ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು

ಚಿಕ್ಕಮಗಳೂರು : ಬಾತುಕೋಳಿ ಹಿಡಿಯುವುದಕ್ಕೆ ಹೋದ ನಾಲ್ವರು ಮಕ್ಕಳು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಚಿಕ್ಕಮಗಳೂರು ತಾಲೂಕಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕೆರೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ರಜೆಯಲ್ಲಿ ಸಂಬಂಧಿಕರ ಮನೆಗೆ ಬಂದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮೃತ ಮಕ್ಕಳನ್ನು ಅಬ್ದುಲ್ ರೆಹಮಾನ್ (13), ನಾಯಜ್ (12), ಶಿವಮೊಗ್ಗದ ಮೈದಿಹಾ (9), ಅರಮಾನ್ … Continued

ಸುರಪುರ: ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವು

ಯಾದಗಿರಿ : ಕೃಷಿ ಹೊಂಡದಲ್ಲಿ ಈಜಲು ಹೋದ ಒಂದೇ ಕುಟುಂಬದ ನಾಲ್ವರು ಮಕ್ಕಳು ಮುಳುಗಿ ನೀರು ಪಾಲಾದ  ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ನಗನೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಾಲೆಗೆ ರಜೆ ಇದ್ದ ಕಾರಣ ಕೃಷಿಹೊಂಡದಲ್ಲಿ ಮಕ್ಕಳು ಈಜಲು ಹೋಗಿದ್ದ ವೇಳೆ ದುರಂತ ಸಂಭವಿಸಿದೆ. ಮೃತ ಬಾಲಕರನ್ನು ಕಿರಣ (6), ಬಸಮ್ಮ (11), … Continued

2026ರ ಕರ್ನಾಟಕ ಬಜೆಟ್‌ | 16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ: ಸಿಎಂ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ (Social Media Ban) ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. 2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು,  ಮೊಬೈಲ್‌ ಅತಿಯಾದ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು … Continued

ಬೆಂಗಳೂರು: ಸ್ಕೂಟರ್ ಮೇಲೆ ಶಾಲಾ ಬಸ್ ಹರಿದು ಇಬ್ಬರು ಪುಟಾಣಿಗಳು ಸಾವು

ಬೆಂಗಳೂರು : ಬೈಕ್ ಮೇಲೆ ಖಾಸಗಿ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಮೃತಪಟ್ಟ ಘಟನೆ ಬೆಂಗಳೂರಿನ ಥಣಿಸಂದ್ರ ಬಳಿ ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಮೃತ ಮಕ್ಕಳನ್ನು ವರ್ಷಾ (2 ವರ್ಷ) ಹಾಗೂ ಬಾನು (4 ವರ್ಷ) ಬುಧವಾರ ಬೆಳಿಗ್ಗೆ ಸಿಎಆರ್ ಹೆಡ್ ಕಾನ್ಸ್ಟೇಬಲ್ ನಾಗನಗೌಡ ಮಾಲಿಪಾಟೀಲ ಎಂಬವರು ಮ್ಮ ಸ್ಕೂಟರ್‌ನಲ್ಲಿ ತನ್ನ ಮಗಳಾದ … Continued

ಜೇನುನೊಣಗಳ ದಾಳಿಯಿಂದ 20 ಮಕ್ಕಳ ಪ್ರಾಣ ಉಳಿಸಲು ತನ್ನ ಪ್ರಾಣವನ್ನೇ ಅರ್ಪಿಸಿದ ಅಂಗನವಾಡಿ ಅಡುಗೆಯವಳು…!

