ಕರ್ನಾಟಕ ಬಜೆಟ್‌ 2025 | ₹1.16 ಲಕ್ಷ ಕೋಟಿ ಹೊಸ ಸಾಲ ಪಡೆಯಲು ನಿರ್ಧಾರ ; ರಾಜ್ಯದ ಒಟ್ಟು ಸಾಲ…?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿಗೆ ದಾಖಲೆಯ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ಮಂಡಿಸಿದ್ದಾರೆ. ಇದರಲ್ಲಿ 19,262 ಕೋಟಿ ರೂ.‌ ರಾಜಸ್ವ ಕೊರತೆಯನ್ನು ಅವರು ಉಲ್ಲೇಖಿಸಿದ್ದಾರೆ. ಈ ಬಾರಿಯೂ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ ನೀಡಲಾಗಿದೆ. ಹಾಗೂ ಕೆಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. … Continued

ಕರ್ನಾಟಕ ಬಜೆಟ್ 2025 | ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಭರಪೂರ ಕೊಡುಗೆ

ಬೆಂಗಳೂರು: ಕರ್ನಾಟಕದ ೨೦೨೫ರ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಮುಸ್ಲಿಮರಿಗೆ ಹಾಗೂ ರಾಜ್ಯದ ಇನ್ನುಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾದವೆಂದರೆ, 2 ಕೋಟಿ ರೂ.ವರೆಗಿನ ಗುತ್ತಿಗೆ ಕಾಮಗಾರಿಗಳಲ್ಲಿ ಪ್ರವರ್ಗ 2, 2ಎ ವರ್ಗದವರಿಗೆ (ಅಲ್ಪಸಂಖ್ಯಾತರು) ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ. ವಕ್ಫ್ ಆಸ್ತಿಗಳ ರಕ್ಷಣೆಗಾಗಿ 150 ಕೋಟಿ … Continued

ಬೆಂಗಳೂರು ನಗರ ವಿವಿಗೆ ಡಾ.ಮನಮೋಹನ ಸಿಂಗ್‌ ಹೆಸರು ; ಬಜೆಟ್‌ ನಲ್ಲಿ ಘೋಷಣೆ

ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್​ ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದ್ದು, ಅದಕ್ಕೆ ಮಾಜಿ ಪ್ರಧಾನಿ, ದಿವಂಗತ ಡಾ.ಮನಮೋಹನ್ ಸಿಂಗ್ ಅವರ ಹೆಸರನ್ನುಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ​​ನಲ್ಲಿ ಘೋಷಣೆ ಮಾಡಿದ್ದಾರೆ. ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ನಿಧನರಾಗಿದ್ದಾರೆ. ಭಾರತದ ಆಧುನಿಕ … Continued

ಕರ್ನಾಟಕ ಬಜೆಟ್‌ 2025 | ಬೆಂಗಳೂರಿಗೆ ಭರ್ಜರಿ ಕೊಡುಗೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಬಜೆಟ್‌ 2025ರಲ್ಲಿ ಬೆಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಕೊಡುಗೆ ನೀಡಿದ್ದಾರೆ. ಮಹಾನಗರಕ್ಕೆ ಕಳೆದ ವರ್ಷಕ್ಕೆ ಹೆಚ್ಚಿನ ಅನುದಾನ ನೀಡಿದ್ದಕಿಂತ 7 ಸಾವಿರ ಕೋಟಿ ರೂ.ಗಷ್ಟು ಹೆಚ್ಚಿಗೆ ನೀಡಲಾಗಿದೆ. ಅಲ್ಲದೆ, ಟನಲ್‌ ಯೋಜನೆಗೆ 40,000 ಕೋಟಿ ರೂ. ಮೀಸಲಿಡಲಾಗಿದೆ. ಬಿಬಿಎಂಪಿಯ ಅಂದಾಜು ಮೊತ್ತ 40,000 ಕೋಟಿ ರೂಪಾಯಿ ವೆಚ್ಚದ ಉತ್ತರ- ದಕ್ಷಿಣ ಮತ್ತು … Continued

