ಚುನಾವಣಾ ಬಾಂಡ್ ಪ್ರಕರಣ: ನಡ್ಡಾ, ನಿರ್ಮಲಾ ಸೀತಾರಾಮನ್‌, ಕಟೀಲು ನಿರಾಳ

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನಕುಮಾರ ಕಟೀಲು ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡು ಸುಲಿಗೆ ಮಾಡಿರುವ … Continued

ಕೊಲ್ಲೂರಿನಲ್ಲಿ ವಿಮಾನ ನಿಲ್ದಾಣಕ್ಕೆ ಸಂಸದ ಬಿ.ವೈ.ರಾಘವೇಂದ್ರ ಮನವಿ

ಕುಂದಾಪುರ: ಸಂಸದ ಬಿ.ವೈ. ರಾಘವೇಂದ್ರ ಅವರು ದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ ನಾಯ್ಡು ಅವರನ್ನು ಭೇಟಿ ಮಾಡಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಮಾಡಿದ್ದಾರೆ. ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ, ಉದ್ಯಮಿ ವೆಂಕಟೇಶ ಕಿಣಿ ಅವರೊಂದಿಗೆ ಸಚಿವರನ್ನು ಭೇಟಿ ಮಾಡಿದ ಸಂಸದ … Continued

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಯೂ ಆಗಿರುವ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ, ಮಾಜಿ ಪಾಲಿಕೆ ಸದಸ್ಯ ವಿಶ್ವಾದ … Continued

ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ

ಶಿವಮೊಗ್ಗ: ಯಡಿಯೂರಪ್ಪ ಪುತ್ರ ಬಿ.ವೈ. ರಾಘವೇಂದ್ರರನ್ನು ಮತ್ತೊಮ್ಮೆ ಗೆಲ್ಲಿಸಿ ಎಂದು ಕಾಂಗ್ರೆಸ್‌ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಶಾಸಕ, ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಬೆಕ್ಕಿನಕಲ್ಮಠದಲ್ಲಿ ಜಗದ್ಗುರು ಶ್ರೀ ಗುರುಬಸವ ಸ್ವಾಮೀಜಿಗಳ 112ನೇ ಪುಣ್ಯ ಸ್ಮರಣೋತ್ಸವ ಪ್ರಯುಕ್ತ ಶುಕ್ರವಾರ ಆಯೋಜಿಸಿದ್ದ ಭಾವೈಕ್ಯ ಸಮ್ಮೇಳನ ಹಾಗೂ ಗುರು ಬಸವಶ್ರೀ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ರಾಘವೇಂದ್ರ … Continued