‘ನಾನು ನಿರಾಸೆಗೊಂಡಿದ್ದೇನೆ, ಆದರೆ…”: ದೆಹಲಿಯ ಜಿ20 ಶೃಂಗಸಭೆಗೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅನುಪಸ್ಥಿತಿ ಬಗ್ಗೆ ಅಮೆರಿಕ ಅಧ್ಯಕ್ಷ ಬೈಡನ್‌

ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಈ ವಾರ ಭಾರತ ಭೇಟಿಯನ್ನು ಎದುರು ನೋಡುತ್ತಿದ್ದೇನೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಪಾಲ್ಗೊಳ್ಳದಿರುವ ಬಗ್ಗೆ ಅವರು ನಿರಾಸೆ ವ್ಯಕ್ತಪಡಿಸಿದ್ದಾರೆ. ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಬೈಡನ್‌ ಸೆಪ್ಟೆಂಬರ್ 7 ರಂದು ಭಾರತಕ್ಕೆ ಪ್ರಯಾಣಿಸಲಿದ್ದಾರೆ ಎಂದು ಶ್ವೇತಭವನವು … Continued

ಬಾಡಿಗೆದಾರರಿಗೂ 200 ಯುನಿಟ್ ವಿದ್ಯುತ್​ ಉಚಿತ: ಗೊಂದಲಕ್ಕೆ ತೆರೆ ಎಳೆದ ಇಂಧನ ಸಚಿವ ಕೆ.ಜೆ. ಜಾರ್ಜ್​

ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ ಬಾಡಿಗೆದಾರರಿಗೂ 200 ಯುನಿಟ್ ಉಚಿತ ವಿದ್ಯುತ್ ನೀಡಲಾಗುತ್ತದೆ, ಬಾಡಿಗೆ ಮನೆಗಳಲ್ಲಿ ವಾಸಿಸುವವರು ಕೂಡ ರಾಜ್ಯ ಸರ್ಕಾರದ ಗೃಹಜ್ಯೋತಿ ಯೋಜನೆಗೆ ಅರ್ಹರಾಗಿರುತ್ತಾರೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದು, ಈ ಬಗ್ಗೆ ಇದ್ದ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಬಾಡಿಗೆದಾರರಿಗೂ ಉಚಿತವಾಗಿ 200 … Continued

ಕಾಂತಾರ ಸಿನೆಮಾ ತಂಡಕ್ಕೆ ರಿಲೀಫ್‌ : ‘ವರಾಹ ರೂಪಂ’ ಹಾಡಿನ ಬಳಕೆಗೆ ಕೋಝಿಕ್ಕೋಡ್ ಕೋರ್ಟ್ ಅನುಮತಿ…ಆದರೆ…

ಕನ್ನಡದ ಕಾಂತಾರ ಚಿತ್ರದಲ್ಲಿ ‘ವರಾಹ ರೂಪಂ’ ಹಾಡು ಬಳಸಿದ್ದಕ್ಕೆ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯವು  ನೀಡಿದ್ದ ಮಧ್ಯಂತರ ಆದೇಶವನ್ನು ರದ್ದುಗೊಳಿಸಿದೆ. ಕೇರಳ ಮೂಲದ ಥೈಕ್ಕುಡಂ ಬ್ರಿಡ್ಜ್‌ನ ‘ನವರಸಂ’ ಹಾಡಿನ ಕೃತಿಚೌರ್ಯದ ಆರೋಪದ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಹಿಂದೆ ಮಧ್ಯಂತರ ಆದೇಶ ನೀಡಿತ್ತು. ನ್ಯಾಯವ್ಯಾಪ್ತಿಯ ಕೊರತೆಯನ್ನು ಉಲ್ಲೇಖಿಸಿ ಹೊಂಬಾಳೆ ಫಿಲ್ಮ್ಸ್ ವಿರುದ್ಧ ಥೈಕ್ಕುಡಂ ಬ್ರಿಡ್ಜ್‌ ಸಲ್ಲಿಸಿದ್ದ ಅರ್ಜಿಯನ್ನು ಕೇರಳದ … Continued

ಇಂಡಿಯಾ ಟುಡೆ ಮೂಡ್ ಆಫ್ ದಿ ನೇಷನ್ ಸಮೀಕ್ಷೆ: ದೇಶದಲ್ಲಿ ನರೇಂದ್ರ ಮೋದಿ ಪ್ರಾಬಲ್ಯ ಮುಂದುವರೆಸಿದ್ದಾರೆ, ಆದರೆ…

ನವದೆಹಲಿ: ಇಂಡಿಯಾ ಟುಡೆಯ ಮೂಡ್ ಆಫ್ ದಿ ನೇಷನ್ ಜನವರಿ 2022 ರ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದ ಅತ್ಯಂತ ಜನಪ್ರಿಯ ರಾಜಕೀಯ ನಾಯಕರಾಗಿ ಮುಂದುವರೆದಿದ್ದಾರೆ. ಆದರೆ 2024 ರ ಲೋಕಸಭಾ ಚುನಾವಣೆಯ ಮೊದಲು ಪರಿಹರಿಸಲು ಅವರಿಗೆ ಸಮಸ್ಯೆಗಳಿಲ್ಲ ಎಂದು ಇದರ ಅರ್ಥವಲ್ಲ ಎಂದು ಸಮೀಕ್ಷೆ ಹೇಳಿದೆ. ಇತ್ತೀಚಿನ ಮೂಡ್ ಆಫ್ ದಿ … Continued