ದೇಶಾದ್ಯಂತ ʼಡಿಜಿಟಲ್ ಬಂಧನ’ ವಂಚನೆ ಪ್ರಕರಣಗಳು : ಸಿಬಿಐಗೆ ತನಿಖೆ ನಡೆಸಲು ಆದೇಶಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೇಶದಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ‘ಡಿಜಿಟಲ್ ಬಂಧನ’ (Digital Arrest) ವಂಚನೆ ಪ್ರಕರಣಗಳ ತನಿಖೆಯನ್ನು ತಕ್ಷಣವೇ ಪ್ರಾರಂಭಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರೀಯ ತನಿಖಾ ದಳ (CBI)ಕ್ಕೆ ಆದೇಶ ನೀಡಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ ಮತ್ತು ಜೋಯಮಾಲ್ಯ ಬಾಗ್ಚಿ ಅವರಿದ್ದ ಪೀಠವು, ನ್ಯಾಯಾಲಯದ ಸಲಹೆಗಾರರು (Amicus Curiae) ಎತ್ತಿ ತೋರಿಸಿದ ಸೈಬರ್ ಅಪರಾಧಗಳಾದ ಡಿಜಿಟಲ್ ಬಂಧನ ವಂಚನೆಗಳು … Continued

ಮುಡಾ ಪ್ರಕರಣ ಸಿಬಿಐ ತನಿಖೆಗೆ ಕೋರಿ ಮೇಲ್ಮನವಿ: ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ. ಪಾರ್ವತಿ ಅವರು ಅಕ್ರಮವಾಗಿ ಬದಲಿ ನಿವೇಶಗಳನ್ನು ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿಯ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ. ಮುಡಾ ಹಗರಣವನ್ನು ಸಿಬಿಐ … Continued

ವಂಚನೆ ಪ್ರಕರಣ : ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರು ದೋಷಿಗಳು

ಬೆಂಗಳೂರು : ನಕಲಿ ವೇತನ ಸರ್ಟಿಫಿಕೇಟ್‌ಗಳನ್ನು ಸಲ್ಲಿಸಿ ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರಿನ ₹7.17 ಕೋಟಿ ಹಣ ದುರ್ಬಳಕೆ ಮಾಡಿರುವ ಪ್ರಕರಣದಲ್ಲಿ ಮಾಜಿ ಸಚಿವ ಎಸ್‌. ಎನ್‌. ಕೃಷ್ಣಯ್ಯ ಶೆಟ್ಟಿ ಸೇರಿ ನಾಲ್ವರನ್ನು ದೋಷಿಗಳು ಎಂದು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಸಿಬಿಐ ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಜನಪ್ರತಿನಿಧಿಗಳ … Continued

ಭೋವಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ಯಾಕೆ ವಹಿಸಬಾರದು?; ಹೈಕೋರ್ಟ್‌

ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿಗಳ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದ ಹಗರಣದ ಪ್ರಮುಖ ಆರೋಪಿಗಳನ್ನು ಬಂಧಿಸಿಲ್ಲ” ಎಂಬ ಅರ್ಜಿದಾರರ ಆಕ್ಷೇಪಣೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್‌ “ಈ ಹಗರಣದ ತನಿಖೆಯನ್ನು ಸಿಬಿಐಗೆ ಏಕೆ ವಹಿಸಬಾರದು” ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ಸಿದ್ದಾ‍ಪುರ ಪೊಲೀಸ್‌ … Continued

ಕೋಲ್ಕತ್ತಾ ಕಿರಿಯ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ ; ಆಸ್ಪತ್ರೆ ಮಾಜಿ ಪ್ರಾಂಶುಪಾಲ, ಪೊಲೀಸ್ ಅಧಿಕಾರಿ ಬಂಧಿಸಿದ ಸಿಬಿಐ…!

ಕೋಲ್ಕತ್ತಾ: ಕೋಲ್ಕತ್ತಾದ ಆರ್‌.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರೇನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಪ್ರಾಂಶುಪಾಲ ಸಂದೀಪ ಘೋಷ್ ಮತ್ತು ಆರಂಭದಲ್ಲಿ ತನಿಖೆ ನಡೆಸಿದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಅವರನ್ನು ತನಿಖಾಧಿಕಾರಿಗಳನ್ನು ಸಿಬಿಐ ಬಂಧಿಸಿದೆ. ತನಿಖೆ ದಾರಿ ತಪ್ಪಿಸಲು ಯತ್ನಿಸಿರುವುದು ಮತ್ತು … Continued

ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಕೋರಿ ಆಕೆಯ ತಂದೆ ಸಲ್ಲಿಸಿದ್ದ ಅರ್ಜಿ ಮತ್ತು ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾ ಮಾಡಿದೆ. ಸೌಜನ್ಯ ತಂದೆ ಚಂದಪ್ಪ ಗೌಡ ಮತ್ತು ಖುಲಾಸೆಗೊಂಡಿರುವ ಕಾರ್ಕಳ ತಾಲೂಕಿನ … Continued

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಅರ್ಜಿ ವಜಾ ; ಸುಪ್ರೀಂ ಕೋರ್ಟ್‌ ಗೆ ಹೋಗುವುದು ಸೂಕ್ತ ಎಂದ ಹೈಕೋರ್ಟ್‌

ನವದೆಹಲಿ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವ ಹಾಲಿ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ ಗುರುವಾರ ತಿರಸ್ಕರಿಸಿದೆ. ಇದರಿಂದ ಸಿಬಿಐಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ. ರಾಜ್ಯ ಸರ್ಕಾರದ ಆಕ್ಷೇಪಾರ್ಹ ಆದೇಶ ಪ್ರಶ್ನಿಸಿ … Continued

ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ-ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಕೋಲ್ಕತ್ತಾ ಹೈಕೋರ್ಟ್

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಆರ್.ಜಿ. ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಸಾವಿನ ಪ್ರಕರಣವನ್ನು ಸಿಬಿಐಗೆ ವಹಿಸಿ ಕೋಲ್ಕತ್ತಾ ಹೈಕೋರ್ಟ್ ಮಂಗಳವಾರ ಆದೇಶಿಸಿದೆ. ಈ ಪ್ರಕರಣವು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ 31 ವರ್ಷದ ಕಿರಿಯ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದೆ. ಬುಧವಾರ (ಆಗಸ್ಟ್‌ ೧೪) ಬೆಳಗ್ಗೆ … Continued

ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣ : ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರು ಖುಲಾಸೆ

ಮುಂಬೈ: ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಪುಣೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಹಾಗೂ ಮೂವರನ್ನು ಖುಲಾಸೆಗೊಳಿಸಿದೆ. ಆರೋಪಿಗಳಾದ ಸಚಿನ್‌ ಅಂದೂರೆ, ಶರದ್‌ ಕಲಾಸ್ಕರ್‌ ಅವರನ್ನು ದೋಷಿಗಳು ಎಂದು ತೀರ್ಪು ನೀಡಿರುವ ನ್ಯಾಯಾಲಯವು ಅವರಿಗೆ ಜೀವಾವಧಿ ಶಿಕ್ಷೆ ಹಾಗೂ ₹5 ಲಕ್ಷ ದಂಡ ವಿಧಿಸಿದೆ. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ವೀರೇಂದ್ರ … Continued

ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಲ್ಕತ್ತಾ ಹೈಕೋರ್ಟ್ ಆದೇಶದ ನಂತರ ಸಂದೇಶ್‌ಖಾಲಿ ಪ್ರಕರಣದ ಆರೋಪಿ ಶೇಖ್ ಷಹಜಹಾನ್ ಸಿಬಿಐಗೆ ಹಸ್ತಾಂತರ

ಸಂದೇಶ್‌ಖಾಲಿ ಪ್ರಕರಣದ ಉಚ್ಛಾಟಿತ ಟಿಎಂಸಿ ನಾಯಕ ಮತ್ತು ಆರೋಪಿ ಶೇಖ್ ಷಹಜಹಾನ್ ನನ್ನು ಕೋಲ್ಕತ್ತಾ ಹೈಕೋರ್ಟ್‌ನ ನಿರ್ದೇಶನದ ಮೇರೆಗೆ ಬಂಗಾಳ ಸರ್ಕಾರಕ್ಕೆ ಬುಧವಾರ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಹಸ್ತಾಂತರಿಸಲಾಗಿದೆ. ಬುಧವಾರ ಮುಂಜಾನೆ, ಹೈಕೋರ್ಟ್ ಪಶ್ಚಿಮ ಬಂಗಾಳ ಸಿಐಡಿಗೆ ನಿಂದನೆ ನೋಟಿಸ್ ಜಾರಿಗೊಳಿಸಿತು ಮತ್ತು ಷಹಜಹಾನ್‌ನನ್ನು ಕೇಂದ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸಲು ವಿಫಲವಾದ ನಂತರ ಎರಡು … Continued