ಚಿಕ್ಕಬಳ್ಳಾಪುರ : ನ್ಯಾಯಾಲಯದಲ್ಲಿ ಮಾಟಮಂತ್ರ ಆರೋಪ ; ಮಹಿಳೆ ಬಂಧನ

ಚಿಕ್ಕಬಳ್ಳಾಪುರ:  ಜಿಲ್ಲೆಯ ನ್ಯಾಯಾಲಯದ ಆವರಣದಲ್ಲಿ ಕಪ್ಪು ಮ್ಯಾಜಿಕ್ (ಬ್ಲ್ಯಾಕ್ ಮ್ಯಾಜಿಕ್) ನಡೆಸಿದ ಆರೋಪದಡಿ 65 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತೆಯನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಆಕೆ ಚಿಕ್ಕಬಳ್ಳಾಪುರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ನ್ಯಾಯಾಂಗ ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿ (JMFC) ನ್ಯಾಯಾಲಯಕ್ಕೆ ಪ್ರವೇಶಿಸಿ, ನ್ಯಾಯಾಧೀಶರ ಕುರ್ಚಿಯ ಮೇಲೆ ಕಪ್ಪು ಮ್ಯಾಜಿಕ್ … Continued

ಬಾಗೇಪಲ್ಲಿ : ಪಾಕಿಸ್ತಾನ ಪೌರತ್ವದ ಮಾಹಿತಿ ಮುಚ್ಚಿಟ್ಟು ರೇಷನ್ ಕಾರ್ಡ್‌, ವೋಟರ್‌ ಐಡಿ ಪಡೆದಿದ್ದ ಪಾಕ್ ಮಹಿಳೆ, ಪುತ್ರನ ಬಂಧನ

ಚಿಕ್ಕಬಳ್ಳಾಪುರ : ತನ್ನ ಪಾಕಿಸ್ತಾನಿ ಪೌರತ್ವದ ಮಾಹಿತಿಯನ್ನು ಮುಚ್ಚಿಟ್ಟು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಪಡಿತರ ಚೀಟಿ (ರೇಷನ್ ಕಾರ್ಡ್) ಹಾಗೂ ಮತದಾರರ ಗುರುತಿನ ಚೀಟಿ (ವೋಟರ್ ಐಡಿ) ಪಡೆದ ಆರೋಪದಡಿ ಪಾಕಿಸ್ತಾನ ಮೂಲದ ಮಹಿಳೆ ಹಾಗೂ ಆಕೆಯ ಪುತ್ರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಫರಾ ನಾಜ್ ಹಾಗೂ ಆಕೆಯ ಪುತ್ರ ಮೊಹಮ್ಮದ್ ಫರ್ದೀನ್ … Continued

ಪೌರಾಯುಕ್ತೆಗೆ ಧಮ್ಕಿ ; ಕಾಂಗ್ರೆಸ್‌ ಮುಖಂಡ ರಾಜೀವ ಗೌಡ ಬಂಧನ

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತರಾದ ಅಮೃತಾ ಗೌಡ ಅವರಿಗೆ ಧಮ್ಕಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅವರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕೇರಳದ ಗಡಿಯಲ್ಲಿ ರಾಜೀವ ಗೌಡ ಬಂಧನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಲ್ಟ್‌ ಸಿನೆಮಾದ ಬ್ಯಾನರ್ ತೆರವು ಸಂಬಂಧ ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡ … Continued

ಪೌರಾಯುಕ್ತೆಗೆ ನಿಂದಿಸಿ ಬೆದರಿಕೆ ; ರಾಜೀವ ಗೌಡ ಕಾಂಗ್ರೆಸ್ಸಿನಿಂದ ಅಮಾನತು

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅಭಿನಯದ ಕಲ್ಟ್ ಚಿತ್ರದ ಬ್ಯಾನರ್ ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಕರೆ ಮಾಡಿ ಅಸಭ್ಯವಾಗಿ ನಿಂದಿಸಿ, ಬೆದರಿಕೆ ಹಾಕಿದ್ದ ಕಾಂಗ್ರೆಸ್​ ಮುಖಂಡ ರಾಜೀವ್ ಗೌಡ ಅವರನ್ನು ಕಾಂಗ್ರೆಸ್‌ ಪಕ್ಷದಿಂದ ಅಮಾನತು ಮಾಡಲಾಗಿದೆ. 2026 ಜನವರಿ 23ರಂದು ನಡೆದ ಕೆಪಿಸಿಸಿ … Continued

ಬಿಜೆಪಿ ಸಂಸದ ಡಾ ಕೆ ಸುಧಾಕರ ಪತ್ನಿಗೆ ಡಿಜಿಟಲ್ ಅರೆಸ್ಟ್ : 14 ಲಕ್ಷ ರೂ. ದೋಚಿದ್ದ ಸೈಬರ್ ವಂಚಕರು…!

