಕದ ಹಿರಿಯ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ ಈಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಅವರು ತಮ್ಮ ಆಪ್ತರೊಂದಿಗೆ ದೂರವಾಣಿ ಕರೆಯಲ್ಲಿ ಮಾತನಾಡಿರುವ ವೀಡಿಯೊ ವೈರಲ್ ಆಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋನಿಯಾ ಗಾಂಧಿ ಅವರಿಗೆ ಪರಿಚಯಿಸಿದ್ದು ತಾನೇ ಎಂದು ಹೇಳಿಕೊಂಡಿದ್ದಾರೆ ಮತ್ತು ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದು ಮುಖ್ಯಮಂತ್ರಿಯೂ ಎಂದು ಹೇಳಿದ್ದಾರೆ. ಮಂಡ್ಯ ಜಿಲ್ಲೆ … Continued

ಸಿಎಂ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲಗೆ ಈಗ ಮತ್ತೊಂದು ಹುದ್ದೆ, ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು : ಕೆಲವು ದಿನಗಳ ಹಿಂದೆ ಮುಖ್ಯಮಂತ್ರಿ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರ ಆಪ್ತ ಹಾಗೂ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್.ಪಾಟೀಲ್ (B.R.Patil)​ ಅವರಿಗೆ ಈಗ ಮತ್ತೊಂದು ಹುದ್ದೆ ನೀಡಲಾಗಿದೆ. ಈಗ ಅವರನ್ನು ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಬಿ.ಆರ್.ಪಾಟೀಲ್ ಸಂಪುಟ … Continued

ಅಸಮಾಧಾನಿತ ಶಾಸಕರಿಗೆ ವಿಶೇಷ ಹುದ್ದೆ ಸೃಷ್ಟಿಸಿದ ಸಿಎಂ ಸಿದ್ದರಾಮಯ್ಯ : ಮೂವರಿಗೂ ಸಂಪುಟ ದರ್ಜೆ ಸ್ಥಾನಮಾನ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ಕಳೆದ ಕೆಲವು ತಿಂಗಳಿಂದ ರೆಬೆಲ್‌ ಶಾಸಕರಾಗಿದ್ದ ಇಬ್ಬರು ನಾಯಕರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶೇಷ ಹುದ್ದೆಯನ್ನೇ ಸೃಷ್ಟಿಸಿದ್ದಾರೆ. ಇನ್ನೊಬ್ಬ ಹಿರಿಯ ನಾಯಕರಿಗೆ ಮಹತ್ವದ ಹುದ್ದೆ ನೀಡಿದ್ದಾರೆ. ಕೊಪ್ಪಳ ಜಿಲ್ಲೆ ಯಲಬುರ್ಗಾ ಕ್ಷೇತ್ರದ ಶಾಸಕರಾಗಿರುವ ಬಸವರಾಜ ರಾಯರೆಡ್ಡಿ (Basavaraja RayaReddy) ಅವರನ್ನು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. … Continued

ಸಿಎಂಗೆ ಪತ್ರ ಬರೆದ ಶಾಸಕ ಬಿಆರ್ ಪಾಟೀಲ ; ಶಾಸಕ ಸ್ಥಾನಕ್ಕೆ ರಾಜೀನಾಮೆ ಎಚ್ಚರಿಕೆ

ಬೆಂಗಳೂರು : ಕೆಆರ್ ಐಡಿಎಲ್ ಕಾಮಗಾರಿ ಸಂಬಂಧ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮತ್ತೊಂದು ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದ್ದು, ಇದು ಸರ್ಕಾರವನ್ನು ಮುಜುಗರಕ್ಕೆ ಸಿಲುಕಿಸಿದೆ. ಅದರಲ್ಲಿ ಅವರು ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದಾರೆ. ಕಳೆದ ವಿಧಾನಸಭೆ ಅಧಿವೇಶನದ ವಿಷಯ ಪ್ರಸ್ತಾಪಿಸಿ ಬಿ.ಆರ್‌. ಪಾಟೀಲ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ … Continued