ಕೊಲ್ಲಾಪುರ ಮಹಾಲಕ್ಷ್ಮೀ ಮೊರೆ ಹೋದ ರಮೇಶ ಜಾರಕಿಹೊಳಿ

ಬೆಂಗಳೂರು: ಇತ್ತ ಸಿಡಿ ಪ್ರಕರಣ ಯುವತಿ ಬೆಂಗಳೂರಿನಲ್ಲಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸುತ್ತಿದ್ದರೆ ಈ ಪ್ರಕರಣದ ಆರೋಪಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಂಗಳವಾರ (ಮಾರ್ಚ್ 30) ಮಹಾರಾಷ್ಟ್ರದ ಕೊಲ್ಲಾಪುರ ಮಹಾಲಕ್ಷ್ಮೀ ದೇಗುಲಕ್ಕೆ ತೆರಳಿದ್ದರು. ದೇವರ ದರ್ಶನ ಪಡೆದು ರಮೇಶ್ ಜಾರಕಿಹೊಳಿ ವಾಪಸ್ ಹೊರಟಿದ್ದಾರೆ. ಅರ್ಧ ಗಂಟೆಗಳ ಕಾಲ ದೇವಿಯ ಸನ್ನಿಧಾನದಲ್ಲಿದ್ದು ವಿಶೇಷ ಪೂಜೆ ಸಲ್ಲಿಸಿದ … Continued

ಸಿಡಿ ಪ್ರಕರಣದ ಯುವತಿ ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಲು ಕೋರ್ಟ್ ಅನುಮತಿ, ಯಾವುದೇ ಕ್ಷಣದಲ್ಲಿ ಹಾಜರು

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿ ಕೋರ್ಟ್ ಗೆ ಹಾಜರಾಗಿ ಹೇಳಿಕೆ ದಾಖಲಿಸಲು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಅನುಮತಿ ನೀಡಿದೆ. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪರ ವಕೀಲ ಜಗದೀಶ್ ಯುವತಿಗೆ ಎಸ್‌ಐಟಿ ಮೇಲೆ ಹಾಗೂ ಪೊಲೀಸರ ಮೇಲೆ ಯಾವುದೇ ನಂಬಿಕೆ ಇಲ್ಲ ಹಾಗಾಗಿ ಕೋರ್ಟ್ ಮುಂದೆ … Continued

ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಸಿಡಿ ಪ್ರಕರಣದ ಯುವತಿಗೆ ಕೋರ್ಟ್‌ ಅನುಮತಿ, ಯಾವಾಗ ಹಾಜರಾಗ್ತಾಳೆ..?

ಬೆಂಗಳೂರು:ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ಸಿಡಿಯಲ್ಲಿನ ಯುವತಿ ಕೋರ್ಟ್ ಮುಂದೆ ಹಾಜರಾಗಿ, ನ್ಯಾಯಾಧೀಶರ ಎದುರು ತನ್ನ ಹೇಳಿಕೆ ದಾಖಲಿಸಲು ಸೋಮವಾರ ಕೋರ್ಟ್ ಅನುಮತಿ ನೀಡಿದೆ. ಇದರಿಂದಾಗಿ ಸಿಡಿ ಪ್ರಕರಣಕ್ಕೆ ಈಗ ಬಹುದೊಡ್ಡ ತಿರುವು ಸಿಕ್ಕಂತಾಗಿದೆ. ಸೋಮವಾರ ಸಿಡಿ ಸಂತ್ರಸ್ತ ಯುವತಿ ವಕೀಲ ಜಗದೀಶ್ ಅವರು ಕೋರ್ಟ್‌ ಮುಂದೆ ಸಂತ್ರಸ್ತ ಯುವತಿ ಹಾಜರಾಗಿ … Continued

ಮಗಳ ಹೇಳಿಕೆಗೆ ವಿರುದ್ಧವಾದ ಹೇಳಿಕೆ: ಪೋಷಕರು ಆರೋಪಿ ಕಸ್ಟಡಿಯಲ್ಲಿರುವುದು ಸ್ಪಷ್ಟ ಎಂದ ಕಾಂಗ್ರೆಸ್

