ಮತ ಚಲಾಯಿಸಲು ಮದುವೆ ಉಡುಪಿನಲ್ಲಿ ಮತಗಟ್ಟೆಗೆ ಆಗಮಿಸಿದ ಮದುಮಗಳು…

ಚಿಕ್ಕಮಗಳೂರು: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಮಾಕೋನಹಳ್ಳಿ ಗ್ರಾಮದಲ್ಲಿ ಮದುಮಗಳೊಬ್ಬಳು ಬುಧವಾರ ಬೆಳಿಗ್ಗೆ ತನ್ನ ಮದುವೆಯ ಉಡುಪಿನಲ್ಲಿಯೇ ಬಂದು ಮತ ಚಲಾಯಿಸಿದ್ದಾರೆ. ಇಂದು ನಡೆಯಲಿರುವ ಮದುವೆಗೂ ಮುನ್ನ ಚಿಕ್ಕಮಗಳೂರು ಜಿಲ್ಲೆಯ ಮತಗಟ್ಟೆ ಸಂಖ್ಯೆ 165ರಲ್ಲಿ ಕುಟುಂಬ ಸಮೇತರಾಗಿ ಬಂದ ಮದುಮಗಳು ಮತ ಚಲಾಯಿಸಿ ಮತದಾನವನ್ನು ಸಂಭ್ರಮಿಸಿದ್ದಾರೆ. ಕರ್ನಾಟಕ ವಿಧಾನಸಭೆ … Continued

ಶೃಂಗೇರಿ ಮಠಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿ : ಅಪ್ಪನೊಂದಿಗೆ ಬಂದಿದ್ದೆ ಎಂದು ನೆನಪಿಸಿಕೊಂಡ ಇಂದಿರಾ ಗಾಂಧಿ ಮೊಮ್ಮಗಳು

ಚಿಕ್ಕಮಗಳೂರು: ಇಂದಿರಾಗಾಂಧಿ ಮೊಮ್ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಶೃಂಗೇರಿ ಮಠಕ್ಕೆ ಬುಧವಾರ ಭೇಟಿ ನೀಡಿದ್ದಾರೆ. ಮಠಕ್ಕೆ ಭೇಟಿ ನೀಡಿ ಶಾರದಾಂಬೆ ಹಾಗೂ ಗುರುಗಳ ದರ್ಶನ ಪಡೆದಿರುವ ಅವರು ನರಸಿಂಹವನದಲ್ಲಿರುವ ಕಿರಿಯ ಶ್ರೀಗಳಾದ ವಿಧುಶೇಖರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಶ್ರೀಗಳು ಪ್ರಿಯಾಂಕಾ ಅವರಿಗೆ ಶಾರದಾಂಬೆಯ ಮೂರ್ತಿ ನೀಡಿ ಶುಭ ಹಾರೈಸಿದ್ದಾರೆ. ಶ್ರೀಗಳಿಂದ ಆಶೀರ್ವಾದ … Continued

ಪಕ್ಷದ ಅಭ್ಯರ್ಥಿಯಿದ್ರೂ ಕಾಂಗ್ರೆಸ್ಸಿಗೆ ಬೆಂಬಲಿಸುವಂತೆ ಕಾರ್ಯಕರ್ತರಿಗೆ ಸೂಚಿಸಿದ ಜೆಡಿಎಸ್‌ ಮುಖಂಡ ಭೋಜೇಗೌಡ…!

ಚಿಕ್ಕಮಗಳೂರು: ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಪ್ತ ಹಾಗೂ ಜೆಡಿಎಸ್ ಮುಖಂಡ ಎಸ್.ಎಲ್ ಭೋಜೇಗೌಡ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ ಎಂಬುದೀಗ ಚರ್ಚೆಗೆ ಗ್ರಾಸವಾಗಿದೆ. ಆ ಮೂಲಕ ತಮ್ಮದೇ ಪಕ್ಷದ ಅಭ್ಯರ್ಥಿಗೆ ಶಾಕ್ ನೀಡಿದ್ದಾರೆ. ಎಸ್.ಎಲ್.ಭೋಜೇಗೌಡರು ಕಾಂಗ್ರೆಸ್ ಬೆಂಬಲಿಸುವಂತೆ ಹೇಳುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಿಕ್ಕಮಗಳೂರು ಕ್ಷೇತ್ರದ … Continued

