ಪ್ರವಾಸದ ವೇಳೆ ವಿದ್ಯಾರ್ಥಿ ಜೊತೆ ರೊಮ್ಯಾಂಟಿಕ್ ಫೋಟೋಶೂಟ್ : ಮುಖ್ಯ ಶಿಕ್ಷಕಿ ಅಮಾನತು​

ಚಿಕ್ಕಬಳ್ಳಾಪುರ: ಪ್ರವಾಸದ ವೇಳೆ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ರೊಮ್ಯಾಂಟಿಕ್ ಆಗಿ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವೀಡಿಯೊ ವೈರಲ್ ಆದ ಬೆನ್ನಲ್ಲೇ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ ಎಂದು ವರದಿಯಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ … Continued

ಚಿಕ್ಕಬಳ್ಳಾಪುರ : ಕೆರೆಗೆ ಉರುಳಿ ಬಿದ್ದ ಕಾರು, ನಾಲ್ವರು ಸಾವು

ಚಿಕ್ಕಬಳ್ಳಾಪುರ : ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈಪಾಸ್ ​ಬಳಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಚಿಕ್ಕಬಳ್ಳಾಪುರ ಬೈಪಾಸ್​ಬಳಿಯ ಅಮಾನಿ ಗೋಪಾಲಕೃಷ್ಣ ಕೆರೆಯ ನೀರಿಗೆ ಕಾರು ಉರುಳಿಬಿದ್ದು ಟ್ಯಾಗೂರು(21), ಪವನ(22), ಆರ್ಯನ್(22), ವಸಂತ(21) ಎಂಬ ನಾಲ್ವರು ಯುವಕರು ಮೃತಪಟ್ಟಿದ್ದಾರೆ ಕಾರು ಬೆಂಗಳೂರಿನಿಂದ ಬಾಗೇಪಲ್ಲಿ ಕಡೆಗೆ ಹೋಗುತ್ತಿದ್ದಾಗ ದುರ್ಘಟನೆ … Continued

ಚಿಕ್ಕಬಳ್ಳಾಪುರದಲ್ಲಿ ಮಾರಕ ಝೀಕಾ ವೈರಸ್ ಪತ್ತೆ

ಚಿಕ್ಕಬಳ್ಳಾಪುರ: ರಾಜಧಾನಿ ಬೆಂಗಳೂರಿನ ಪಕ್ಕದ ಜಿಲ್ಲೆಯಾದ ಚಿಕ್ಕಬಳ್ಳಾಪುರದಲ್ಲಿ ಮಾರಕ ಝೀಕಾ ವೈರಸ್‌ ಪತ್ತೆಯಾಗಿದೆ. ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದ ಸೊಳ್ಳೆಗಳಲ್ಲಿ ಅಪಾಯಕಾರಿ ಝೀಕಾ ವೈರಸ್ ಪತ್ತೆಯಾಗಿದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಸೂಕ್ತ ಮುಂಜಾಗೃತಾ ಕ್ರಮಗಳನ್ನು ಕೈಗೊಂಡಿದೆ. ಝೀಕಾ ವೈರಸ್‌ ಹರಡದಂತೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ರಾಜ್ಯದ 68 ಕಡೆಗಳಲ್ಲಿನ ಸೊಳ್ಳೆಗಳಲ್ಲಿ ಮಾರಣಾಂತಿಕ ವೈರಸ್‌ … Continued

ಚಿಕ್ಕಬಳ್ಳಾಪುರ : ನಿಂತಿದ್ದ ಟ್ಯಾಂಕರ್‌ಗೆ ಟಾಟಾ ಸುಮೋ ಡಿಕ್ಕಿ ; ಮಗು ಸೇರಿ 13 ಸಾವು

ಚಿಕ್ಕಬಳ್ಳಾಪುರ: ನಿಂತಿದ್ದ ಸಿಮೆಂಟ್ ಬಲ್ಕರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ 13 ಮಂದಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಚಿತ್ರಾವತಿ ಬಳಿ ನಡೆದಿದೆ ಎಂದು ವರದಿಯಾಗಿದೆ. ಆಂಧ್ರ ಪ್ರದೇಶದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಗುರುವಾರ ಬೆಳಿಗ್ಗೆ 7ರ ಸುಮಾರಿನಲ್ಲಿ ಸಂಭವಿಸಿದೆ. … Continued

ವೀಕೆಂಡ್ ಟ್ರಿಪ್ಪಿಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ಜಲಾಶಯದಲ್ಲಿ ಮುಳುಗಿ ಸಾವು

ಚಿಕ್ಕಬಳ್ಳಾಪುರ: ವೀಕೆಂಡ್‌ನಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಶ್ರೀನಿವಾಸ ಸಾಗರ ಜಲಾಶಯದಲ್ಲಿ ನಡೆದ ವರದಿಯಾಗಿದೆ. ಮೃತರನ್ನು ರಾಧಿಕಾ(19), ಪೂಜಾ (20) ಹಾಗೂ ಇಮ್ರಾನ್ ಖಾನ್(20) ಎಂದು ಗುರುತಿಸಲಾಗಿದೆ. ವೀಕೆಂಡ್ ಎಂದು ಬೆಂಗಳೂರಿನ ಫಾರ್ಮಸಿ ಕಾಲೇಜಿನ ಸುನೀತಾ, ರಾಧಿಕ, ಪೂಜಾ, ವಿಕಾಸ್, ಚನ್ನರಾ, ಇಮ್ರಾನ್ ಖಾನ್ ಎಂಬ ಆರು ವಿದ್ಯಾರ್ಥಿಗಳು … Continued

