ಚಾಮರಾಜನಗರ | 10 ಎಕರೆ ಅರಣ್ಯಕ್ಕೆ ಬೆಂಕಿ ; ಶಿಬಿರಗಳು ಸ್ಫೋಟ ; ಶಂಕಿತ ಬೇಟೆಗಾರರ ಸಾವಿಗೆ ಪ್ರತೀಕಾರದ ಶಂಕೆ

ಚಾಮರಾಜನಗರ : ಜಿಲ್ಲೆಯ ಶಿಲುಬೆಪುರ ಅರಣ್ಯ ಪ್ರದೇಶದಲ್ಲಿ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಅರಣ್ಯಕ್ಕೆ ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದ್ದು, ಸುಮಾರು 10 ಎಕರೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಆಗಸ್ಟ್ 15ರಂದು ಮೂವರು ಶಂಕಿತ ಬೇಟೆಗಾರರು (ಪೋಚರ್‌ಗಳು) ಅರಣ್ಯ ಇಲಾಖೆ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟ ಘಟನೆಗೆ ಪ್ರತೀಕಾರವಾಗಿ ಕಿಡಿಗೇಡಿಗಳು ಈ ಕೃತ್ಯ ಎಸಗಿರಬಹುದು ಎಂದು ಅರಣ್ಯ … Continued

ಹನೂರು ಗುಂಡಿನ ಚಕಮಕಿ ಪ್ರಕರಣ : ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿದ ಬದುಕುಳಿದ ವ್ಯಕ್ತಿ ಹೇಳಿದ್ದೇನು ?

ಚಾಮರಾಜನಗರ : ಕಾವೇರಿ ವನ್ಯಜೀವಿಧಾಮದಲ್ಲಿ ಶಂಕಿತ ಬೇಟೆಗಾರರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ನಡುವೆ ನಡೆದ ಗುಂಡಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾದ ನಾಲ್ಕನೇ ವ್ಯಕ್ತಿಯ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿಧಾಮದಲ್ಲಿ ಆಗಸ್ಟ್ 15ರ ಶನಿವಾರ ಮುಂಜಾನೆ ನಡೆದಿದ್ದಾಗಿ ವರದಿಯಾದ ಶೂಟೌಟ್‌ ಘಟನೆಯಲ್ಲಿ, ಬೇಟೆಯಾಡಲು … Continued

ಚಾಮರಾಜನಗರ : ಶಂಕಿತ ಬೇಟೆಗಾರರ ಮೇಲೆ ಅರಣ್ಯ ಸಿಬ್ಬಂದಿ ಗುಂಡಿನ ದಾಳಿ; ಮೂವರು ಸಾವು

ಚಾಮರಾಜನಗರ : ಸಂರಕ್ಷಿತ ಅರಣ್ಯ ಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಬೇಟೆಯಲ್ಲಿ ತೊಡಗಿದ್ದರು ಎಂದು ಶಂಕಿಸಲಾದ ಮೂವರು ವ್ಯಕ್ತಿಗಳು ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಯಲ್ಲಿ ಮೃತಪಟ್ಟಿರುವ ಘಟನೆ ಶನಿವಾರ ಮುಂಜಾನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಥೋಮಿಯಾರ್ ಪಾಳ್ಯ ಗ್ರಾಮದ ನಿವಾಸಿಗಳಾದ ಅಂಥೋನಿಸ್ವಾಮಿ, ಪೀಟರ್ ಮತ್ತು ಕುಮಾರ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ … Continued

ಗುಂಡ್ಲುಪೇಟೆ | ಕೊಡಸೋಗೆ ರಸ್ತೆಯಲ್ಲಿ 20ಕ್ಕೂ ಹೆಚ್ಚು ಮಂಗಗಳ ಶವಗಳು ಪತ್ತೆ, ವಿಷಪ್ರಾಶನದ ಶಂಕೆ

