ಡಿನೋಟಿಫಿಕೇಷನ್ ಪ್ರಕರಣದ ತನಿಖೆಗೆ ‘ಸುಪ್ರೀಂಕೋರ್ಟ್’ ತಡೆ :ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್;

ನವ ದೆಹಲಿ: ಅಕ್ರಮ ಡಿನೋಟಿಫಿಕೇಷನ್ ಪ್ರಕರಣದಡಿ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ತನಿಖೆ ಎದುರಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ರಿಲೀಫ್ ನೀಡಿದೆ. ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ ಬೆಂಗಳೂರಿನ ಬೆಳ್ಳಂದೂರು ಬಳಿಯ 24 ಎಕರೆ ಭೂಮಿಯ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಗೆ ಸುಪ್ರೀಂಕೋರ್ಟ್ ಸಿಜೆಐ ಪೀಠ ತಡೆಯಾಜ್ಞೆ ನೀಡಿದೆ. ಈ ಹಿಂದೆ ಇದೇ ಪ್ರಕರಣದ ವಿಚಾರಣೆ … Continued

ಸಿಎಂ ಬಿಎಸ್‌ವೈ-ಈಶ್ವರಪ್ಪ ವಿಚಾರ ಶೀಘ್ರವೇ ಬಗೆಹರಿಯಲಿದೆ:ಕಟೀಲು

ಮಂಗಳೂರು: ಈಗಾಗಲೇ ಸಚಿವ ಈಶ್ವರಪ್ಪ ಮತ್ತು ಸಂಬಂಧಪಟ್ಟವರ ಜೊತೆ ಮಾತನಾಡಿದ್ದೇವೆ. ಏನೂ ಸಮಸ್ಯೆ ಆಗದಂತೆ ಬಗೆಹರಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಹೇಳಿದ್ದಾರೆ ಮುಖ್ಯಮಂತ್ರಿ ಯಡಿಯುರಪ್ಪ ಅವರ ಹಸ್ತಕ್ಷೇಪದ ಕುರಿತು ಸಚಿವ ಈಶ್ವರಪ್ಪ ರಾಜ್ಯಪಾಲರಿಗೆ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಶುಕ್ರವಾರ ಪ್ರತಿಕ್ರಿಯಿಸಿದ ಅವರು, ಈಶ್ವರಪ್ಪ ಪಕ್ಷದ ಹಿರಿಯ ನಾಯಕರು. ಹೀಗಾಗಿ ಕುಳಿತು ಪರಸ್ಪರ … Continued

ನನ್ನ ಸಿಎಂ ನಡುವೆ ವೈಯಕ್ತಿಕ ಏನೂ ಇಲ್ಲ, ನಾನು ಪಕ್ಷಕ್ಕೆ ಯಾವತ್ತೂ ಲಾಯಲ್‌, ರಾಜೀನಾಮೆ‌ ಪ್ರಶ್ನೆಯೇ ಇಲ್ಲ: ಈಶ್ವರಪ್ಪ

ಮೈಸೂರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಅನುದಾನ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಸ್ತಕ್ಷೇಪ ವಿರೋಧಿಸಿ ರಾಜ್ಯಪಾಲರಿಗೆ ಹಾಗೂ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದ ಸಚಿವ ಈಶ್ವರಪ್ಪ ಈಗ ಮತ್ತೊಮ್ಮೆ ತಾವು ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಚಾಮುಂಡಿದೇವಿ ದರ್ಶನದ ಬಳಿಕ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲಾಖೆ ಗಮನಕ್ಕೆ ತರದೆ ನೇರವಾಗಿ ಕೆಲವು ಶಾಸಕರಿಗೆ ಅನುದಾನ … Continued

ಈಶ್ವರಪ್ಪ ಏನು ತಪ್ಪು ಮಾಡಿದ್ದಾರೆ..? ಕ್ಯಾಬಿನೆಟ್‌ ಸಚಿವರಿಗೆ ಅಧಿಕಾರ ಇಲ್ಲವೆಂದ್ರೆ ಹೇಗೆ?: ಈಶ್ವರಪ್ಪ ಪರ ಯತ್ನಾಳ್ ಬ್ಯಾಟ್‌ ‌

ವಿಜಯಪುರ: ಸಚಿವ ಈಶ್ವರಪ್ಪನವರು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಮಾಡಿದ ಆರೋಪಕ್ಕೆ ಮಹತ್ವ ನೀಡಬೇಕು.ಈಶ್ವರಪ್ಪ ಏನು ತಪ್ಪು ಮಾಡಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಈಶ್ವರಪ್ಪ ಪರ ಬ್ಯಾಟ ಬೀಸಿದ್ದಾರೆ. ವಿಜಯಪುರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ದೂರು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯನ್ನು ಈ ಹಿಂದೆ ಕಟ್ಟಿದವರಲ್ಲಿ ಈಶ್ವರಪ್ಪ ಕೂಡ ಒಬ್ಬರು. … Continued

ಸಚಿವ ಕೆ.ಎಸ್‌.ಈಶ್ವರಪ್ಪ ವರ್ತನೆ ಸರಿಯಲ್ಲ: ಸಚಿವ ಸಿ.ಸಿ.ಪಾಟೀಲ

ಗದಗ: ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್‌. ಈಶ್ವರಪ್ಪ ರಾಜ್ಯಪಾಲರು ಹಾಗೂ ಪಕ್ಷದ ವರಿಷ್ಠರಿಗೆ ದೂರು ನೀಡಿದ್ದು ಖಂಡನೀಯ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು. ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಉಪಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಇಂಥ ಸಂದರ್ಭದಲ್ಲಿ ಪಕ್ಷಕ್ಕೆ ಮುಜುಗುರ ಉಂಟು ಮಾಡಿದ್ದು ಸರಿಯಲ್ಲ ಎಂದರು. ಉಭಯ ನಾಯಕರು ಒಂದೇ ಜಿಲ್ಲೆಯವರು. … Continued

