ರಾಜ್ಯದ ಕರಾವಳಿ ಭಾಗಕ್ಕೆ 32,611 ಕೋಟಿ ರೂ. ಯೋಜನೆಗಳು ; ಸಚಿವ ಸಂಪುಟ ಸಭೆ ಅನುಮೋದನೆ

ಮಂಗಳೂರು : ತುಳು ಭಾಷೆಗೆ ಎರಡನೇ ಹೆಚ್ಚುವರಿ ಆಡಳಿತ ಭಾಷೆಯ ಸ್ಥಾನಮಾನ  ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026, 150 ಎಕರೆ ಪ್ರದೇಶದಲ್ಲಿ ಮೀನುಗಾರಿಕೆ ಪಾರ್ಕ್ ನಿರ್ಮಾಣ ಸೇರಿದಂತೆ 32,611 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಮಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ (Cabinet Meeting) … Continued

ಸಾರಿಗೆ ಸಂಸ್ಥೆ ಬಸ್‌ ಟಿಕೆಟ್‌ ದರ ಹೆಚ್ಚಳ ? : ಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು ?

ಬೆಂಗಳೂರು : ಡೀಸೆಲ್‌ ದರ ಏರಿಕೆ ಹಿನ್ನೆಲೆಯಲ್ಲಿ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಲು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದು, ಸಾರ್ವಜನಿಕರ ಹಿತದೃಷ್ಟಿ ಮತ್ತು ಸಾರಿಗೆ ನಿಗಮಗಳು ಉಳಿಯಬೇಕು. ಇವೆರಡನ್ನೂ ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆ ‘ಪ್ರಜಾಸೇವೆ ಇಲಾಖೆ’ ಸ್ಥಾಪನೆ : ಸಿಎಂ ಘೋಷಣೆ

ಬೆಂಗಳೂರು : “ಸಾರ್ವಜನಿಕರ ಕುಂದುಕೊರತೆಗಳು, ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಇದಕ್ಕಾಗಿಯೇ  ಪ್ರತ್ಯೇಕವಾಗಿ ಸಚಿವರನ್ನು ನೇಮಿಸಿ ಜವಾಬ್ದಾರಿ ವಹಿಸಲಾಗುತ್ತದೆ ಎಂದು ಹೇಳಿದರು. “ಜನರ ಕಷ್ಟ ಅರಿತು, ಕಾನೂನು … Continued

ಒಳ ಮೀಸಲಾತಿ ಹಂಚಿಕೆ : ವಿಶೇಷ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಯಾವ ಸಮುದಾಯಗಳಿಗೆ ಎಷ್ಟು?

ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಯ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ವಿಶೇಷ ಸಚಿವ ಸಂಪುಟ ಸಭೆ ಶುಕ್ರವಾರ ಮಹತ್ವದ ನಿರ್ಣಯ ಕೈಗೊಂಡಿದೆ. ವಿಶೇಷ ಸಚಿವ ಸಂಪುಟ ಸಭೆಯಲ್ಲಿ (Cabinet meeting) ಎಡಗೈ ಸಮುದಾಯಕ್ಕೆ 5.25, ಬಲಗೈ ಸಮುದಾಯಕ್ಕೆ 5.25 ಹಾಗೂ ಇತರೆ ಸಮುದಾಯಕ್ಕೆ 4.5ರಷ್ಟು ಒಳ ಮೀಸಲಾತಿ (internal reservation) ಕಲ್ಪಿಸಲು ನಿರ್ಧರಿಸಲಾಗಿದ್ದು, … Continued

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ಸೇರಿ 8 ಮಸೂದೆಗಳಿಗೆ ಸಚಿವ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025, ಸಾಮಾಜಿಕ ಬಹಿಷ್ಕಾರ ತಡೆ ಮಸೂದೆ ಸೇರಿ ಎಂಟು ಮಸೂದೆಗಳಿಗೆ ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಗುರುವಾರ(ಡಿಸೆಂಬರ್‌ ೪) ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಟ್ಟು ಎಂಟು ಮಹತ್ವದ ವಿಧೇಯಕಕ್ಕೆ … Continued

