ಬಜೆಟ್‌ ಅಧಿವೇಶನ : ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಪಾಲ್ಗೊಂಡ ಬಿಜೆಪಿ ಸದಸ್ಯರು

ಬೆಂಗಳೂರು: ಸೋಮವಾರದಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವೇ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಆಗಮಿಸಿದ್ದು ವಿಶೇಷವಾಗಿತ್ತು. ಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಉಪನಾಯಕ ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಕುಳಿತಿದ್ದರು. ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿಚಾರ ರಾಜ್ಯವ್ಯಾಪಿ ಚರ್ಚೆ … Continued

ವೀಡಿಯೊ…| ಬಿಜೆಪಿ 400 ಸ್ಥಾನ ಗೆಲ್ಲಲಿದೆ : ರಾಜ್ಯಸಭೆಯಲ್ಲಿ ಹೀಗೆಂದು ಭವಿಷ್ಯ ನುಡಿದ ಮಲ್ಲಿಕಾರ್ಜುನ್ ಖರ್ಗೆ…!

ನವದೆಹಲಿ: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣವು ಆಡಳಿತ ಪಕ್ಷದ ಸಾಲಿನಲ್ಲಿ ಭಾರೀ ಖುಷಿಗೆ ಕಾರಣವಾದ ಪ್ರಸಂಗವು ರಾಜ್ಯಸಭೆಯಲ್ಲಿ ನಡೆದಿದೆ. ಖರ್ಗೆ ಅವರ ಮಾತಿಗೆ ಆಡಳಿತ ಪಕ್ಷದ ಸಂಸದರೆಲ್ಲರೂ ಬೆಂಚ್‌ ಗುದ್ದಿ ಸ್ವಾಗತಿಸಿದ ಅಪರೂಪದ ವಿದ್ಯಮಾನ ಇದಾಗಿದೆ. ಆಡಳಿತಾರೂಢ ಬಿಜೆಪಿ ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಅಬ್ ತೋ 400 ಪಾರ್’ ಹೋ … Continued

‘ಎಂದಿಗೂ ಸಹಿಸುವುದಿಲ್ಲ…’: ಸ್ವಪಕ್ಷದ ಸಂಸದ ಡಿ.ಕೆ.ಸುರೇಶ ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ’ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ

ನವದೆಹಲಿ: ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ ಅವರ, ‘ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಬೇಡಿಕೆ’ ಎಂಬ ಹೇಳಿಕೆ ಇಂದು, ಶುಕ್ರವಾರ ರಾಜ್ಯಸಭೆಯಲ್ಲಿ ಚರ್ಚೆಗೆ ಕಾರಣವಾಯಿತು. ದೇಶ ಒಡೆಯುವ ಬಗ್ಗೆ ಮಾತನಾಡುವವರು ಅವರು ಯಾವ ಪಕ್ಷದವರೇ ಆಗಲಿ ಸಹಿಸುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ತಮ್ಮ ಪಕ್ಷದ ಸಂಸದ ಡಿ.ಕೆ.ಸುರೇಶ ಅವರ ವಿವಾದಾತ್ಮಕ ಹೇಳಿಕೆಗೆ … Continued

ಫೆಬ್ರವರಿ 1 ರಂದು ಕೇಂದ್ರದ ಬಜೆಟ್‌ ಮಂಡನೆ

ನವದೆಹಲಿ: ಕೇಂದ್ರ ಬಜೆಟ್ ಅಧಿವೇಶನವು ಜನವರಿ 31 ರಂದು ಪ್ರಾರಂಭವಾಗಲಿದ್ದು, ಫೆಬ್ರವರಿ 9 ರವರೆಗೆ ನಡೆಯಲಿದೆ ಎಂದು ವರದಿಯಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆಬ್ರವರಿ 1 ರಂದು 2024-25ನೇ ಸಾಲಿನ ಮಧ್ಯಂತರ ಬಜೆಟ್ ಅನ್ನು ಮಂಡಿಸಲಿದ್ದಾರೆ. ಜನವರಿ 31 ರಂದು ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಜೆಟ್ ಅಧಿವೇಶನವನ್ನು ಉದ್ಘಾಟಿಸುವುದರೊಂದಿಗೆ … Continued