ಮೊದಲ ಬಾರಿಗೆ ಶಾಸಕಿ ರೇಖಾ ಗುಪ್ತಾ ದೆಹಲಿಯ ನೂತನ ಮುಖ್ಯಮಂತ್ರಿ

ನವದೆಹಲಿ : ರೇಖಾ ಗುಪ್ತಾ ಅವರು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ. ಪರ್ವೇಶ ವರ್ಮಾ ಉಪಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿಯಲ್ಲಿ ಬುಧವಾರ ನಡೆದ ಬಿಜೆಪಿಯ ಶಾಸಕಾಂಗ ಪಕ್ಷದ ಸಭೆಯಲ್ಲಿ ಇಬ್ಬರೂ ನಾಯಕರ ಹೆಸರನ್ನು ಘೋಷಿಸಲಾಯಿತು.ಪ್ರಸ್ತುತ ಬಿಜೆಪಿ ಆಡಳಿತ ನಡೆಸುತ್ತಿರುವ ರಾಜ್ಯಗಳ ಪೈಕಿ ರೇಖಾ ಗುಪ್ತಾ ಅವರು ಏಕೈಕ ಮಹಿಳಾ ಮುಖ್ಯಮಂತ್ರಿಯಾಗಲಿದ್ದಾರೆ. ದೆಹಲಿ ಚುನಾವಣೆಯಲ್ಲಿ ಶಾಲಿಮಾರ್ ಬಾಗ್ ವಿಧಾನಸಭಾ ಕ್ಷೇತ್ರದಿಂದ … Continued

ಮಣಿಪುರ : ಮುಖ್ಯಮಂತ್ರಿ ಸ್ಥಾನಕ್ಕೆ ಬಿರೇನ್ ಸಿಂಗ್ ರಾಜೀನಾಮೆ

ಗುವಾಹತಿ : ಮಣಿಪುರ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಎರಡು ವರ್ಷಗಳ ನಂತರ ಅವರು ರಾಜೀನಾಮೆ ನೀಡಿದ್ದಾರೆ. ಅವರ ನಾಯಕತ್ವದ ವಿರುದ್ಧ ರಾಜ್ಯ ಬಿಜೆಪಿಯಲ್ಲಿನ ಭಿನ್ನಾಭಿಪ್ರಾಯ ಶಮನಗೊಳಿಸಲು ಅವರು ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಸರ್ಕಾರವು ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮತ್ತು ಬಹುಮತ ಪರೀಕ್ಷೆಯ … Continued

ಚಂದ್ರಬಾಬು ನಾಯ್ಡು ದೇಶದ ಅತಿ ಶ್ರೀಮಂತ ಸಿಎಂ ; ಮಮತಾ ಬ್ಯಾನರ್ಜಿ ಬಡ ಸಿಎಂ ; ಸಿದ್ದರಾಮಯ್ಯ ಎಷ್ಟನೇ ಸಿರಿವಂತ ಸಿಎಂ ಗೊತ್ತೆ..?

 ನವದೆಹಲಿ: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ. ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂ.ಗಳೊಂದಿಗೆ ಅತ್ಯಂತ ಬಡವರು ಎಂದು ಸೋಮವಾರ ಬಿಡುಗಡೆಯಾದ ಅಸೋಸಿಯೇಷನ್ ​​​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿ ತಿಳಿಸಿದೆ. ವಿವಿಧ ರಾಜ್ಯಗಳು ಮತ್ತು … Continued

ವಿಶ್ವ ಚೆಸ್ ಚಾಂಪಿಯನ್‌ ಶಿಪ್ ಪ್ರಶಸ್ತಿ ಗೆದ್ದ ಗುಕೇಶಗೆ 5 ಕೋಟಿ ರೂ.ಬಹುಮಾನ ಘೋಷಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಭಾರತದ ಈ ಯುವ ಗ್ರ್ಯಾಂಡ್ ಮಾಸ್ಟರ್ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಕೇವಲ 18ನೇ ವಯಸ್ಸಿನಲ್ಲಿ ಈ ಸಾಧನೆ ಮಾಡುವ ಮೂಲಕ ಗುಕೇಶ ಅವರು ಅತ್ಯಂತ ಕಿರಿಯ ವಯಸ್ಸಿನ ಚೆಸ್‌ ವಿಶ್ವ ಚಾಂಪಿಯನ್ ಆಗುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ. ಈ ಐತಿಹಾಸಿಕ ಸಾಧನೆಗೆ ತಮಿಳುನಾಡು ಸರ್ಕಾರ ಗುಕೇಶ ಅವರಿಗೆ 5 … Continued

ಇದು ಅಧಿಕೃತ ; ದೇವೇಂದ್ರ ಫಡ್ನವೀಸ್ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ : ನಾಳೆ ಪ್ರಮಾಣ ವಚನ

