ವೀಡಿಯೊ | ಕರ್ನಾಟಕದ ಸುಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಆರಂಭ : ಗದ್ದುಗೆಯಲ್ಲಿ ದೇವಿ ವಿರಾಜಮಾನ

ಶಿರಸಿ: ಕರ್ನಾಟಕದ ಅತಿದೊಡ್ಡ ಜಾತ್ರೆಯಾದ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶ್ರೀ ಮಾರಿಕಾಂಬಾ ದೇವಿಯ ಜಾತ್ರೆಯು ರಥೋತ್ಸವ ಬುಧವಾರ ಅತ್ಯಂತ ಸಡಗಡ ಸಂಭ್ರಮದಿಂದ ಚಾಲನೆಗೊಂಡಿತು. ರಥದಲ್ಲಿ ಆಗಮಿಸಿದ ಭಕ್ತರ ಆರಾಧ್ಯ ದೈವ ಮಾರಿಕಾಂಬಾ ದೇವಿಯು  ಜಾತ್ರಾ  ಗದ್ದುಗೆಗೆ ಆಗಮಿಸಿ ಬುಧವಾರ ಪ್ರತಿಷ್ಠಾಪನೆಗೊಂಡಿದ್ದಾಳೆ..  ಶ್ರೀ ಮಾರಿಕಾಂಬೆಯ ದರ್ಶನಕ್ಕಾಗಿ ಆಗಮಿಸಿದ ಲಕ್ಷಾಂತರ ಭಕ್ತರು ಈ ರಥೋತ್ಸವಕ್ಕೆ ಸಾಕ್ಷಿಯಾಗುವ ಮೂಲಕ … Continued

ಇಸ್ಕಾನ್ ಜಗನ್ನಾಥ ರಥಕ್ಕೆ ಸುಖೋಯ್ ಯುದ್ಧ ವಿಮಾನದ ಟೈರ್‌…!

ಕೋಲ್ಕತ್ತಾ : ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿರುವ ಇಸ್ಕಾನ್ (ISKCON) ದೇವಸ್ಥಾನವು ತನ್ನ ಪ್ರಸಿದ್ಧ ಜಗನ್ನಾಥ ರಥಯಾತ್ರೆಗಾಗಿ ಸುಖೋಯ್ ಯುದ್ಧ ವಿಮಾನಗಳಿಗೆ ತಯಾರಿಸಿದ ವಿಶೇಷ ಟೈರ್‌ಗಳನ್ನು ರಥದ ಚಕ್ರಗಳಿಗೆ ಅಳವಡಿಸಿದೆ. ಸುಮಾರು ಇಪ್ಪತ್ತು ವರ್ಷಗಳ ಹುಡುಕಾಟದ ನಂತರ ಈ ನವೀನ ಬದಲಾವಣೆಯನ್ನು ಮಾಡಲಾಗಿದೆ ಎಂದು ತಿಳಿಸಲಾಗಿದೆ. ಇಸ್ಕಾನ್ ಕೋಲ್ಕತ್ತಾ ಜಗನ್ನಾಥ ರಥದ ಚಕ್ರಗಳನ್ನು ಸುಧಾರಿಸಲು ಸೂಕ್ತವಾದ ಪರ್ಯಾಯ … Continued

ವೀಡಿಯೊ..| ಬಪ್ಪನಾಡು ಜಾತ್ರೆ ರಥೋತ್ಸವದ ವೇಳೆ ಮುರಿದುಬಿದ್ದ ತೇರು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಕುಸಿದು ಬಿದ್ದ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್‌ ಘಟನೆಯಲ್ಲಿ ಯಾರಿಗೂ ಯಾವುದೇ ಅಪಾಯವಾಗಿಲ್ಲ. ಮುಲ್ಕಿ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ಅಂಗವಾಗಿ ಬ್ರಹ್ಮರಥೋತ್ಸವ ವೇಳೆ ದೇವರ ತೇರು ಮುರಿದು ಬಿದ್ದಿರುವ ಘಟನೆ ಶನಿವಾರ ಬೆಳಗಿನ … Continued

ವೀಡಿಯೊ..| ಆನೇಕಲ್ : ಉರುಳಿಬಿದ್ದ ಹುಸ್ಕೂರು ಮದ್ದೂರಮ್ಮ ಜಾತ್ರೆಯ ತೇರು; ಓರ್ವ ಸಾವು, ಕೆಲವರಿಗೆ ಗಾಯ

ಬೆಂಗಳೂರು: ಆನೇಕಲ್ ತಾಲೂಕಿನಲ್ಲಿ ಮದ್ದೂರಮ್ಮ ಜಾತ್ರೆಯ ಬೃಹತ್‌ ತೇರು ಉರುಳಿಬಿದ್ದಿದ್ದು, ಈ ಘಟನೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ. ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ‌‌ ಮೂಲಕ ಈ ತೇರನ್ನು ಎಳೆಯಲಾಗುತ್ತಿತ್ತು. ಎರಡು ಕುರ್ಜುಗಳು ಧರೆಗೆ ಉರುಳಿಬಿದ್ದಿದೆ. 150 ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಇದಾಗಿದ್ದು, ತೇರು ಎಳೆದು ತರುವ ಸಂದರ್ಭದಲ್ಲಿ ಈ ದುರ್ಘಟನೆ … Continued