ಭಿನ್ನಾಭಿಪ್ರಾಯಗಳ ಬಗ್ಗೆ  ಸಿಎಂ ಜತೆ ಚರ್ಚಿಸಿ: ಸಚಿವ ಈಶ್ವರಪ್ಪಗೆ ಬೊಮ್ಮಾಯಿ ಮನವಿ

ಬೆಂಗಳೂರು: ಅನುದಾನ ಬಿಡುಗಡೆ ವಿಚಾರ ಆಡಳಿತಾತ್ಮಕವಾದದ್ದು. ಈ ವಿಚಾರದ ಬಗ್ಗೆ ಭಿನ್ನಾಭಿಪ್ರಾಯ, ಆಕ್ಷೇಪಗಳಿದ್ದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆ ಚರ್ಚೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ್ ಬೊಮ್ಮಾಯಿ ಅವರು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಲಾಖೆಯ … Continued

ನನ್ನ ಇಲಾಖೆಯಲ್ಲಿ ತಮ್ಮವರ ಪರವಾಗಿ ಹಸ್ತಕ್ಷೇಪ; ಸಿಎಂ ಬಿಎಸ್‌ವೈ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆದ ಈಶ್ವರಪ್ಪ..!

ಬೆಂಗಳೂರು; ಕರ್ನಾಟಕದ ಒಂದು ದೊಡ್ಡ ರಾಜಕೀಯ ಬೆಳವಣಿಗೆಯಲ್ಲಿ, ಸಚಿವರೊಬ್ಬರು ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ ವಿರುದ್ಧ ರಾಜ್ಯಪಾಲ ವಾಜುಭಾಯ್ ವಾಲಾ ಅವರಿಗೆ ಬುಧವಾರ ದೂರು ನೀಡಿದ್ದು, ಇಲಾಖೆಯ ವಿಷಯಗಳಲ್ಲಿ ಮುಖ್ಯಮಂತ್ರಿಗಳ ಅವರ ಸಂಬಂಧಿಕರ ಪರವಾಗಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ನ್ಯೂಸ್‌ ಮಿನಿಟ್‌ ವರದಿ ಮಾಡಿದೆ. ಆ ವರದಿ ಪ್ರಕಾರ, ಯಡಿಯೂರಪ್ಪ ಅವರ ಸಚಿವ ಸಂಪುಟದ … Continued

ಸಿಎಂ ಬಿಎಸ್‌ವೈ ಭೇಟಿ ಮಾಡಿದ ಹಲವು ಶಾಸಕರು: ಯತ್ನಾಳ ಮೇಲೆ ಕ್ರಮಕ್ಕೆ ಒತ್ತಾಯ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಬಿಜೆಪಿಯ ಸುಮಾರು ೩೦ ಶಾಸಕರು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಸೋಮವಾರ ರಾತ್ರಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಈ ಶಾಸಕರು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಎಚ್ಚರಿಕೆ ನೀಡಿದ್ದರೂ ಲೆಕ್ಕಿಸದೇ ವಾಗ್ದಾಳಿ ಮುಂದುವರಿಸಿದ್ದಾರೆ. ಇಂತಹ … Continued

ಯತ್ನಾಳಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡಲಿ: ರೇಣುಕಾಚಾರ್ಯ ಸವಾಲು

ದಾವಣಗೆರೆ : ಸಿಎಂ ಬದಲಾವಣೆ ವಿಚಾರವಾಗಿ ಬಸನಗೌಡ ಪಾಟೀಲ್ ಯತ್ನಾಳ ಹೇಳಿಕೆಯನ್ನು ಖಂಡಿಸಿರುವ ಹೊನ್ನಾಳಿ ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ, ನಿನಗೆ ತಾಕತ್ತಿದ್ದರೆ ಸಿಎಂ ಬದಲಾವಣೆ ಮಾಡು ಎಂದು ಸವಾಲು ಹಾಕಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸಿದ್ದು ಯಡಿಯೂರಪ್ಪ, ಅನಂತಕುಮಾರ್ ಅವರಂಥ ಹಿರಿಯ ನಾಯಕರೇ ಹೊರತು ನಿನ್ನಂಥ ನಾಯಕರಲ್ಲ ಎಂದು ರೇಣುಕಾಚಾರ್ಯ ಯತ್ನಾಳ ವಿರುದ್ಧ ಹರಿಹಾಯ್ದಿದ್ದಾರೆ. … Continued

ತಮ್ಮ ಪುತ್ರ ಉಪಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ: ಬಿಎಸ್‌ವೈ

ರಾಯಚೂರು: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಸ್ಪರ್ಧಿಸಲಿದ್ದಾರೆ ಎಂಬಂತಹ ಮಾತುಗಳು ಕೇಳಿಬರುತಿತ್ತು. ಆದರೆ, ಇಂತಹ ಹೇಳಿಕೆಗಳನ್ನು ತಳ್ಳಿಹಾಕಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಉಪ ಚುನಾವಣೆಯಲ್ಲಿ ತಮ್ಮ ಪುತ್ರ ಸ್ಪರ್ಧೆ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಉಳಿದುಕೊಳ್ಳುವಂತೆ ಒತ್ತಾಯ ಇರುವುದರಿಂದ, ವಿಜಯೇಂದ್ರ … Continued