ಧಾರವಾಡ: ಕ್ಯಾಂಟರ್ ಪಲ್ಟಿ, ಸ್ಥಳದಲ್ಲಿಯೇ ಇಬ್ಬರು ಸಾವು

ಧಾರವಾಡ: ಕ್ಯಾಂಟರ್ ವಾಹನ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಮನಸೂರ ಗ್ರಾಮದ ಬಳಿಯ ಬೈಪಾಸ್ ಹೆದ್ದಾರಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಅಪಘಾತದಲ್ಲಿ ಮತ್ತಿಬ್ಬರಿಗೆ ಗಾಯಗಳಾಗಿದ್ದು, ಬುಧವಾರ ಬೆಳಗಿನ ಜಾವ ಅಪಘಾತ ನಡೆದಿದೆ ಎನ್ನಲಾಗಿದೆ. ನಿದ್ದೆ ಮಂಪರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. … Continued