ವೀಡಿಯೊ…| ಎರಡು ದಿನದಲ್ಲಿ ದೆಹಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ; ಅರವಿಂದ ಕೇಜ್ರಿವಾಲ್ ಘೋಷಣೆ…!

ನವದೆಹಲಿ: ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರು ಇಂದು, ಭಾನುವಾರ (ಸೆಪ್ಟೆಂಬರ್ 15) ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಶೀಘ್ರ ಚುನಾವಣೆ ನಡೆಸುವಂತೆ ಒತ್ತಾಯಿಸುವುದಾಗಿ ಹೇಳಿದ್ದಾರೆ. ಜನರು ‘ಪ್ರಾಮಾಣಿಕತೆಯ ಪ್ರಮಾಣಪತ್ರ’ ನೀಡುವವರೆಗೆ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಬಾರದು ಎಂದು ನಿರ್ಧರಿಸಿರುವುದಾಗಿ ಹೇಳಿದ್ದಾರೆ. … Continued

ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೇನೆ: ಆರ್‌.ವಿ ದೇಶಪಾಂಡೆ ಅಚ್ಚರಿಯ ಹೇಳಿಕೆ

ಮೈಸೂರು : ಸಿಎಂ ಸಿದ್ದರಾಮಯ್ಯ ಅವರು ಅನುಮತಿ ನೀಡಿದರೆ ನಾನು ಮುಖ್ಯಮಂತ್ರಿ ಆಗುತ್ತೇನೆ, ಆದರೆ ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್‌.ವಿ.ದೇಶಪಾಂಡೆ ಅಚ್ಚರಿ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಜಾರ್ಖಂಡ್ ಸಿಎಂ ಸ್ಥಾನಕ್ಕೆ ಚಂಪೈ ಸೊರೇನ್ ರಾಜೀನಾಮೆ; ಹೇಮಂತ ಸೊರೇನ್ ಮತ್ತೆ ಸಿಎಂ..!

ರಾಂಚಿ : ಜಾರ್ಖಂಡ್ ಮುಖ್ಯಮಂತ್ರಿ ಚಂಪೈ ಸೊರೇನ್ ಅವರು ತಮ್ಮ ಸ್ಥಾನಕ್ಕೆ ಇಂದು, ಬುಧವಾರ ರಾಜೀನಾಮೆ ಸಲ್ಲಿಸಿದ್ದು, ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಕಾರ್ಯಕಾರಿ ಅಧ್ಯಕ್ಷ ಹೇಮಂತ ಸೊರೇನ್ ಜಾರ್ಖಂಡ್ ಮುಖ್ಯಮಂತ್ರಿಯಾಗಲಿದ್ದಾರೆ. ರಾಜ್ಯಪಾಲರಿಗೆ ಚಂಪೈ ಸೊರೇನ್ ಅವರು ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಹೇಮಂತ್ ಸೊರೇನ್ ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ಟಿದ್ದಾರೆ. ಇದೀಗ ಹೇಮಂತ್ ಸೊರೇನ್ … Continued

ವಿಜಯೇಂದ್ರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ ; ಸಿಎಂ, ಡಿಸಿಎಂ ಕುರಿತು ಕೆಟ್ಟ ಭಾಷೆ ಬಳಕೆಗೆ ಅತೃಪ್ತಿ

ಬೆಂಗಳೂರು : ದೇಶದ ಪ್ರಧಾನಿ, ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಸಚಿವರ ವಿರುದ್ಧ ಕೆಟ್ಟ ಭಾಷೆ ಬಳಸಬಾರದು” ಎಂದು ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಶುಕ್ರವಾರ ಹೇಳಿದೆ. ಪ್ರಕರಣವೊಂದರ ಸಂಬಂಧ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಕೋರಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಸಾಮಾಜಿಕ ಜಾಲತಾಣದ ಉಸ್ತುವಾರಿ ಪ್ರಶಾಂತ ಮಾಕನೂರು ಸಲ್ಲಿಸಿದ್ದ ಅರ್ಜಿ … Continued

ಮನೋಹರಲಾಲ ಖಟ್ಟರ್ ರಾಜೀನಾಮೆ ನಂತರ ಹರಿಯಾಣದ ನೂತನ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಆಯ್ಕೆ

ನವದೆಹಲಿ : ನಯಾಬ್ ಸಿಂಗ್ ಸೈನಿ ಅವರು ಹರಿಯಾಣದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಿಜೆಪಿ ಮಂಗಳವಾರ ಮಧ್ಯಾಹ್ನ ಪ್ರಕಟಿಸಿದೆ. ಮುಖ್ಯಮಂತ್ರಿ ಮನೋಹರ ಲಾಲ ಖಟ್ಟರ್ , ಉಪಮುಖ್ಯಮಂತ್ರಿ ದುಷ್ಯಂತ್ ಚೌತಾಲಾ ಅವರ ಜೆಜೆಪಿಯ ಮೂವರು ಸದಸ್ಯರು ಸೇರಿದಂತೆ ಮನೋಹರ ಖಟ್ಟರ್‌ ಅವರ ಇಡೀ ಸಚಿವ ಸಂಪುಟ ರಾಜೀನಾಮೆ ನೀಡಿದ ಕೆಲವೇ ಗಂಟೆಗಳ ನಂತರ ನೂತನ ಮುಖ್ಯಮಂತ್ರಿ … Continued

ಸೂರ್ಯ ಉದಯಿಸುವುದು ಎಷ್ಟು ಸತ್ಯವೋ ಸತೀಶ ಜಾರಕಿಹೊಳಿ ಸಿಎಂ ಆಗುವುದು ಅಷ್ಟೇ ಸತ್ಯ: ಸಂಚಲನ ಮೂಡಿಸಿದ ಸವದತ್ತಿ ಶಾಸಕರ ಹೇಳಿಕೆ

ಬೆಳಗಾವಿ: ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮುಸುಕಿನ ಗುದ್ದಾಟ ಇನ್ನೂ ನಿಂತಿಲ್ಲ. ಕಾಂಗ್ರೆಸ್‌ ಶಾಸಕರು ತಮ್ಮ ನಾಯಕರು ಮುಖ್ಯಮಂತ್ರಿಯಾಗುತ್ತಾರೆ ಎಂದು ಹೇಳುವುದು ಈಗ ಹೊಸ ಟ್ರೆಂಡ್‌ ಆಗಿ ಪರಿಣಮಿಸಿದೆ. ಈಗ ಮತ್ತೊಬ್ಬ ಕಾಂಗ್ರೆಸ್‌ ಶಾಸಕ ಕೂಡ ಈ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಮತ್ತೆ ಮುಂದಿನ ಮುಖ್ಯಮಂತ್ರಿ ಬಗ್ಗೆ ಚರ್ಚೆ ಮಾಡುವುದು ಬೇಡ ಎಂದು ಕಾಂಗ್ರೆಸ್‌ ಹೈಕಮಾಂಡ್‌ … Continued