ಕೇಂದ್ರ ಬಜೆಟ್ 2025 | 50 ಲಕ್ಷ ಕೋಟಿ ರೂ. ಮೀರಿದ ಬಜೆಟ್‌ ಗಾತ್ರ ; ಮಧ್ಯಮ ವರ್ಗದವರಿಗೆ ‘ಡಿ-ಟ್ಯಾಕ್ಸ್ ಥೆರಪಿ’

ನವದೆಹಲಿ: ಕೇಂದ್ರ ವಿತ್ರ ಸಚಿವೆ ನಿರ್ಮಲಾ ಸೀತಾರಾಮನ್‌(Nirmala Sitaraman) ಅವರು ಎಂಟನೇ ಬಾರಿ ಕೇಂದ್ರ ಬಜೆಟ್‌(Union Budget 2025) ಮಂಡಿಸಿದ್ದಾರೆ. ಶನಿವಾರ ಮಂಡನೆಯಾಗಿರುವ ಬಜೆಟ್‌ ಗಾತ್ರ(Union Budget Size) ಬರೋಬ್ಬರಿ 50 ಲಕ್ಷ ಕೋಟಿಗೂ ಮೀರಿದೆ. ನಿರ್ಮಲಾ ಸೀತಾರಾಮನ್‌ ಇಂದು ಮಂಡಿಸಿರುವ ಬಜೆಟ್‌ ಗಾತ್ರ ಒಟ್ಟು 50,65,345 ಕೋಟಿ ರೂ.ಗಳಾಗಿದೆ. ಕಳೆದ ಬಜೆಟ್‌ಗೆ ಹೋಲಿಸಿದರೆ ಈ … Continued

ಜನವರಿ 31ರಿಂದ ಸಂಸತ್‌ ಅಧಿವೇಶನ ಆರಂಭ

ನವದೆಹಲಿ : ಸಂಸತ್ತಿನ ಬಜೆಟ್ ಅಧಿವೇಶನ (Budget Session)ದ ಮೊದಲ ಭಾಗವು ಜನವರಿ 31ರಿಂದ ಫೆ. 13ರವರೆಗೆ ನಡೆಯಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಫೆ. 1ರಂದು ತಮ್ಮ 8ನೇ ಬಜೆಟ್ ಮಂಡಿಸಲಿದ್ದಾರೆ. ಜ. 31ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರನ್ನು ಉದ್ದೇಶಿಸಿ ಮಾತನಾಡುವ ಮೂಲಕ ಅಧಿವೇಶನ ಆರಂಭವಾಗಲಿದೆ. ಫೆ. … Continued

ಬಜೆಟ್‌ನಲ್ಲಿ 7ನೇ ವೇತನ ಆಯೋಗ ಜಾರಿ ಬಗ್ಗೆ ಸಿದ್ದರಾಮಯ್ಯ ಏನು ಹೇಳಿದರು…?

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಭಾಷಣದಲ್ಲಿ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಕುರಿತು ಅವರು ಉಲ್ಲೇಖಿಸಿದ್ದಾರೆ. ಶೀಘ್ರವೇ 7ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಬಜೆಟ್‌ನಲ್ಲಿ ಸುಳಿವು ನೀಡಿರುವ ಸಿದ್ದರಾಮಯ್ಯ ಸಮಿತಿ ವರದಿ ಆಧಾರದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಘೋಷಣೆ … Continued

ಕರ್ನಾಟಕ ಬಜೆಟ್ 2024 : ಸಿದ್ದರಾಮಯ್ಯ ಕೃಷಿ ವಲಯಕ್ಕೆ ಕೊಟ್ಟಿದ್ದೇನು..?

