ಕೇರಳದ ವಿದ್ಯಾರ್ಥಿ ಶವವಾಗಿ ಪತ್ತೆಯಾಗುವ ಮುನ್ನ ಹಿರಿಯ ವಿದ್ಯಾರ್ಥಿಗಳು, ಸಹಪಾಠಿಗಳಿಂದ ನಿರಂತರ 29 ಗಂಟೆಗಳ ಕಾಲ ಚಿತ್ರಹಿಂಸೆ : ವರದಿ

ಮಾಧ್ಯಮ ವರದಿಯ ಪ್ರಕಾರ ಫೆಬ್ರವರಿ 18 ರಂದು ಕೇರಳದ ವಯನಾಡ್ ಜಿಲ್ಲೆಯ ಕಾಲೇಜು ಹಾಸ್ಟೆಲ್‌ನ ಸ್ನಾನಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ 20 ವರ್ಷದ ಪಶುವೈದ್ಯಕೀಯ ವಿದ್ಯಾರ್ಥಿ ಸಿದ್ಧಾರ್ಥನ್ ಜೆ.ಎಸ್. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಹಿರಿಯ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳಿಂದ ಸುಮಾರು 29 ಗಂಟೆಗಳ ಕಾಲ “ನಿರಂತರವಾಗಿ” ಹಲ್ಲೆ ಚಿತ್ರಹಿಂಸೆಗೆ ಒಳಗಾಗಿದ್ದರು. ಶುಕ್ರವಾರ ಸಂಜೆ ಕೇರಳದ … Continued

ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆ ನಡೆಸಲು ʼಲೋಕಪಾಲʼ ಆದೇಶ

ನವದೆಹಲಿ: ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ವಿರುದ್ಧ ಭ್ರಷ್ಟಾಚಾರ ತಡೆ ಕಾಯಿದೆಯಡಿ (ಪಿಸಿಎ) ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಲೋಕಪಾಲವು ಮಂಗಳವಾರ ಸಿಬಿಐಗೆ ನಿರ್ದೇಶನ ನೀಡಿದೆ. ಮಹುವಾ ಮೊಯಿತ್ರಾ ವಿರುದ್ಧದ ಆರೋಪಗಳು ಗಂಭೀರವಾಗಿದ್ದು ಬಲವಾದ ಪುರಾವೆಗಳಿವೆ ಎಂದು ನ್ಯಾಯಾಂಗ ಸದಸ್ಯೆ ನ್ಯಾ. ಅಭಿಲಾಷಾ ಕುಮಾರಿ, ಸದಸ್ಯರಾದ ಅರ್ಚನಾ ರಾಮಸುಂದರಂ ಹಾಗೂ ಮಹೇಂದರ್ ಸಿಂಗ್ ಅವರನ್ನೊಳಗೊಂಡ … Continued

ಇ.ಡಿ.ಅಧಿಕಾರಿಗಳ ಮೇಲೆ ಹಲ್ಲೆ ಪ್ರಕರಣ: ಕಲ್ಕತ್ತಾ ಹೈಕೋರ್ಟ್ ತೀರ್ಪಿನಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಅಮಾನತುಗೊಂಡ ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕ ಶಹಜಹಾನ್ ಶೇಖ್‌ಗೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಲು ತೆರಳಿದ್ದ ಜಾರಿ ನಿರ್ದೇಶನಾಲಯದ (ಇ ಡಿ) ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ಕಲ್ಕತ್ತಾ ಹೈಕೋರ್ಟ್ ನೀಡಿದ್ದ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಇದೇ ವೇಳೆ ನ್ಯಾಯಮೂರ್ತಿಗಳಾದ … Continued

ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶದ ನಂತರ ಸಂದೇಶ್‌ಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಸಿಬಿಐಗೆ ಹಸ್ತಾಂತರ

