ಭದ್ರತಾ ಸಿಬ್ಬಂದಿ ವಾಹನ ಸ್ಫೋಟಿಸಿದ ನಕ್ಸಲರು: 8 ಭದ್ರತಾ ಸಿಬ್ಬಂದಿ ಸೇರಿ 9 ಮಂದಿ ಸಾವು

ರಾಯ್ಪುರ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಭದ್ರತಾ ಸಿಬ್ಬಂದಿ ತೆರಳುತ್ತಿದ್ದ ವಾಹನವನ್ನು ಗುರಿಯಾಗಿಸಿ ಪ್ರಬಲ ಐಇಡಿ ಸಾಧನ ಸ್ಫೋಟಿಸಿದ್ದು, ದಂತೇವಾಡ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ)ನ ಎಂಟು ಜವಾನರು ಮತ್ತು ಒಬ್ಬ ಚಾಲಕ ಸೇರಿದಂತೆ ಒಂಬತ್ತು ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ದಾಂತೇವಾಡ, ನಾರಾಯಣಪುರ ಮತ್ತು ಬಿಜಾಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ … Continued

ಅದ್ಭುತ ವೀಡಿಯೊ..| ಕಾರಿನಡಿ ಸಿಲುಕಿದ ಕರುವನ್ನು ಕಾಪಾಡಲು ರಸ್ತೆಯಲ್ಲಿ ಅಡ್ಡ ನಿಂತು ಕಾರನ್ನು ನಿಲ್ಲಿಸಿದ ಹಸುಗಳ ಗುಂಪು…!

ರಾಯಗಢ: ಛತ್ತೀಸ್‌ಗಢ ರಾಜ್ಯದ ರಾಯಗಢದ ಜನನಿಬಿಡ ರಸ್ತೆಯ ಮಧ್ಯೆ ಕಾರಿನಡಿ ಸಿಲುಕಿದ್ದ ಕರುವನ್ನು ರಕ್ಷಿಸಲು ಗೋವುಗಳ ಹಿಂಡು ಕಾರಿಗೆ ಅಡ್ಡಲಾಗಿ ನಿಂತು ಅದನ್ನು ತಡೆದು ನಿಲ್ಲಿಸಿದ ಅಸಮಾನ್ಯ ಘಟನೆ ನಡೆದಿದೆ. ಸಾಮಾನ್ಯವಾಗಿ ಸೌಮ್ಯವಾಗಿರುವ ಗೋವುಗಳ ಹಿಂಡು ಕಾರನ್ನು ಹಿಂಬಾಲಿಸಿಕೊಂಡು ಬಂದು ಕಾರಿಗೆ ಅಡ್ಡಲಾಗಿ ನಿಂತಿವೆ. ಕಾರು ಆಕಳು ಕರುವನ್ನು ಸುಮಾರು 200 ಮೀಟರ್ ಎಳೆದುಕೊಂಡು ಬಂದಿದೆ. … Continued

ವೀಡಿಯೊ..| ಪೊಲೀಸ್‌ ಕುಟುಂಬದ ಹತ್ಯೆಯ ಘಟನೆಯ ನಂತರ ಉಪವಿಭಾಗೀಯ ಅಧಿಕಾರಿಯನ್ನು ಬೆನ್ನಟ್ಟಿದ ಉದ್ರಿಕ್ತ ಗುಂಪು…!

