ಡಿ ಕೆ ಶಿವಕುಮಾರ ವಿರುದ್ಧ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ: ಆಕ್ಷೇಪಣೆ ಸಲ್ಲಿಸಲು ಸಿಬಿಐಗೆ ಕಾಲಾವಕಾಶ ನೀಡಿದ ಹೈಕೋರ್ಟ್‌

posted in: ರಾಜ್ಯ | 0

ಬೆಂಗಳೂರು: ಆದಾಯ ಮೀರಿದ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಕರ್ನಾಟಕ ಹೈಕೋರ್ಟ್ಕಾಲಾವಕಾಶ ನೀಡಿದೆ. ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ ಸಲ್ಲಿಸಿರುವ … Continued

ಐಎಂಎ ವಂಚನೆ ಪ್ರಕರಣ: ಸಿಬಿಐ, ಇಡಿ ಜೊತೆ ಸಮನ್ವಯಕ್ಕೆ ಸಕ್ಷಮ ಪ್ರಾಧಿಕಾರಕ್ಕೆ ಹೈಕೋರ್ಟ್‌ ನಿರ್ದೇಶನ

posted in: ರಾಜ್ಯ | 0

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರವು ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದೊಂದಿಗೆ ಸಮನ್ವಯ ಸಾಧಿಸಿ ಮುಂದಿನ ಅಗತ್ಯ ಕ್ರಮ ಕೈಗೊಳ್ಳಬಹುದು ಎಂದು ಮಂಗಳವಾರ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದ್ದು, ಈ ಸಂಬಂಧದ ಎಲ್ಲಾ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ವಿಲೇವಾರಿ ಮಾಡಿದೆ. ಐಎಂಎ ಹಗರಣವನ್ನು ಸಿಬಿಐಗೆ ವಹಿಸಬೇಕು ಹಾಗೂ ಹೂಡಿಕೆದಾರರ ಹಣ … Continued

ಚುನಾವಣೋತ್ತರ ಹಿಂಸಾಚಾರ:ಸಿಬಿಐ ತನಿಖೆ ವಹಿಸಿದ ಕೋಲ್ಕತ್ತಾ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ. ಬಂಗಾಳ ಸರ್ಕಾರ

ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೋತ್ತರ ಹಿಂಸಾಚಾರದ ವೇಳೆ ಸಂಭವಿಸಿರುವ ಕೊಲೆ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ತನಿಖೆ ನಡೆಸುವಂತೆ ಕೇಂದ್ರೀಯ ತನಿಖಾ ಸಂಸ್ಥೆಗೆ ನಿರ್ದೇಶಿಸಿರುವ ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಕೋಲ್ಕತ್ತಾ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿರುವ ಮನವಿಯ ವಿಚಾರಣಾ ಸಂಖ್ಯೆಯನ್ನು … Continued

ಅನಿಲ ದೇಶ್ಮುಖ್‌ ವಿರುದ್ಧ ಪ್ರಕರಣ ನೋಂದಾಯಿಸಿದ ಸಿಬಿಐ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್ಮುಖ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪದ ಬಗ್ಗೆ ತನಿಖೆ ನಡೆಸಲು ಕೇಂದ್ರೀಯ ತನಿಖಾ ದಳ (ಸಿಬಿಐ) ಮಂಗಳವಾರ ಪ್ರಾಥಮಿಕ ತನಿಖೆ ನೋಂದಾಯಿಸಿದೆ. ಸಿಬಿಐ ವಕ್ತಾರ ಆರ್.ಸಿ.ಜೋಶಿ, “ಸಿಬಿಐ 2021 ರ ಏಪ್ರಿಲ್ 5 ರ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸಂಬಂಧಿಸಿದಂತೆ ಪಿಇ ನೋಂದಾಯಿಸಿದೆ” ಎಂದು ಹೇಳಿದ್ದಾರೆ. ದೆಹಲಿಯ … Continued

ಡಿಎಚ್‌ಎಫ್‌ಎಲ್, ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲು

2.60 ಲಕ್ಷಕ್ಕೂ ಹೆಚ್ಚು ಕಾಲ್ಪನಿಕ ಗೃಹ ಸಾಲ ಖಾತೆಗಳನ್ನು ರಚಿಸಿದ ಆರೋಪದ ಮೇಲೆ ಡಿಎಚ್‌ಎಫ್‌ಎಲ್ ಮತ್ತು ಅದರ ನಿರ್ದೇಶಕರ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ. ಅವುಗಳಲ್ಲಿ ಕೆಲವು ಪ್ರಧಾನ್ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ನಲ್ಲಿ ಬಡ್ಡಿ ಸಹಾಯಧನ ಪಡೆಯಲು ಬಳಸಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಹಗರಣ ಪೀಡಿತ ಡಿಎಚ್‌ಎಫ್‌ಎಲ್‌ನ ಪ್ರಸ್ತುತ ಮಂಡಳಿಯಿಂದ … Continued

