ಸದನದಲ್ಲಿ ಸಿಎಂ ಭರವಸೆ: ಪಂಚಮಸಾಲಿ ಮೀಸಲು ಹೋರಾಟ ತಾತ್ಕಾಲಿಕ ಕೈಬಿಟ್ಟ ಸ್ವಾಮೀಜಿ

ಬೆಂಗಳೂರು: ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೋರಿ ಕೂಡಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಇದನ್ನು ಖಚಿತ ಪಡಿಸಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಸರ್ಕಾರ ಈ ನಿಟ್ಟಿನಲ್ಲಿ ಪ್ರಯತ್ನಿಸುವ ಸ್ಪಷ್ಟ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಪಂಚಮಸಾಲಿ ಮೀಸಲಾತಿ ಹೋರಾಟವನ್ನ ತಾತ್ಕಾಲಿಕವಾಗಿ ಕೈಬಿಡುತ್ತಿದ್ದೇವೆ ಎಂದರು. ವಿಜಯಪುರ … Continued

ಲಾಕ್‌ಡೌನ್‌ ಪ್ರಸ್ತಾಪವಿಲ್ಲ, ಆದ್ರೆ ಜನ ನಿಯಮ ಪಾಲಿಸದಿದ್ರೆ ಅನಿವಾರ್ಯವಾಗಬಹುದು:ಸಿಎಂ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕನ್ನು ನಿಯಂತ್ರಿಸಲು ಲಾಕ್‌ಡೌನ್ ಮಾಡುವ ಚಿಂತನೆ ಇಲ್ಲ ಆದರೆ, ಜನ ಸರ್ಕಾರದ ನಿಯಮ ಪಾಲಿಸದಿದ್ದರೆ ಲಾಕ್‌ಡೌನ್ ಅನಿವಾರ್ಯವಾಗಬಹುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಎಚ್ಚರಿಸಿದ್ದಾರೆ. ಡಾಲರ್ಸ್‌ ಕಾಲೋನಿಯ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದೆ. ಜನ ಎಚ್ಚರವಹಿಸಬೇಕು, ಇಲ್ಲದಿದ್ದರೆ ಲಾಕ್‌ಡೌನ್ … Continued

ಮುಂದಿನ ಬಾರಿಯೂ ಸಿದ್ದರಾಮಯ್ಯನವರನ್ನು ಪ್ರತಿಪಕ್ಷದಲ್ಲಿಯೇ ಕೂಡ್ರಿಸುತ್ತೇನೆ:ಬಿಎಸ್‌ವೈ ಸವಾಲು

ಬೆಂಗಳೂರು: ಕೊವಿಡ್‌ ಸಂಕಷ್ಟದ ಸನ್ನಿವೇಶದಲ್ಲಿ ಬಜೆಟ್ ಮಂಡನೆ ಮಾಡಿದ್ದೇನೆ, ಪ್ರತಿಕೂಲ ಪರಿಸ್ಥಿತಿಯಲ್ಲೂ ಸರ್ವರಿಗೂ ಒಳ್ಳೆಯದನ್ನು ನೀಡುವ ಬಜೆಟ್ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ ಬಜೆಟ್ ಮಂಡನೆ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಯಾರಿಗೂ ಒಂದು ರೂಪಾಯಿ ತೆರಿಗೆ ಹಾಕಿಲ್ಲ, ಯಾರಿಗೂ ಹೊರೆಯಾಗದ ಬಜೆಟ್ ಮಂಡಿಸಿದ್ದೇನೆ,ಇಂತ ಸಂಕಷ್ಟದ ಪರಿಸ್ಥಿತಿಯಲ್ಲಿ ಯಾರಿಗೂ ತೆರಿಗೆ ಹಾಕದೆ … Continued

