ವೀಡಿಯೊ…| ಚಿಕ್ಕಮಗಳೂರು : ಕರ್ತವ್ಯ ನಿರತ ವೈದ್ಯರ ಮೇಲೆ ಚಪ್ಪಲಿ ಎಸೆದ ಮಹಿಳೆ…!

ಚಿಕ್ಕಮಗಳೂರು: ಚಿಕ್ಕಮಗಳೂರಿನ ಆಸ್ಪತ್ರೆಯೊಂದರಲ್ಲಿ ವೈದ್ಯರೊಬ್ಬರ ಮೇಲೆ ಮಹಿಳೆಯೊಬ್ಬರು ಚಪ್ಪಲಿ ಎಸೆದ ಘಟನೆ ನಡೆದಿದ್ದು,  ಭಾರೀ ಆಕ್ರೋಶ ವ್ಯಕ್ತವಾಗಿದೆ. ಕರ್ತವ್ಯದಲ್ಲಿದ್ದ ವೈದ್ಯರೊಬ್ಬರ ಮೇಲೆ ಮಹಿಳೆಯೊಬ್ಬಳು ಮೊದಲು ಚಪ್ಪಲಿ ಎಸೆದಿದ್ದಾಳೆ. ನಂತರ ಮಹಿಳೆಯೊಂದಿಗಿನ ಗುಂಪೊಂದು ವೈದ್ಯರನ್ನು ಕರ್ತವ್ಯ ನಿರ್ವಹಿಸಲು ತೊಂದರೆ ಪಡಿಸಿ ಅವರ ಅಂಗಿಯ ಕಾಲರ್‌ ಅನ್ನು ಹಿಡುದು ಎಳೆದಾಡಿದೆ ಎಂದು ವರದಿಯಾಗಿದೆ. ಈ ವೀಡಿಯೊ ವೈರಲ್‌ ಆಗಿದ್ದು, … Continued

ಶೃಂಗೇರಿ ಶಾರದಾಂಬಾ ದೇವಸ್ಥಾನದಲ್ಲಿ ವಸ್ತ್ರ ಸಂಹಿತೆ ಜಾರಿ

ಚಿಕ್ಕಮಗಳೂರು: ಮಲೆನಾಡಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶೃಂಗೇರಿ ಶಾರದಾಂಬೆ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿ ಮಾಡಲು ಆಡಳಿತ ಮಂಡಳಿ ನಿರ್ಧರಿಸಿದೆ. ಆಗಸ್ಟ್‌ 15ರಿಂದ ವಸ್ತ್ರ ಸಂಹಿತೆ ಜಾರಿಯಾಗಲಿದ್ದು, ಶಾರದಾಂಬೆಯ ದರ್ಶನ ಹಾಗೂ ಶ್ರೀಗಳ ದರ್ಶನ ಹಾಗೂ ಪಾದಪೂಜೆಗೆ ಆಗಮಿಸುವ ಭಕ್ತರು ನಿಗದಿತ ಉಡುಪುಗಳನ್ನು ಧರಿಸಿ ಬರುವಂತೆ ಸೂಚಿಸಲಾಗಿದೆ. ಈ ಬಗ್ಗೆ ಶೃಂಗೇರಿ ಶಾರದಾ … Continued

ಮೂಡಿಗೆರೆ : ಲಾರಿ – ಓಮ್ನಿ ಕಾರು ನಡುವೆ ಡಿಕ್ಕಿ ; ನಾಲ್ವರು ಸಾವು, ಹಲವರಿಗೆ ಗಾಯ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಶುಕ್ರವಾರ ಲಾರಿ ಹಾಗೂ ಓಮ್ನಿ  ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಮಧ್ಯಾಹ್ನ ಬಣಕಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಮೃತರು ಚಿತ್ರದುರ್ಗ ಮೂಲದವರು ಎಂದು ಹೇಳಲಾಗಿದೆ. ಕುಟುಂಬವೊಂದು ಎರಡು … Continued

ಒಂದು ಕರು ಹಾಕಿ ಎಂಟು ದಿನದ ನಂತರ ಮತ್ತೊಂದು ಕರುವಿಗೆ ಜನ್ಮ ನೀಡಿದ ಎಮ್ಮೆ…!

