ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು ಸೂಚಿಸಿದ ಯಡಿಯೂರಪ್ಪ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರು ಇಡಬೇಕೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನಾಳೆ, ಸೋಮವಾರ ನಡೆಯಲಿರುವ ಅಧಿವೇಶನದಲ್ಲಿ ಕುವೆಂಪು ಅವರ ಹೆಸರು ಇಡಲು ಪ್ರಸ್ತಾಪಿಸುತ್ತೇನೆ ಎಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಬರುವುದು ಖಚಿತವಾಗಿದೆ. ಅವರೇ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು … Continued

ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಿಎಂ ಬೊಮ್ಮಾಯಿ, ಯಡಿಯೂರಪ್ಪ, ದತ್ತಾತ್ರೇಯ ಹೊಸಬಾಳೆ ಸಿದ್ದರಾಮಯ್ಯ ಸೇರಿ ಹಲವರ ಸಂತಾಪ

ಬೆಂಗಳೂರು: ಸುಗಮ ಸಂಗೀತ ಕ್ಷೇತ್ರದ ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಗುರುವಾರ ನಿಧನರಾಗಿದ್ದು, ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಆರ್​ಎಸ್​ಎಸ್​ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್​ ನಾಯಕ ಎಚ್​.ಡಿ.ಕುಮಾರಸ್ವಾಮಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ ಸೇರಿದಂತೆ ಹಲವು … Continued

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಬಿಎಸ್‌ವೈ

ಶಿಕಾರಿಪುರ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಂತೋಷ್ ಹೇಳಿಕೆ ಬಗ್ಗೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರ ಪ್ರಶ್ನೆಗೆ ಸೋಮವಾರ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉತ್ತಮ ಆಡಳಿತ ನೀಡುತ್ತಿದ್ದಾರೆ. ಹಾಗಾಗಿ ನಾಯಕತ್ವ ಬದಲಾವಣೆ ಪ್ರಶ್ನೆ ಉದ್ಭವಿಸುವುದಿಲ್ಲ. … Continued

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ: ಬಿಎಸ್ ವೈ

ಬೆಂಗಳೂರು: ಪಂಚರಾಜ್ಯ ಚುನಾವಣೆ ಫಲಿತಾಂಶ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಕೇವಲ ಊಹಾಪೋಹ. ಬಸವರಾಜ ಬೊಮ್ಮಾಯಿ ಈ ಸರ್ಕಾರದ ಪೂರ್ಣಾವಧಿ ಮುಖ್ಯಮಂತ್ರಿ ಆಗಿರಲಿದ್ದಾರೆ ಎಂದು ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿ, ಮುಖ್ಯಮಂತ್ರಿ ಬದಲಾವಣೆ ಸುದ್ದಿಗಳಲ್ಲಿ ಯಾವುದೇ ಹುರುಳಿಲ್ಲ ಎಂದು ಹೇಳಿದ್ದಾರೆ. ಪಂಚ … Continued

ಯಡಿಯೂರಪ್ಪ ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ: ಕುಮಾರಸ್ವಾಮಿ

ಮೈಸೂರು:ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತು ನನ್ನ ನಡುವೆ ವೈಯಕ್ತಿಕ ಮೈತ್ರಿಯಾಗಿದೆ. ಯಡಿಯೂರಪ್ಪ ಮಾತ್ರ ನನಗೆ ಕರೆ ಮಾಡಿ ಬೆಂಬಲ ಕೇಳಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಹಿರಂಗವಾಗಿಯೇ ನಮಗೆ ಯಾರ ಬೆಂಬಲ ಬೇಡ ಎಂದು ಹೇಳಿದೆ. ಬೆಂಬಲ ಬೇಡ ಎಂದವರಿಗೆ ನಾವೇ ಹೋಗಿ ಬೆಂಬಲ ಕೊಡಲು ಸಾಧ್ಯವಿಲ್ಲ. … Continued

ಕರ್ನಾಟಕ ಬಿಜೆಪಿ ಬಗ್ಗೆ ಸ್ಫೋಟಕ ಭವಿಷ್ಯ ಹೇಳಿದ ಕೋಡಿಮಠ ಶ್ರೀಗಳು

ಹಾಸನ: ಕೋಡಿಮಠದ ಡಾ.ಶಿವಾನಂದ ರಾಜೇಂದ್ರ ಸ್ವಾಮೀಜಿ ರಾಜ್ಯ ರಾಜಕಾರಣದ ಬಗ್ಗೆ ಅಚ್ಚರಿ ಭವಿಷ್ಯ ನುಡಿದಿದ್ದಾರೆ. ಅರಸೀಕೆರೆ ತಾಲ್ಲೂಕಿನ ಮಾಡಳು ಗ್ರಾಮದಲ್ಲಿ ಭವಿಷ್ಯ ನುಡಿದ ಶ್ರೀಗಳು ಪರೋಕ್ಷವಾಗಿ ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಬೊಂಬಾಯಿ ಎಂದು ಉಲ್ಲೇಖಿಸಿ ಬೊಂಬಾಯಿ ಬೊಂಬೆಯಾಗಿದ್ದಾರೆ. ಬೊಂಬಾಯಿ ಕುಣಿಯುತ್ತೆ, ಯೋಚನೆಯಿಲ್ಲ‌. ಸೂತ್ರಧಾರಿ ಯಡಿಯೂರಪ್ಪ ಇದ್ದಾರೆ ಸರ್ಕಾರ ನಡೆಸಿಕೊಂಡು ಹೋಗುತ್ತಾರೆ, ಸರ್ಕಾರಕ್ಕೆ ತೊಂದರೆಯಿಲ್ಲ ಎಂದು ಹೇಳಿದ್ದಾರೆ … Continued

