ಬಂದ್‌ ಮಧ್ಯೆ ಕರ್ನಾಟಕಕ್ಕೆ ಮತ್ತೆ ಶಾಕ್ : ಅಕ್ಟೋಬರ್‌ 15ರ ವರೆಗೆ ತಮಿಳುನಾಡಿಗೆ ನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ ಸಿಡಬ್ಲ್ಯುಎಂಎ ಆದೇಶ

ನವದೆಹಲಿ: ಕಾವೇರಿ ನದಿ ನೀರಿಗಾಗಿ ಇಂದು ಶುಕ್ರವಾರ ಕರ್ನಾಟಕ ಬಂದ್ ನಡೆಯುತ್ತಿರುವ ಮಧ್ಯೆಯೇ ದೆಹಲಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ(CWMA) ಸಭೆಯಲ್ಲಿ ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಪಾಲಿಸಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ಆದೇಶಿಸಿದೆ. ಮೂರು ದಿನಗಳ ಹಿಂದೆ ನಡೆದ ಸಭೆಯ ನಂತರ ಕಾವೇರಿ ನೀರು … Continued

ಕರ್ನಾಟಕ ಬಂದ್ : ನಾಳೆ ಬೆಂಗಳೂರಿನ ಶಾಲಾ-ಕಾಲೇಜಿಗೆ ರಜೆ ಘೋಷಣೆ

ಬೆಂಗಳೂರು : ಶುಕ್ರವಾರ (ಸೆಪ್ಟೆಂಬರ್ 29) ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ವಿವಿಧ ಸಂಘಟನೆಗಳು 29-09-2023 ರಂದು ಕರ್ನಾಟಕ ಬಂದ್ ಘೋಷಿಸಿವೆ. ಹೀಗಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎ.ದಯಾನಂದ ತಿಳಿಸಿದ್ದಾರೆ. ತಮಿಳುನಾಡಿಗೆ … Continued

ಕಾವೇರಿ : ರೈತರ ಪ್ರತಿಭಟನೆಗೆ ನಿರ್ಮಲಾನಂದನಾಥ ಸ್ವಾಮೀಜಿ ಸಾಥ್

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದ ನಂತರ ರಾಜ್ಯದಲ್ಲಿ ಪ್ರತಿಭಟನೆ ಜೋರಾಗಿದೆ. ಹಲವು ಕಡೆ ರೈತರು, ವಿವಿಧ ಸಂಘಟನೆಗಳು ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಡ್ಯದಲ್ಲಿ ಪ್ರತಿಭಟನೆ ಜೋರಾಗಿದ್ದು, ಈ ಪ್ರತಿಭಟನೆಗೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಬೆಂಬಲ ಸೂಚಿಸಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ಪ್ರತಿಭಟನೆ ನಡೆಸುತ್ತಿದ್ದು … Continued

ಜಲ ವಿವಾದಗಳ ಕುರಿತು ನಡೆದ ಸರ್ವಪಕ್ಷ ಸಭೆ : ಕಾನೂನು ಹೋರಾಟಕ್ಕೆ ವಿಪಕ್ಷಗಳ ಬೆಂಬಲ

ಬೆಂಗಳೂರು : ಕಾವೇರಿ, ಮೇಕೆದಾಟು ಮತ್ತು ಮಹದಾಯಿ ಜಲ ವಿವಾದಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯಲ್ಲಿ ರಾಜ್ಯ ಸರ್ಕಾರದ ಕಾನೂನು ಹೋರಾಟಕ್ಕೆ ವಿಪಕ್ಷಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿವೆ. ರಾಜಕೀಯ ಒತ್ತಡಕ್ಕಾಗಿ ಕೇಂದ್ರದ ಬಳಿಗೆ ಸರ್ವಪಕ್ಷದ ನಿಯೋಗವನ್ನು ಕರೆದುಕೊಂಡು ಹೋಗಲು ಸಹಕಾರ ನೀಡುವಂತೆ ಮುಖ್ಯಮಂತ್ರಿ ಮನವಿ ಮಾಡಿದ್ದಾರೆ. … Continued

ಕಾವೇರಿ ಜಲ ವಿವಾದ: ತಮಿಳುನಾಡು ಸರ್ಕಾರದ ಅರ್ಜಿ ವಿಚಾರಣೆಗೆ ಪೀಠ ರಚನೆಗೆ ಸುಪ್ರೀಂಕೋರ್ಟ್‌ ಒಪ್ಪಿಗೆ

ನವದೆಹಲಿ: ಕಾವೇರಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ತುರ್ತು ನಿರ್ದೇಶನ ನೀಡುವಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಮನವಿಯನ್ನು ಆಲಿಸಿದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಅವರು, ಸೋಮವಾರ (ಆಗಸ್ಟ್ 21) ಪೀಠವನ್ನು ರಚಿಸುವುದಾಗಿ ಹೇಳಿದ್ದಾರೆ. ತಮಿಳುನಾಡಿನ ಪರ ಹಿರಿಯ ವಕೀಲ ಮುಕುಲ್ ರೋಹಟಗಿ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅಮಿತ ಆನಂದ್ ತಿವಾರಿ ವಾದ ಮಂಡಿಸಿದ್ದರು. … Continued