ಇರಾನ್‌ ಜೊತೆಗಿನ ಒಪ್ಪಂದ ಮುಗಿದ ಅಧ್ಯಾಯ ಎಂದು ಟ್ರಂಪ್‌ ಘೋಷಣೆ ; ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ

ಅಂಕಾರಾ (ಟರ್ಕಿ): ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತೊಮ್ಮೆ ತೀವ್ರಗೊಂಡಿದ್ದು, ಪರಸ್ಪರ ದಾಳಿಗಳ ಬಳಿಕ ಇರಾನ್‌ ಜೊತೆಗಿನ ಮಧ್ಯಂತರ ಕದನ ವಿರಾಮ (Ceasefire) ‘ಅಂತ್ಯಗೊಂಡಿದೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ (ಜುಲೈ 8) ಘೋಷಿಸಿದ್ದಾರೆ. ಇರಾನ್‌ನ ನಾಯಕತ್ವವನ್ನು “ಅನಾರೋಗ್ಯಪೀಡಿತರು” ಎಂದು ಟೀಕಿಸಿದ ಅವರು, “ಅವರ ಜೊತೆ ಮಾತುಕತೆ ನಡೆಸುವುದೇ ಸಮಯ ವ್ಯರ್ಥ” … Continued

ಮತ್ತೆ ಯುದ್ಧ ಭೀತಿ..? ಸೌದಿ ಅರೇಬಿಯಾಕ್ಕೆ 8,000 ಸೈನಿಕರು, ಯುದ್ಧ ವಿಮಾನಗಳನ್ನು ರವಾನಿಸಿದ ಪಾಕಿಸ್ತಾನ

ಇಸ್ಲಾಮಾಬಾದ್: ಇರಾನ್ ಯುದ್ಧದಲ್ಲಿ ಸಂಧಾನಕಾರನ ಪಾತ್ರ ವಹಿಸುತ್ತಿರುವ ಬೆನ್ನಲ್ಲೇ, ಪಾಕಿಸ್ತಾನವು ಸೌದಿ ಅರೇಬಿಯಾದ ಜೊತೆ ಸೇನಾ ಸಹಕಾರವನ್ನು ಮತ್ತಷ್ಟು ತೀವ್ರಗೊಳಿಸಿದೆ. ಸೆಪ್ಟೆಂಬರ್ 2025 ರಲ್ಲಿ ಮಾಡಿಕೊಂಡ ಪರಸ್ಪರ ರಕ್ಷಣಾ ಒಪ್ಪಂದದ ಅನ್ವಯ, ಪಾಕಿಸ್ತಾನವು ಸೌದಿ ಅರೇಬಿಯಾಗೆ ಬರೋಬ್ಬರಿ 8,000 ಸೈನಿಕರು, ಪೂರ್ಣ ಪ್ರಮಾಣದ ಫೈಟರ್ ಜೆಟ್ ಸ್ಕ್ವಾಡ್ರನ್ ಮತ್ತು ವಾಯು ರಕ್ಷಣಾ ವ್ಯವಸ್ಥೆಯನ್ನು ರವಾನಿಸಿದೆ ಎಂದು … Continued

ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ದಾಳಿ ಮಾಡಿ ವಶಕ್ಕೆ ಪಡೆದ ಇರಾನ್‌

ತೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕದನ ವಿರಾಮ ವಿಸ್ತರಿಸಿದ ಬೆನ್ನಲ್ಲೇ, ಇರಾನ್‌ನ ಅರೆಸೇನಾ ಪಡೆ ‘ರೆವಲ್ಯೂಷನರಿ ಗಾರ್ಡ್’ ಬುಧವಾರ ಹಾರ್ಮುಜ್ ಜಲಸಂಧಿಯಲ್ಲಿ ಮೂರು ವಿದೇಶಿ ಹಡಗುಗಳ ಮೇಲೆ ದಾಳಿ ನಡೆಸಿ ಅವುಗಳನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಬೆಳವಣಿಗೆಯು ಪಶ್ಚಿಮ ಏಷ್ಯಾದಲ್ಲಿ ಮತ್ತೊಮ್ಮೆ ಯುದ್ಧದ ಭೀತಿಯನ್ನು ಹೆಚ್ಚಿಸಿದೆ. ಇರಾನ್ ಸರ್ಕಾರಿ ಸ್ವಾಮ್ಯದ ದೂರದರ್ಶನದ … Continued

ಹಾರ್ಮುಜ್ ಜಲಸಂಧಿ ದಾಟುವ ತೈಲದ ಪ್ರತಿ ಬ್ಯಾರೆಲ್‌ಗೆ 1 ಡಾಲರ್ ಸುಂಕ; ಕ್ರಿಪ್ಟೋ ಕರೆನ್ಸಿಯಲ್ಲೇ ಪಾವತಿಸಿ ಎಂದ ಇರಾನ್‌

