ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಘೋಷಣೆ

ಬೆಂಗಳೂರು : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಾಂಗ್ರೆಸ್​​ ಕೊನೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಗಲಕೋಟೆ ಕ್ಷೇತ್ರದಿಂದ ಉಮೇಶ ಮೇಟಿ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಕುಟುಂಬದ ಸಮರ್ಥ ಶಾಮನೂರು ಅವರಿಗೆ ಟಿಕೆಟ್‌ ನೀಡಲಾಗಿದೆ. ​​ ಈ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್​​ಗಾಗಿ ತೀವ್ರ ಪೈಪೋಟಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಸಭೆಗಳನ್ನು … Continued

ದಾವಣಗೆರೆ ದಕ್ಷಿಣ ಕ್ಷೇತ್ರ ; ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮೊದಲೇ ನಾಮಪತ್ರ ಸಲ್ಲಿಸಿದ ಶಾಮನೂರು ಮೊಮ್ಮಗ…!

ದಾವಣಗೆರೆ: ಕರ್ನಾಟಕದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಆಡಳಿತ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಪೈಪೋಟಿ ಎದುರಾಗಿದೆ. ಹಲವಾರು ಆಕಾಂಕ್ಷಿಗಳು ಟಿಕೆಟಿಗಾಗಿ ಲಾಬಿ ನಡೆಸಿದ್ದು, ಕಾಂಗ್ರೆಸ್ಸಿಗೆ ಟಿಕೆಟ್‌ ನೀಡುವುದೇ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗಿರುವ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ದಂಪತಿಯ ಪುತ್ರ … Continued

ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಭಾರಿ ಕುತೂಹಲ ಕೆರಳಿಸಿರುವ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಇಂದು (ಮಾರ್ಚ್‌ 19) ಯುಗಾದಿ ಹಬ್ಬದ ದಿನವೇ ಈ ಎರಡು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಮತ್ತು ಎಚ್.ವೈ.ಮೇಟಿ ಅವರ ನಿಧನದಿಂದಾಗಿ ತೆರವಾದ ಕ್ಷೇತ್ರಗಳಿಗೆ … Continued

ವಿಧಾನಸಭಾ ಉಪಚುನಾವಣೆಗಳ ಫಲಿತಾಂಶ ಪ್ರಕಟ ; ಬಿಜೆಪಿ, ಕಾಂಗ್ರೆಸ್ಸಿಗೆ ಸಮಬಲ

ನವದೆಹಲಿ: ಇತ್ತೀಚೆಗೆ ನಡೆದ ವಿಧಾನಸಭಾ ಉಪಚುನಾವಣೆಗಳ ಮತ ಎಣಿಕೆಯು ಮಿಶ್ರ ಫಲಿತಾಂಶವನ್ನು ಬಹಿರಂಗಪಡಿಸಿದೆ. ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು ಕಾಂಗ್ರೆಸ್ ಎರಡೂ ಗಮನಾರ್ಹ ಗೆಲುವು ಸಾಧಿಸಿವೆ. ಬಿಜೆಪಿ ಹಾಗೂ ಕಾಂಗ್ರೆಸ್‌ ತಲಾ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ. ರಾಜಸ್ಥಾನದ ಅಂತಾ ಕ್ಷೇತ್ರ : ಕಾಂಗ್ರೆಸ್ ಪಕ್ಷವು ರಾಜಸ್ಥಾನದ ಅಂತಾ ಕ್ಷೇತ್ರದಲ್ಲಿ ಪ್ರಮುಖ ಗೆಲುವು ಸಾಧಿಸಿದೆ. … Continued

4 ರಾಜ್ಯಗಳ ವಿಧಾನಸಭಾ ಉಪಚುನಾವಣೆ ಘೋಷಣೆ

ನವದೆಹಲಿ: ಗುಜರಾತ್, ಕೇರಳ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದ ಐದು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದೆ. ಐದು ಕ್ಷೇತ್ರಗಳಿಗೆ ಜೂನ್ 19 ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಜೂನ್ 23 ರಂದು ನಡೆಯಲಿದೆ. ಗುಜರಾತಿನ ಕಾಡಿ (ಮೀಸಲು ಸ್ಥಾನ) ಮತ್ತು ವಿಸಾವದರ್ ಕ್ಷೇತ್ರಗಳು , ಕೇರಳದ ನಿಲಂಬೂರ್ … Continued

ಕರ್ನಾಟಕದ 3 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ದಿನಾಂಕ ಘೋಷಣೆ

ನವದೆಹಲಿ: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು 47 ವಿಧಾನಸಭಾ ಕ್ಷೇತ್ರ ಮತ್ತು ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್‌ 13 ರಂದು ಉಪಚುನಾವಣೆ ನಡೆಯಲಿದೆ. ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣ, ಹಾವೇರಿ ಜಿಲ್ಲೆಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್‌ 13 ರಂದು ಉಪಚುನಾವಣೆ ನಡೆಯಲಿದ್ದು, ನ.23 ರಂದು ಫಲಿತಾಂಶ … Continued

