ಧಾರವಾಡದಲ್ಲೂ ಜನಿವಾರ ಕತ್ತರಿಸಿ ಸಿಇಟಿ ಬರೆಸಿದ ಸಿಬ್ಬಂದಿ…!?

ಧಾರವಾಡ : ಶಿವಮೊಗ್ಗ, ಬೀದರ ಬಳಿಕ ಇದೀಗ ಧಾರವಾಡದಲ್ಲಿಯೂ ಜನಿವಾರ ಕತ್ತರಿಸಿ ನಂತರ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿರುವ ಘಟನೆ ನಡೆದಿದೆ ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಹುರಕಡ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಧಾರವಾಡ ನಗರದ ಜೆಎಸ್‌ಎಸ್ (JSS) ಕಾಲೇಜಿನ ವಿದ್ಯಾರ್ಥಿ ನಂದನ್ ಏರಿ ಎಂಬವರು … Continued

ಜನಿವಾರ ವಿವಾದ; ಸಿಇಟಿ ವಂಚಿತ ವಿದ್ಯಾರ್ಥಿ ಮತ್ತೊಮ್ಮೆ ಪರೀಕ್ಷೆ ಬರೆಯುವ ಬಗ್ಗೆ ಸೂಕ್ತ ಕ್ರಮ

ಬೆಂಗಳೂರು: ಬೀದರ ಮತ್ತು ಶಿವಮೊಗ್ಗದಲ್ಲಿ ಇಬ್ಬರು ಅಭ್ಯರ್ಥಿಗಳಿಗೆ ಸಿಇಟಿ (CET 2025) ವೇಳೆ ಜನಿವಾರ ತೆಗೆಸಿದ ಘಟನೆಗೆ ರಾಜ್ಯಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಲ್ಲದೇ ಪರೀಕ್ಷೆ ವಂಚಿತ ವಿದ್ಯಾರ್ಥಿಗೆ ಮರು ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಪರೀಕ್ಷೆ ವಂಚಿತ ಬೀದರ ವಿದ್ಯಾರ್ಥಿಗೆ ಮತ್ತೊಮ್ಮೆ ಸಿಇಟಿ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡಲಾಗುವುದು ಎಂದು … Continued

ಕರ್ನಾಟಕದ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ ; ಜ.23ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿಇಟಿ 2025ರ ವೇಳಾಪಟ್ಟಿ ಪ್ರಕಟಿಸಿದೆ. ಸಿಇಟಿ ಪರೀಕ್ಷೆಯು ಏಪ್ರಿಲ್‌ 16 (ಬುಧವಾರ) ಹಾಗೂ 17 (ಗುರುವಾರ)ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ ಸಲ್ಲಿಕೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಇಂಜಿನಿಯರಿಂಗ್, ಪಶು ವೈದ್ಯಕೀಯ ಸೇರಿದಂತೆ ವಿವಿಧ … Continued

ಸಿಇಟಿ ಪರೀಕ್ಷಾ ದಿನಾಂಕದಲ್ಲಿ ಬದಲಾವಣೆ: ಹೊಸ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಬದಲಾವಣೆ ಮಾಡಿದ್ದು, ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ. ಈ ಮೊದಲು ಏಪ್ರಿಲ್ 20 ಮತ್ತು 21ರಂದು ಪರೀಕ್ಷೆ ನಿಗದಿಯಾಗಿತ್ತು. ಕನ್ನಡ ಪರೀಕ್ಷೆ ಏಪ್ರಿಲ್ 20ರಂದು ನಡೆಯಲಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ. ಏಪ್ರಿಲ್ 21ರಂದು … Continued

2024ರ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ : ಜ. 10ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು:  ವಿವಿಧ ವೃತ್ತಿಪರ ಕೋರ್ಸುಗಳಿಗೆ 2024ರ ಏಪ್ರಿಲ್ 20 (ಶನಿವಾರ) ಮತ್ತು 21ರಂದು (ಭಾನುವಾರ) ಸಿಇಟಿ ನಡೆಸಲಾಗುತ್ತದೆ. ಅಭ್ಯರ್ಥಿಗಳು ಜನವರಿ 10ರಿಂದ ನಿಗದಿತ ಶುಲ್ಕದೊಂದಿಗೆ ಆನ್ಲೈನ್ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಈ ಬಗ್ಗೆ ಅವರು ಶುಕ್ರವಾರ ಪತ್ರಿಕಾ ಪ್ರಕಟಣೆ ನೀಡಿದ್ದು, ಏ.20ರ ಬೆಳಗ್ಗೆ 10:30ರಿಂದ ಜೀವಶಾಸ್ತ್ರ, … Continued

ಇಂದು ಸಿದ್ದರಾಮಯ್ಯ ಪ್ರಮಾಣವಚನ ಹಿನ್ನೆಲೆ : ಸಿಇಟಿ ಅಭ್ಯರ್ಥಿಗಳಿಗೆ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ಸಿಇಟಿ ಇರುವ ದಿನವಾದ ಶನಿವಾರ (ಮೇ ೨೦) ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಇರುವುದರಿಂದ ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಸಂಚಾರ ದಟ್ಟಣೆಯಲ್ಲಿ ಸಿಲುಕದಿರಲು ಬೆಂಗಳೂರು ಸಂಚಾರ ಪೊಲೀಸ್ ವಿಭಾಗದ ವಿಶೇಷ ಆಯುಕ್ತ ಡಾ.ಎಂ ಎ ಸಲೀಂ ಮಾರ್ಗಸೂಚಿ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ತೆರಳುವವರು ಕಂಠೀರವ ಸ್ಟೇಡಿಯಂ ಸಮೀಪವಿರುವ ಪರೀಕ್ಷಾ … Continued