ತೆಹ್ರಾನ್: ಅಮೆರಿಕ ಮತ್ತು ಇರಾನ್ ನಡುವೆ ಏರ್ಪಟ್ಟಿರುವ ಎರಡು ವಾರಗಳ ಕದನ ವಿರಾಮ ಒಪ್ಪಂದದ ಬೆನ್ನಲ್ಲೇ, ಜಗತ್ತಿನ ಪ್ರಮುಖ ವ್ಯಾಪಾರ ಮಾರ್ಗವಾದ ‘ಹಾರ್ಮುಜ್ ಜಲಸಂಧಿ’ಯನ್ನು ಇರಾನ್ ಸಂಚಾರಕ್ಕೆ ಮುಕ್ತಗೊಳಿಸಿದೆ. ಬುಧವಾರ ಎರಡು ಬೃಹತ್ ಸರಕು ಸಾಗಣೆ ಹಡಗುಗಳು ಈ ಮಾರ್ಗದ ಮೂಲಕ ಯಶಸ್ವಿಯಾಗಿ ಸಂಚರಿಸಿವೆ ಎಂದು ಸಮುದ್ರ ಸಂಚಾರ ಮೇಲ್ವಿಚಾರಣಾ ಸಂಸ್ಥೆ ‘ಮೆರೈನ್ ಟ್ರಾಫಿಕ್’ ತಿಳಿಸಿದೆ. … Continued

ಶೇ.50 ರಷ್ಟು ಸುಂಕ ಹೇರಿಕೆ ; ಇರಾನಿಗೆ ಶಸ್ತ್ರಾಸ್ತ್ರ ಪೂರೈಸುವ ರಾಷ್ಟ್ರಗಳಿಗೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

ವಾಷಿಂಗ್ಟನ್: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ ಪರ ನಿಲ್ಲುವ ರಾಷ್ಟ್ರಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್‌ಗೆ ಮಿಲಿಟರಿ ಉಪಕರಣಗಳನ್ನು ಪೂರೈಸುವ ಯಾವುದೇ ದೇಶವು ಅಮೆರಿಕಕ್ಕೆ ರಫ್ತು ಮಾಡುವ ಎಲ್ಲಾ ಸರಕುಗಳ ಮೇಲೆ ಶೇ. 50 ರಷ್ಟು ಸುಂಕವನ್ನು (Tariff) … Continued

ಭಾರತ-ಪಾಕಿಸ್ತಾನ ಪರಮಾಣು ಯುದ್ಧ ನಿಲ್ಲಿಸಲು ‘ಸಹಾಯ’ ಮಾಡಿದ್ದೇವೆ…ಕದನ ವಿರಾಮಕ್ಕೆ ‘ದೊಡ್ಡ ಕಾರಣ’ ವ್ಯಾಪಾರ ಎಂದ ಅಮೆರಿಕ ಅಧ್ಯಕ್ಷ ಟ್ರಂಪ್‌

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಉಂಟಾದ ಉದ್ವಿಗ್ನತೆಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ನಿಲ್ಲಿಸಲು ಉಭಯ ರಾಷ್ಟ್ರಗಳು ಒಪ್ಪಿಕೊಂಡ ಕೆಲವು ದಿನಗಳ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಕದನ ವಿರಾಮಕ್ಕೆ ಮಧ್ಯವರ್ತಿಯಾಗಿ ಕಾರ್ಯನಿರ್ವಹಿಸಿದ ಕೀರ್ತಿಯನ್ನು ಪಡೆದುಕೊಂಡಿದ್ದಾರೆ. ಅಮೆರಿಕ-ಚೀನಾ ವ್ಯಾಪಾರ ಒಪ್ಪಂದವನ್ನು ಘೋಷಿಸುವ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಟ್ರಂಪ್, “ಶನಿವಾರ, ನನ್ನ ಆಡಳಿತವು … Continued

ವೀಡಿಯೊ ; ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ; ಕಾಶ್ಮೀರದ ಹಲವೆಡೆ ಡ್ರೋಣ್‌ ದಾಳಿ ; ತಿರುಗೇಟು ನೀಡಲು ಸೇನೆಗೆ ಮುಕ್ತ ಅಧಿಕಾರ ನೀಡಿದ ಭಾರತ

ನವದೆಹಲಿ: ಮಿಲಿಟರಿ ಕಾರ್ಯಾಚರಣೆ ನಿಲ್ಲಿಸಲು ಭಾರತ ಮತ್ತು ಪಾಕಿಸ್ತಾನ ಮಾಡಿಕೊಂಡ ಕದನ ವಿರಾಮ ಒಪ್ಪಂದವನ್ನು ಪಾಕಿಸ್ತಾನ ಉಲ್ಲಂಘಿಸಿದೆ ಎಂದು ಶನಿವಾರ ರಾತ್ರಿ ಭಾರತ ಹೇಳಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ ಮಿಶ್ರಿ ಅವರು ತಡರಾತ್ರಿ ಪತ್ರಿಕಾಗೋಷ್ಠಿಯಲ್ಲಿ, ಎರಡೂ ದೇಶಗಳ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಮಾತನಾಡಿ ಕದನ ವಿರಾಮ ಒಪ್ಪಂದಕ್ಕೆ ಬಂದ ಗಂಟೆಗಳ ನಂತರ ಪಾಕಿಸ್ತಾನ ಆ … Continued