ಚಿಕ್ಕಮಗಳೂರು : ಒಂದು ಕರುವಿಗೆ ಜನ್ಮ ನೀಡಿದ್ದ ಎಮ್ಮೆ ಒಂದು ವಾರದ ನಂತರ ಮತ್ತೊಂದು ಕರುವಿಗೆ ಜನ್ಮ ನೀಡಿ ಅಚ್ಚರಿಗೆ ಕಾರಣವಾಗಿದೆ. ಈ ಎಮ್ಮೆ ಒಂದು ಕರು ಹಾಕಿ ಎಂಟು ದಿನಗಳ ನಂತರ ಮತ್ತೊಂದು ಕರುವಿಗೆ ಜನ್ಮ ನೀಡಿದ ಅಪರೂಪದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಶಂಕರಪುರ ಸಮೀಪದ ಮಡುಬ ರಸ್ತೆಯಲ್ಲಿರುವ ಹಳಿಯೂರಿನಲ್ಲಿ ನಡೆದಿದೆ. … Continued

ಅಯೋಧ್ಯೆ ರಾಮಮಂದಿರದ ವಿಚಾರದಲ್ಲಿ ಶೃಂಗೇರಿ ಮಠದ ವಿರುದ್ಧ ಅಪಪ್ರಚಾರ : ಸ್ಪಷ್ಟನೆ ನೀಡಿದ ಮಠ

ಚಿಕ್ಕಮಗಳೂರು: ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್‌ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಈ ಮಧ್ಯೆ ಶೃಂಗೇರಿ ಶ್ರೀಗಳ ಭಾವಚಿತ್ರ ಹಾಗೂ ಹೆಸರು ಬಳಸಿ ಅಯೋಧ್ಯೆಯ ಪವಿತ್ರ ರಾಮನ ಮೂರ್ತಿಯ ಪ್ರಾಣ ಪ್ರತಿಷ್ಠಾಪನ ಮಹೋತ್ಸವ ವಿರೋಧಿಸುವಂತೆ ಶೃಂಗೇರಿ ಶ್ರೀಗಳು ಹೇಳಿದ್ದಾರೆ ಎಂದು ಅಪಪ್ರಚಾರ ನಡೆದ ಹಿನ್ನೆಲೆಯಲ್ಲಿ ಈ ಬಗ್ಗೆ ಶೃಂಗೇರಿ … Continued

ಚಿಕ್ಕಮಗಳೂರು : ಬೆಟ್ಟದಿಂದ ಬೆಟ್ಟಕ್ಕೆ ಹಗ್ಗ ಕಟ್ಟಿ 4 ಸಾವಿರ ಅಡಿ ಪ್ರಪಾತದಿಂದ ಟೆಕ್ಕಿ ಮೃತದೇಹ ಹೊತ್ತು ತಂದ ತಂಡ

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಣಿಝರಿ ಜಲಪಾತದ ಬಳಿ ಸುಮಾರು 4 ಸಾವಿರ ಅಡಿ ಪ್ರಪಾತದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಬೆಂಗಳೂರು ಮೂಲದ ಟೆಕ್ಕಿ ಭರತ್ ಮೃತದೇಹವನ್ನ ಹರಸಾಹಸಪಟ್ಟು ಪ್ರಪಾತದಿಂದ ಮೇಲಕ್ಕೆ ತರಲಾಗಿದೆ ಎಂದು ವರದಿಯಾಗಿದೆ. ಶನಿವಾರ ಸಂಜೆಗೆ ಮೃತದೇಹ ಪತ್ತೆಯಾಗಿದ್ದರೂ ಕತ್ತಲಲ್ಲಿ 4 ಸಾವಿರ ಅಡಿ ಕಡಿದಾದ ಪ್ರಪಾತದಿಂದ ಮೃತದೇಹ ಹೊರತರುವುದು ಕಷ್ಟಸಾಧ್ಯ … Continued

