ಸಿಎಎಗೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್‌ ನಕಾರ: ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಅನುಷ್ಠಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ. ಲೋಕಸಭೆ ಚುನಾವಣೆಗೆ ಕೆಲವು ದಿನಗಳ ಮೊದಲು ಕಳೆದ ವಾರ ಅಧಿಸೂಚನೆ ಹೊರಡಿಸಿದ ಕಾನೂನನ್ನು ಪ್ರಶ್ನಿಸಿ 237 ಅರ್ಜಿಗಳಿಗೆ ಪ್ರತಿಕ್ರಿಯೆ ನೀಡಲು ಏಪ್ರಿಲ್ 8 ರ ವರೆಗೆ ನ್ಯಾಯಾಲಯವು ಸರ್ಕಾರಕ್ಕೆ ಮೂರು ವಾರಗಳ ಕಾಲಾವಕಾಶವನ್ನು ನೀಡಿದೆ. ಈ ಕುರಿತು … Continued

ಸಿಎಎ : ಮಾರ್ಚ್ 19 ರಂದು ಪೌರತ್ವ (ತಿದ್ದುಪಡಿ) ನಿಯಮಗಳ ವಿರುದ್ಧದ ಅರ್ಜಿಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: 2019 ರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಮತ್ತು ಇತ್ತೀಚೆಗೆ ಸೂಚಿಸಲಾದ 2024 ರ ಪೌರತ್ವ (ತಿದ್ದುಪಡಿ) ನಿಯಮಗಳಿಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ಮಾರ್ಚ್ 19ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (CJI) ಡಿ.ವೈ. ಚಂದ್ರಚೂಡ ನೇತೃತ್ವದ ಪೀಠವು ಎಲ್ಲ ಅರ್ಜಿಗಳನ್ನು ವಿಚಾರಣೆ ನಡೆಸಲಿದೆ ಎಂದು ಹೇಳಿದೆ. … Continued

ಸಿಎಎ ಕಾನೂನಿನ ಅಡಿ ಮುಸ್ಲಿಮರು ಯಾಕೆ ಪೌರತ್ವಕ್ಕೆ ಅರ್ಹರಲ್ಲ? : ವಿವರಣೆ ನೀಡಿದ ಅಮಿತ್‌ ಶಾ

ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅನುಷ್ಠಾನದ ಸುತ್ತಲಿನ ವಿವಾದದ ಮಧ್ಯೆ, ಗೃಹ ಸಚಿವ ಅಮಿತ್ ಶಾ ಪ್ರಮುಖ ಪ್ರಶ್ನೆಗೆ ಇಂದು ಗುರುವಾರ ಉತ್ತರಿಸಿದ್ದಾರೆ. ಪಾರ್ಸಿಗಳು ಮತ್ತು ಕ್ರೈಸ್ತರು ಸಿಎಎ ಅಡಿಯಲ್ಲಿ ಏಕೆ ಅರ್ಹರು, ಆದರೆ ಮುಸ್ಲಿಮರುಯಾಕೆ ಅರ್ಹರಲ್ಲ? ಎಂಬ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯು ಡಿಸೆಂಬರ್ 31, 2014 ರ ಮೊದಲು … Continued

ಸಿಎಎ (CAA) ಕಾನೂನು ಮುಸ್ಲಿಂ ವಲಸಿಗರಿಗೆ ಯಾವುದೇ ನಿರ್ಬಂಧ ವಿಧಿಸುತ್ತದೆಯೇ ? ಈ ಬಗ್ಗೆ ಸರ್ಕಾರ ಹೇಳಿದ್ದೇನು

ನವದೆಹಲಿ : ಹೊಸದಾಗಿ ಜಾರಿಗೆ ಬಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಅಥವಾ ಸಿಎಎ ಭಾರತೀಯ ಮುಸ್ಲಿಮರ ಸ್ವಾತಂತ್ರ್ಯ ಮತ್ತು ಅವಕಾಶವನ್ನು ಮೊಟಕುಗೊಳಿಸುವುದಿಲ್ಲ ಎಂದು ಸರ್ಕಾರ ಪುನರುಚ್ಚರಿಸಿದೆ, . ಇದು ತಾರತಮ್ಯ ಮತ್ತು ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟು ಜಾರಿ ಮಾಡಲಾಗಿದೆ ಎಂದು ವಿಪಕ್ಷಗಳ ತೀವ್ರ ಟೀಕೆಗಳ ನಡುವೆ ಸರ್ಕಾರದಿಂದ ಈ ಸ್ಪಷ್ಟೀಕರಣ ಬಂದಿದೆ. ಭಾರತದ ಪೌರತ್ವ … Continued

ಪೌರತ್ವ ತಿದ್ದುಪಡಿ ನಿಯಮಾವಳಿ- 2024ಕ್ಕೆ ತಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್

ನವದೆಹಲಿ : ಸೋಮವಾರದಿಂದ ಜಾರಿಗೆ ಬಂದಿರುವ ಪೌರತ್ವ (ತಿದ್ದುಪಡಿ) ನಿಯಮಾವಳಿ-2024ಕ್ಕೆ ತಡೆ ನೀಡುವಂತೆ ಕೋರಿ ಕೇರಳ ಮೂಲದ ರಾಜಕೀಯ ಪಕ್ಷ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ) 2019 ಕುರಿತು ಸೋಮವಾರ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಸಿಎಎಗೆ ಸಂಸತ್ತು 2019ರಲ್ಲಿ ಅಂಗೀಕಾರ ನೀಡಿದಾಗ ಸುಪ್ರೀಂ ಕೋರ್ಟ್‌ನಲ್ಲಿ … Continued