15 ತಿಂಗಳ ಗಾಜಾ ಯುದ್ಧ ಕೊನೆಗೊಳಿಸುವ ಒಪ್ಪಂದಕ್ಕೆ ಇಸ್ರೇಲ್-ಹಮಾಸ್ ಒಪ್ಪಿಗೆ: ವರದಿ

ಗಾಜಾದಲ್ಲಿ ಈವರೆಗೆ 46,000 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾದ 15 ತಿಂಗಳ ಸುದೀರ್ಘ ಯುದ್ಧವನ್ನು ಕೊನೆಗೊಳಿಸಲು ಇಸ್ರೇಲ್ ಮತ್ತು ಹಮಾಸ್ ಗುಂಪು ಕದನ ವಿರಾಮ ಒಪ್ಪಂದಕ್ಕೆ ಬಂದಿವೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್‌ ವರದಿ ಮಾಡಿದೆ. ಅಕ್ಟೋಬರ್ 7, 2023 ರಂದು ಹಮಾಸ್ ಉಗ್ರಗಾಮಿಗಳು ಇಸ್ರೇಲ್‌ನ ಮೇಲೆ ರಾಕೆಟ್‌ಗಳಿಂದ … Continued

ಇಸ್ರೇಲ್-ಹಮಾಸ್ ಯುದ್ಧ: ಹಮಾಸ್‌ ಉಗ್ರರಿಂದ 50 ಒತ್ತೆಯಾಳುಗಳ ಬಿಡುಗಡೆಗೆ ಒಪ್ಪಿಗೆ, 4 ದಿನ ಕದನ ವಿರಾಮಕ್ಕೆ ಇಸ್ರೇಲ್‌ ಅನುಮೋದನೆ

ಜೆರುಸಲೇಮ್‌: ಹಮಾಸ್ ವಶದಲ್ಲಿರುವ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 50 ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್ ಗುಂಪು ಒಪ್ಪಿದ್ದು, ಇದಕ್ಕೆ ಪ್ರತಿಯಾಗಿ ಗಾಜಾದಲ್ಲಿ 4 ದಿನಗಳ ಕದನ ವಿರಾಮಕ್ಕೆ ಇಸ್ರೇಲ್‌ ಅನುಮೋದಿಸಿದೆ. ಅಕ್ಟೋಬರ್ 7 ರಂದು ಇಸ್ರೇಲ್‌ ಮೇಲೆ ದಾಳಿ ಮಾಡಿದಾಗ ಹಮಾಸ್‌ ಗುಂಪು ಅಪಹರಿಸಿ ಗಾಜಾಕ್ಕೆ ಕರೆದೊಯ್ದ ಸುಮಾರು 50 ಒತ್ತೆಯಾಳುಗಳನ್ನು ಬಿಡುಗಡೆ ಮಾಡುವ … Continued

“ಕದನ ವಿರಾಮ, ರಾಜತಾಂತ್ರಿಕತೆ”: ಜಿ20 ಶೃಂಗಸಭೆಯಲ್ಲಿ ಉಕ್ರೇನ್ ಬಿಕ್ಕಟ್ಟಿಗೆ ಪ್ರಧಾನಿ ಮೋದಿ ಸಲಹೆ

ನವದೆಹಲಿ: ಉಕ್ರೇನ್‌ನಲ್ಲಿ ಕದನ ವಿರಾಮ ಮತ್ತು ರಾಜತಾಂತ್ರಿಕತೆಯ ದಾರಿಗೆ ಮರಳಲು ಜಗತ್ತು ಒಂದು ಮಾರ್ಗವನ್ನು ಕಂಡುಕೊಳ್ಳಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಾಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಹೇಳಿದ್ದಾರೆ. 2ನೇ ಮಹಾಯುದ್ಧದ ಭೀಕರತೆಯನ್ನು ಪ್ರಸ್ತಾಪಿಸಿದ ಅವರು,”ಕಳೆದ ಶತಮಾನದಲ್ಲಿ, ಎರಡನೇ ಮಹಾಯುದ್ಧವು ಜಗತ್ತಿನಲ್ಲಿ ವಿನಾಶವನ್ನುಂಟುಮಾಡಿತು. ಅದರ ನಂತರ, ಅಂದಿನ ನಾಯಕರು ಶಾಂತಿಯ ಹಾದಿಯನ್ನು ಹಿಡಿಯಲು … Continued