ಚಾಮರಾಜನಗರ: ಐದು ಹುಲಿಗಳಿಗೆ ವಿಷಪ್ರಾಶನ ಮಾಡಿದ ಆಘಾತಕಾರಿ ಘಟನೆಯ ಬೆನ್ನಲ್ಲೇ, ಚಾಮರಾಜನಗರ ಜಿಲ್ಲೆಯಲ್ಲಿ 20 ಮಂಗಗಳ ಶವಗಳು ಬುಧವಾರ ಪತ್ತೆಯಾಗಿವೆ…! ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯ ಉದ್ದಕ್ಕೂ ಮಂಗಗಳ ಮೃತದೇಹಗಳು ಪತ್ತೆಯಾಗಿವೆ. ಮಂಗಗಳಿಗೆ ವಿಷಪ್ರಾಶನ ಮಾಡಲಾಗಿದೆ ಎಂದು ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ಶಂಕಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯಿಂದ ಕೋತಿಗಳನ್ನು ಬೇರೆಡೆ … Continued

ಮೈ ಜುಂ ಎನ್ನುವ ವೀಡಿಯೊ..| ಚಾಮರಾಜನಗರ : ಆನೆ ದಾಳಿಯಿಂದ ಕೂದಲೆಳೆ ಅಂತರದಿಂದ ಪಾರಾದ ಬೈಕ್‌ ಸವಾರ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಿಂದ ಹಾದು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಆನೆಗಳ ದಾಳಿಯಿಂದ ದ್ವಿಚಕ್ರವಾಹನ ಸವಾರ ಸ್ವಲ್ಪದರಲ್ಲೇ ಪಾರಾಗಿರುವ ಘಟನೆ ನಡೆದಿದೆ. ಇಡೀ ಘಟನೆಯನ್ನು ಕಾರಿನಲ್ಲಿದ್ದವರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಮೈಸೂರು -ಊಟಿ ರಾಷ್ಟ್ರೀಯ ಹೆದ್ದಾರಿಯು ಬಂಡೀಪುರ ಅರಣ್ಯದ ನಡುವೆ ಹಾದುಹೋಗಿದೆ. ಹೆದ್ದಾರಿಯಲ್ಲಿ ಶುಕ್ರವಾರದಂದು ಊಟಿ ಕಡೆಯಿಂದ ಮೈಸೂರಿನತ್ತ ಬರುತ್ತಿದ್ದ ಬೈಕ್​ … Continued

ಮಲೆಮಹದೇಶ್ವರ ಬೆಟ್ಟದಲ್ಲಿ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆ ಯತ್ನ ; ಒಬ್ಬರು ಸಾವು, ಮೂವರ ಸ್ಥಿತಿ ಗಂಭೀರ

ಚಾಮರಾಜನಗರ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರಲ್ಲಿ ಓರ್ವ ಮೃತಪಟ್ಟ ಘಟನೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ತಪ್ಪಲಿನಲ್ಲಿರುವ ತಾಳುಬೆಟ್ಟದಲ್ಲಿ ನಡೆದಿದೆ ಎಮದು ವರದಿಯಾಗಿದೆ. ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲೂಕಿನ ಗ್ರಾಮವೊಂದರ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರು ಶುಕ್ರವಾರ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದು ಮಹದೇಶ್ವರ ಸ್ವಾಮಿಯ ದರ್ಶನ ಪಡೆದು ಶನಿವಾರ … Continued

ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಗ್ರಾಪಂ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿ, ಇವಿಎಂಗೆ ಹಾನಿ ಮಾಡಲಾಗಿದೆ ಎಂದು ವರದಿಯಾಗಿದೆ. ಕೆಲವು ಪೊಲೀಸ್‌ ಸಿಬ್ಬಂದಿ, ಅಧಿಕಾರಿಗಳು ಮತ್ತು ಗ್ರಾಮಸ್ಥರಿಗೆ ಗಾಯಗಳಾಗಿವೆ ಎನ್ನಲಾಗಿದೆ. ಅರಣ್ಯದೊಳಗೆ ಇರುವ ಈ ಗ್ರಾಮದಲ್ಲಿ ಗ್ರಾಮದಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸೌಲಭ್ಯ ಇಲ್ಲ ಎಂದು ಗ್ರಾಮಸ್ಥರು … Continued

