ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತ ಆರೋಪಿಯ ಜಾಮೀನು ರದ್ದುಗೊಳಿಸಿದ ಬಾಲಾಪರಾಧಿ ನ್ಯಾಯಾಲಯ

ಪುಣೆ: ಇಲ್ಲಿ ಭಾನುವಾರ ಮದ್ಯದ ಅಮಲಿನಲ್ಲಿ 17 ವರ್ಷದ ಅಪ್ರಾಪ್ತ ವೇಗವಾಗಿ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು (Porsche Car Accident) ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳು ಸಾವಿಗೀಡಾದ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನಿಗೆ ಜಾಮೀನು ನೀಡಿದ ಮೂರು ದಿನಗಳ ನಂತರ ಬಾಲ ನ್ಯಾಯಮಂಡಳಿಯು ಅದನ್ನು ರದ್ದುಗೊಳಿಸಿದೆ. ಹಾಗೂ ತನ್ನ ಆದೇಶವನ್ನು ಮಾರ್ಪಡಿಸಿ ಜೂನ್ … Continued

ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ʼಪೋಷೆʼ ಕಾರು ಅಪಘಾತದಲ್ಲಿ ಇಬ್ಬರು ಸಾವು : ತಂದೆಯ ಬಂಧನ

ಪುಣೆ: ಇಬ್ಬರು ವ್ಯಕ್ತಿಗಳನ್ನು ಬಲಿತೆಗೆದುಕೊಂಡ ಮಾರಣಾಂತಿಕ ಕಾರು ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಹೆಚ್ಚುವರಿಯಾಗಿ, ಅಪ್ರಾಪ್ತರಿಗೆ ಮದ್ಯ ನೀಡಿದ ಒಂದೆರಡು ಬಾರ್‌ಗಳ ಮಾಲೀಕರನ್ನೂ ಬಂಧಿಸಲಾಗಿದೆ. ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ, 17 ವರ್ಷ ವಯಸ್ಸಿನ ಅಪ್ರಾಪ್ತ … Continued

ಬೈಲಹೊಂಗಲ ಶಾಸಕರ ಕಾರು ಅಪಘಾತ

ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲೇ ಬೈಲಹೊಂಗಲ ಶಾಸಕ ಮಹಂತೇಶ ಕೌಜಲಗಿ ಕಾರು ಅಪಘಾತವಾಗಿರುವ ಘಟನೆ ನಡೆದಿದೆ. ಶಾಸಕರ ಭವನದಿಂದ ಹೊರಟಿದ್ದ ಶಾಸಕ ಮಹಂತೇಶ್ ಕೌಜಲಗಿ ಅವರ ಕಾರು, ವಿಧಾನಸೌಧದಿಂದ‌ ಹೊರಕ್ಕೆ ಬರುತ್ತಿದ್ದಂತೆ ವಾಹನ ಢಿಕ್ಕಿ ಹೊಡೆದಿದೆ. ವಿಧಾನಸೌಧದ ಹತ್ತಿರ ಅತೀವೇಗವಾಗಿ ಬಂದ ಪೊಲೋ ಕಾರು ಶಾಸಕರ ಭವನದಿಂದ ಬಂದ ಮಹಾಂತೇಶ್‌ ಅವರ ಕಾರಿಗೆ ಗುದ್ದಿದೆ ಎನ್ನಲಾಗಿದೆ. … Continued

ಕೋಲ್ಕತ್ತಾಗೆ ತೆರಳುತ್ತಿದ್ದಾಗ ಕಾರು ಅಪಘಾತದಲ್ಲಿ ಗಾಯಗೊಂಡ ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಕಾರು ಬುಧವಾರ ಅಪಘಾತಕ್ಕೀಡಾಗಿದೆ. ಪೂರ್ವ ಬುರ್ದ್ವಾನ್‌ನಲ್ಲಿ ನಡೆದ ಅಧಿಕೃತ ಕಾರ್ಯಕ್ರಮ ಮುಗಿಸಿ ಅವರು ಕೋಲ್ಕತ್ತಾಗೆ ಹಿಂತಿರುಗುತ್ತಿದ್ದರು. ಅಪಘಾತದಲ್ಲಿ ಅವರ ತಲೆಗೆ ಸಣ್ಣಪುಟ್ಟ ಗಾಯವಾಗಿದೆ. ವರದಿಗಳ ಪ್ರಕಾರ, ಮತ್ತೊಂದು ವಾಹನಕ್ಕೆ ಡಿಕ್ಕಿಯಾಗುವುದನ್ನು ತಪ್ಪಿಸಲು ಮಮತಾ ಬ್ಯಾನರ್ಜಿ ಕಾರು ಚಾಲಕ ಇದ್ದಕ್ಕಿದ್ದಂತೆ ಬ್ರೇಕ್‌ ಹಾಕಿದ್ದಾನೆ. ಹಠಾತ್ … Continued

ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ತುಮಕೂರು : ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರ ಕಾರು ಅಪಘಾತವಾಗಿದ್ದು, ಸಚಿವರಿಗೆ ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಶಿವಮೊಗ್ಗದಿಂದ ಬೆಂಗಳೂರಿಗೆ ಬರುವಾಗ ಗುರುವಾರ ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಚಿವ ಮಧು ಬಂಗಾರಪ್ಪ ಕಾರು ಹಾಗೂ ಲಾರಿ ಡಿಕ್ಕಿಯಾಗಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿಯಾಗಿರುವ ಸಚಿವ ಮಧು … Continued