ಆಘಾತಕಾರಿ ಘಟನೆಯೊಂದರಲ್ಲಿ, ಉದ್ರಿಕ್ತ ಗುಂಪೊಂದು ಸೋಮವಾರ ಛತ್ತೀಸ್‌ಗಢದ ಸೂರಜ್‌ಪುರದಲ್ಲಿ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅವರನ್ನು ಥಳಿಸಲು ಪ್ರಯತ್ನಿಸಿದೆ. ಆದರೆ, ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ಹಿರಿಯ ಅಧಿಕಾರಿಯನ್ನು ಪಾರು ಮಾಡಿದ್ದಾರೆ. ಸುದ್ದಿ ಸಂಸ್ಥೆ ಐಎಎನ್‌ಎಸ್ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡ ದೃಶ್ಯಗಳ ಪ್ರಕಾರ, ಜನಸಂದಣಿಯನ್ನು ನಿಯಂತ್ರಿಸಲು ಘಟನಾ ಸ್ಥಳದಲ್ಲಿದ್ದ ಹಿರಿಯ ಅಧಿಕಾರಿಯ ಹಿಂದೆ ಉದ್ರಿಕ್ತ ಗುಂಪು … Continued

ಎನ್‌ಕೌಂಟರ್‌ ನಲ್ಲಿ 30 ಮಾವೋವಾದಿಗಳ ಹತ್ಯೆ

ರಾಯ್ಪುರ : ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ನಡುವೆ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ 30 ಮಾವೋವಾದಿಗಳು ಹತರಾಗಿದ್ದಾರೆ ಎಂದು ವರದಿಯಾಗಿದೆ. ಈ ಎನ್‌ಕೌಂಟರ್ ಛತ್ತೀಸ್‌ಗಢದಲ್ಲಿ ಮಾವೋವಾದಿ ದಂಗೆಯ ವಿರುದ್ಧದ ಹೋರಾಟದಲ್ಲಿ ಭದ್ರತಾ ಪಡೆಗಳಿಗೆ ಒಂದು ದೊಡ್ಡ ಯಶಸ್ಸನ್ನು ಸೂಚಿಸುತ್ತದೆ. ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ಅಬುಜ್ಮದ್ ಅರಣ್ಯದಲ್ಲಿ ಮಧ್ಯಾಹ್ನ 1 … Continued

ಎನ್‌ಕೌಂಟರ್‌ನಲ್ಲಿ 9 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ದಾಂತೇವಾಡ: ಛತ್ತೀಸ್‌ಗಢದ ಬಸ್ತಾರ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಒಂಬತ್ತು ಮಾವೋವಾದಿಗಳು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಭದ್ರತಾ ಪಡೆಗಳ ಜಂಟಿ ತಂಡವು ಮಾವೋವಾದಿ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ದಾಂತೇವಾಡ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಕಾಡಿನಲ್ಲಿ ಬೆಳಿಗ್ಗೆ 10:30 ರ ಸುಮಾರಿಗೆ ಗುಂಡಿನ ಚಕಮಕಿ ನಡೆಯಿತು ಎಂದು ಬಸ್ತಾರ್ … Continued

ಕಾಡಾನೆ ದಾಳಿಗೆ ಒಂದೇ ಕುಟುಂಬದ ಮೂವರು ಸೇರಿ ನಾಲ್ವರು ಸಾವು

ಜಶ್ಪುರ: ಛತ್ತೀಸ್‌ಗಢದ ಜಶ್ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಶನಿವಾರ ಬೆಳ್ಳಂಬೆಳಗ್ಗೆ ಕಾಡಾನೆ ದಾಳಿಗೆ ಒಂದೇ ಕುಟುಂಬದ ಮೂವರು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ ಆನೆ ದಾಳಿಗೆ ಈವರೆಗೆ ಒಂಬತ್ತು ಮಂದಿ ಸಾವಿಗೀಡಾಗಿದ್ದಾರೆ. ಬಾಗೀಚಾ ನಗರ ಪಂಚಾಯತ್‌ನ ಗಮ್ಹ್ರಿಯಾ ಪ್ರದೇಶದಲ್ಲಿ ಶನಿವಾರ ತಡರಾತ್ರಿ 1 ಗಂಟೆ ಸುಮಾರಿಗೆ ಅವರು … Continued

ಪೊಲೀಸರ ಎನ್‌ಕೌಂಟರ್‌ನಲ್ಲಿ ಹತರಾದ ತಲೆಯ ಮೇಲೆ 38 ಲಕ್ಷ ರೂ.ಬಹುಮಾನವಿದ್ದ 6 ನಟೋರಿಯಸ್‌ ನಕ್ಸಲರು…