ಕಾಡಾನೆ ಹಿಡಿಯುವ ಕಾರ್ಯಾಚರಣೆ ವೇಳೆ ಆನೆ ಸಾವು

ಚಿಕ್ಕಮಗಳೂರು: ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಕಾಡಾನೆಯೊಂದು ಮೃತಪಟ್ಟ ಘಟನೆ ಡಿಸೆಂಬರ್‌ 2ರ ರಾತ್ರಿ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯತ ವ್ಯಾಪ್ತಿಯ ಮೇಕನಗದ್ದೆ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಈ ಭಾಗದಲ್ಲಿ ಮೂರು ಕಾಡಾನೆಗಳನ್ನು ಸೆರೆಹಿಡಿದು ಅಲ್ಲಿಂದ ಸ್ಥಳಾಂತರ ಮಾಡುವಂತೆ ಸರ್ಕಾರದ ಆದೇಶದ ಮೇರೆಗೆ ಕಳೆದ ಒಂದು ವಾರದಿಂದ ಕಾಡಾನೆಗಳನ್ನು ಹಿಡಿಯುವ ಕಾರ್ಯಾಚರಣೆ ನಡೆಸಲಾಗುತ್ತಿತ್ತು. … Continued

ಚಿಕ್ಕಮಗಳೂರಿನಲ್ಲಿ ವಕೀಲನ ಮೇಲೆ ಹಲ್ಲೆ : ಸ್ವಯಂಪ್ರೇರಿತ ದೂರು ದಾಖಲಿಸಿ ವಿಚಾರಣೆ ನಡೆಸಿದ ಹೈಕೋರ್ಟ್‌

ಬೆಂಗಳೂರು : ಚಿಕ್ಕಮಗಳೂರಿನ ವಕೀಲ ಪ್ರೀತಂ ಅವರ ಮೇಲಿನ ಪೊಲೀಸರ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತುರ್ತು ವಿಚಾರಣೆ ನಡೆಸಿತು. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ರಾಜ್ಯ ಸರ್ಕಾರ ತಕ್ಷಣ ಕ್ರಮಕೈಗೊಂಡಿರುವುದರಿಂದ ಕಲಾಪಕ್ಕೆ ಗೈರಾಗದಂತೆ ವಕೀಲರಿಗೆ ಸಲಹೆ ನೀಡಿತು. “ಪ್ರೀತಂ ಮೇಲಿನ ಪೊಲೀಸರ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು … Continued

ಮೂಡಿಗೆರೆ : ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆ ಸಿಬ್ಬಂದಿ ಸಾವು

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದ ಕಾಡಾನೆ ದಾಳಿಗೆ ಆನೆ ನಿಗ್ರಹ ಪಡೆಯ ಸಿಬ್ಬಂದಿಯೇ ಮೃತಪಟ್ಟ ಘಟನೆ ನಡೆದ ವರದಿಯಾಗಿದೆ. ಮೃತರನ್ನು ಕಾರ್ತಿಕ್ ಗೌಡ (26) ಎಂದು ಗುರುತಿಸಲಾಗಿದ್ದು, ಇದಲ್ಲದೆ ಆನೆ ನಿಗ್ರಹ ಪಡೆಯ ಇಬ್ಬರು ಸಿಬ್ಬಂದಿಗೆ ಗಂಭೀರ ಸ್ವರೂಪದ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆನೆಗಳ ಹಾವಳಿ ನಿಯಂತ್ರಿಸಲು … Continued

ಚಿಕ್ಕಮಗಳೂರು: ಕಾಡಾನೆ ದಾಳಿಗೆ ಮಹಿಳೆ ಸಾವು

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವ್ಯಾಪ್ತಿಯ ಹೆಡದಾಳು ಗ್ರಾಮದಲ್ಲಿ ಬುಧವಾರ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ವರದಿಯಾಗಿದೆ. ಮೃತ ಮಹಿಳೆಯನ್ನು 45 ವರ್ಷದ ಮೀನಾ ಎಂದು ಗುರುತಿಸಲಾಗಿದೆ. ಮಹಿಳೆ ಮತ್ತು ಇತರರು ತಮ್ಮ ಮನೆಯಿಂದ ಜಮೀನಿನ ಕಡೆಗೆ ಹೋಗುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಹೆಡದಾಳು ಗ್ರಾಮದ ಬಳಿ ಸಾಗುತ್ತಿದ್ದಾಗ … Continued