ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಪುತ್ರಿ ಬಗ್ಗೆ ನಕಲಿ ಪೋಸ್ಟ್ : ಯೂ ಟ್ಯೂಬರ್ ಧ್ರುವ ರಾಠಿ ವಿರುದ್ಧ ಪ್ರಕರಣ ದಾಖಲು

ಮುಂಬೈ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಪುತ್ರಿಯ ಕುರಿತು ‘ಎಕ್ಸ್‌’ನಲ್ಲಿ (ಟ್ವಿಟರ್‌) ನಕಲಿ ಸಂದೇಶವನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಯೂ ಟ್ಯೂಬರ್‌ ಧ್ರುವ ರಾಠಿ ವಿರುದ್ಧ ಮಹಾರಾಷ್ಟ್ರದ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಹಾರಾಷ್ಟ್ರ ಸೈಬರ್ ಪೊಲೀಸ್ ಇಲಾಖೆಯ ಪ್ರಕಾರ, @dhruvrahtee ಹ್ಯಾಂಡಲ್ ಹೊಂದಿರುವ ಎಕ್ಸ್‌ ಖಾತೆಯಲ್ಲಿ … Continued

ಮಹಿಳಾ ಆಯೋಗದ ಅಧ್ಯಕ್ಷರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ ; ಸಂಸದೆ ಮಹುವಾ ವಿರುದ್ಧ ಪ್ರಕರಣ ದಾಖಲು

ನವದೆಹಲಿ : ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದಕ್ಕಾಗಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ರೇಖಾ ಶರ್ಮಾ ಅವರ ದೂರಿನ ಆಧಾರದ ಮೇಲೆ, ಹೊಸ ಕ್ರಿಮಿನಲ್ ಕೋಡ್ ಭಾರತೀಯ ನ್ಯಾಯ ಸಂಹಿತಾ, ಸೆಕ್ಷನ್ 79 (ಮಹಿಳೆಯರ ನಮ್ರತೆಯನ್ನು ಅವಮಾನಿಸುವ … Continued

ಪ್ರಚೋದನಕಾರಿ ಹೇಳಿಕೆ: ಕೆ.ಎಸ್. ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲು

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಹೇಳಿಕೆ ನೀಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ದಾವಣಗೆರೆಯ ಬಡಾವಣೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‘ಕೆ.ಎಸ್. ಈಶ್ವರಪ್ಪ ಅವರು ಗುರುವಾರ ನಡೆದ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಜನರ ಮಧ್ಯೆ ಗಲಭೆಗಳಾಗಿ … Continued

ಕೇರಳ ಸ್ಫೋಟದ ಕುರಿತು ಹೇಳಿಕೆ: ಕೇಂದ್ರ ಸಚಿವರ ವಿರುದ್ಧ ಪ್ರಕರಣ ದಾಖಲು

ಕೇರಳದಲ್ಲಿ ಭಾನುವಾರ ನಡೆದ ಸರಣಿ ಸ್ಫೋಟದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಸಚಿವ ರಾಜೀವ ಚಂದ್ರಶೇಖರ ವಿರುದ್ಧ ಪ್ರಕರಣ ದಾಖಲಾಗಿದೆ. ಸಾಮಾಜಿಕ ದ್ವೇಷವನ್ನು ಹರಡಿದ ಆರೋಪದಡಿ ಸಚಿವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. “ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಅವರ ಮೇಲೆ ಆರೋಪ ಹೊರಿಸಲಾಗಿದೆ ಎಂದು … Continued