ಚಾಮರಾಜನಗರ : ಗುಂಡಲ್ ಜಲಾಶಯದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು

ಚಾಮರಾಜನಗರ : ಬಟ್ಟೆ ತೊಳೆಯಲು ಹೋಗಿದ್ದ ವೇಳೆ ತಾಯಿ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಗುಂಡಲ್ ಜಲಾಶಯದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಗೋಪಿನಾಥಂ ಗ್ರಾಮ ಪಂಚಾಯತ ವ್ಯಾಪ್ತಿಯ ಪುದೂರು ಗ್ರಾಮದ ನಿವಾಸಿ ಮೀನಾ … Continued

ಪಿಯು ಪರೀಕ್ಷೆ ಬರೆಯುವವನಿಗೂ ಫ್ಲೆಕ್ಸ್‌…4ನೇ ಬಾರಿ ಕನ್ನಡ ಪರೀಕ್ಷೆ ಬರೆಯಲು ಹೊರಟವನಿಗೆ ಶುಭಾಶಯ ಕೋರಿದ ಫ್ಲೆಕ್ಸ್‌…!

ಚಾಮರಾಜನಗರ: ಚಾಮರಾಜನಗರ: ಜನ್ಮದಿನ, ಮದುವೆ ವಾರ್ಷಿಕೋತ್ಸವ ಮುಂತಾದವುಗಳಿಗೆ ಶುಭಾಶಯ ಕೋರುವುದು ಸಾಮಾನ್ಯ. ಆದರೆ, ಗುರುವಾರ (ಮಾರ್ಚ್‌ ೧)ದಿಂದ ಆರಂಭವಾಗಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ಅಭ್ಯರ್ಥಿಗೆ ಶುಭ ಕೋರಿ ಜಯಶಾಲಿಯಾಗಿ ಬಾ ಎಂದು ಆತನಿಗೆ ಹಾರೈಸಿ ಫ್ಲೆಕ್ಸ್‌ ಹಾಕಿದ ಅಪರೂಪದ ವಿದ್ಯಮಾನ ಬೆಳಕಿಗೆ ಬಂದಿದೆ. ಈ ಶುಭಾಶಯ ಕೋರುವ ಫ್ಲೆಕ್ಸ್‌ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ … Continued

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಸರ್ಕಾರಿ ವೈದ್ಯ ಹುದ್ದೆ ತೊರೆದ ಸಂಸದ ಶ್ರೀನಿವಾಸ್ ಪ್ರಸಾದ ಅಳಿಯ…!

ಚಾಮರಾಜನಗರ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಂಸದ ಶ್ರೀನಿವಾಸ ಪ್ರಸಾದ ಅವರ ಅಳಿಯ ತಮ್ಮ ಸರ್ಕಾರಿ ವೈದ್ಯ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ವರದಿಯಾಗಿದೆ. ಸಂಸದ ವಿ.ಶ್ರೀನಿವಾಸಪ್ರಸಾದ ಅವರ ಅಳಿಯ ಡಾ.ಎನ್‌ಎಸ್ ಮೋಹನ ಬೆಂಗಳೂರು ಸಂಜಯ ಗಾಂಧಿ ಆಸ್ಪತ್ರೆಯ ಖ್ಯಾತ ಬೆನ್ನುಹುರಿ ತಜ್ಞ ಹಾಗು ಪ್ರಾಧ್ಯಾಪಕರಾಗಿದ್ದರು. ಮುಂದಿನ ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದಿಂದ ಟಿಕೆಟ್‌ … Continued