ಭದ್ರಾ ನದಿಯಲ್ಲಿ ಮುಳುಗಿ ತಂದೆ, ಮಗ ಸಾವು

ಚಿಕ್ಕಮಗಳೂರು: ಜಿಲ್ಲೆಯ ಮಾಗುಂಡಿ ಬಳಿ ಭದ್ರಾ ನದಿಯಲ್ಲಿ ಮುಳುಗಿ ತಂದೆ ಮಗ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಮೂಡಿಗೆರೆ ಸಮೀಪದ ಹಂಡುಗುಳಿ ಗ್ರಾಮದ ಲೋಕೇಶ(40 ವರ್ಷ) ಮತ್ತು ಅವರ ಮಗ ಸಾತ್ವಿಕ(13 ವರ್ಷ) ಎಂದು ಗುರುತಿಸಲಾಗಿದೆ. ಮಾಗುಂಡಿ ಸಮೀಪದ ಹುಯ್ಗೆರೆ ಗ್ರಾಮದಲ್ಲಿ ತಮ್ಮ ಸಂಬಂಧಿಕರ ಮನೆಗೆ ಸುಗ್ಗಿ ಹಬ್ಬಕ್ಕೆಂದು ಲೋಕೇಶ ತನ್ನ ಪತ್ನಿ ಹಾಗೂ ಮೂವರು … Continued

ಚಿಕ್ಕಮಗಳೂರು: ಪಿಕಪ್ ವಾಹನದಲ್ಲಿ ಸಾಗಿಸುತ್ತಿದ್ದ 9 ಕೆಜಿ ಚಿನ್ನ ವಶಕ್ಕೆ, ಇಬ್ಬರ ಬಂಧನ

ಚಿಕ್ಕಮಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ ಸನಿಹದಲ್ಲೇ ಇರುವ ಬೆನ್ನಲ್ಲೇ ಚುನಾವಣಾ ಅಕ್ರಮಗಳು ಕೂಡ ಹೆಚ್ಚಾಗುತ್ತಿವೆ. ಈಗ ದಾಖಲೆ ಇಲ್ಲದೆ ಪಿಕಪ್‌ನಲ್ಲಿ ಸಾಗಿಸುತ್ತಿದ್ದ 9 ಕೆ.ಜಿ. 300 ಗ್ರಾಂ ಚಿನ್ನವವನ್ನ ವಶಪಡಿಸಿಕೊಂಡ ಘಟನೆ ಚಿಕ್ಕಮಗಳೂರಿನ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ. ಇದರ ಮೌಲ್ಯ ಎರಡು ಕೋಟಿ ರೂ. ಗಳಿಗೂ ಹೆಚ್ಚು ಎಂದು ಅಂದಾಜಿಸಲಾಗಿದೆ. ತರೀಕೆರೆ … Continued

ಮೂಡಿಗೆರೆ: ಶಾಸಕ ಕುಮಾರಸ್ವಾಮಿಗೆ ಟಿಕೆಟ್ ನೀಡದಂತೆ ಒತ್ತಾಯಿಸಿ ಯಡಿಯೂರಪ್ಪಗೆ ಘೇರಾವ್‌, ಬಿಎಸ್‌ವೈ ರೋಡ್‌ ಶೋ ರದ್ದು

ಚಿಕ್ಕಮಗಳೂರು: ಮೂಡಿಗೆರೆ ಶಾಸಕ ಶಾಸಕ ಎಂ.ಪಿ.ಕುಮಾರಸ್ವಾಮಿ ಅವರಿಗೆ ವಿಧಾನಸಭೆ ಟಿಕೆಟ್‌ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗುರುವಾರ ಯಡಿಯೂರಪ್ಪ ಅವರ ಕಾರನ್ನು ಅಡ್ಡಗಟ್ಟಿ ಘೇರಾವ್ ಹಾಕಿದ ನಂತರ ಬಿಜೆಪಿಯೊಳಗಿನ ಭಿನ್ನಾಭಿಪ್ರಾಯ ಬಹಿರಂಗಕ್ಕೆ ಬಂದಂತಾಗಿದೆ. ಗುರುವಾರ ಮಧ್ಯಾಹ್ನ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ನೇತೃತ್ವ ವಹಿಸಲು ಯಡಿಯೂರಪ್ಪ ಆಗಮಿಸುತ್ತಿದ್ದಂತೆ ಮೂಡಿಗೆರೆ ಕ್ಷೇತ್ರದಲ್ಲಿ ನಾಟಕೀಯ ದೃಶ್ಯಗಳು ಕಂಡುಬಂದವು. … Continued