ಸುಳ್ಳು ಪೋಸ್ಟ್‌ ಮಾಡಿದ ಆರೋಪ : ಬಿಜೆಪಿ ಕಾರ್ಯಕರ್ತೆ ವಿರುದ್ಧ ಪ್ರಕರಣ ದಾಖಲು

ತುಮಕೂರು : ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ ಭಾರತದ ಬಾವುಟಕ್ಕಿಂತ ಎತ್ತರದಲ್ಲಿ ಪಾಕಿಸ್ತಾನದ ಬಾವುಟ ಹಾರಿಸಲಾಗಿದೆ ಎಂದು ಸುಳ್ಳು ಪೋಸ್ಟ್‌ ಹಂಚಿಕೊಂಡಿದ್ದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ ವಿರುದ್ಧ ಪೊಲೀಸರು ಗುರುವಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಕುಂತಲಾ ನಟರಾಜ ಅವರು, ಎಕ್ಸ್‌ ಖಾತೆಯಲ್ಲಿ ಹಾಕಿದ ಪೋಸ್ಟ್‌ನಲ್ಲಿ ಬೆಂಗಳೂರಿನ ಲುಲು ಶಾಪಿಂಗ್‌ ಮಾಲ್‌ನಲ್ಲಿ … Continued

ಕುಮಟಾ: ರಾಷ್ಟ್ರಧ್ವಜದಂತೆ ಕಾಣುವ ಧ್ವಜದಲ್ಲಿ ಬೇರೆ ಚಿಹ್ನೆ, ಗುರುತು ಬಳಸಿ ಈದ್ ಮಿಲಾದ್ ಮೆರವಣಿಗೆ, ಪ್ರಕರಣ ದಾಖಲು

 ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಿರ್ಜಾನ್‌ ಸಮೀಪ ತ್ರಿವರ್ಣ ಧ್ವಜಕ್ಕೆ ಅಪಮಾನ ಮಾಡಿದ ಶಂಕೆ ವ್ಯಕ್ತವಾಗಿದ್ದು ಈ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈದ್‌ ಮಿಲಾದ್‌ ದಿನ ಕುಮಟಾ ತಾಲೂಕಿನ ಮಿರ್ಜಾನ್‌ ಸಮೀಪ ರಾಷ್ಟ್ರ ಧ್ವಜದಂತೆ ಹೋಲುತ್ತಿರುವ ರೀತಿಯ ಧ್ವಜದ ಮೇಲೆ ಅರ್ಧ ಚಂದ್ರ, ಸ್ಟಾರ್, ಇತ್ಯಾದಿ ಗುರುತನ್ನು ಪ್ರದರ್ಶಿಸಲಾಗಿತ್ತು. ಈ ಘಟನೆ … Continued

ನಟ ಪ್ರಕಾಶ ರಾಜಗೆ ಜೀವ ಬೆದರಿಕೆ; ಯೂಟ್ಯೂಬ್ ಚಾನಲ್ ವಿರುದ್ಧ ದೂರು ದಾಖಲು

ಬೆಂಗಳೂರು : ತಮ್ಮ ಮತ್ತು ತಮ್ಮ ಕುಟುಂಬಕ್ಕೆ ಜೀವ ಬೆದರಿಕೆ ಹಾಕಲಾಗಿದೆ ಎಂದು ನಟ ಪ್ರಕಾಶ ರಾಜ ಅವರು ಬೆಂಗಳೂರಿನಲ್ಲಿ ಯೂಟ್ಯೂಬ್ ವಾಹಿನಿ ವಿರುದ್ಧ ದೂರು ದಾಖಲಿಸಿದ್ದಾರೆ. ಯೂಟ್ಯೂಬ್​ ಚಾನೆಲ್’ವೊಂದರಲ್ಲಿ ಎರಡು ವೀಡಿಯೊಗಳಲ್ಲಿ ಜೀವ ಬೆದರಿಕೆ ಹಾಕುವ ರೀತಿಯಲ್ಲಿ ಸಂದೇಶಗಳು ಪ್ರಸಾರವಾಗಿವೆ ಎಂದು ಪ್ರಕಾಶ ರಾಜ ಅವರು ದೂರನಲ್ಲಿ ಆರೋಪಿಸಿದ್ದಾರೆ. ಕೆಲ ದಿನಗಳ ಹಿಂದೆ ಯೂಟ್ಯೂಬ್ … Continued