ಸಂದೇಶ್‌ಖಾಲಿ ಪ್ರಕರಣದ ಉಚ್ಛಾಟಿತ ಟಿಎಂಸಿ ನಾಯಕ ಮತ್ತು ಆರೋಪಿ ಶೇಖ್ ಷಹಜಹಾನ್ ನನ್ನು ಕೋಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಬಂಗಾಳ ಸರ್ಕಾರಕ್ಕೆ ಬುಧವಾರ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. ಬುಧವಾರ ಮುಂಜಾನೆ, ಹೈಕೋರ್ಟ್ ಪಶ್ಚಿಮ ಬಂಗಾಳ ಸಿಐಡಿಗೆ ನಿಂದನೆ ನೋಟಿಸ್ ಜಾರಿಗೊಳಿಸಿತು ಮತ್ತು ಷಹಜಹಾನ್‌ನನ್ನು ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸಲು ವಿಫಲವಾದ ನಂತರ ಎರಡು … Continued

ಸಂದೇಶಖಾಲಿ ಪ್ರಕರಣ : ಷಹಜಹಾನ್ ಶೇಖ್ ನನ್ನು ಸಿಬಿಐಗೆ ಹಸ್ತಾಂತರಿಸಿ ; ಬಂಗಾಳ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ಆದೇಶ

ಕೋಲ್ಕತ್ತಾ : ಜನವರಿ 5 ರಂದು ಸಂದೇಶಖಾಲಿಯಲ್ಲಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮೇಲೆ ನಡೆದ ದಾಳಿ ಪ್ರಕರಣದ ತನಿಖೆಯನ್ನು ಪಶ್ಚಿಮ ಬಂಗಾಳ ಪೊಲೀಸರಿಂದ ಸಿಬಿಐಗೆ ಹಸ್ತಾಂತರಿಸಬೇಕು ಎಂದು ಕಲ್ಕತ್ತಾ ಹೈಕೋರ್ಟ್ ಮಂಗಳವಾರ ಆದೇಶಿಸಿದೆ, ರಾಜ್ಯ ಪೊಲೀಸರು “ಸಂಪೂರ್ಣವಾಗಿ ಪಕ್ಷಪಾತಿ” ಎಂದು ಹೇಳಿದೆ. ದಾಳಿಗೆ ಸಂಬಂಧಿಸಿದಂತೆ ಫೆಬ್ರವರಿ 29 ರಂದು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದ ಟಿಎಂಸಿ … Continued

ʼಸುದೀಪ ಬ್ಯಾನರ್ಜಿಯನ್ನು ಬಂಧಿಸಿ…ಸಿಬಿಐ, ಇಡಿ ತನಿಖೆ ನಡೆಸಿʼ : ತಮ್ಮದೇ ಪಕ್ಷದ ಸಂಸದನ ಬಂಧನಕ್ಕೆ ಒತ್ತಾಯಿಸಿದ ಟಿಎಂಸಿ ನಾಯಕ…!

ಕೋಲ್ಕತ್ತಾ : ಕಲ್ಲಿದ್ದಲು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮದೇ ಪಕ್ಷದ ಸಂಸದ ಸುದೀಪ ಬ್ಯಾನರ್ಜಿ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ.) ಮತ್ತು ಸಿಬಿಐ ತನಿಖೆ ನಡೆಸಬೇಕು ಎಂದು ತೃಣಮೂಲ ಕಾಂಗ್ರೆಸ್‌ ಪಕ್ಷದ ಮಾಜಿ ವಕ್ತಾರ ಕುನಾಲ ಘೋಷ್ ಶನಿವಾರ ಒತ್ತಾಯಿಸಿದ್ದಾರೆ. X ನಲ್ಲಿ ಈ ಬಗ್ಗೆ ಪೋಸ್ಟ್‌ ಮಾಡಿರುವ ಅವರು, ಸಂಸದ ಸುದೀಪ ಬ್ಯಾನರ್ಜಿ ಬ್ಯಾಂಕ್ … Continued