ಸುರಪುರ ವಿಧಾನಸಭೆ ಕ್ಷೇತ್ರದ ಉಪಚುನಾವಣೆ : ರಾಜುಗೌಡಗೆ ಬಿಜೆಪಿ ಟಿಕೆಟ್‌

ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜ ವೆಂಕಟಪ್ಪ ನಾಯಕ ನಿಧನದ ನಂತರ ತೆರುವಾಗಿದ್ದ ಸುರಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮೇ 7 ರಂದು ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಟಿಕೆಟ್ ಘೋಷಣೆ ಮಾಡಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ರಾಜುಗೌಡ ಅವರಿಗೆ ಮತ್ತೆ ಟಿಕೆಟ್‌ ನೀಡಿದೆ. ಕಾಂಗ್ರೆಸ್ ಶಾಸಕರಾಗಿದ್ದ ದಿವಂಗತ ರಾಜ ವೆಂಕಟಪ್ಪ ನಾಯಕ ಅವರ ಪುತ್ರ … Continued

ಉಪಚುನಾವಣೆ, ನಿಗಮ ಮಂಡಳಿಗಳಿಗೆ ನೇಮಕ: ಸಿಎಂ ಬೊಮ್ಮಾಯಿ ದೆಹಲಿ ಭೇಟಿಗೆ ಬಂತು ಮಹತ್ವ

ಬೆಂಗಳೂರು:ಎರಡು ಕ್ಷೇತ್ರಗಳಿಗೆ ಉಪಚುನಾವಣೆ, ಸಚಿವ ಸಂಪುಟ ವಿಸ್ತರಣೆ, ನಿಗಮಮಂಡಳಿಗೆ ಅಧ್ಯಕ್ಷರ ನೇಮಕಾತಿ ಸೇರಿದಂತೆ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಪ್ರಮುಖರ ಜೊತೆ ಚರ್ಚೆ ನಡೆಸಲಿದ್ದಾರೆ. ಇಂದು (ಶುಕ್ರವಾರ) ಬೆಳಿಗ್ಗೆ ನವದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬೊಮ್ಮಾಯಿ ಕೇಂದ್ರದ ಕೆಲವು ಸಚಿವರ ಭೇಟಿಯಾಗಲಿದ್ದು, ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಜೊತೆ ಕೆಲವು … Continued

ರಮೇಶ ಜಾರಕಿಹೊಳಿಗೆ ಕೊರೊನಾ ಹೀಗಾಗಿ ಪ್ರಚಾರಕ್ಕೆ ಬಂದಿಲ್ಲ ಎಂದ ಬೈರತಿ

ಬೆಳಗಾವಿ :ಮಾಜಿ ಸಚಿವ ರಮೇಶ ಜಾರಕಿಹೊಳಿಯವರು ಕೊರೋನಾ ಸೋಂಕು ತಗುಲಿರುವ ಕಾರಣ ಬೆಳಗಾವಿ ಲೋಕಸಭಾ ಚುನಾವಣೆ ಪ್ರಚಾರದಿಂದ ದೂರ ಉಳಿದಿದ್ದಾರೆ ಎಂದು ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹುಷಾರಾದ ನಂತರ ಚುನಾವಣಾ ಪ್ರಚಾರಕ್ಕೆ ಬರುವುದಾಗಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ರಮೇಶ ಜಾರಕಿಹೊಳಿ‌ ಬೆಂಗಳೂರಿನಲ್ಲಿಯೇ ಇದ್ದಾರೆ, ಕೇವಲ ಚುನಾವಣಾ ಪ್ರಚಾರ ಕುರಿತು … Continued

ಉಪಚುನಾವಣೆಯಲ್ಲಿ ಯಾವ ಜೋಡೆತ್ತುಗಳು ಕೆಲಸ ಮಾಡಲ್ಲ: ಸಚಿವ ಶ್ರೀರಾಮಲು

ಬಳ್ಳಾರಿ: ಉಪಚುನಾವಣೆಯಲ್ಲಿ ಯಾವ ಜೋಡೆತ್ತುಗಳು ಕೆಲಸ ಮಾಡಲ್ಲ, ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿಯಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಸಚಿವ ಶ್ರೀರಾಮಲು ಹೇಳಿದರು. ಕಾಂಗ್ರೆಸ್‌ ಮುಖಂಡರು ಎಲ್ಲಿ ಪ್ರಚಾರಕ್ಕೆ ಹೋಗಿದ್ದಾರೋ ಅಲ್ಲೆಲ್ಲ ಕಾಂಗ್ರೆಸ್‌ ಸೋಲನುಭವಿಸಿದೆ. ಯಾವ ಜೋಡೆತ್ತುಗಳ ಕರಾಮತ್ತು ನಡೆಯೊಲ್ಲ ಎಂದರು. ವಿಜಯೇಂದ್ರ ಬಂದರೆ ಹಣ ಎಂಬ ಸಿದ್ದು ಹೇಳಿಕೆಗೆ ರಾಮುಲು ತಿರುಗೇಟು ನೀಡಿದ್ದು, ಸುಳ್ಳು … Continued