ಹೈದರಾಬಾದ್-ಬೆಂಗಳೂರು ಬಸ್ಸಿನಲ್ಲಿ ಬೆಂಕಿ ; 19 ಜನರು ಸಾವು

ಕರ್ನೂಲ್ (ಆಂಧ್ರಪ್ರದೇಶ): ಶುಕ್ರವಾರ ಮುಂಜಾನೆ ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಐಷಾರಾಮಿ ಬಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು 19 ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಹೈದರಾಬಾದ್‌ನಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್‌ನಲ್ಲಿ 43 ಜನರಿದ್ದರು. ಕರ್ನೂಲ್ ಜಿಲ್ಲೆಯ ಉಲ್ಲಿಂದಕೊಂಡ ಬಳಿ ಬಸ್ ಅಪಘಾತ ಸಂಭವಿಸಿದೆ. ಬಸ್ ಮಧ್ಯರಾತ್ರಿ ಸುಮಾರಿಗೆ ಹೈದರಾಬಾದಿನಿಂದ ತನ್ನ ಪ್ರಯಾಣವನ್ನು ಪ್ರಾರಂಭಿಸಿತು … Continued

ಬೆಂಕಿ ಹೊತ್ತಿಕೊಂಡು ಬಸ್ಸು ಸುಟ್ಟು ಕರಕಲಾದ ಬಸ್‌

ಬೆಳಗಾವಿ : ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಬಸ್ಸು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹತ್ತರಗಿ ಟೋಲ್ ನಾಕಾ ಸಮೀಪ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ನಡೆದಿದೆ. ಕೊಲ್ಲಾಪುರ ಕಡೆಯಿಂದ ಬೆಳಗಾವಿ ಕಡೆಗೆ ಗುರುವಾರ ಸಂಜೆ ವೇಳೆ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸು ಹುಕ್ಕೇರಿ ತಾಲೂಕಿನ ಹಂಚಿನಾಳ … Continued

ಗೂಡ್ಸ್ ವಾಹನ​ ಡಿಕ್ಕಿ ಹೊಡೆದು ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಬಸ್ : 7 ಮಂದಿ ಸಜೀವ ದಹನ

ಕಲಬುರಗಿ : ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬಸ್ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ಕಮಲಾಪುರ ಸಮೀಪದಲ್ಲಿ ಇಂದು, ಶುಕ್ರವಾರ ಬೆಳಗ್ಗೆ ಸಂಭವಿಸಿದೆ.ಏಳು ಜನರು ಸಜೀವವಾಗಿ ದಹನವಾಗಿದ್ದಾರೆ ಹಾಗೂ 22 ಜನ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ಕೆಲವು ದೇಹಗಳು ಸುಟ್ಟು ಕರಕಲಾಗಿವೆ. … Continued