ಹೊನ್ನಾವರ | ಮುಳ್ಳೋಡು ಸಮೀಪ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ – ಭಟ್ಕಳ ವಿಧಾನಸಭಾ ಕ್ಷೇತ್ರದ ಹೊನ್ನಾವರ ತಾಲೂಕಿನ ಮುಳ್ಳೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ 200 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. … Continued

ರಾಜ್ಯದಲ್ಲಿ ಹೊಸದಾಗಿ ನಿರ್ಮಿಸುವ ಬಹುಮಹಡಿ ಕಟ್ಟಡಗಳಿಗೆ 1%ರಷ್ಟು ಫೈರ್ ಸೆಸ್ : ಸಚಿವ ಸಂಪುಟ ತೀರ್ಮಾನ

ಬೆಂಗಳೂರು: ರಾಜ್ಯಾದ್ಯಂತ ಹೊಸದಾಗಿ ನಿರ್ಮಾಣವಾಗುತ್ತಿರುವ ಬಹುಮಹಡಿ ಕಟ್ಟಡಗಳಿಗೆ ಶೇ1ರಷ್ಟು ಫೈರ್ ಸೆಸ್ ವಿಧಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.‌ ಈ ಸಂಬಂಧ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ದಿ ಕರ್ನಾಟಕ ಫೈರ್‌ ಫೋರ್ಸ್‌ ಆಕ್ಟ್‌ (The Karnataka Fire Force Act) 1964ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ … Continued

ಜಾತಿ ಗಣತಿ ವರದಿ: ತೀರ್ಮಾನಕ್ಕೆ ಬರಲಾಗದೆ ಮುಗಿದ ಸಚಿವ ಸಂಪುಟ ಸಭೆ

ಬೆಂಗಳೂರು : ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ ಜಾತಿ ಗಣತಿ (Caste Census) ವರದಿ ಬಗ್ಗೆ ನಿರ್ಧರಿಸಲು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಮುಕ್ತಾಯವಾಗಿದೆ. ಹಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಸ್ಪಷ್ಪ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲʼʼ … Continued

ನಾಳೆ ಸರ್ಕಾರಿ ಗೌರವದೊಂದಿಗೆ ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅಂತ್ಯಕ್ರಿಯೆ ; ಕಾಂಗ್ರೆಸ್‌

ನವದೆಹಲಿ: ಆಧುನಿಕ ಭಾರತದ ಆರ್ಥಿಕ ಸುಧಾರಣೆಯ ಹರಿಕಾರ ಹಾಗೂ ಆರ್ಥಿಕ ತಜ್ಞ ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ರಾತ್ರಿ 9:51ಕ್ಕೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವದೊಂದಿಗೆ ಶನಿವಾರ (ಡಿಸೆಂಬರ್‌ ೨೮) ನಡೆಯಲಿದೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಪ್ರಧಾನ ಕಾರ್ಯಕರ್ಶಿ ಕೆ.ಸಿ.ವೇಣುಗೋಪಾಲ ಅವರು ಮಾತನಾಡಿ, ಮಾಜಿ ಪ್ರಧಾನಿ ಡಾ. ಮನಮೋಹನ್ … Continued

70 ವರ್ಷ ಮೇಲ್ಪಟ್ಟ ಎಲ್ಲರಿಗೂ ₹5 ಲಕ್ಷದ ವರೆಗೆ ಉಚಿತ ಚಿಕಿತ್ಸೆ ; ಮೋದಿ ಸರ್ಕಾರದ ಮಹತ್ವದ ನಿರ್ಧಾರ

ನವದೆಹಲಿ: ರಾಷ್ಟ್ರೀಯ ವಿಮಾ ಯೋಜನೆ ಆಯುಷ್ಮಾನ್ ಭಾರತ್ ಅಡಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚು ವಯಸ್ಸಿನ ಪ್ರತಿಯೊಬ್ಬರಿಗೂ ಆರೋಗ್ಯ ವಿಮಾ ಸೌಲಭ್ಯವನ್ನು ವಿಸ್ತರಿಸಲು ಕೇಂದ್ರ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ. ಈ ತೀರ್ಮಾನದಿಂದ ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ (ಎಬಿ ಪಿಎಂ-ಜೆಎವೈ) ಆರು ಕೋಟಿ ಹಿರಿಯ ನಾಗರಿಕರನ್ನು ಹೊಂದಿರುವ 4.5 ಕೋಟಿ … Continued