ಶಿರಸಿ : ಬಸ್ ಗಳ ನಡುವೆ ಡಿಕ್ಕಿ ; 13 ಜನರಿಗೆ ಗಾಯ

ಶಿರಸಿ: ಸಾರಿಗೆ ಸಂಸ್ಥೆಯ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕ-ನಿರ್ವಾಹಕ ಸೇರಿ 13 ಜನರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಸಳೂರು ಸಮೀಪ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಸಿಯಿಂದ ಅಕ್ಕಿ ಆಲೂರು ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್‌ ಹಾಗೂ … Continued

ಊಟಿ ಬಳಿ ಕಂದಕಕ್ಕೆ ಬಸ್‌ ಉರುಳಿ ಬಿದ್ದು 8 ಜನರು ಸಾವು

ಉದಕಮಂಡಲಂ : ತಮಿಳುನಾಡಿನ ನೀಲಗಿರಿ ಜಿಲ್ಲೆಯಲ್ಲಿ 55 ಪ್ರವಾಸಿಗರಿದ್ದ ಬಸ್ ಕಣಿವೆಗೆ ಉರುಳಿ ಬಿದ್ದು 8 ಪ್ರವಾಸಿಗರು ಮೃತಪಟ್ಟಿದ್ದು, ಹಲವು ಜನರು ಗಾಯಗೊಂಡಿದ್ದಾರೆ. ನೀಲಗಿರಿ ಬೆಟ್ಟದ ವ್ಯಾಪ್ತಿಯಲ್ಲಿ ಬರುವ ಕೂನೂರು ಬಳಿಯ ಊಟಿ-ಮಟ್ಟುಪಾಳ್ಯಂ ರಸ್ತೆಯ ಘಾಟ್‌ನಲ್ಲಿ ಹೆಡ್‌ಪಿನ್ ತಿರುವಿನಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆಗೆ ಉರುಳಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು … Continued

ರಾಮದುರ್ಗ : ಬಸ್ ಪಲ್ಟಿ, 20ಕ್ಕೂ ಅಧಿಕ ವಿದ್ಯಾರ್ಥಿಗಳು, ಇಬ್ಬರು ಶಿಕ್ಷಕರಿಗೆ ಗಾಯ

ಬೆಳಗಾವಿ : ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದ ಬಳಿ ಇಂದು, ಮಂಗಳವಾರ ಬೆಳಗ್ಗೆ ಎನ್‌ ಡಬ್ಲ್ಯು ಕೆ ಆರ್‌ ಟಿ ಸಿ ಬಸ್ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಅಪಘಾತದಲ್ಲಿ ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕರಿಗೆ ಗಾಯಗೊಂಡಿದ್ದಾರೆ. ಚಿಕ್ಕೊಪ್ಪ ಗ್ರಾಮದಿಂದ ರಾಮದುರ್ಗ ಕಡೆ ಹೋಗುತ್ತಿದ್ದ ವೇಳೆ ಬಸ್ಸಿನ ಪ್ಲೇಟ್ ಕಟ್ … Continued

ಶಿರಸಿ: ಗದ್ದೆಗೆ ಉರುಳಿದ ಬಸ್‌, ಹಲವರಿಗೆ ಗಾಯ

ಶಿರಸಿ : ಕುಮಟಾ-ಶಿರಸಿ ರಸ್ತೆಯ ಹನುಮಂತಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ರಾಜ್ಯ ಸಾರಿಗೆ ಸಂಸ್ಥೆ ಬಸ್ ಗದ್ದೆಗೆ ಪಲ್ಟಿಯಾದ ಘಟನೆ ಶನಿವಾರ ನಸುಕಿನ ಜಾವ ನಡೆದಿದೆ ಎಂದು ವರದಿಯಾಗಿದೆ. ಬಸ್‌ ಮಂಗಳೂರಿನಿಂದ ಕುಷ್ಟಗಿಗೆ ಹೋಗುತ್ತಿತ್ತು. ಹನುಮಂತಿ ಬಳಿ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ … Continued

ಬಸ್‌ ಚಲಿಸುತ್ತಿರುವಾಗಲೇ ರಾಜಹಂಸ ಚಾಲಕನಿಗೆ ಹೃದಯಾಘಾತ: ನಿಯಂತ್ರಣ ತಪ್ಪಿ ಬಸ್ ಪಲ್ಟಿ

ರಾಯಚೂರು : ಬಸ್ ಓಡಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ದುರಂತ ತಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ) ಲಿಂಗಸೂಗೂರು ತಾಲೂಕಿನ ಚಿಕ್ಕಹೆಸರೂರು ಗ್ರಾಮದ ಬಳಿ ಈ ಘಟನೆ ನಡೆದಿದ್ದು, 31 ಪ್ರಯಾಣಿಕರನ್ನು ಹೊತ್ತು ರಾಜಹಂಸ ಬಸ್ ರಾಯಚೂರಿನಿಂದ ಬೆಳಗಾವಿ ಕಡೆ ಹೋಗುತ್ತಿದ್ದಾಗ ಬಸ್ ಚಾಲಕನಿಗೆ ಹೃದಯಾಘಾತವಾಗಿದೆ. ಆದರೂ ಚಾಲಕ ಬಸ್ … Continued