ಬಿಎಸ್‌ವೈ ಬಜೆಟ್ಟಿನ ವಿಶೇಷತೆಗಳೇನು? ಪ್ರಮುಖವಾದದ್ದು ಇಲ್ಲಿದೆ ನೋಡಿ

*ಆಯವ್ಯಯ ಗಾತ್ರ (ಸಂಚಿತ ನಿಧಿ)- 2,46,207 ಕೋಟಿ ರೂ. *ಒಟ್ಟು ಸ್ವೀಕೃತಿ- 2,43,734 ಕೋಟಿ ರೂ.; ರಾಜಸ್ವ ಸ್ವೀಕೃತಿ- 1,72,271 ಕೋಟಿ ರೂ.; ಸಾರ್ವಜನಿಕ ಋಣ 71,332 ಕೋಟಿ ರೂ. ಮತ್ತು ಬಂಡವಾಳ ಸ್ವೀಕೃತಿ 71,463 ಕೋಟಿ ರೂ. *ಒಟ್ಟು ವೆಚ್ಚ- 2,46,207 ಕೋಟಿ ರೂ.; ರಾಜಸ್ವ ವೆಚ್ಚ – 1,87,405 ಕೋಟಿ ರೂ.; ಬಂಡವಾಳ … Continued

ಬಜೆಟ್‌ ಗಾತ್ರ ಕಳೆದ ಸಲಕ್ಕಿಂತ ದೊಡ್ಡದು:ನಿರೀಕ್ಷೆ ಹುಸಿ ಮಾಡಿದ ಬಿಎಸ್‌ವೈ..!!

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಧಾನಸಭೆಯಲ್ಲಿ 2021-22ನೆ ಸಾಲಿನ ಬಜೆಟ್ ಮಂಡನೆ ಮಾಡಿದ್ದು, ಬಜೆಟ್‍ನ ಒಟ್ಟು ಗಾತ್ರ 2,43,734 ಕೋಟಿ ರೂ.ಗಳಾಗಿದೆ. ಇದು ಕಳೆದ ಸಲಕ್ಕಿಂತ ದೊಡ್ಡ ಗಾತ್ರದ ಬಜೆಟ್‌ ಆಗಿದ್ದು, ಕೊವಿಡ್‌ ಸಂದರ್ಭದಲ್ಲಿ ಬಜೆಟ್‌ ಗಾತ್ರ ಕಳೆದ ಸಲಕ್ಕಿಂತ ಸಣ್ಣ ಮಾಡಬಹುದು ಎಂಬ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಕಳೆದ ವರ್ಷ 2,33,137 ಕೋಟಿ … Continued

ಬಜೆಟ್‌ ಮಂಡನೆಗೆ ಕ್ಷಣಗಣನೆ:ಆರ್ಥಿಕ ಮುಗ್ಗಟ್ಟಿನಲ್ಲಿ ಬಿಎಸ್‌ವೈ ಲೆಕ್ಕದ ಬಗ್ಗೆ ಕುತೂಹಲ

ಬೆಂಗಳೂರು: ಪ್ರಸಕ್ತ ಸಾಲಿನ ಬಜೆಟ್‌ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, ಸೋಮವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ೮ನೇ ಬಾರಿಗೆ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಕೊರೊನಾ ಸಂಕಷ್ಟ ಗಮನದಲ್ಲಿಟ್ಟುಕೊಂಡು ಜನಸಾಮಾನ್ಯರಿಗೆ ಹೊರೆಯಾಗದ ರೀತಿಯಲ್ಲಿ ಬಜೆಟ್‌ ಮಂಡಿಸುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಸೋಮವಾರ (ಮಾ.೮) ವಿಧಾನಸಭೆಯಲ್ಲಿ ೧೨.೦೫ ನಿಮಿಷಕ್ಕೆ ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಲಿದ್ದಾರೆ. ಕೊರೊನಾ ಸಮಯದಲ್ಲಿ ನಿರೀಕ್ಷೆಗಳು … Continued

ಬಿಎಸ್‌ವೈ, ಈಶ್ವರಪ್ಪ ಹಗರಣ ಬಯಲಿಗೆಳೆಯುವೆ: ಶಾಸಕ ಸಂಗಮೇಶ ಎಚ್ಚರಿಕೆ

ಬೆಂಗಳೂರು: ಇನ್ನೊಂದು ತಿಂಗಳಿನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹಗರಣ, ಅಕ್ರಮ ಆಸ್ತಿಗಳ ವಿವರಗಳನ್ನು ಬಯಲು ಮಾಡುವುದಾಗಿ ಸದನದಿಂದ ಅಮಾನತಾಗಿರುವ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದಾವರು,ಮುಖ್ಯಮಂತ್ರಿ ಯಡಿಯೂರಪ್ಪ, ಅವರು ಪುತ್ರ ರಾಘವೇಂದ್ರ, ಈಶ್ವರಪ್ಪ ಸಣ್ಣತನದ ರಾಜಕೀಯ ಮಾಡುತ್ತಿದ್ದಾರೆ. ನಮ್ಮ ಹಾಗೂ … Continued