ಬೆಂಗಳೂರು : ಕರ್ನಾಟಕ ಬಜೆಟ್ 2024ನಲ್ಲಿ ಕೃಷಿ ಕ್ಷೇತ್ರಕ್ಕೆ 6688 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಇದೇ ವೇಳೆ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಈ ಯೋಜನೆಯಡಿಯಲ್ಲಿ ರೈತರಿಗೆ ಕೃಷಿ, ಪಶುಸಂಗೋಪನೆ, ತೋಟಗಾರಿಕೆಗೆ ಬೆಂಬಲ ನೀಡಲಾಗುತ್ತದೆ. ಅಲ್ಲದೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಗೆ ಬೆಂಬಲ ನೀಡುತ್ತದೆ. ಅಲ್ಲದೆ, … Continued

ಕರ್ನಾಟಕ ಬಜೆಟ್ 2024: ಅನ್ನ ಸುವಿಧಾ, ಕೆಫೆ ಸಂಜೀವಿನಿ ಎಂಬ ಎರಡು ನೂತನ ಯೋಜನೆಗಳು ಪ್ರಕಟ : ಏನಿದು ಯೋಜನೆ..?

ಬೆಂಗಳೂರು: ಕರ್ನಾಟಕ ಬಜೆಟ್ 2024ರಲ್ಲಿ ರಾಜ್ಯ ಸರ್ಕಾರವು ಹೊಸದಾಗಿ ಮತ್ತೊಂದು ಸಾಮಾಜಿಕ ಭದ್ರತಾ ಯೋಜನೆಯನ್ನು ಪ್ರಕಟಿಸಿದೆ. ಈ ನೂತನ ಸಾಮಾಜಿಕ ಭದ್ರತಾ ಯೋಜನೆಗೆ ಅನ್ನ ಸುವಿಧಾ ಯೋಜನೆ ಎಂದು ಹೆಸರಿಸಿದೆ. 80 ವರ್ಷ ಮತ್ತು ಮೇಲ್ಪಟ್ಟ ಫಲಾನುಭವಿಗಳಿಗೆ ಸಹಾಯವನ್ನು ಮಾಡುವ ನಿಟ್ಟಿನಲ್ಲಿ ಸರ್ಕಾರವು ಈ ಯೋಜನೆಯನ್ನು ಆರಂಭ ಮಾಡಿದೆ. ‘ಅನ್ನ ಸುವಿಧ’ ಯೋಜನೆ ಮೂಲಕ ವಯಸ್ಸಾದವರಿಗೆ … Continued

ಕರ್ನಾಟಕ ಬಜೆಟ್ 2024 : ಅಂಗನವಾಡಿ ಕಾರ್ಯಕರ್ತೆಯರಿಗೆ ಉಚಿತ ಸ್ಮಾರ್ಟ್ ಫೋನ್ ; ಮಾಜಿ ದೇವದಾಸಿಯರು- ಲಿಂಗತ್ವ ಅಲ್ಪಸಂಖ್ಯಾತರಿಗೆ ಮಾಸಾಶನ ಹೆಚ್ಚಳ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಗ್ರ್ಯಾಚ್ಯುಟಿ ಸವಲತ್ತು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್​​ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ, ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ಮಾಜಿ ದೇವದಾಸಿಯರಿಗೆ ಮಾಸಾಶನ ಹೆಚ್ಚಳ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ಕಾರ್ಯಕರ್ತೆಯರಿಗೆ ಅಂಗನವಾಡಿ ಚಟವಟಿಕೆಗಳ ಸುಗಮಕ್ಕಾಗಿ 90 ಕೋಟಿ ವೆಚ್ಚದಲ್ಲಿ 75,938 ಸ್ಟಾರ್ಟ್​​​ಫೋನ್​ ಗಳನ್ನು ಅಂಗನವಾಡಿ ಕಾರ್ಯಕರ್ತರಿಗೆ ನೀಡಲಾಗುವುದು ಎಂದು ಹೇಳಿದ್ದಾರೆ. ಅಲ್ಲದೆ, ಸುಮಾರು … Continued