ಬ್ರಹ್ಮಾವರ : ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಮಗ !
ಉಡುಪಿ : ಮಗನೊಬ್ಬ ಹೆತ್ತ ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಗಾಂಧಿನಗರದ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟರು ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಶಾಹಿದ್ ಅಲಿ ಎಂಬಾತನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. … Continued