ಬೆಂಗಳೂರು: ಚಿಕ್ಕಬಳ್ಳಾಪುರ ಬಿಜೆಪಿ ಸಂಸದ ಡಾ.ಕೆ.ಸುಧಾಕರ ಅವರ ಪತ್ನಿಯೂ ಡಿಜಿಟಲ್‌ ವಂಚನೆ ಮಾಡಿದ್ದು, 14 ಲಕ್ಷ ರೂ.ಗಳನ್ನು ಅವರಿಗೆ ಸೈಬರ್‌ ವಂಚಕರು ವಂಚಿಸಿದ್ದರು. ಆದರೆ ಅವರು ಸಕಾಲಕ್ಕೆ ಈ ಬಗ್ಗೆ ದೂರು ನೀಡಿದ ನಂತರ ಪೊಲೀಸರು ಕಾರ್ಯಪ್ರವೃತ್ತರಾದ ನಂತರ ಹಣವನ್ನು ವಶಕ್ಕೆ ಪಡೆದು ಈಗ ಹಿಂದಿರುಗಿಸಲಾಗಿದೆ. ಮಾಹಿತಿಯ ಪ್ರಕಾರ, ಸಂಸದ ಡಾ.ಕೆ.ಸುಧಾಕರ ಅವರ ಪತ್ನಿ ಡಾ.ಪ್ರೀತಿ … Continued

ಚಿಂತಾಮಣಿ | ಕೃಷಿ ಹೊಂಡದಲ್ಲಿ ವಿದ್ಯುತ್​ ಸ್ಪರ್ಶಿಸಿ ಮೂವರು ಯುವಕರು ಸಾವು

ಚಿಕ್ಕಬಳ್ಳಾಪುರ : ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶದಿಂದ ಮೂವರು ಯುವಕರು ಸಾವಿಗೀಡಾದ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯಲ್ಲಿ ನಡೆದಿದೆ. ಎಂದು ವರದಿಯಾಗಿದೆ. ಚಿಂತಾಮಣಿ ತಾಲೂಕಿನ ಮುಂತಕೆದಿರೇನಹಳ್ಳಿಯ ಕೃಷಿ ಹೊಂಡದಲ್ಲಿ ಶುಕ್ರವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಹೊಂಡದಲ್ಲಿ ನೀರೆತ್ತುತ್ತಿದ್ದ 22–28 ವರ್ಷದ ಮೂವರು ವಿದ್ಯುತ್‌ ಸ್ಪರ್ಷದಿಂದ ಸಾವಿಗೀಡಾಗಿದ್ದಾರೆ ಎಂದು … Continued

ಚಿಕ್ಕಬಳ್ಳಾಪುರ | ಮಾರಕಾಸ್ತ್ರಗಳಿಂದ ಕೊಚ್ಚಿ ನಡುರಸ್ತೆಯಲ್ಲೇ ಜೆಡಿಎಸ್​ ಮುಖಂಡನ ಭೀಕರ ಹತ್ಯೆ

ಚಿಕ್ಕಬಳ್ಳಾಪುರ: ಜೆಡಿಎಸ್ ಮುಖಂಡನನ್ನು ರಸ್ತೆ ಮಧ್ಯದಲ್ಲೆ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರದ ತಮ್ಮನಾಯಕನಹಳ್ಳಿ ಗ್ರಾಮದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ವೆಂಕಟೇಶ ಅಲಿಯಾಸ್ ಗೋಲ್ಡ್ ವೆಂಕಟೇಶ್ (50) ಅವರು ರಾತ್ರಿ 9 ಗಂಟೆ ಸುಮಾರಿಗೆ ತಮ್ಮನಾಯಕನಹಳ್ಳಿ ಗೇಟ್ ನಲ್ಲಿರುವ ಔಷಧದ ಅಂಗಡಿಯಿಂದ ಸ್ಕೂಟಿ ಮೇಲೆ ಮನೆಗೆ ಹೊರಟಿದ್ದರು. ಆಗ ದಾರಿಗೆ … Continued

ರಾಜ್ಯದಲ್ಲಿ ಅತಿವೃಷ್ಟಿ , ದೇಶದಲ್ಲಿ ಶುಭಕ್ಕಿಂತ ಅಶುಭಗಳೇ ಹೆಚ್ಚು : ಕೋಡಿಮಠ ಶ್ರೀಗಳ ಭವಿಷ್ಯ

ಚಿಕ್ಕಬಳ್ಳಾಪುರ: ಈಗ ದೇಶದಲ್ಲಿ ಕ್ರೋಧಿ ನಾಮ ಸಂವತ್ಸರ ಇದೆ. ಶುಭಗಳಿಗಿಂತ ಅಶುಭಗಳೇ ಹೆಚ್ಚಾಗಿ ನಡೆಯುತ್ತವೆ. ದೇಶದಲ್ಲಿ ಜಲಕಂಟಕ, ಅಗ್ನಿಕಂಟಕ, ವಾಯು ಕಂಟಕಗಳು ಹೆಚ್ಚಾಗಲಿವೆ. ರಾಜ್ಯದಲ್ಲಿ ಈ ಬಾರಿ ಅತಿವೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಕೋಡಿಮಠ ಶ್ರೀಗಳು ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಕ್ರೋಧಿ ನಾಮ ಸಂವತ್ಸರದಲ್ಲಿ ಗುರುಗಳು ಶಿಷ್ಯರಾಗುತ್ತಾರೆ, ಶಿಷ್ಯರು … Continued

ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏ.20ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಎರಡು ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲಕುಮಾರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೇರಿ ಚಿಕ್ಕಬಳ್ಳಾಪುರದಲ್ಲಿ ಸಭೆ, ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ … Continued

ಮಾಲೂರು ಶಾಸಕ ಕೆ.ವೈ.ನಂಜೇಗೌಡ ಮನೆ ಮೇಲೆ ಇ.ಡಿ. ದಾಳಿ

ಕೋಲಾರ : ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟ (Kochimul) ಕೋಚಿಮುಲ್ ಅಧ್ಯಕ್ಷ ಹಾಗೂ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ (KY Nanjegowda) ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ನಂಜೇಗೌಡ ಅವರಿಗೆ ಸೇರಿದ ನಾಲ್ಕು ಕಡೆಗಳಲ್ಲಿ ಇ.ಡಿ. ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಲೂರು ತಾಲೂಕಿನ ಕೊಮ್ಮನಹಳ್ಳಿ ಗ್ರಾಮದಲ್ಲಿರುವ … Continued