ರಾಯ್ಪುರ : ಎರಡು ದಿನಗಳ ಹಿಂದೆ ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಹತರಾದ ಆರು ನಕ್ಸಲೀಯರ ತಲೆಯ ಮೇಲೆ 38 ಲಕ್ಷ ರೂ.ಗಳ ಬಹುಮಾನ ಹೊಂದಿದ್ದರು ಎಂದು ವರದಿಯಾಗಿದೆ. ಈ ಕಾರ್ಯಾಚರಣೆಯು ನಕ್ಸಲೀಯರ ದಾಳಿಯ ಶಕ್ತಿಯ ಆಧಾರಸ್ತಂಭವೆಂದು ಪರಿಗಣಿಸಲಾದ ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಎಲ್‌ಜಿಎ) ಕಂಪನಿ ನಂ.6ರ ಮೇಲೆ ಭದ್ರತಾ … Continued

ಪಿಕಪ್ ವಾಹನ ಪಲ್ಟಿಯಾಗಿ 18 ಮಂದಿ ಸಾವು, ನಾಲ್ವರಿಗೆ ಗಾಯ

ಕವರ್ಧಾ : ಛತ್ತೀಸ್‌ಗಢದ ಕವರ್ಧಾ ಜಿಲ್ಲೆಯಲ್ಲಿ ಪಿಕಪ್ ವಾಹನ ಪಲ್ಟಿಯಾಗಿ 18 ಮಂದಿ ಸಾವಿಗೀಡಾಗಿ, 4 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಕವರ್ಧಾದಲ್ಲಿ ಸೋಮವಾರ ಮುಂಜಾನೆ ಅಪಘಾತ ಸಂಭವಿಸಿದ್ದು, ಮೃತರಲ್ಲಿ ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಹಲವಾರು ಪ್ರಯಾಣಿಕರು ಸೇರಿದ್ದಾರೆ. ಅತಿವೇಗದ ಚಾಲನೆಯಿಂದಾಗಿ ವಾಹನವು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. … Continued

ಎನ್‌ಕೌಂಟರ್‌ನಲ್ಲಿ 12 ಮಾವೋವಾದಿಗಳನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ರಾಯ್ಪುರ : ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 12 ಮಾವೋವಾದಿಗಳು ಹತರಾಗಿದ್ದಾರೆ ಎಂದು ಮುಖ್ಯಮಂತ್ರಿ ವಿಷ್ಣು ದೇವ ಸಾಯಿ ಹೇಳಿದ್ದಾರೆ. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಿಡಿಯಾ ಗ್ರಾಮದ ಬಳಿಯ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸರು … Continued

ಪ್ರಮುಖ ಮಾವೋವಾದಿ ನಾಯಕ ಸೇರಿ 29 ಮಂದಿ ಮಾವೋವಾದಿಗಳನ್ನು ಎನ್‌ಕೌಂಟರ್‌ನಲ್ಲಿ ಹೊಡೆದುರುಳಿಸಿದ ಭದ್ರತಾ ಪಡೆಗಳು

ನವದೆಹಲಿ : ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದ ಎನ್‌ಕೌಂಟರ್‌ನಲ್ಲಿ ಪ್ರಮುಖ ಮಾವೋವಾದಿ ನಾಯಕ ಶಂಕರ ರಾವ್ ಸೇರಿದಂತೆ 29 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಹಾಗೂ ಎಕೆ-47 ಮತ್ತು ಐಎನ್‌ಎಸ್‌ಎಎಸ್ ರೈಫಲ್‌ಗಳು ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಜಿಲ್ಲಾ ಮೀಸಲು ಪಡೆ ಮತ್ತು ಗಡಿ ಭದ್ರತಾ ಪಡೆಗಳ ಜಂಟಿ ತಂಡ ದಾಳಿ … Continued