ಚಿಕ್ಕಬಳ್ಳಾಪುರ : ಆದಿಯೋಗಿ ಪ್ರತಿಮೆ ಅನಾವರಣಕ್ಕೆ ಹೈಕೋರ್ಟ್‌ ಅನುಮತಿ; ಕಾಮಗಾರಿಗೆ ನಿರ್ಬಂಧ ಮುಂದುವರಿಕೆ

ಬೆಂಗಳೂರು: ಸುಪ್ರಸಿದ್ಧ ನಂದಿ ಬೆಟ್ಟದ ಸಮೀಪ ಚಿಕ್ಕಬಳ್ಳಾಪುರದ ಅವಲಗುರ್ಕಿ ಗ್ರಾಮದ ಬಳಿ 112 ಅಡಿ ಎತ್ತರದ ಆದಿಯೋಗಿ ಪ್ರತಿಮೆ ಅನಾವರಣ ಮಾಡುವ ಸಂಬಂಧ ಜನವರಿ 15ರಂದು ಆಯೋಜಿಸಿರುವ ಕಾರ್ಯಕ್ರಮ ನಡೆಸಲು ಇಶಾ ಯೋಗ ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಅನುಮತಿ ನೀಡಿದೆ. ಉಪರಾಷ್ಟ್ರಪತಿ ಜಗದೀಪ್ ಧನಕರ್‌ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಶಾ ಯೋಗ ಕೇಂದ್ರದ … Continued

ನಂದಿ ಬೆಟ್ಟದ ಸಮೀಪ ಆದಿಯೋಗಿ ಪ್ರತಿಮೆ ನಿರ್ಮಾಣ: ಯಥಾಸ್ಥಿತಿ ಕಾಪಾಡಲು ಇಶಾ ಯೋಗ ಕೇಂದ್ರಕ್ಕೆ ಹೈಕೋರ್ಟ್‌

ಬೆಂಗಳೂರು : ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಅವಲಗುರ್ಕಿಯಲ್ಲಿ ಆದಿಯೋಗಿ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಸದೆ ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಚಿಕ್ಕಬಳ್ಳಾಪುರದ ಚಂಬಳ್ಳಿಯ ಎಸ್‌ ಕ್ಯಾತಪ್ಪ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್.‌ ಕಿಣಗಿ ಅವರ ನೇತೃತ್ವದ … Continued

ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ : ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ರ‍್ಯಾಲಿ

ಬೆಂಗಳೂರು : ನನ್ನ ನೇತೃತ್ವದ ಸರ್ಕಾರಕ್ಕೆ ಒಂದು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ವತಿಯಿಂದ ವಿಶೇಷ ರ‍್ಯಾಲಿ ಆಯೋಜಿಸಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಶನಿವಾರ ಬೆಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸರ್ಕಾರದ ಒಂದು ವರ್ಷದ ಸಾಧನೆಯ ಸರ್ಕಾರಿ ಕಾರ್ಯಕ್ರಮ ಬೆಂಗಳೂರಿನಲ್ಲಿ ನಡೆಯಲಿದೆ ಹಾಗೂ ಪಕ್ಷದ ಕಾರ್ಯಕ್ರಮ … Continued

ಬೈಕಿಗೆ ಬಸ್‌ ಡಿಕ್ಕಿ: ಮೂವರ ಸಾವು

ಚಿಕ್ಕಬಳ್ಳಾಪುರ: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಮೂವರು ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ಸಂಭವಿಸಿದೆ. ಈ ಅಪಘಾತದಲ್ಲಿ ಬೈಕ್ ನಲ್ಲಿದ್ದಂತ ಮಹಿಳೆ ಸೇರಿ ಮೂವರು ಮೃತಪಟ್ಟಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ಹೊನ್ನೇನಹಳ್ಳಿ ಗೇಟ್ ಬಳಿಯಲ್ಲಿ ರಸ್ತೆ ಕ್ರಾಸ್ ಮಾಡುವಾಗ, ಬೈಕ್ ಗೆ ಖಾಸಗಿ ಬಸ್ಬಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಬೈಕ್ ನಜ್ಜು … Continued

ಟೊಮ್ಯಾಟೊ ಬೆಲೆ ನಷ್ಟ: ರೈತ ದಂಪತಿ ಆತ್ಮಹತ್ಯೆ

ಬೆಂಗಳೂರು: ಸಾಲ ಮಾಡಿ ಬೆಳೆದಿದ್ದ ಟೊಮ್ಯಾಟೊ ಬೆಳೆ ನಷ್ಟದಿಂದ ನೊಂದ ರೈತ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೊಂಡ್ಲಿಗಾನಹಳ್ಳಿಯಲ್ಲಿ ನಡೆದಿದೆ. ಕೊಂಡ್ಲಿಗಾನಹಳ್ಳಿಯ ವೆಂಕಟರೆಡ್ಡಿ(೫೨) ಮತ್ತು ರತ್ನಮ್ಮ (೪೬) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಮೂರು ಲಕ್ಷ ರೂ ಸಾಲ ಮಾಡಿ ಟೊಮ್ಯಾಟೊ ಬೆಳೆದು ೫ ಲಕ್ಷ ರೂಪಾಯಿ ಲಾಭದ ನಿರೀಕ್ಷೆಯಲ್ಲಿದ್ದ … Continued