ಬೆಂಗಳೂರು: ಯುವ ವಿಜ್ಞಾನಿಯ ಕಾರುಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿದ ದುಷ್ಕರ್ಮಿಗಳು ; ಪ್ರಕರಣ ದಾಖಲು

ಬೆಂಗಳೂರು: ಬೆಂಗಳೂರಿನಲ್ಲಿ ಯುವ ವಿಜ್ಞಾನಿಯೊಬ್ಬರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರಿಗೆ ಕಲ್ಲೆಸೆದು ಹಲ್ಲೆಗೆ ಯತ್ನಿಸಲಾಗಿದ್ದು, ಈ ಸಂಬಂಧ ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವಿಜ್ಞಾನಿ ಅಶುತೋಷ್ ಸಿಂಗ್ ಟ್ವೀಟ್‌ ಮೂಲಕ ತಿಳಿಸಿದ್ದಾರೆ. ವತಮ್ಮ ಕ್ವಿಡ್ ಕಾರಿನಲ್ಲಿ ರಾವತ್ತನಹಳ್ಳಿ ಮುಖ್ಯರಸ್ತೆಯಲ್ಲಿ ಹೊರಟಿದ್ದಾಗ ಬೆಂಗಳೂರಿನ ರಾವತ್ತನಹಳ್ಳಿ … Continued

ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರಗೆ ಅಶ್ಲೀಲ ವೀಡಿಯೋ ಕಾಲ್ ಮಾಡಿ ಬ್ಲ್ಯಾಕ್​ಮೇಲ್; ದೂರು ದಾಖಲು

ಬೆಂಗಳೂರು: ದಾವಣಗೆರೆ ಬಿಜೆಪಿ ಸಂಸದ ಜಿ.ಎಂ. ಸಿದ್ದೇಶ್ವರ ಅವರಿ​ಗೆ ಅಪರಿಚಿತ ಮಹಿಳೆಯೊಬ್ಬರು ಮೊದಲು ಮೆಸೇಜ್ ಮಾಡಿ ನಂತರ ಬೆತ್ತಲೆಯಾಗಿ ವೀಡಿಯೋ ಕಾಲ್ ಮಾಡಿ ಫೋಟೋ ತೆಗೆದು ಬ್ಲ್ಯಾಕ್​ಮೇಲ್ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂಸದರು ಪೊಲೀಸರಿಗೆ ದೂರು ನೀಡಿದ್ದಾರೆ. ಜಿ.ಎಂ. ಸಿದ್ದೇಶ್ವರ ಅವರು ಬೆಂಗಳೂರು ನಗರದ ಕಮರ್ಷಿಯಲ್​ ಸ್ಟ್ರೀಟ್ ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. … Continued

ಆರೆಸ್ಸೆಸ್ ಮಾಜಿ ಮುಖ್ಯಸ್ಥ ಗೋಲ್ವಾಲ್ಕರ್ ಬಗ್ಗೆ ವಿವಾದಾತ್ಮಕ ಪೋಸ್ಟ್ : ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ಪ್ರಕರಣ ದಾಖಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮಾಜಿ ಸರಸಂಘಚಾಲಕ ಎಂ.ಎಸ್. ಗೋಲ್ವಾಲ್ಕರ್ ಅವರ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಇಂದೋರ್ ಪೊಲೀಸರು ದಿಗ್ವಿಜಯ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಿದ ನಂತರ ಕಾಂಗ್ರೆಸ್ ನಾಯಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಸ್ಥಳೀಯ ವಕೀಲ ಹಾಗೂ ಆರೆಸ್ಸೆಸ್ ಕಾರ್ಯಕರ್ತ ರಾಜೇಶ್ ಜೋಶಿ … Continued