ನೀಮುಚ್ : ಪ್ರೀತಿ ಮತ್ತು ಸಾಹಸದ ಪರಾಕಾಷ್ಠೆಯೆಂಬಂತೆ, ಮಧ್ಯಪ್ರದೇಶದ ನೀಮುಚ್ ಜಿಲ್ಲೆಯ ರಣಪುರ ಗ್ರಾಮದಲ್ಲಿ ಸುಮಾರು 20 ಮಕ್ಕಳ ಪ್ರಾಣ ಉಳಿಸಲು ಅಂಗನವಾಡಿ ಅಡುಗೆಯವರೊಬ್ಬರು ತಮ್ಮ ಪ್ರಾಣವನ್ನೇ ಬಲಿ ಕೊಟ್ಟಿದ್ದಾರೆ. ಮಡಾವಡ ಪಂಚಾಯತ ವ್ಯಾಪ್ತಿಯ ಅಂಗನವಾಡಿ ಕೇಂದ್ರದ ಆವರಣದಲ್ಲಿ ಮಕ್ಕಳು ಆಟವಾಡುತ್ತಿದ್ದಾಗ, ಹಠಾತ್ತನೆ ಜೇನುನೊಣಗಳ ಗುಂಪು ದಾಳಿ ಮಾಡಿತು. ಈ ಸಂದರ್ಭದಲ್ಲಿ ಅಲ್ಲಿಯೇ ಇದ್ದ ಅಡುಗೆಯವರಾದ … Continued

ಧಾರವಾಡದಿಂದ ಕಿಡ್ನ್ಯಾಪ್‌ ಆಗಿದ್ದ ಮಕ್ಕಳು ದಾಂಡೇಲಿ ಬಳಿ ಪತ್ತೆ ; ಸಿಕ್ಕಿಬಿದ್ದ ವ್ಯಕ್ತಿ…

ಧಾರವಾಡ: ಧಾರವಾಡದ ಕಮಲಾಪುರ ಶಾಲೆಯಿಂದ ಕಿಡ್ನ್ಯಾಪ್‌ ಆಗಿದ್ದ ಇಬ್ಬರು ಮಕ್ಕಳು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಸಮೀಪ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ ಹಾಗೂ ಆರೋಪಿ ಸಿಕ್ಕಿಬಿದ್ದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಧಾರವಾಡದ ಕಮಲಾಪುರ ಸರ್ಕಾರಿ ಶಾಲೆಯ 3ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಒಬ್ಬ ಬಾಲಕ ಮತ್ತು ಒಬ್ಬಳು ಬಾಲಕಿಯನ್ನು ಸೋಮವಾರ … Continued

ಗೋಕರ್ಣದ ಬೆಟ್ಟದ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾದ ಮಹಿಳೆ-ಮಕ್ಕಳನ್ನ ವಾಪಸ್ ರಷ್ಯಾಕ್ಕೆ ಕಳುಹಿಸಲು ಹೈಕೋರ್ಟ್ ಗ್ರೀನ್‌ ಸಿಗ್ನಲ್

ಬೆಂಗಳೂರು: ಜುಲೈನಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಕಾಡಿನ ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳಿಗೆ ಅವರ ದೇಶ ರಷ್ಯಾಕ್ಕೆ ಮರಳಲು ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ. ನೀನಾ ಕುಟಿನಾ ಅವರ ಮಾಜಿ ಪತಿ ಮತ್ತು ಮಕ್ಕಳ ತಂದೆ ಇಸ್ರೇಲಿ ಪ್ರಜೆ ಡ್ರೋರ್ ಶ್ಲೋಮೋ ಗೋಲ್ಡ್‌ಸ್ಟೈನ್ … Continued

ಆಧುನಿಕ ಗಾಂಧಾರಿ…: 55ನೇ ವರ್ಷದಲ್ಲಿ 17ನೇ ಮಗುವಿಗೆ ಜನ್ಮ ನೀಡಿದ ರಾಜಸ್ಥಾನದ ಮಹಿಳೆ…!