ಟ್ವಟರಿನಲ್ಲಿ ಫಾಲೋವರ್ಸ್‌: ಮಾಜಿ ಸಿಎಂ ಯಡಿಯೂರಪ್ಪ ದಾಖಲೆ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಅತಿಹೆಚ್ಚು ಫ್ಯಾನ್ ಫಾಲೋವಿಂಗ್‌ ಹೊಂದಿರುವ ಪಟ್ಟಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದಾಖಲೆ ಮಾಡಿದ್ದಾರೆ. ಅವರು ಟ್ವಟರಿನಲ್ಲಿ ಬರೋಬ್ಬರಿ 10 ಲಕ್ಷ ಹಿಂಬಾಲಕರನ್ನು ಹೊಂದಿರುವ ರಾಜ್ಯದ ಮೊದಲ ರಾಜಕಾರಣಿ ಎಂದು ದಾಖಲೆ ನಿರ್ಮಿಸಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದರೂ ಅವರನ್ನು ಟ್ವಿಟರ್ ಖಾತೆಯಲ್ಲಿ ಹಿಂಬಾಲಿಸುವವರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ. ದಿನದಿಂದ ದಿನಕ್ಕೆ ಫಾಲೋವರ್ಸ್ … Continued

ಕಿರಿಯರಿಗೆ ಅವಕಾಶ ನೀಡಲು ಸಂಪುಟ ಸೇರದಿರಲು ಶೆಟ್ಟರ ನಿರ್ಧಾರ: ಬಿಎಸ್‍ವೈ

ಬೆಂಗಳೂರು: ಮಾಜಿ ಸಚಿವ ಜಗದೀಶ್ ಶೆಟ್ಟರ್ ಅವರು ಬೆಳಗ್ಗೆ ಬಂದು ಮಾತನಾಡಿದ್ದಾರೆ. ಕಿರಿಯರಿಗೆ ಅವಕಾಶ ನೀಡಲು ಸಂಪುಟ ಸೇರದಿರುವ ತೀರ್ಮಾನ ಕೈಗೊಂಡಿರುವುದಾಗಿ ತಿಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಆರ್‍ಎಸ್‍ಎಸ್‍ನ ಕೇಶವಕೃಪಾಗೆ ಭೇಟಿ ನೀಡಿದ ವೇಳೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಬೆಳಗ್ಗೆ ಬಂದು ಮಾತನಾಡಿದರು. ತಮ್ಮ ನಿರ್ಧಾರದ ಬಗ್ಗೆ ನನಗೆ ತಿಳಿಸಿದರು. ಕಿರಿಯರಿಗೆ … Continued

ನಾಯಕತ್ವ ಬದಲಾವಣೆ ಸುದ್ದಿ ಬೆನ್ನಲ್ಲೇ ಹುಬ್ಬಳ್ಳಿಯಲ್ಲಿ ಪ್ರಲ್ಹಾದ ಜೋಶಿ- ಬೊಮ್ಮಾಯಿ ಗುಪ್ತ ಮಾತುಕತೆ

ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೈಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿರುವ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಹುಬ್ಬಳ್ಳಿಯಲ್ಲಿ ದಿಢೀರ್ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ.ಇದು ಕುತೂಹಲಕ್ಕೆ ಕಾರಣವಾಗಿದೆ. ಹುಬ್ಬಳ್ಳಿಯ ಮಯೂರಿ ಎಸ್ಟೇಟ್ ಪ್ರಹ್ಲಾದ್ ಜೋಶಿ ಮನೆಗೆ ದಿಢೀರ್ ಭೇಟಿ ನೀಡಿದ ಸಚಿವ ಬಸವರಾಜ ಬೊಮ್ಮಾಯಿ, ಒಂದು ಗಂಟೆಗೂ … Continued

ಬಿಎಸ್‌ವೈಗೆ ಬದಲಿ ನಾಯಕ: ಬಿಜೆಪಿ ವರಿಷ್ಠರಿಗೆ ಆಯ್ಕೆಯೇ ಸವಾಲು

ಬೆಂಗಳೂರು: ಹೈಕಮಾಂಡ್ ಸೂಚಿಸಿದರೆ `ರಾಜೀನಾಮೆ ನೀಡಲು ಸಿದ್ಧ. ಜುಲೈ 25ರಂದು ಬಿಜೆಪಿ ವರಿಷ್ಠರಿಂದ ಸೂಚನೆ ಬರಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಸಮರ್ಥ ಹಾಗೂ ಮುಂದಿನ ಚುನಾವಣೆಯಲ್ಲಿ ಮತತಂದು ಕೊಡುವ ನಾಯಕನ ಹುಡುಕಾಟ ಬಿಜೆಪಿ ವರಿಷ್ಠರಿಗೆ ಈಗ ಸವಾಲಾಗಿದೆ. ಮುಖ್ಯಮಂತ್ರಿ ಹುದ್ದೆಗೆ ಹಲವರ ಹೆಸರು ಚಾಲ್ತಿಗೆ ಬಂದಿದ್ದು, ಯಾರನ್ನೂ ಆಯ್ಕೆ ಮಾಡುವುದು ಎಂಬ ಧರ್ಮಸಂಕಟಕ್ಕೆ … Continued