ಬಸ್ ಅಪಘಾತ: ಮೃತರ ಕುಟುಂಬಕ್ಕೆ 5 ಲಕ್ಷ, ಗಾಯಾಳುಗಳಿಗೆ 1ಲಕ್ಷ ರೂ.ಪರಿಹಾರ

ತುಮಕೂರು: ಜಿಲ್ಲೆಯ ಪಾವಗಡದ ತಾಲೂಕಿನ ಪಳವಳ್ಳಿ ಕಟ್ಟೆಯ ಕೆರೆಖಾಸಗಿ ಬಸ್ ಪಲ್ಟಿಯಾಗಿ ಐವರು ಮೃತಪಟ್ಟ ಅಪಘಾತ ಸ್ಥಳಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ 5 ಲಕ್ಷ ರೂ.ಗಳು ಹಾಗೂ ಗಾಯಾಳುಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ವೈಯಕ್ತಿಕವಾಗಿ ಗಾಯಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ … Continued

ಮರಕ್ಕೆ ಗುದ್ದಿದ ಬಸ್: ರೈತ-ಭಿಕ್ಷುಕ ಸಾವು

ಕೊರಟಗೆರೆ: ಚಾಲಕನ ಅಜಾಗರೂಕತೆಯಿಂದ ಸಾರಿಗೆ ಬಸ್ ಮರಕ್ಕೆ ಗುದ್ದಿದ ಪರಿಣಾಮ ರೈತ ಹಾಗೂ ಭಿಕ್ಷುಕ ಮೃತಪಟ್ಟು, 10 ಜನ ಗಾಯಗೊಂಡಿರುವ ಘಟನೆ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ವ್ಯಾಪ್ತಿಯ ಕಾಶಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಸಂಭವಿಸಿದೆ. ಭಿಕ್ಷುಕ ಸ್ಥಳದಲ್ಲೇ ಮೃತಪಟ್ಟರೆ ರೈತ ಗೋಪಾಲಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತಿದ್ದ ಸರ್ಕಾರಿ … Continued

ಮದ್ವೆ ಮುಗಿಸಿ ಹಿಂದಿರುಗುವಾಗ ಬಸ್​ ಪಲ್ಟಿ: ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿ ತೀವ್ರ ಗಾಯ

ಬೆಂಗಳೂರು: ದೊಡ್ಡಬಳ್ಳಾಪುರ ತಾಲೂಕು ತೂಬಗೆರೆ ತಾಲೂಕು ಘಾಟಿ ಬಳಿ ಶನಿವಾರ ತಡರಾತ್ರಿ ಖಾಸಗಿ ಬಸ್ ಉರುಳಿ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು 15ಕ್ಕೂ ಹೆಚ್ಚು ಮಂದಿ ತೀವ್ರ ಗಾಯಗೊಂಡ ಘಟನೆ ವರದಿಯಾಗಿದೆ. ದೊಡ್ಡಬಳ್ಳಾಪುರ ಮತ್ತು ಗೌರಿಬಿದನೂರು ರಸ್ತೆಯ ಮಧ್ಯೆ ಮಾಕಳಿ ಬೆಟ್ಟದ ಬಳಿ ಘಟನೆ ನಡೆದಿದೆ. ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸ್ ಬರುತ್ತಿದ್ದ ವೇಳೆ ಚಾಲಕನ … Continued

ಮಧ್ಯಪ್ರದೇಶ ಬಸ್‌ ದುರಂತ: ಮೃತರ ಸಂಖ್ಯೆ ೫೧ಕ್ಕೇರಿಕೆ

ಭೋಪಾಲ್: ಬಸ್‌ ನಾಲೆಗೆ ಬಿದ್ದ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ೫೧ಕ್ಕೇರಿದ್ದು, ಮಂಗಳವಾರ ಮಧ್ಯಪ್ರದೇಶ ಪೊಲೀಸರು ಬಸ್‌ ಚಾಲಕನನ್ನು ಬಂಧಿಸಿದ್ದಾರೆ. ಧುಮುಕುವವನ್‌ ಬಾಲೆಂದ್ರು ವಿಶ್ವಕರ್ಮ ಬಂಧಿತ ಚಾಲಕನಾಗಿದ್ದಾನೆ. ೧೦ ಕಿ.ಮೀ. ನಾಲೆಯುದ್ದಕ್ಕೂ ಕಾರ್ಯಾಚರಣೆ ನಡೆದಿದ್ದು, ಮಂಗಳವಾರ ೨ ಶವಗಳನ್ನು ನೀರಿನಿಂದ ಮೇಲಕ್ಕೆತ್ತಲಾಗಿದೆ. 63 ಜನರು ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ. ಅಪಘಾತಕ್ಕೆ ಸ್ವಲ್ಪ ಮೊದಲು, ಅವರಲ್ಲಿ … Continued

ಬಸ್‌ ನಾಲೆಗೆ ಬಿದ್ದು ೩೭ ಜನರು ಜಲಸಮಾಧಿ

ಸಿಧಿ: ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಪಟ್ನಾ ಗ್ರಾಮದ ಬಳಿ ಸೇತುವೆ ಮೇಲಿಂದ ಬಸ್‌ ಬನ್ಸಾಗರ ನಾಲೆಗೆ ಬಿದ್ದು ೧೬ ಮಹಿಳೆಯರು ಸೇರಿದಂತೆ ೩೭ ಜನರು ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೆಳಗ್ಗೆ ೯ ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣಕ್ಕೆ ಸಿಗದ ಬಸ್‌ ನಾಲೆಗ ಬಿದ್ದಿದೆ. ಅತಿಯಾದ ವೇಗವೇ ಅವಘಡಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. … Continued