ನನ್ನ ಬಳಿ ಯಾವುದೇ ಜನಪ್ರತಿನಿಧಿಗಳ ಸಿಡಿ ಇಲ್ಲ:ಮುಲಾಲಿ

ವಿಜಯಪುರ: ಜನಪ್ರತಿನಿಧಿಗಳಿಗೆ ಸಂಬಂಧಿಸಿದ ಯಾವುದೇ ಸಿಡಿಗಳು ನನ್ನ ಬಳಿ ಇಲ್ಲ ಎಂದು ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಹೇಳಿದ್ದಾರೆ. ಭಾನುವಾರ ವಿಜಯಪುರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸಿಡಿ ಹೊರಬಂದಿರುವಂತೆ ಇನ್ನೂ ಹಲವಾರು ಜನಪ್ರತಿನಿಧಿಗಳ ಇಂತಹ ಸಿಡಿಗಳು ಇರಬಹುದು ಎಂದು ಹೇಳಿಕೆ ನೀಡಿದ್ದೇನೆಯೇ ಹೊರತು ನನ್ನ ಬಳಿ ಸಿಡಿ ಎಂದು … Continued

ಮಾಧ್ಯಮದಲ್ಲಿ ಪ್ರಸಾರವಾಗಿದ್ದನ್ನು ಹಿಂಪಡೆಯಲು ಸಾಧ್ಯವೇ? :ಸಿದ್ದರಾಮಯ್ಯ ಪ್ರಶ್ನೆ

ತುಮಕೂರು: ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರುದಾರ ದಿನೇಶ್ ಕಲ್ಲಹಳ್ಳಿ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ನೀಡಿದ್ದ ದೂರನ್ನು ವಾಪಸ್ಸು ಪಡೆದುಕೊಂಡಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಭಾನುವಾರ ತುಮಕೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅವರು ದೂರು ಹಿಂಪಡೆದಿರಬಹುದು. ಆದರೆ ಟಿವಿಯಲ್ಲಿ ಪ್ರಸಾರ ಆಗಿದ್ದನ್ನು ಹಿಂಪಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದರು. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, … Continued

ದೂರು ವಾಪಸ್‌, ಸರ್ಕಾರ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬಹುದು: ಎಚ್‌ಡಿಕೆ

ಕೋಲಾರ: ದಿನೇಶ್ ಕಲ್ಹಳ್ಳಿ ಯಾವ ಕಾರಣಕ್ಕಾಗಿ ದೂರು ಹಿಂಪಡೆದಿದ್ದಾರೆ ಎಂಬುದು ತಿಳಿದಿಲ್ಲ. ಮಾಜಿ ಮುಖ್ಯಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಪ್ರಕರಣದ ಬಗ್ಗೆ ಸರ್ಕಾರಕ್ಕೆ ಹೊಣೆಗಾರಿಕೆಯಿದ್ದು, ಸರ್ಕಾರವೇ ಈ ಪ್ರಕರಣದಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಬಹುದು. ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಅಸಹ್ಯಕರ ಘಟನೆಗಳು‌ ನಡೆಯುತ್ತಿವೆ. ಸರ್ಕಾರವು ಜನತೆಗೆ ವಿಶ್ವಾಸ ಮೂಡಿಸುವ‌ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ. ದಿನೇಶ … Continued

ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ

ಬೆಂಗಳೂರು: ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾಧ್ಯಮದವರಿಗೆ ಮನವಿ ಮಾಡಿದರು. ಸಿಡಿ ಪ್ರಕರಣ ಸಂಬಂಧ ಬೆಂಗಳೂರಿನಲ್ಲಿ  ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮನವಿ ಮಾಡಿಕೊಂಡಿದ್ದಾರೆ. ​ ಸಿಡಿ ಪ್ರಕರಣ ಸಂಬಂಧ ನೀಡಿದ್ದ ದೂರನ್ನು ದಿನೇಶ್​ ಕಲ್ಲಹಳ್ಳಿ ವಾಪಸ್ ಪಡೆದಿದ್ದಾರೆ. ಹೀಗಾಗಿ ಆಕೆಯನ್ನು ಸಂತ್ರಸ್ತೆ ಎಂದು ಕರೆಯಬೇಡಿ … Continued

ದೂರು ಹಿಂಪಡೆದಿದ್ದಕ್ಕೆ ಕಾರಣ ನೀಡಿದ ದಿನೇಶ ಕಲ್ಹಳ್ಳಿ

ಬೆಂಗಳೂರು: ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ  ಬೆಂಗಳೂರಿನ ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಹಳ್ಳಿ ಕೇಸ್ ಹಿಂಪಡೆದಿದ್ದು, ಅದಕ್ಕೆ ಕಾರಣವನ್ನು ಅವರು ಬಹಿರಂಗ ಪಡಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಹಳ್ಳಿ, ನಾನು ನ್ಯಾಯಕ್ಕಾಗಿ ಹೋರಾಟ ಮಾಡಿದ್ದೆ. ಆದರೆ … Continued

