ಯಲ್ಲಾಪುರ | ಅರೆಬೈಲ್ ಘಟ್ಟದ ಪ್ರಪಾತದ ಬಳಿ ಖಾಸಗಿ ಬಸ್ ಪಲ್ಟಿ
ಯಲ್ಲಾಪುರ : ಪ್ರಪಾತದ ಬಳಿ ಖಾಸಗಿ ಬಸ್ಸೊಂದು ಲಾರಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ ಘಟ್ಟದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ 25 ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾಗಿದೆ. … Continued