ಡಿಕೆ ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ಹಿಂಪಡೆದ ರಾಜ್ಯ ಸರ್ಕಾರ : ನಿರ್ಧಾರ ಪ್ರಶ್ನಿಸಿ ಹೈಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದ ಶಾಸಕ ಯತ್ನಾಳ
ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ ಅನುಮತಿ ಹಿಂಪಡೆದಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಕರ್ನಾಟಕ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. … Continued