ಶಾರದಾ ಗ್ರುಪ್‌ ಹಗರಣ: ಸೆಬಿ ಅಧಿಕಾರಿಗಳ ನಿವಾಸಗಳ ಮೇಲೆ ಸಿಬಿಐ ದಾಳಿ

ಮುಂಬೈ: ಶಾರದಾ ಗ್ರೂಪ್ ಮಾಡಿದ ವಂಚನೆಗೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಮುಂಬೈನ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್ ಬೋರ್ಡ್ ಆಫ್ ಇಂಡಿಯಾದ (ಸೆಬಿ) ಮೂವರು ಅಧಿಕಾರಿಗಳ ಕಚೇರಿಗಳು ಮತ್ತು ನಿವಾಸಗಳ ಮೇಲೆ ದಾಳಿ ನಡೆಸಿದೆ. ಮುಖ್ಯ ಜನರಲ್ ಮ್ಯಾನೇಜರ್ (ಸಿಜಿಎಂ) ಮತ್ತು ಜನರಲ್ ಮ್ಯಾನೇಜರ್ (ಜಿಎಂ) ದರ್ಜೆಯ ಅಧಿಕಾರಿಗಳಿಗೆ ಸಂಬಂಧಿಸಿದ ಆರು ಸ್ಥಳಗಳಲ್ಲಿ ಶೋಧ … Continued

ತನ್ನ ವರ್ಗಾವಣೆ ವಿರುದ್ಧ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪರಂಬೀರ್‌ ಸಿಂಗ್‌, ದೇಶ್ಮುಖ್ ವಿರುದ್ಧ ಸಿಬಿಐ ತನಿಖೆಗೆ ಒತ್ತಾಯ

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧ ಹೊರಿಸಿರುವ ಭ್ರಷ್ಟಾಚಾರದ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ. ಇತ್ತೀಚೆಗೆ ಮುಂಬೈ ಪೊಲೀಸ್ ಆಯುಕ್ತರಾಗಿದ್ದ ಸಿಂಗ್, ಕಳೆದ ವಾರ ಅವರ ವರ್ಗಾವಣೆ ಕಾನೂನುಬಾಹಿರ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದು … Continued

ಯೋಗೀಶ್‌ ಗೌಡ ಕೊಲೆ ಪ್ರಕರಣ :ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಜಾ ಮಾಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌

posted in: ರಾಜ್ಯ | 1

ಬೆಂಗಳೂರು: ಧಾರವಾಡ ಜಿಪಂ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ವಜಾ ಮಾಡಿದೆ. ಈ ಪ್ರಕರದಲ್ಲಿ ತಮಗೆ ಜಾಮೀನು ನೀಡುವಂತೆ ಕೋರಿ ವಿನಯ್‌ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅಕ್ಷೇಪಣೆ ಸಲ್ಲಿಸಿದ್ದ ಸಿಬಿಐ, ಯೋಗೀಶ್‌ … Continued

ಸೇನೆ ಅಧಿಕಾರಿಗಳ ನೇಮಕದಲ್ಲಿ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆನಿರ್ಧಾರ

ಪಂಜಾಬ್‌ನ ಕಪೂರ್ಥಲಾ ಜಿಲ್ಲೆಯಲ್ಲಿ ನಡೆಯುತ್ತಿರುವ ಸೇನಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಭ್ರಷ್ಟಾಚಾರದ ಆರೋಪಗಳ ಕುರಿತು ಸಿಬಿಐ ತನಿಖೆ ನಡೆಸಲು ಭಾರತೀಯ ಸೇನೆ ನಿರ್ಧರಿಸಿದೆ. ಮೂರು ಸೇವೆಗಳಲ್ಲಿ ಅಧಿಕಾರಿಗಳಾಗಿ ಆಯ್ಕೆಯಾಗಲು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸೇವಾ ಆಯ್ಕೆ ಕೇಂದ್ರಗಳು ಸೇವಾ ಆಯ್ಕೆ ಮಂಡಳಿಯ ಪರೀಕ್ಷೆಗಳನ್ನು ನಡೆಸುತ್ತವೆ. ಸೇನಾ ಗುಪ್ತಚರ ಸಂಸ್ಥೆಗಳ ಪೂರ್ವಭಾವಿ ಕಾರ್ಯಾಚರಣೆಯ ಆಧಾರದ ಮೇಲೆ, ಸೇವೆಗಳ ಆಯ್ಕೆ … Continued

ಸಿಡಿಗಾಗಿ ೧೫ ಕೋಟಿ ರೂ.ಖರ್ಚು, ನಾಲ್ಕು ತಂಡಗಳಿಂದ ಕೆಲಸ: ಬಾಲಚಂದ್ರ ಜಾರಕಿಹೊಳಿ ಮತ್ತೊಂದು ಬಾಂಬ್‌..!

posted in: ರಾಜ್ಯ | 0

ಬೆಂಗಳೂರು:ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿದ್ದ ದೂರುದಾರ ದಿನೇಶ್ ಕಲ್ಲಹಳ್ಳಿ ದೂರು ವಾಪಸ್ ಪಡೆದ ಬೆನ್ನಲ್ಲೇ ಮಾಜಿ ಸಚಿವ ಹಾಗೂ ರಮೇಶ ಜಾರಕಿಹೊಳಿ ಸಹೋದರ ಬಾಲಚಂದ್ರ ಜಾರಕಿಹೊಳಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಕೆಕೆ ಗೆಸ್ಟ್ ಹೌಸ್ ನಲ್ಲಿ ತುರ್ತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸಿಡಿ ನಂಟು ಬೆಳಗಾವಿಯಿಂದ ಬೆಂಗಳೂರಿನ ವರೆಗೂ ಇರುವ … Continued