ಬೆಂಗಳೂರು: ಮಗಳು ಕೋರ್ಟ್‌ ಮುಂದೆ ಹಾಜರಾಗಿ ಹೇಳಿಕೆ ನೀಡುವುದು ಖಚಿತವಾಗುತ್ತಿದ್ದಂತೆ ಸಿಡಿ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ ಬೆನ್ನಲ್ಲೇ ಕಿಡಿಕಾರಿರುವ ಕಾಂಗ್ರೆಸ್, ವಿಜಯಪುರದ ಯುವತಿ ಪೋಷಕರು ಬೆಳಗಾವಿಯಲ್ಲಿ ಏಕಿದ್ದಾರೆ? ಮಗಳ ಹೇಳಿಕೆಗೆ ವಿರುದ್ಧವಾಗಿ ಹೇಳಿಕೆ ನೀಡುತ್ತಿರುವುದನ್ನು ಗಮನಿಸಿದರೆ ಪೋಷಕರು ಆರೋಪಿಯ ಕಸ್ಟಡಿಯಲ್ಲಿರುವಂತೆ ಕಾಣುತ್ತಿದೆ ಎಂದು ಕಾಂಗ್ರೆಸ್‌ ತಿರುಗೇಟು ನೀಡಿದೆ. ಸರಣಿ ಟ್ವೀಟ್ ಮಾಡಿರುವ ರಾಜ್ಯ … Continued

ಸಿಡಿ ಪ್ರಕರಣ: ನನ್ನ ಮಗಳು ಬೇರೆಯವರ ಒತ್ತಡದಲ್ಲಿದ್ದಾಳೆ, ಅವಳು ನೀಡುವ ಹೇಳಿಕೆ ಪರಿಗಣಿಸಬೇಡಿ ಎಂದ ಯುವತಿ ತಂದೆ

ಬೆಳಗಾವಿ: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಪೋಷಕರು ದಿಢೀರ್ ಸುದ್ದಿಗೋಷ್ಠಿ ನಡೆಸಿದ್ದು, ನನ್ನ ಮಗಳು ಬೇರೆಯವರ ಒತ್ತಡಕ್ಕೆ ಸಿಲುಕಿದ್ದಾಳೆ. ಹೀಗಾಗಿ ಅವಳ ಹೇಳಿಕೆಗಳನ್ನು ಪರಿಗಣನೆಗೆ ತೆಗೆದುಕೊಳ್ಳಬಾರದು ಎಂದು ಹೇಳಿದ್ದಾರೆ. ನನ್ನ ಮಗಳನ್ನು ರಾಜಕೀಯ ದಾಳವಾಗಿ ಬಳಸಿಕೊಂಡಿದ್ದಾರೆ. ಮೊದಲು ನಮ್ಮ ಮಗಳು ಅಲ್ಲಿಂದ ಹೊರಬರಬೇಕು. ಆಕೆಯ ಮೇಲೆ ಡಿ.ಕೆ.ಶಿವಕುಮಾರ್ ಕಡೆಯವರು ಒತ್ತಡ ಹೇರಿ ಹೇಳಿಕೆಗಳನ್ನು ಕೊಡಿಸುತ್ತಿದ್ದಾರೆ. ಮೊದಲು … Continued

ಸಿಡಿ ಪ್ರಕರಣ ಬೇರೆ ರಾಜ್ಯಕ್ಕೆ ವರ್ಗಾಯಿಸುವಂತೆ ಸುಪ್ರೀಂಕೋರ್ಟ್‌ ಮೆಟ್ಟಿಲೇರಲು ಯುವತಿ ಪರ ವಕೀಲರ ತಂಡ ನಿರ್ಧಾರ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೋಳಿ ಜೊತೆ ಸಿಡಿಯಲ್ಲಿರುವ ಕಾಣಿಸಿಕೊಂಡ ಯುವತಿಯ ಪರವಾಗಿರುವ ವಕೀಲರ ತಂಡವು ಪ್ರಕರಣವನ್ನು ಬೇರೆ ರಾಜ್ಯಕ್ಕೆ ವರ್ಗಾಯಿಸಲು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ತಿರ್ಮಾನಿಸಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಬಿಜೆಪಿ ನಾಯಕ ಪ್ರಭಾವಶಾಲಿಯಾಗಿದ್ದು ಯುವತಿ ತನ್ನ ಸುರಕ್ಷತೆ ಬಗ್ಗೆ ಆತಂಕಗೊಂಡಿದ್ದಾಳೆ ಎಂಬ ಕಾರಣದಿಂದ ವಕೀಲರ ತಂಡ ಈ ಅಭಿಪ್ರಾಯಕ್ಕೆ ಬಂದಿದೆ ಎನ್ನಲಾಗಿದೆ. ವಕೀಲರಲ್ಲೊಬ್ಬರಾದ … Continued