ಸಿಡಿ ಹಗರಣದಲ್ಲಿ ಅನವಶ್ಯಕ ನನ್ನನ್ನು ಎಳೆದು ತರಬೇಡಿ

ಹುಬ್ಬಳ್ಳಿ: ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾದ ಬೆನ್ನಲ್ಲೇ ಈ ಪ್ರಕರಣದಲ್ಲಿ ತನ್ನ ಹೆಸರನ್ನು ಅನಗತ್ಯವಾಗಿ ತರಲಾಗುತ್ತಿದೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನನ್ನ ಹೆಸರು ವಿನಾಕಾರಣ ಎಳೆದು ತರಲಾಗುತ್ತಿದೆ.ತಾನು ಈ ಬಗ್ಗೆ ಏನೂ ಮಾತನಾಡುವುದಿಲ್ಲ. … Continued

ಸಂಪುಟದ ರಕ್ಷಣೆಗೆ ನೀವು ತಡೆಯಾಜ್ಞೆ ತರುವುದಿಲ್ಲವೇ: ಬಿಎಸ್‌ವೈಗೆ ಕಾಂಗ್ರೆಸ್‌ ವ್ಯಂಗ್ಯ

ಬೆಂಗಳೂರು: ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಕಣ್ಣಿನಲ್ಲಿ ನೋಡಲಾಗದ ಸಿಡಿ ಎಂದು ಹೇಳಿದ್ದಾರೆ. ಅದರ ವಿರುದ್ಧ ನೀವು ತಡೆಯಾಜ್ಞೆ ತರುವುದಿಲ್ಲವೇ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಾಂಗ್ರೆಸ್‌ ಲೇವಡಿ ಮಾಡಿದೆ. ಟ್ವಿಟರ್‌ನಲ್ಲಿ ಕಾಂಗ್ರೆಸ್ ಈ ವಿಷಯದಲ್ಲಿ ಬಿಜೆಪಿಯ ವಿರುದ್ಧ ವಾಗದಾಳಿ ನಡೆಸಿದ್ದು, ಹಲವಾರು ಪ್ರಶ್ನೆಗಳನ್ನು ಮುಂದಿಟ್ಟಿದೆ. ಕುಂಬಳಕಾಯಿ ಕಳ್ಳ ಎಂದರೆ ಬಿಜೆಪಿಯ ಸಚಿವರು ಏಕೆ … Continued

ಸಿಡಿ ಹಗರಣ: ಮಹಿಳಾ ಆಯೋಗದಿಂದ ಪ್ರಕರಣ ದಾಖಲು

ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಕನ್ನಡ ರಕ್ಷಣಾ ವೇದಿಕೆ ಹಾಗೂ ವಕೀಲರು ನೀಡಿದ ಎರಡು ದೂರನ್ನು ಆಧರಿಸಿ, ರಾಜ್ಯ ಮಹಿಳಾ ಆಯೋಗವು ರಮೇಶ್ ಜಾರಕಿಹೊಳಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಿಕೊಂಡಿದೆ. ಈ ಕುರಿತಂತೆ ಮಾಹಿತಿ ನೀಡಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮೀಳಾ ನಾಯ್ಡು, ಕನ್ನಡ ರಕ್ಷಣಾ … Continued

ರಮೇಶ ಜಾರಕಿಹೊಳಿ ಸಿಡಿ ಪ್ರಸಾರ ಮಾಡದಂತೆ ಕೋರ್ಟ್‌ ತಡೆ

ಬೆಂಗಳೂರು : ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ಸಿಡಿ ಪ್ರಕರಣ ಸಂಬಂಧ, ಸಿಡಿಯಲ್ಲಿನ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ರಮೇಶ್ ಜಾರಕಿಹೊಳಿ ನ್ಯಾಯಾಲಯದಿಂದ ತಡೆ ತಂದಿದ್ದಾರೆ. ಸಿಡಿ ದೃಶ್ಯಾವಳಿಗಳನ್ನು ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ. ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಬಿಡುಗಡೆಯಾದ ನಂತರದಲ್ಲಿ ರಮೇಶ ಜಾರಕಿಹೊಳಿ ಸಚಿವ ಸ್ಥಾನಕ್ಕೆ … Continued

ಸಿಡಿ ಹಗರಣ: ಇದು ಹನಿ ಟ್ರ್ಯಾಪ್‌ ಎಂದ ಶಾಸಕ ಕುಮಟಳ್ಳಿ

ಬೆಂಗಳೂರು: ರಾಸಲೀಲೆ ಸಿಡಿ ಪ್ರಕರಣದಲ್ಲಿ ರಾಜೀನಾಮೆ ನೀಡಿದ ರಮೇಶ ಜಾರಕಿಹೊಳಿ ಬೆಂಬಲಕ್ಕೆ ಈಗ ಶಾಸಕ ಮಹೇಶ ಕುಮಟಳ್ಳಿ ಬಂದಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುವತಿ ಹಾಗೂ ರಮೇಶ್ ಜಾರಕಿಹೊಳಿ ಇಬ್ಬರೂ ಪ್ರಬುದ್ಧರು, ಯುವತಿಯ ಸಮ್ಮತಿ ಇರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಗೊತ್ತಾಗುತ್ತದೆ. ಮೇಲ್ನೋಟಕ್ಕೆ ಇದು ಹನಿಟ್ರ್ಯ‍ಾಪ್ ಎಂದು ಅನಿಸುತ್ತದೆ ಎಂದು ಅವರು ಹೇಳಿದರು. ಹಿಂದೆ ರಾಜ … Continued