ಚಿಕ್ಕಬಳ್ಳಾಪುರ : ಕೆರೆಗೆ ಉರುಳಿ ಬಿದ್ದ ಕಾರು, ನಾಲ್ವರು ಸಾವು

ಚಿಕ್ಕಬಳ್ಳಾಪುರ : ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈಪಾಸ್ ​ಬಳಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಚಿಕ್ಕಬಳ್ಳಾಪುರ ಬೈಪಾಸ್​ಬಳಿಯ ಅಮಾನಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ಟ್ಯಾಗೂರು(21), ಪವನ(22), ಆರ್ಯನ್(22), ವಸಂತ(21) ಎಂಬ ನಾಲ್ವರು ಯುವಕರು ಮೃತಪಟ್ಟಿದ್ದಾರೆ ಕಾರು ಬೆಂಗಳೂರಿನಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿದ್ದಾಗ ದುರ್ಘಟನೆ … Continued

ಬೆಂಗಳೂರು : ನೈಸ್‌ ರಸ್ತೆಯಲ್ಲಿ ಅಪಘಾತ, ಕಾರಿಗೆ ಬೆಂಕಿ ಹೊತ್ತಿಕೊಂಡು ತಾಯಿ-ಮಗು ಸಾವು

ಬೆಂಗಳೂರು : ಬೆಂಗಳೂರಿನ ನೈಸ್‌ ರಸ್ತೆಯಲ್ಲಿ ಸೋಮಪುರ ಬಳಿ ಇಂದು, ಮಂಗಳವಾರ ಬೆಳಿಗ್ಗೆ ಭೀಕರ ಅಪಘಾತ ಸಂಭವಿಸಿದೆ. ಕಾರು ಬೆಂಕಿ ಹೊತ್ತಿ ಉರಿದಿದ್ದು, ಪ್ರಯಾಣಿಸುತ್ತಿದ್ದ ತಾಇ ಹಾಗೂ 2 ವರ್ಷದ ಮಗು ಸಜೀವ ದಹನವಾಗಿದ್ದಾರೆ. ಇನ್ನೊಂದು ಮಗು ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ … Continued

ಧಾರವಾಡ : ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಇಬ್ಬರು ಸಾವು

ಧಾರವಾಡ: ಕಾರು ಪಲ್ಟಿಯಾಗಿ ಇಬ್ಬರು ಸಾವಿಗೀಡಾದ ಘಟನೆ ಧಾರವಾಡ ತಾಲೂಕಿನ ತೇಗೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತರನ್ನು ವಿನಯ ಹಿರೇಮಠ (24) ಹಾಗೂ ಸಂದೀಪ (29) ಎಂದು ಗುರುತಿಸಲಾಗಿದೆ. ಧಾರವಾಡದಿಂದ ದಾಬಾಕ್ಕೆ ಊಟಕ್ಕೆಂದು ಹೋಗಿದ್ದ ಇವರು ಊಟ ಮಾಡಿಕೊಂಡು ವಾಪಸ್‌ ಬರುತ್ತಿರುವಾಗ ಈ ದುರ್ಘಟನೆ ಸಂಭವಿಸಿದೆ. ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಓರ್ವ ಸ್ಥಳದಲ್ಲೇ … Continued

ಕಾರು ಅಪಘಾತ: ಕ್ರಿಕೆಟಿಗ ಪ್ರವೀಣಕುಮಾರ, ಪುತ್ರ ಪ್ರಾಣಾಪಾಯದಿಂದ ಪಾರು

ಮೀರತ್ : ಭಾರತದ ಮಾಜಿ ಕ್ರಿಕೆಟಿಗ ಪ್ರವೀಣಕುಮಾರ ಮತ್ತು ಅವರ ಮಗ ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರು ಸ್ವಲ್ಪದರಲ್ಲೇ ಪಾರಾಗಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಭಾರತ ತಂಡದ ಮಾಜಿ ವೇಗದ ಬೌಲರ್, ಉತ್ತರ ಪ್ರದೇಶದ ಮುಲ್ತಾನ್ ನಗರದ ನಿವಾಸಿಯಾಗಿದ್ದು, ಮಂಗಳವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ಮಗನೊಂದಿಗೆ ಪಾಂಡವ … Continued

ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾರು ಅಪಘಾತ

ಬೆಳಗಾವಿ : ಮಾಜಿ ಉಪಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರ ಕಾರು ಬುಧವಾರ ಬೆಳಗಾವಿ ಜಿಲ್ಲೆಯ ಹಾರೂಗೇರಿ ಬಳಿ ಪಲ್ಟಿಯಾಗಿದ್ದು, ವಿಧಾನ ಪರಿಷತ್‌ ಸದಸ್ಯ ಲಕ್ಷ್ಮಣ ಸವದಿ ಅಪಾಯದಿಂದ ಪಾರಾಗಿದ್ದಾರೆ. ಲಕ್ಷ್ಮಣ ಸವದಿ ಅವರಿದ್ದ ಕಾರು ರಾಯಬಾಗ ತಾಲೂಕು ಹಾರೂಗೇರಿ ಮತ್ತು ಹಿಡ್ಕಲ್ ಬಳಿ ಅಪಘಾತಕ್ಕೀಡಾಗಿದೆ.ಸವದಿ ಅವರು ಅಥಣಿಯಿಂದ ಬೆಳಗಾವಿಗೆ ತೆರಳುತ್ತಿದ್ದರು ಎಂದು … Continued