ಚನ್ನಪಟ್ಟಣದ ಉಪಚುನಾವಣೆಯಲ್ಲಿ ಸೋಲು ; ನಿಖಿಲಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

ಚಿಕ್ಕಮಗಳೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಸೋಲು ಅನುಭವಿಸಿದ ಎನ್.ಡಿ.ಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಸೋಲು ಅವರ ಅಭಿಮಾನಿಗಳಿಗೆ ಆಘಾತ ತಂದಿದೆ. ನಿಖಿಲಕುಮಾರಸ್ವಾಮಿ ಅವರ ಕಟ್ಟಾ ಅಭಿಮಾನಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಬೆನ್ನಲ್ಲೇ ಈಗ ಕಡೂರು ಮೂಲದ ಹರ್ಷಿತ್ ರಕ್ತದಲ್ಲಿ ಪತ್ರ ಬರೆದು ನಿಖಿಲ ಸೋಲಿಗೆ ತಮ್ಮ ನೋವನ್ನು ವ್ಯಕ್ತಪಡಿಸಿದ್ದಾರೆ. ಭಾನುವಾರ ಅವರು … Continued

ಉಪಚುನಾವಣೆ : ಕರ್ನಾಟಕದ 3 ಕ್ಷೇತ್ರಗಳಲ್ಲಿ ಗೆಲುವು ಯಾರಿಗೆ ? ಎಕ್ಸಿಟ್‌ ಪೋಲ್‌ ಹೇಳಿದ್ದೇನು..?

ಬೆಂಗಳೂರು : ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನವೆಂಬರ್ 13 ರಂದು ನಡೆದಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಈ ನಡುವೆ ಪಿಮಾರ್ಕ್ ಎಕ್ಸಿಟ್‌ ಪೋಲ್‌ ಹೊರಬಿದ್ದಿದ್ದು, ಆಡಳಿತಾರೂಢ ಕಾಂಗ್ರೆಸ್‌ ಹಾಗೂ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟ ಎಷ್ಟು ಸ್ಥಾನಗಳಲ್ಲಿ ಗೆಲ್ಲಲಿದೆ ಎಂದು ಅಂದಾಜಿಸಿದೆ. ಪಿಮಾರ್ಕ್ ಸಮೀಕ್ಷೆ ಪ್ರಕಾರ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ಈ … Continued

ಉಪಚುನಾವಣೆ | ಕರ್ನಾಟಕದ 3 ಕ್ಷೇತ್ರಗಳಲ್ಲಿ ಸರಾಸರಿ ಶೇ. 81.84 ಮತದಾನ ; ಚನ್ನಪಟ್ಟಣದಲ್ಲಿ ಅತಿ ಹೆಚ್ಚು

ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರಗಳಲ್ಲಿ ಬುಧವಾರ ಶಾಂತಿಯುತವಾಗಿ ಮತದಾನ ನಡೆದಿದೆ. ಬೆಳಗ್ಗೆ 7 ಗಂಟೆಯಿಂದ ಆರಂಭವಾದ ಸಂಜೆ 6 ಗಂಟೆ ವರೆಗೆ ನಡೆಯಿತು. ಮೂರು ಕ್ಷೇತ್ರಗಳಲ್ಲಿ ಸರಾಸರಿ ಶೇ. 81.84 ಮತದಾನ ಆಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಈ ಪೈಕಿ ಚನ್ನಪಟ್ಟಣ … Continued

ಉಪಚುನಾವಣೆ: ಚನ್ನಪಟ್ಟಣ ಕ್ಷೇತ್ರದಲ್ಲಿ 29 ಕೋಟಿ ರೂ. ಮೌಲ್ಯದ ಮದ್ಯ ಜಪ್ತಿ

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬುಧವಾರ (ನವೆಂಬರ್‌ 13) ಉಪಚುನಾವಣೆ ಇದ್ದು, ಹೈವೋಲ್ಟೇಜ್ ಕ್ಷೇತ್ರವಾಗಿರುವ ಚನ್ನಪಟ್ಟಣ ಕ್ಷೇತ್ರದಲ್ಲಿ ಇದುವರೆಗೆ 29 ಕೋಟಿ ರೂಪಾಯಿ ಮೌಲ್ಯದ ಸುಮಾರು ಮೂರು ಲಕ್ಷ ಲೀಟರ್ ಮದ್ಯ ವಶಪಡಿಸಿಕೊಳ್ಳಲಾಗಿದೆ. ಶಿಗ್ಗಾಂವ, ಸಂಡೂರು ಮತ್ತು ಚನ್ನಪಟ್ಟಣದಲ್ಲಿ ಸುಮಾರು 770 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಏಳು ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು … Continued

ಚನ್ನಪಟ್ಟಣ ಉಪಚುನಾವಣೆ: ಕೊನೆಗೂ ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ

ಬೆಂಗಳೂರು : ತೀವ್ರ ಕುತೂಹಲ ಮೂಡಿಸಿದ್ದ ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಆಯ್ಕೆ ಕುರಿತು ಇದ್ದ ಗೊಂದಲಕ್ಕೆ ತೆರೆ ಬಿದ್ದಿದ್ದು, ಕೊನೆಗೂ ಅಭ್ಯರ್ಥಿ ಘೋಷಣೆಯಾಗಿದೆ. ಇಂದು, ಗುರುವಾರ ಬೆಳಗ್ಗೆ ಜೆಡಿಎಸ್‌ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧೆಗೆ ಒಮ್ಮತದ ನಿರ್ಣಯ ತೆಗೆದುಕೊಳ್ಳಲಾಗಿದೆ. ನಾಮಪತ್ರ ಸಲ್ಲಿಕೆಗೆ ಶುಕ್ರವಾರ (ಅಕ್ಟೋಬರ್‌ ೨೫) ಕೊನೆಯ ದಿನವಾಗಿದ್ದು, ಬಿಜೆಪಿ-ಜೆಡಿಎಸ್​ … Continued

ಉಪಚುನಾವಣೆ; ಕರ್ನಾಟಕದ ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಘೋಷಣೆ

ಬೆಂಗಳೂರು: ಚನ್ನಪಟ್ಟಣ, ಸಂಡೂರು ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆಯಾಗಿದೆ. ನಿರೀಕ್ಷೆಯಂತೆ ಚನ್ನಪಟ್ಟಣಕ್ಕೆ ಸಿ.ಪಿ. ಯೋಗೇಶ್ವರ ಹಾಗೂ ಸಂಡೂರಿಗೆ ಈ ಅನ್ನಪೂರ್ಣ ಅವರಿಗೆ ಪಕ್ಷದಿಂದ ಟಿಕೆಟ್‌ ಘೋಷಣೆ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ ಅವರು ಕರ್ನಾಟಕ ಹಾಗೂ ಅಸ್ಸಾಂ ಉಪ ಚುನಾವಣೆಗಳ ಟಿಕೆಟ್‌ ಘೋಷಣೆ ಮಾಡಿದ್ದಾರೆ. ರಾಂನಗರ ಜಿಲ್ಲೆಯ ಚನ್ನಪಟ್ಟಣ ಕ್ಷೇತ್ರಕ್ಕೆ ಸಿ.ಪಿ. ಯೋಗೇಶ್ವರ, ಬಳ್ಳಾರಿ … Continued