ರಾಜ್ಯದ ಐದು ನಗರಗಳಲ್ಲಿ ಜಿಯೋ 5ಜಿ ಸೇವೆ ಆರಂಭ

ಬೆಂಗಳೂರು: ರಿಲಯನ್ಸ್ ಜಿಯೋ ಮಂಗಳವಾರ (ಜನವರಿ 24) 50 ನಗರಗಳಲ್ಲಿ ತನ್ನ ಟ್ರೂ 5ಜಿ ಸೇವೆಗಳ ಅತಿದೊಡ್ಡ ಬಿಡುಗಡೆಯನ್ನು ಘೋಷಿಸಿದೆ. ಇದರೊಂದಿಗೆ ದೇಶದ 184 ನಗರಗಳಲ್ಲಿ ಜಿಯೋ ಬಳಕೆದಾರರು ಈಗ ಜಿಯೋ ಟ್ರೂ 5ಜಿ ಸೇವೆಗಳನ್ನು ಪಡೆಯುತ್ತಿದ್ದಾರೆ. ಮಂಗಳವಾರದಿಂದ ಪ್ರಾರಂಭ ಆದ ಸೇವೆಯೊಂದಿಗೆ ಯಾವುದೇ ಹೆಚ್ಚುವರಿ ವೆಚ್ಚವಿಲ್ಲದೆ 1 ಜಿಬಿಪಿಎಸ್+ ವೇಗದಲ್ಲಿ ಅನಿಯಮಿತ ಡೇಟಾವನ್ನು ಪಡೆಯಲು … Continued

ಚಿಕ್ಕಮಗಳೂರು : ದತ್ತ ಪೀಠದಲ್ಲಿ ಡಿಸೆಂಬರ್ 6ರಿಂದ ದತ್ತ ಜಯಂತಿ ಆಚರಣೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುಡನ್‌ ಗಿರಿಯ ದತ್ತಾತ್ರೇಯ ಪೀಠದಲ್ಲಿ ಡಿಸೆಂಬರ್ 6ರಿಂದ ಮೂರು ದಿನಗಳ ಕಾಲ ದತ್ತಾತ್ರೇಯ ಜಯಂತಿ ಆಚರಿಸಲು ಹೈಕೋರ್ಟ್ ಬುಧವಾರ ಅನುಮತಿಸಿದೆ. ದತ್ತಾತ್ರೇಯ ಪೀಠದಲ್ಲಿ ಪೂಜಾ ವಿಧಿ ವಿಧಾನ ನೆರವೇರಿಸಲು ತಮ್ಮನ್ನು ನೇಮಿಸಿ 2018ರಲ್ಲಿ ಅಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ … Continued

ಮಕ್ಕಳ ಜೊತೆ ಅಸಭ್ಯ ವರ್ತನೆ : ಚಾಲಕನನ್ನು ಕಂಬಕ್ಕೆ ಕಟ್ಟಿ ಧರ್ಮದೇಟು ನೀಡಿದ ಗ್ರಾಮಸ್ಥರು

ಚಿಕ್ಕಮಗಳೂರು: ವಿದ್ಯಾರ್ಥಿನಿಯರ ಜೊತೆ ಅನುಚಿತ ವರ್ತನೆ ತೋರಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಚಿಕ್ಕಮಗಳೂರಿನ ಸಕ್ಕರಾಯಪಟ್ಟಣದಲ್ಲಿ ಈ ಘಟನೆ ನಡೆದ ವರದಿಯಾಗಿದ್ದು, ಆರೋಪಿ ರಾಜಪ್ಪ ವಿರುದ್ಧ ಚಿಕ್ಕಮಗಳೂರಿನ ಸಕ್ಕರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆ ಇತರ ಸೆಕ್ಷನ್‌ಗಳ … Continued

ಚಿಕ್ಕಮಗಳೂರು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಕಾಡಾನೆಗಳ ಸೆರೆಗೆ ಸರ್ಕಾರದ ಆದೇಶ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಡಾನೆಗಳ ದಾಳಿಯಿಂದ ಎರಡು ತಿಂಗಳ ಅಂತರದಲ್ಲಿ ಮೂವರು ಸಾವಿಗೀಡಾದ ಬೆನ್ನಲ್ಲೇ ರಾಜ್ಯ ಸರ್ಕಾರ ತೊಂದರೆ ಕೊಡುತ್ತಿರುವ ಮೂರು ಆನೆಗಳನ್ನು ಸೆರೆ ಹಿಡಿಯಲು ಆದೇಶ ಮಾಡಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆಗಳು ರೈತರ ಜಮೀನಿಗೆ ನುಗ್ಗಿ ಫಸಲನ್ನು ಹಾಳು ಮಾಡುತ್ತಿರುವುದಲ್ಲದೆ, ಹಾಗಿಂದಾಗೆ ಸಾರ್ವಜನಿಕರ ಮೇಲೆ ದಾಳಿ ಮಾಡುತ್ತಿವೆ. ಸೆಪ್ಟೆಂಬರ್ ತಿಂಗಳಿಂದ ಈಚೆಗೆ ಮೂವರು … Continued