ಸಂಪುಟದ ರಕ್ಷಣೆಗೆ ನೀವು ತಡೆಯಾಜ್ಞೆ ತರುವುದಿಲ್ಲವೇ: ಬಿಎಸ್‌ವೈಗೆ ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಣ್ಣಿನಲ್ಲಿ ನೋಡಲಾಗದ ಸಿಡಿ ಎಂದು ಹೇಳಿದ್ದಾರೆ. ಅದರ ವಿರುದ್ಧ ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಂಗ್ರೆಸ್‌ ಲೇವಡಿ ಮಾಡಿದೆ. ಟ್ವಿಟರ್‌ನಲ್ಲಿ ಕಾಂಗ್ರೆಸ್ ಈ ವಿಷಯದಲ್ಲಿ ಬಿಜೆಪಿಯ ವಿರುದ್ಧ ವಾಗದಾಳಿ ನಡೆಸಿದ್ದು, ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯ ಸಚಿವರು ಏಕೆ … Continued

ಒಂದು ದೇಶ, ಒಂದು ಚುನಾವಣೆ’ಯಿಂದ ಅಭಿವೃದ್ಧಿಯ ವೇಗಕ್ಕೆ ಹೆಚ್ಚಳ

ಬೆಂಗಳೂರು: ‘ಒಂದು ದೇಶ, ಒಂದು ಚುನಾವಣೆ’ಯಿಂದ ಅಭಿವೃದ್ಧಿಯ ವೇಗ ಹೆಚ್ಚಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅಭಿಪ್ರಾಯಪಟ್ಟರು. ಗುರುವಾರ ವಿಧಾನಸಭೆಯಲ್ಲಿ ‘ಒಂದು ದೇಶ, ಒಂದು ಚುನಾವಣೆ’ ವಿಚಾರವಾಗಿ ಮಾತನಾಡಿದ ಅವರು, ‘ಏಕಕಾಲದಲ್ಲಿ ಲೋಕಸಭೆ, ವಿಧಾನಸಭೆ ಚುನಾವಣೆಗಳು ನಡೆದಲ್ಲಿ ಆಡಳಿತ ಯಂತ್ರದ ಸುಗಮ ಕಾರ್ಯನಿರ್ವಹಣೆ ಸಾಧ್ಯವಾಗಲಿದೆ. ಈ ಚುನಾವಣೆಗಳಿಂದ ಕೆಲವು ವ್ಯತ್ಯಾಸಗಳು ಆಗಬಹುದು. ಆದರೆ, ಒಟ್ಟಾರೆ ದೇಶದ ಪ್ರಗತಿಯ … Continued

ರಾಜ್ಯ ಬಜೆಟ್‌ನಲ್ಲಿ ಮಹಿಳೆಯರಿಗೆ ಆದ್ಯತೆ

ಶಿವಮೊಗ್ಗ : ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ನಿಗದಿಯಾಗಿದ್ದು, ಮುಂದಿನ ತಿಂಗಳ ಮಾರ್ಚ್ 8 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದೆ. ಈಕುರಿತು ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ ಈಗಾಗಲೇ ಬಜೆಟ್ ಸಂಬಂಧಿಸಿದಂತೆ ಹಲವು ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಹಲವು ಮೂಲಗಳಿಂದ ಹಣಕಾಸಿನ ಸಂಗ್ರಹದ ಬಗ್ಗೆ ಮಾಹಿತಿ ಸಂಗರಹಿಸಿದ್ದೇನೆ. ಬಜೆಟ್ ನಲ್ಲಿ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು ಮತ್ತು ರಾಜ್ಯದ ನೀರಾವರಿ … Continued