ಜೈಪುರ: ಅಪರೂಪದ ಹಾಗೂ ಅಸಮಾಮಾನ್ಯ ಘಟನೆಯೊಂದರಲ್ಲಿ, ಕವರರಾಮ ಕಲ್ಬೇಲಿಯಾ ಅವರ ಪತ್ನಿ 55 ವರ್ಷದ ರೇಖಾ ಕಲ್ಬೇಲಿಯಾ ಅವರು ಸಮುದಾಯ ಆರೋಗ್ಯ ಕೇಂದ್ರವೊಂದರಲ್ಲಿ ತಮ್ಮ 17 ನೇ ಮಗುವಿಗೆ ಜನ್ಮ ನೀಡಿದ್ದಾರೆ…! ರಾಜಸ್ಥಾನದ ಉದಯಪುರ ಜಿಲ್ಲೆಯ ಜಾಡೋಲ್ ಬ್ಲಾಕ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಮ್ಮ 17 ನೇ ಮಗುವಿಗೆ ಜನ್ಮ ನೀಡಿರುವ ಅವರು, ಈಗ ದೇಶಾದ್ಯಂತ … Continued

ರೈಲು ಬರುವುದು ನೋಡಿ 4 ಮಕ್ಕಳು ಕಿರುಚುತ್ತಿದ್ರೂ ಹಳಿ ಮೇಲೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡು ನಿಂತಿದ್ದ ತಂದೆ ; ಎಲ್ರನ್ನೂ ಸಾಯಿಸಿದ ರೈಲು..!

ಫರಿದಾಬಾದ್: ಮಂಗಳವಾರ ಹರಿಯಾಣದ ಫರಿದಾಬಾದ್‌ನಲ್ಲಿ 45 ವರ್ಷದ ವ್ಯಕ್ತಿ ಮತ್ತು ಆತನ ನಾಲ್ವರು ಪುತ್ರರು ರೈಲಿಗೆ ಸಿಲುಕಿ ನಜ್ಜುಗುಜ್ಜಾಗಿದ್ದಾರೆ. ರೈಲು ಬರುವಾಗ ಹಳಿಗಳ ಮೇಲಿದ್ದ ಮೂರರಿಂದ ಒಂಬತ್ತು ವರ್ಷದೊಳಗಿನ ಮಕ್ಕಳು ಕಿರುಚುತ್ತಿದ್ದರೂ ಅವರ ತಂದೆ ಎಕ್ಸ್‌ಪ್ರೆಸ್ ರೈಲು ಸಮೀಪಿಸುತ್ತಿದ್ದಂತೆ ಅವರನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ರೈಲು ಡಿಕ್ಕಿ ಹೊಡೆದು ಅವರೆಲ್ಲರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬಿಹಾರ ಮೂಲದ ಮನೋಜ … Continued

16 ವರ್ಷದೊಳಗಿನ ಮಕ್ಕಳಿಗಾಗಿ ಇನ್​ಸ್ಟಾಗ್ರಾಂ​ನಲ್ಲಿ ಹೊಸ ನಿಯಮ….

ಇನ್‌ಸ್ಟಾಗ್ರಾಮ್ ಪ್ಲಾಟ್‌ಫಾರ್ಮ್‌ನಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಇನ್ನು ಮುಂದೆ 16 ವರ್ಷದೊಳಗಿನ ಮಕ್ಕಳಿಗೆ ಲೈವ್ ಮಾಡಲು ಇದರಲ್ಲಿ ಅವಕಾಶ ಇರುವುದಿಲ್ಲ. ಮೆಟಾ ಶೀಘ್ರದಲ್ಲೇ 16 ವರ್ಷದೊಳಗಿನ ಮಕ್ಕಳು ಇನ್‌ಸ್ಟಾಗ್ರಾಮ್‌(Instagram)ನಲ್ಲಿ ಲೈವ್ ಸ್ಟ್ರೀಮಿಂಗ್ ಮಾಡುವುದನ್ನು ತಡೆಯಲಿದೆ. ಇದಕ್ಕೆ ಅವರ ತಂದೆ-ತಾಯಿಗಳು ಅನುಮತಿ ಬೇಕಾಗುತ್ತದೆ. ಹೊಸ ಸುರಕ್ಷತಾ ನಿಯಮವು ಆನ್‌ಲೈನ್‌ನಲ್ಲಿ 16 ವರ್ಷದೊಳಗಿನ ಬಳಕೆದಾರರಿಗೆ ಸುರಕ್ಷತಾ ಕ್ರಮಗಳನ್ನು … Continued