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿ ಖುಲಾಸೆ ಪ್ರಶ್ನಿಸಿದ ಸಿಬಿಐ: ಹೈಕೋರ್ಟ್‌ ನಿಂದ ಆರೋಪಿಗೆ ನೋಟಿಸ್‌ ಜಾರಿ

ಬೆಂಗಳೂರು: ವಿಶೇಷ ನ್ಯಾಯಾಲಯವು ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು ಖುಲಾಸೆಗೊಳಿಸಿದ್ದನ್ನು ಬದಿಗೆ ಸರಿಸುವಂತೆ ಕೋರಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಸಂತೋಷ ರಾವ್‌ಗೆ ಕರ್ನಾಟಕ ಹೈಕೋರ್ಟ್‌ ಈಚೆಗೆ ನೋಟಿಸ್‌ ಜಾರಿಗೊಳಿಸಿದೆ. ಸೌಜನ್ಯ ಕೊಲೆ ಪ್ರಕರಣದಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಆರೋಪಿ ಸಂತೋಷ ರಾವ್‌ ಅವರನ್ನು 2023ರ ಜೂನ್‌ … Continued

ನನ್ನನ್ನು ರಾಜಕೀಯವಾಗಿ ಮುಗಿಸಲು ದೊಡ್ಡ ಪಿತೂರಿ ನಡೆಯುತ್ತಿದೆ : ಡಿ.ಕೆ.ಶಿವಕುಮಾರ

ಬೆಂಗಳೂರು : ನನ್ನನ್ನು ರಾಜಕೀಯವಾಗಿ ಮುಗಿಸಬೇಕು ಎಂದು ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಮೇಲೆ ದೊಡ್ಡ ಪಿತೂರಿ ನಡೆಯುತ್ತಿದೆ. ಸರ್ಕಾರ ಈಗಾಗಲೇ ಕೇಸ್ ವಿತ್‍ಡ್ರಾ ಮಾಡಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನೋಟಿಸ್ ನೀಡಿದೆ. ಪ್ರಕರಣದ ತನಿಖೆಗೆ ನೀಡಿದ ಅನುಮತಿಯನ್ನು … Continued

ಡಿಸಿಎಂ ಡಿಕೆ ಶಿವಕುಮಾರ ಹೂಡಿಕೆ ವಿವರ ನೀಡಿ : ಕೇರಳದ ಜೈಹಿಂದ್ ಚಾನೆಲ್ ​ಗೆ ಸಿಬಿಐ ನೋಟಿಸ್

ನವದೆಹಲಿ : ಕಾಂಗ್ರೆಸ್ ನಾಯಕ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಕೇರಳ ಮೂಲದ ಜೈಹಿಂದ್ ವಾಹಿನಿಯಲ್ಲಿ ಮಾಡಿರುವ ಹೂಡಿಕೆಯ ವಿವರಗಳನ್ನು ನೀಡುವಂತೆ ಸಿಬಿಐ ನೋಟಿಸ್ ಜಾರಿಮಾಡಿದೆ. ಜೈಹಿಂದ್ ಕಮ್ಯುನಿಕೇಷನ್ಸ್ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್.ಶಿಜು ಅವರಿಗೆ ಜನವರಿ 11 ರಂದು ತನಿಖಾಧಿಕಾರಿಗಳು ಕೋರಿದ ಅಗತ್ಯ ದಾಖಲೆಗಳೊಂದಿಗೆ … Continued

ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದಿದ್ದನ್ನು ಪ್ರಶ್ನಿಸಿದ ಯತ್ನಾಳ ಅರ್ಜಿ ವಿಚಾರಣೆ ಜನವರಿ 5ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರ ಜನವರಿ 5ಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ವಿಚಾರಣೆಯನ್ನು ಮುಂದೂಡಿದೆ. ಅರ್ಜಿ … Continued