ಸಿಡಿ ಪ್ರಕರಣ; ಯುವತಿ ಬಂದು ದೂರು ನೀಡದೆ ಯಾರನ್ನೇ ಆದರೂ ಬಂಧಿಸಲು ಸಾಧ್ಯವೇ?:ಸಚಿವ ಜೋಶಿ

ಬೆಂಗಳೂರು: ಮಾಜಿ ಸಚಿ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ಸರ್ಕಾರ ಸಂಪೂರ್ಣ ಸ್ವಾತಂತ್ರ್ಯ ಕೊಟ್ಟಿದೆ. ಪೊಲೀಸರ ತನಿಖೆಗೆ ಸಹಕರಿಸುವುದು ಎಲ್ಲರ ಕರ್ತವ್ಯ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ಯಾರನ್ನು ಬಂಧಿಸಬೇಕು ಯಾರನ್ನು ಬಿಡಬೇಕು ಎಂಬುದು ಎಸ್‌ಐಟಿಗೆ ಬಿಟ್ಟ … Continued

ಸಿಡಿ ಪ್ರಕರಣ: ವಿಚಾರಣೆಗೆ ರಮೇಶ ಜಾರಕಿಹೊಳಿ ಹಾಜರು

ಬೆಂಗಳೂರು: ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಎಸ್‌ಐಟಿ ವಿಚಾರಣೆಗೆ ಸೋಮವಾರ ಹಾಜರಾಗಿದ್ದಾರೆ. ವಿಚಾರಣೆ ಆರಂಭವಾಗಬೇಕಿದೆ. ಈ ಸಿಡಿ ಪ್ರಕರಣ ಎಸ್‌ಐಟಿಗೆ ವರ್ಗಾವಣೆಯಾಗಬೇಕಿದ್ದು, ಕಬ್ಬನ್‌ಪಾರ್ಕ್ ಠಾಣೆಯಲ್ಲೇ ಪ್ರಕರಣವಿರುವ ಕಾರಣ, ಟೆಕ್ನಿಕಲ್ ವಿಂಗ್‌ಗೆ ಕಬ್ಬನ್ ಪಾರ್ಕ್ ಇನ್‌ಸ್ಪೆಕ್ಟರ್ ಮಾರುತಿ ವಿಚಾರಣೆ ನಡೆಸಲಿದ್ದಾರೆ. ಕೇಂದ್ರ ವಲಯ ಡಿಸಿಪಿ ಅನುಚಿತ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಅಶ್ಲೀಲ … Continued

ಸಿಡಿ ಯುವತಿಯಿಂದ ಹೈಕೋರ್ಟಿಗೆ ಬರೆದ ಪತ್ರದ ವಿಷಯ ಗಾಬರಿ ತರಿಸುವಂತಿದೆ ಎಂದ ಸಿದ್ದರಾಮಯ್ಯ

ಬೆಂಗಳೂರು: ಹಲವು ವಿಡಿಯೋಗಳನ್ನು ಬಿಡುಗಡೆ ಮಾಡಿರುವ ಸಿಡಿ ಸಂತ್ರಸ್ತೆ, ಇನ್ನೂ ಒಂದೆ ಹೆಜ್ಜೆ ಮುಂದೆ ಹೋಗಿ, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯವರಿಗೆ ಪತ್ರವನ್ನು ಬರೆದಿದ್ದಾರೆ ಎನ್ನುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಸಿಡಿ ಹಗರಣದ ಯುವತಿ ತನಗೆ ಪ್ರಾಣ ಭಯ ಇದೆ ಎಂದು ರಾಜ್ಯದ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಬರೆದಿದ್ದಾರೆನ್ನಲಾದ ಪತ್ರ ಗಾಬರಿ … Continued

ಆರೋಪಿ ಬಂಧಿಸದೆ ಯುವತಿ ಹಾಜರಾಗಲು ಭಯಮುಕ್ತ ವಾತಾವರಣ ಸಾಧ್ಯವಿಲ್ಲ; ಯುವತಿ ಪರ ವಕೀಲ ಜಗದೀಶ್

ಬೆಂಗಳೂರು: ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಸೋಮವಾರ ನ್ಯಾಯಾಲಯದ ಮುಂದೆ ಹಾಜರಾಗಿ ನ್ಯಾಯಾಧೀಶರ ಮುಂದೆಯೇ ಹೇಳಿಕೆಗಳನ್ನು ದಾಖಲಿಸಲಿದ್ದಾಳೆ. ಆದರೆ ಆಕೆ ಬಂದು ಹೇಳಿಕೆಗಳನ್ನು ದಾಖಲಿಸಲು ಒಳ್ಳೆಯ ವಾತಾವರಣ ಕಲ್ಪಿಸಬೇಕು ಎಂದು ಸಿಡಿ ಯುವತಿ ಪರ ವಕೀಲ ಜಗದೀಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದಲ್ಲಿ ಯುವತಿ ಹೇಳಿಕೆ ರೆಕಾರ್ಡ್ ಮಾಡಲು ಅನುಮತಿ ಕೇಳುತ್ತಿದ್ದೇವೆ. ಯುವತಿಗೆ ಸೂಕ್ತ … Continued