ಜಾತಿ ಗಣತಿ; ಶಾಲೆಗಳಿಗೆ ದಸರಾ ರಜೆ ವಿಸ್ತರಣೆ ಮಾಡಿದ ಸರ್ಕಾರ

ಬೆಂಗಳೂರು: ಜಾತಿ ಗಣತಿ ದಿನಾಂಕ ವಿಸ್ತರಣೆಯಾದ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಿಗೆ ಅಕ್ಟೋಬರ್‌ 8ರಿಂದ ಅಕ್ಟೋಬರ್ 18ರವರೆಗೆ ದಸರಾ ರಜೆಯನ್ನು ಸರ್ಕಾರ ವಿಸ್ತರಣೆ ಮಾಡಲಾಗಿದೆ. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ನಿರ್ಧಾರ ಪ್ರಕಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಶಾಶ್ವತ ಹಿಂದುಳಿದ ವರ್ಗಗಳ … Continued

ದೇಶದಲ್ಲಿ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರ ; ಬಿಜೆಪಿ ವಿರುದ್ಧ ವಸಂತ ಲದವಾ ವಾಗ್ದಾಳಿ

ಹುಬ್ಬಳ್ಳಿ : ಸ್ವಾತಂತ್ರ್ಯ ಬಂದ ನಂತರ ಮೊದಲ ಬಾರಿಗೆ ಜಾತಿಗಣತಿ ಕೈಗೊಂಡಿದ್ದು ಕಾಂಗ್ರೆಸ್ ಸರ್ಕಾರವೇ ಹೊರತು ಬಿಜೆಪಿ ಸರ್ಕಾರ ಅಲ್ಲ ಎಂದು ಕಾಂಗ್ರೆಸ್‌ ವಕ್ತಾರ ವಸಂತ ಲದವಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ೨೦೧೧ರಲ್ಲಿ ಭಾರತದ ಸಾಮಾಜಿಕ, ಆರ್ಥಿಕ ಜಾತಿ ಗಣತಿ ನಡೆಸಲಾಗಿದೆ. ೨೦೧೦ರಲ್ಲಿ ಸಂಸತ್ತಿನ ಉಭಯ … Continued

ಜಾತಿ ಗಣತಿ ವರದಿಗೆ ವಿರೋಧ, ಕೊನೆಗೂ ಮಣಿದ ಸರ್ಕಾರ : ʼಕೈʼಕಮಾಂಡ್ ಸೂಚನೆಯಂತೆ ಮರು ಸಮೀಕ್ಷೆಗೆ ನಿರ್ಧಾರ ; ಸಿಎಂ ಸಿದ್ದರಾಮಯ್ಯ ಘೋಷಣೆ

ನವದೆಹಲಿ: ಈ ಹಿಂದೆ ನಡೆಸಲಾಗಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ (ಜಾತಿ ಗಣತಿ)ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ನಿರ್ಧರಿಸಿದೆ. ಜಾತಿ ಗಣತಿ ಕುರಿತಾಗಿ ರಾಜ್ಯ ಸರ್ಕಾರಕ್ಕೆ ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರಿಗೆ ಸೂಚನೆ ನೀಡಿದ ಬೆನ್ನಲ್ಲೇ ದೆಹಲಿಯಲ್ಲೇ ಮುಖ್ಯಮಂತ್ರಿ … Continued

ಜಾತಿ ಗಣತಿ ವರದಿ: ತೀರ್ಮಾನಕ್ಕೆ ಬರಲಾಗದೆ ಮುಗಿದ ಸಚಿವ ಸಂಪುಟ ಸಭೆ

ಬೆಂಗಳೂರು : ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ ಜಾತಿ ಗಣತಿ (Caste Census) ವರದಿ ಬಗ್ಗೆ ನಿರ್ಧರಿಸಲು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಮುಕ್ತಾಯವಾಗಿದೆ. ಹಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಸ್ಪಷ್ಪ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲʼʼ … Continued

ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದೆ : ಡಾ.ಪ್ರಭಾಕರ ಕೋರೆ

ಬೆಳಗಾವಿ : ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯ ಸರ್ಕಾರವು ಸ್ವೀಕರಿಸಿರುವ ಜಾತಿ ವರದಿ ದತ್ತಾಂಶವು ಅವೈಜ್ಞಾನಿಕವಾಗಿದೆ. ವೀರಶೈವ ಲಿಂಗಾಯತ ಸಮುದಾಯವು ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ. ಜಾತಿ ಸಂದರ್ಭದಲ್ಲಿ ರಾಜಕೀಯವನ್ನು ಮಾಡಬಾರದು. ನೈಜವಾದ ವರದಿಯಾಗಿದ್ದರೆ … Continued

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸೇವಾವಧಿ ಎರಡು ತಿಂಗಳು ವಿಸ್ತರಣೆ

ಬೆಂಗಳೂರು: ಜಾತಿ ಗಣತಿ ವರದಿ ಕುರಿತಂತೆ ವ್ಯಾಪಕ ಚರ್ಚೆಗಳಾಗುತ್ತಿರುವ ಮಧ್ಯೆಯೇ ರಾಜ್ಯ ಸರ್ಕಾರ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅಧಿಕಾರಾವಧಿಯನ್ನು ವಿಸ್ತರಿಸಿದೆ ಎಂದು ವರದಿಯಾಗಿದೆ. ಹಿಂದುಳಿದ ವರ್ಗಗಳ ಆಯೋಗದ (Backward Classes Commission) ಅಧ್ಯಕ್ಷ ಮತ್ತು ಸದಸ್ಯರ ಅವಧಿ ಎರಡು ತಿಂಗಳು ವಿಸ್ತರಣೆ ಮಾಡುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ … Continued

ಜಾತಿ ಗಣತಿ ಕುರಿತು ರಾಹುಲ್ ಗಾಂಧಿ ಹೇಳಿಕೆಗೆ ಕಾಂಗ್ರೆಸ್ ಸಂಸದನ ಭಿನ್ನ ನಿಲುವು

ನವದೆಹಲಿ : ಕಾಂಗ್ರೆಸ್‌ ರಾಜ್ಯಸಭಾ ಸದಸ್ಯ ಮತ್ತು ಕಾಂಗ್ರೆಸ್‌ನ ರಾಷ್ಟ್ರೀಯ ವಕ್ತಾರ ಅಭಿಷೇಕ ಮನು ಸಿಂಘ್ವಿ ಅವರು “ಜಿತ್ನಿ ಅಬಾದಿ ಉತ್ನಾ ಹಕ್” (ಎಷ್ಟು ಜನಸಂಖ್ಯೆಯೋ, ಅಷ್ಟು ಹಕ್ಕು) ಬಗ್ಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನಿಲುವಿಗಿಂತ ಭಿನ್ನವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಅಭಿಷೇಕ ಮನು ಸಿಂಗ್ವಿ ಅವರು X ನಲ್ಲಿನ ಪೋಸ್ಟ್‌ನಲ್ಲಿಜನಸಂಖ್ಯಾ ಆಧಾರಿತ ಹಕ್ಕು’ಗಳ ಬಗ್ಗೆ … Continued

ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ.ಕೆ. ಹರಿಪ್ರಸಾದ ಒತ್ತಾಯ

ಬೆಂಗಳೂರು : ಬಿಹಾರದಲ್ಲಿ ನಡೆಸಿದ ಜಾತಿಗಣತಿ ಮಾದರಿಯಲ್ಲಿ ಕರ್ನಾಟಕದಲ್ಲೂ ರಾಜ್ಯ ಸರ್ಕಾರ ನಡೆಸಿದ್ದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದ್ದಾರೆ. ಕರ್ನಾಟಕವು 2017 ರಲ್ಲಿ ರಾಜ್ಯವು ನಡೆಸಿದ ಜಾತಿ ಗಣತಿಯ ವರದಿ ಬಿಡುಗಡೆ ಮಾಡುವಂತೆ ಅವರು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ … Continued