ವೀಡಿಯೊ…| ಭಾರತದ ಎಲ್ಲ ಮುಸ್ಲಿಮರು ‘ಸಿಎಎ’ ಸ್ವಾಗತಿಸಬೇಕು…: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥ

ಬರೇಲಿ (ಉತ್ತರ ಪ್ರದೇಶ) : ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಕೇಂದ್ರ ಸರ್ಕಾರವು ಅಧಿಸೂಚನೆ ಹೊರಡಿಸಿದ ಕೆಲವು ಗಂಟೆಗಳ ನಂತರ, ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲ್ವಿ ಅವರು ಈ ಕಾನೂನನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಹಾಗೂ ಅವರು ಮುಸ್ಲಿಂ ಸಮುದಾಯದ ಭಯ ನಿವಾರಿಸಲು ಪ್ರಯತ್ನಿಸಿದ್ದಾರೆ. ಇದು Bಆರತದ ಮುಸ್ಲಿಮರ ಪೌರತ್ವದ … Continued

ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೆ ಕೇಂದ್ರ ಸರ್ಕಾರದ ಅಧಿಸೂಚನೆ ನಂತರ ನಾವು ಜಾರಿ ಮಾಡಲ್ಲ ಎಂದ ಪಶ್ಚಿಮ ಬಂಗಾಳ, ಕೇರಳ ಸಿಎಂಗಳು

ನವದೆಹಲಿ: 2019 ರ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಗೆ ಕೇಂದ್ರ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದ್ದರೂ ಸಹ, ತಮ್ಮ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆಯ ಅನುಷ್ಠಾನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕೇರಳ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ‘ಚುನಾವಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯ … Continued

ಲೋಕಸಭೆ ಚುನಾವಣೆಗೂ ಮುನ್ನ ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿಗೊಳಿಸಿದ ಕೇಂದ್ರ ಸರ್ಕಾರ

ನವದೆಹಲಿ: ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ನಂತರ ಕೇಂದ್ರ ಸರ್ಕಾರವು ಸೋಮವಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಜಾರಿಗೆ ತಂದಿದೆ. ಭಾರತೀಯ ಚುನಾವಣಾ ಆಯೋಗವು ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸುವ ಮುನ್ನವೇ ಈ ಅಧಿಸೂಚನೆ ಹೊರಬಿದ್ದಿದೆ. ಅರ್ಜಿಗಳನ್ನು ಆನ್‌ಲೈನ್ ಮೋಡ್‌ನಲ್ಲಿ ಸಲ್ಲಿಸಲಾಗುತ್ತದೆ. ಇದಕ್ಕಾಗಿ ವೆಬ್ ಪೋರ್ಟಲ್ ಅನ್ನು ಒದಗಿಸಲಾಗಿದೆ. ಕಳೆದ ತಿಂಗಳು, ಕೇಂದ್ರ ಗೃಹ ಸಚಿವ … Continued

ಲೋಕಸಭೆ ಚುನಾವಣೆಗೂ ಮುನ್ನವೇ ಸಿಎಎ ಜಾರಿ : ಅಮಿತ್ ಶಾ

ನವದೆಹಲಿ : 2019 ರಲ್ಲಿ ಜಾರಿಗೊಳಿಸಲಾದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು (ಸಿಎಎ) ಈ ಸಂಬಂಧ ನಿಯಮಗಳನ್ನು ಹೊರಡಿಸಿದ ನಂತರ ಮುಂಬರುವ ಲೋಕಸಭೆ ಚುನಾವಣೆಗೆ ಮುನ್ನ ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ. ET NOW ಜಾಗತಿಕ ವ್ಯಾಪಾರ ಶೃಂಗಸಭೆ 2024ರಲ್ಲಿ ಮಾತನಾಡಿದ ಅವರು, “ನಮ್ಮ ಮುಸ್ಲಿಂ ಸಹೋದರರನ್ನು ದಾರಿತಪ್ಪಿಸಲಾಗುತ್ತಿದೆ … Continued

ಸಿಎಎ ವಿರೋಧಿ ಪ್ರತಿಭಟನಾಕಾರರಿಂದ ವಸೂಲಿ ಮಾಡಿದ ಆಸ್ತಿ ಹಾನಿಯ ದಂಡ ಹಿಂತಿರುಗಿಸಲು ಸುಪ್ರೀಂ ಕೋರ್ಟ್‌ ಆದೇಶ

ನವದೆಹಲಿ: ಸಿಎಎ ವಿರೋಧಿ ಪ್ರತಿಭಟನೆಗಳ ವೇಳೆ ಉತ್ತರ ಪ್ರದೇಶದಲ್ಲಿ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿ ಉಂಟು ಮಾಡಿದ ಆರೋಪ ಎದುರಿಸುತ್ತಿರುವವರಿಂದ ವಸೂಲಿ ಮಾಡಲಾದ ದಂಡದ ಹಣವನ್ನು ಅವರಿಗೇ ಮರಳಿಸುವಂತೆ ಸುಪ್ರೀಂ ಕೋರ್ಟ್‌ ಶುಕ್ರವಾರ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿದೆ. ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡಿರುವುದಕ್ಕೆ ಪರಿಹಾರವನ್ನು ಕಟ್ಟಿಕೊಡುವ ಸಲುವಾಗಿ ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ನೀಡಿದ್ದ ಶೋಕಾಸ್‌ … Continued