ಮುಂಬೈ: ಮುಂಬೈನ ಆಜಾದ್ ಮೈದಾನದಲ್ಲಿ ನಾಳೆ ಗುರುವಾರ (ಡಿಸೆಂಬರ್‌ 5) ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವಿಸ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿ ನಾಯಕತ್ವವು ಬುಧವಾರ ಮುಖ್ಯಮಂತ್ರಿ ಹುದ್ದೆಗೆ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಿದೆ, ಯಾರು ಉನ್ನತ ಹುದ್ದೆಯನ್ನು ಪಡೆಯುತ್ತಾರೆ ಎಂಬ ದೀರ್ಘಾವಧಿಯ ಕುತೂಹಲಕ್ಕೆ ಈ ಮೂಲಕ ತೆರೆ ಬಿದ್ದಿದೆ. ಅವರ ಹೆಸರನ್ನು ಹೊಸದಾಗಿ ಆಯ್ಕೆಯಾದ ಶಾಸಕರ … Continued

ಪ್ರಧಾನಿ ಮೋದಿ ಏನೇ ನಿರ್ಧರಿಸಿದರೂ….”: ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆ ಬಗ್ಗೆ ಶಿವಸೇನೆ ನಾಯಕ ಏಕನಾಥ ಶಿಂಧೆ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಏಕನಾಥ ಶಿಂಧೆ ಅವರು ಚುನಾವಣಾ ಫಲಿತಾಂಶ ಬಂದ ನಾಲ್ಕು ದಿನಗಳ ನಂತರ ತಮ್ಮ ನಿಲುವನ್ನು ಸಡಿಲಿಸಿದ್ದು, ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟಿದ್ದೇನೆ ಎಂದು ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ, ಬುಧವಾರ ಹೇಳಿದ್ದಾರೆ. “ಪ್ರಧಾನಿ ಮೋದಿಯವರಿಗೆ ನಾನು ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದೇನೆ. ಅವರು … Continued

ತಮಿಳುನಾಡಿನ ಉಪಮುಖ್ಯಮಂತ್ರಿಯಾಗಿ ಪುತ್ರ ಉದಯನಿಧಿಯನ್ನು ನೇಮಕ ಮಾಡಿದ ಸಿಎಂ ಎಂ.ಕೆ.ಸ್ಟಾಲಿನ್‌

ಚೆನ್ನೈ: ಇತ್ತೀಚಿನ ಬೆಳವಣಿಗೆಯಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ ಅವರನ್ನು ತಮಿಳುನಾಡಿನ ಉಪ ಮುಖ್ಯಮಂತ್ರಿಯಾಗಿ ನೇಮಕ ಮಾಡಲಾಗಿದೆ. ಭಾನುವಾರ ಮಧ್ಯಾಹ್ನ 3:30ಕ್ಕೆ ರಾಜಭವನದಲ್ಲಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಉದಯನಿಧಿ ಅವರಿಗೆ ಉಪಮುಖ್ಯಮಂತ್ರಿ (DCM) ಹುದ್ದೆ ಜೊತೆಗೆ ಯೋಜನೆ ಮತ್ತು ಅಭಿವೃದ್ಧಿ ಖಾತೆಯನ್ನು ನೀಡಲಾಗಿದೆ. ಅವರ ಬಳಿ … Continued

ಮುಡಾ ಹಗರಣ | ಪಕ್ಷಕ್ಕೆ ಮುಜುಗರ ತಪ್ಪಿಸಲು ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಸೂಕ್ತ : ಕಾಂಗ್ರೆಸ್‌ ನಾಯಕನಿಂದಲೇ ಒತ್ತಾಯ

ಬೆಂಗಳೂರು: ಮುಡಾ ಹಗರಣದಲ್ಲಿ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಆಗ್ರಹಿಸುವೆ. ಈಗ ಆಡಳಿತ ಪಕ್ಷವಾದ ಕಾಂಗ್ರೆಸ್‌ ನಾಯಕನಿಂದಲೇ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ. ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಉತ್ತಮ ಎಂದು … Continued

ಮುಡಾ ವಿಚಾರದಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ…: ಸರ್ಕಾರದಿಂದ ವಿವರ ಕೇಳಿದ ರಾಜ್ಯಪಾಲರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ವಿಚಾರದಲ್ಲಿಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ವಿಚಾರದಲ್ಲಿ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು, ಈ ಸಂಬಂಧ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ್ದಾರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಈ ಸಂಬಂಧ ಪತ್ರ ಬರೆದು ವರದಿ … Continued

ದೆಹಲಿ ಸಿಎಂ ಸ್ಥಾನಕ್ಕೆ ಮಂಗಳವಾರ ಅರವಿಂದ ಕೇಜ್ರಿವಾಲ್ ರಾಜೀನಾಮೆ ಸಾಧ್ಯತೆ ; ಮುಂದಿನ ಸಿಎಂ ಆಯ್ಕೆಗಾಗಿ ಸರಣಿ ಸಭೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮಂಗಳವಾರ (ಸೆಪ್ಟೆಂಬರ್ 17) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ಶಾಸಕ ಸೌರಭ ಭಾರದ್ವಾಜ ಹೇಳಿದ್ದಾರೆ. ಮಂಗಳವಾರ ಸಂಜೆ 4:30ಕ್ಕೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರನ್ನು ಕೇಜ್ರಿವಾಲ್ ಭೇಟಿ ಮಾಡಲಿದ್ದು, ಈ ವೇಳೆ ಅವರು ರಾಜೀನಾಮೆ ಸಲ್ಲಿಸಲಿದ್ದಾರೆ. … Continued